Breaking News

ರಾಷ್ಟ್ರೀಯ

ಜೈಲಿನಿಂದ ಬಂದವರಿಗೆ ಅದ್ಧೂರಿ ಸನ್ಮಾನ, ಇದು ಪರಿಸ್ಥಿತಿ’ -ಸಂತೋಷ್‌ ಹೆಗ್ಡೆ ಅಸಮಾಧಾನ

ಮೈಸೂರು: ಇತ್ತೀಚಿನ ದಿನಗಳಲ್ಲಿ ಭ್ರಷ್ಟರನ್ನು ದೂರುವುದು ಕಡಿಮೆ ಆಗುತ್ತಿದೆ ಅಂತ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ ಸಂತೋಷ್‌ ಹೆಗ್ಡೆ ಹೇಳಿದ್ದಾರೆ. ಮೈಸೂರಿನಲ್ಲಿ ಕೋಳಿ ಸಾಂಬರ್‌ ಎಂಬ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೈಲಿಗೆ ಹೋಗಿ ಬಂದವರಿಗೆ ಹಾರ ತುರಾಯಿ ಹಾಕಿ ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಆಡಳಿತ ವ್ಯವಸ್ಥೆಯಿಂದಲೇ ಜನರಿಗೆ ಅನ್ಯಾಯವಾಗುತ್ತಿದೆ. ಇದು ಸಮಾಜದ ತಪ್ಪಲ್ಲ, ಈ ಬಗ್ಗೆ ಪ್ರಶ್ನೆ ಮಾಡದ ವ್ಯಕ್ತಿಗಳದ್ದೇ ತಪ್ಪು ಅಂತ ಅಸಮಾಧಾನ ಹೊರಹಾಕಿದ್ರು. ಮೊದಲೆಲ್ಲಾ ರಾಷ್ಟ್ರದ ಮಹಾನ್ …

Read More »

IOCL ನಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ವಿವರ

ದಿ ಇಂಡಿಯನ್​​ ಆಯಿಲ್​ ಕಾರ್ಪೋರೇಷನ್​​ ನಿಗಮವು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 71 ಹುದ್ದೆಗಳಿಗೆ ಐಒಸಿಎಲ್​ನಿಂದ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್​ 1ರಿಂದಲೇ ಅರ್ಜಿ ಸ್ವೀಕಾರ ಪ್ರಕ್ರಿಯೆಯು ಆರಂಭಗೊಂಡಿದ್ದು ಅರ್ಜಿ ಸಲ್ಲಿಸಲು ಅಕ್ಟೋಬರ್​ 22 ಕೊನೆಯ ದಿನಾಂಕವಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು iocl.com ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.   ಒಟ್ಟು ಹುದ್ದೆ : 71 ಕಾಯ್ದಿರಿಸದ ವರ್ಗ : 28 ಹುದ್ದೆಗಳು ಎಸ್ಸಿ ವರ್ಗ : 10 ಹುದ್ದೆಗಳು …

Read More »

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಗೆ ಎದುರಾಯ್ತು ಸಂಕಷ್ಟ.!

ಮಂಡ್ಯ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪುತ್ರಿ ನಿಶಾಗೆ ಸಂಕಷ್ಟ ಎದುರಾಗಿದೆ. ಗೋದಾಮಿಗೆ ಬಾಡಿಗೆ, ಕಂದಾಯ ಹಣ ಪಾವತಿಸದ ಹಿನ್ನೆಲೆಯಲ್ಲಿ ನಿಶಾ ವಿರುದ್ಧ ಕಾನೂನು ಹೋರಾಟಕ್ಕೆ ಟಿಎಪಿಸಿಎಂಎಸ್ ನಿರ್ಧರಿಸಿದೆ. ನಿಶಾ ಯೋಗೇಶ್ವರ್ ಡೆಕ್ಕನ್ ಫೀಲ್ಡ್ ಆಗ್ರೋ ಇಂಡಸ್ಟ್ರೀಸ್ ಮಾಲಕಿ. ಕಂಪನಿ 2017ರಲ್ಲಿ ಗೋದಾಮು ಬಾಡಿಗೆಗೆ ನೀಡಿತ್ತು. ಮಂಡ್ಯ ಜಿಲ್ಲೆ ಮದ್ದೂರಿನ ಟಿಎಪಿಸಿಎಂಎಸ್ ಗೆ ಸೇರಿದ ಗೋದಾಮು ಬಾಡಿಗೆ ಪಡೆದುಕೊಂಡಿದ್ದರು. ಆದರೆ ಒಪ್ಪಂದದಂತೆ ನಿಶಾ ಬಾಡಿಗೆ ಹಣ ಹಾಗೂ ಕಂದಾಯಯವನ್ನು ಪಾವತಿ ಮಾಡಿಲ್ಲ. …

Read More »

ಧ್ವಜಸ್ತಂಭಕ್ಕೆ ದುಷ್ಕರ್ಮಿಗಳಿಂದ ಬೆಂಕಿ

ಸಾಗರ: ಇಲ್ಲಿನ ನೆಹರೂ ಮೈದಾನದ ಸಂತ ಜೋಸೆಫ್ ಇಂಗ್ಲೀಷ್ ಕಾನ್ವೆಂಟ್ ಎದುರಿನ ಧ್ವಜಸ್ತಂಭಕ್ಕೆ ಗುರುವಾರ ರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ನಡೆದಿದೆ. ರಾಷ್ಟ್ರಧ್ವಜ ಸ್ತಂಭವನ್ನು ಪ್ರತಿಸಾರಿ ನಡೆಯುವ ರಾಷ್ಟ್ರೀಯ ಹಬ್ಬಗಳ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿ ಉಪಯೋಗಿಸಿಕೊಳ್ಳುತ್ತಿತ್ತು. ನಂತರ ಅದನ್ನು ಪ್ಲಾಸ್ಟಿಕ್ ಚೀಲದಿಂದ ಭದ್ರವಾಗಿ ಕಟ್ಟಿ ಇರಿಸಲಾಗುತಿತ್ತು. ದುಷ್ಕರ್ಮಿಗಳು ಗುರುವಾರ ರಾತ್ರಿ ರಾಷ್ಟ್ರಧ್ವಜ ಸ್ತಂಭಕ್ಕೆ ಬೆಂಕಿ ಹಚ್ಚಿದ್ದರಿಂದ ಮೇಲ್ಭಾಗದ ಪ್ಲಾಸ್ಟಿಕ್ ಕಂಬ ಸುಟ್ಟು ಕರಕಲಾಗಿದೆ. ಧ್ವಜಸ್ತಂಭದ ಅಕ್ಕಪಕ್ಕ ಬಾಟಲಿಯನ್ನು …

Read More »

ಗುಳೇದಗುಡ್ಡ: ಈಜಲು ಹೋದ ಇಬ್ಬರು ಬಾಲಕರು ನೀರು ಪಾಲು

ಗುಳೇದಗುಡ್ಡ: ಈಜು ಕಲಿಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಕೊಟ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಟ್ನಳ್ಳಿ ಗ್ರಾಮದ ಮಲ್ಲಪ್ಪ ಬೈಲಪ್ಪ ಅಂಬಿಗೇರಿ(12) ಹಾಗೂ ಮನೋಜ್ ಮಲ್ಲಪ್ಪ ಉಪ್ಪಾರ(10) ಮೃತ ಬಾಲಕರು. ಇಂದು ಮಧ್ಯಾಹ್ನ 12 ಗಂಟೆಗೆ ಮಲಪ್ರಭಾ ನದಿಗೆ ಈಜು ಕಲಿಯಲು ಹೋಗಿದ್ದರು. ಈ ವೇಳೆ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರೊಂದಿಗೆ ಪೋಲಿಸರು ಬಾಲಕರ ಶವಗಳನ್ನು ಹೊರಗೆ ತೆಗೆದಿದ್ದಾರೆ. ಸ್ಥಳದಲ್ಲಿ …

Read More »

ಯಮಕನಮರಡಿ ಕ್ಷೇತ್ರದ ಜನತೆಯ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತೇವೆ: ರಾಹುಲ್ ಜಾರಕಿಹೊಳಿ

      ಬೆಳಗಾವಿ: ಯಮಕನಮರಡಿ ಮತ ಕ್ಷೇತ್ರ ಹುದಲಿ ಜಿಪಂ. ವ್ಯಾಪ್ತಿಯ ಬುಡ್ರ್ಯಾನೂರು ಗ್ರಾಮದಲ್ಲಿ ಲಕ್ಷ್ಮೀ ದೇವಿ ಮೂರ್ತಿ ಪ್ರತಿಷ್ಠಾನ ಮತ್ತು ಸಮುದಾಯಭವನವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಶುಕ್ರವಾರ ಉದ್ಘಾಟಿಸಿದರು.   ಸತೀಶ ಜಾರಕಿಹೊಳಿ ಅವರ, ಶಾಸಕರ ವಿಶೇಷ ಅನುದಾನದಡಿಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ಅಂಗನವಾಡಿ ಅಭಿವೃದ್ಧಿ ಕಾಮಗಾರಿ ಮತ್ತು ಹಳ್ಳೂರು, ಕರವಿನಕುಪ್ಪಿ ಇವೆರಡು ಗ್ರಾಮಕ್ಕೆ 6 ಲಕ್ಷ ರೂ. ಅನುದಾನದಲ್ಲಿ ಬಸ್ ನಿಲ್ದಾಣ …

Read More »

ಹಾನಗಲ್ ಉಪಚುನಾವಣೆ: ರೇಸ್​ನಲ್ಲಿ 11 ಮಂದಿ.. ಇಕ್ಕಟ್ಟಿನಲ್ಲಿ ಬಿಜೆಪಿ ಹೈಕಮಾಂಡ್..!

ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್​ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್​ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್​ ರೇಸ್​ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್​ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …

Read More »

ರಾನು ಮಂಡಲ್​ ಕಂಠದಲ್ಲಿ ‘ಮನಿಕೆ ಮಗೆ ಹಿತೆ’; ಕಿರಿಕಿರಿ ತಾಳಲಾಗದೇ ಕಮೆಂಟ್​ ಮಾಡುತ್ತಿರುವ ನೆಟ್ಟಿಗರು

ಯೂಟ್ಯೂಬ್​, ಇನ್​ಸ್ಟಾಗ್ರಾಮ್​ ಮತ್ತು ಇತರೆ ಸೋಶಿಯಲ್​ ಮೀಡಿಯಾದಲ್ಲಿ ‘ಮನಿಕೆ ಮಗೆ ಹಿತೆ’ (Manike Mage Hithe) ಹಾಡನ್ನು ಕೇಳದವರೇ ಇಲ್ಲ. ಅಷ್ಟರಮಟ್ಟಿಗೆ ಈ ಗೀತೆ ಫೇಮಸ್​ ಆಗಿದೆ. ಶ್ರೀಲಂಕಾದ ಗಾಯಕಿ ಯೊಹಾನಿ ಕಂಠದಲ್ಲಿ ಮೂಡಿಬಂದಿರುವ ಈ ಹಾಡು 135 ಮಿಲಿಯನ್​ಗಿಂತಲೂ ಹೆಚ್ಚು ವೀಕ್ಷಣೆ ಪಡೆದುಕೊಂಡಿದೆ. ಇನ್​ಸ್ಟಾಗ್ರಾಮ್ ರೀಲ್ಸ್​ನಲ್ಲಿ ಇದರದ್ದೇ ಹಾವಳಿ. ಜನ ಸಾಮಾನ್ಯರು ಮಾತ್ರವಲ್ಲದೇ ದೊಡ್ಡ ದೊಡ್ಡ ಸೆಲೆಬ್ರಿಟಿಗಳು ಕೂಡ ‘ಮನಿಕೆ ಮಗೆ ಹಿತೆ’ ಹಾಡಿಗೆ ಮರುಳಾಗಿದ್ದಾರೆ. ಆದರೆ ಅದೇ …

Read More »

ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?

ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …

Read More »

ಅಕ್ಟೋಬರ್ 11 ರಿಂದ ಒಂದು ವಾರ ಹೈಕೋರ್ಟ್‌ಗೆ ರಜೆ

ಬೆಂಗಳೂರು: ರಾಜ್ಯ ಹೈಕೋರ್ಟ್​ನ ಬೆಂಗಳೂರು ಪ್ರಧಾನ ಪೀಠ, ಕಲಬುರಗಿ ಹಾಗೂ ಧಾರವಾಡ ಪೀಠಗಳಿಗೆ ಅಕ್ಟೋಬರ್‌ 11 ರಿಂದ 16ನೇ ತಾರೀಖಿನವರೆಗೂ ದಸರಾ ರಜೆ ನೀಡಲಾಗಿದೆ. ಹೈಕೋರ್ಟ್‌ನ ಎಲ್ಲಾ ನ್ಯಾಯಾಪೀಠಗಳು ಒಂದು ವಾರ ರಜೆಯಲ್ಲಿರಲಿವೆ. ರಜೆ ದಿನಗಳಲ್ಲಿ ಸಿವಿಲ್‌ ಹಾಗೂ ಕ್ರಿಮಿನಲ್‌ ಕೇಸ್‌ ಅರ್ಜಿ ಸ್ವೀಕರಿಸುವುದಿಲ್ಲ. ಒಂದು ವೇಳೆ ತುರ್ತು ಇದ್ದಲ್ಲಿ ಮಧ್ಯಂತರ ಆದೇಶ, ತಡಯಾಜ್ಞೆಯ ಅರ್ಜಿಗಳು ಹಾಗೂ ತಾತ್ಕಾಲಿಕ ನಿರ್ಬಂಧಕಾಜ್ಞೆ ಅರ್ಜಿಗಳನ್ನ ಸಲ್ಲಿಸಬಹುದಾಗಿದೆ. ತುರ್ತು ಅರ್ಜಿಗಳನ್ನ ಬೆಳಗ್ಗೆ 10.30 ರಿಂದ 12 ರ …

Read More »