Breaking News

ರಾಷ್ಟ್ರೀಯ

ಸರ್ಕಾರದಿಂದ 40,000 ಕೋಟಿ ರೂಪಾಯಿ ಆರ್ಥಿಕ ಸಹಾಯ ಕೇಳಿದ BSNL

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಯಾದ ಬಿಎಸ್‌ಎನ್‌ಎಲ್ ಕೇಂದ್ರ ಸರ್ಕಾರದ ಬಳಿ 40,000 ಕೋಟಿ ಆರ್ಥಿಕ ಸಹಾಯವನ್ನು ಕೇಳಿದೆ. ಅದರಲ್ಲಿ ಅರ್ಧದಷ್ಟು ಅಲ್ಪಾವಧಿಯ ಸಾಲವನ್ನು ತೆರವುಗೊಳಿಸಲು ಸವರನ್ ಖಾತರಿಯ ರೂಪದಲ್ಲಿ ಅಗತ್ಯವಿದೆ ಎಂದು ಸರ್ಕಾರವನ್ನು ಸಂಪರ್ಕಿಸಿದೆ.   ಈ ಕುರಿತು ಪಿಟಿಐಗೆ ಮಾತನಾಡಿದರುವ ಬಿಎಸ್‌ಎನ್‌ಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪಿ.ಕೆ. ಪುರ್ವಾರ್ ”ಕಂಪನಿಗೆ ಯಾವುದೇ ಹೆಚ್ಚುವರಿ ಸಾಲದ ಅಗತ್ಯವಿಲ್ಲ ಮತ್ತು ಕಾರ್ಯಾಚರಣೆಯನ್ನು ಬೆಂಬಲಿಸಲು ಅದರ ವ್ಯವಹಾರವು ಸ್ವಾವಲಂಬಿಯಾಗಿದೆ” ಎಂದು ತಿಳಿಸಿದ್ದಾರೆ. …

Read More »

2ಎ ನೀಡಿದರೆ ಸನ್ಮಾನ, ಇಲ್ಲದಿದ್ದರೆ ಸತ್ಯಾಗ್ರಹ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ದಾವಣಗೆರೆ: ‘ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಿದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಗುವುದು. ಇಲ್ಲದೇ ಇದ್ದರೆ ಸತ್ಯಾಗ್ರಹ ಮುಂದುವರಿಸಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಸಿದರು. ನಗರದ ತ್ರಿಶೂಲ್‌ ಕಲಾ ಭವನದಲ್ಲಿ ಗುರುವಾರ ನಡೆದ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್‌ ಕೊನೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಪಂಚಮಸಾಲಿ ಸಮಾಜ ಎಲ್ಲರನ್ನೂ ನಂಬುವ ಸಮಾಜ. ಹಿಂದೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ನಂಬಿತ್ತು. ಅವರು ಕೈಕೊಟ್ಟರು. …

Read More »

ನಗರದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂ ಕಬಳಿಕೆ ಮಾಡುವ ರೌಡಿಗಳಿದ್ದಾರೆ : ಅರಗ ಜ್ಞಾನೇಂದ್ರ

ಬೆಂಗಳೂರು: ನಗರದಲ್ಲಿ ರೌಡಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಂಬಂಧಿಸಿದವರನ್ನು ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಇಂಥ ಸಮಾಜಘಾತುಕರನ್ನು ಬಳಸಿಕೊಂಡು ಬೆದರಿಸುವ ಕಾರ್ಯಗಳು ನಡೆಯುತ್ತಿವೆ. ಇಂಥವುಗಳು ಕೂಡಲೇ ಬಂದ್ ಆಗಬೇಕು. ಬೆಂಗಳೂರನ್ನು ರೌಡಿಮುಕ್ತ ನಗರವನ್ನಾಗಿಸಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಂದು ನಗರದ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪರಿಶೀಲನಾ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ನಗರದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂ …

Read More »

ಅಕ್ರಮ ಪಡಿತರ ಸಾಗಿಸುತ್ತಿದ್ದ ವಾಹನ ವಶಕ್ಕೆ

ಕುಮಾರಪಟ್ಟಣ: ಸಮೀಪದ ಕವಲೆತ್ತು ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ (ಓಮಿನಿ) ವಾಹನವನ್ನು ಗ್ರಾಮಸ್ಥರು ಪತ್ತೆಹಚ್ಚಿ ಆಹಾರ ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳ ವಶಕ್ಕೆ ಒಪ್ಪಿಸಿರುವ ಘಟನೆ ಮಂಗಳವಾರ ನಡೆದಿದೆ ಜಾವಿದ್ ಮತ್ತು ಆತನ ತಂಡದವರು 10 ಕ್ವಿಂಟಲ್ ಪಡಿತರ ಅಕ್ಕಿ ವಾಹನಕ್ಕೆ ತುಂಬುತ್ತಿರುವ ಸಮಯದಲ್ಲಿ ಗ್ರಾಮಸ್ಥರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅವರನ್ನು ವಾಹನ ಸಮೇತ ಕುಮಾರಪಟ್ಟಣ ಪೊಲೀಸರು ಠಾಣೆಗೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ರಾಣೆಬೆನ್ನೂರು ತಾಲ್ಲೂಕ …

Read More »

ಪಂಚಮಸಾಲಿಗಳಿಗೆ 2ಎ ಮೀಸಲಾತಿ: ಸಚಿವನಾಗಿ ಬೀದಿಯಲ್ಲಿ ಹೋರಾಡಲಾಗಲ್ಲ- ನಿರಾಣಿ

ಬೆಳಗಾವಿ: ‘ನಾನು ಸಚಿವ ಸ್ಥಾನದಲ್ಲಿದ್ದುಕೊಂಡು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಬೀದಿಯಲ್ಲಿ ನಿಂತು ಹೋರಾಡಲು ಸಾಧ್ಯವಾಗುವುದಿಲ್ಲ’ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು. ಇಲ್ಲಿ ಪತ್ರಕರ್ತರೊಂದಿಗೆ ಬುಧವಾರ ಮಾತನಾಡಿದ ಅವರು, ‘ಬಸವ ಜಯಮೃತ್ಯುಂಜಯ ಸ್ವಾಮೀಜಿ ನಮ್ಮ ಗುರುಗಳು. ಅವರನ್ನು ಸಮಾಜದ ಪೀಠಕ್ಕೆ ನಾವೇ ಆಯ್ಕೆ ಮಾಡಿದ್ದು. ನಮ್ಮ ಹೋರಾಟಕ್ಕೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ ಎಂದು ಅವರು ಯಾರನ್ನು ದೃಷ್ಟಿಯಲ್ಲಿಟ್ಟುಕೊಂಡು ಆರೋಪ ಮಾಡಿದ್ದಾರೋ ನನಗೆ ಗೊತ್ತಿಲ್ಲ’ …

Read More »

ಸಿಎಂ ಮಮತಾಗೆ ಅಳಿವು-ಉಳಿವಿನ ಪ್ರಶ್ನೆಯಾದ ಬೈಎಲೆಕ್ಷನ್

ನವದೆಹಲಿ, ಸೆ.30- ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹುದ್ದೆಯ ಅಳಿವು ಉಳಿವನ್ನು ನಿರ್ಧರಿಸುವ ಭವಾನಿಪುರ ಸೇರಿದಂತೆ ಒಟ್ಟು ನಾಲ್ಕು ವಿಧಾನ ಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆದಿದೆ. ಪಶ್ಚಿಮಬಂಗಾಳದ ಭವಾನಿಪುರ, ಸಂಸೆರ್ಗಂಜ್, ಜಂಗಿಪುರ್ ಕ್ಷೇತ್ರಗಳು ಒಡಿಸಾ ರಾಜ್ಯದ ಪುರಿ ಜಿಲ್ಲೆಯ ಪಿಪಿಲಿ ವಿಧಾನಸಭಾಕ್ಷೇತ್ರಕ್ಕೆ ಉಪಚುನಾವಣೆಗಳು ನಡೆದಿವೆ. ಬೆಳಗ್ಗೆ ಏಳರಿಂದ ಸಂಜೆ ಆರು ಗಂಟೆಯವರೆಗೂ ಮತದಾನ ನಡೆದಿದೆ. ಬೆಳಗ್ಗೆ ಮತದಾನದಲ್ಲಿ ಉತ್ಸಾಹ ಕಂಡು ಬಂದಿದ್ದು, ಜನ ಸಾಲುಗಟ್ಟಿ ಮತ …

Read More »

ಕಾಂಗ್ರೆಸ್ ಸಭೆಯಲ್ಲಿ ಜಟಾಪಟಿಗೆ ಬಿದ್ದು ಘೋಷಣೆ ಕೂಗಿದ ಕಾರ್ಯಕರ್ತರು

ಶಿರಸಿ: ಕಾಂಗ್ರೆಸ್ ಸಭೆಯಲ್ಲಿ ಆರ್.ವಿ.ದೇಶಪಾಂಡೆ ಹಾಗೂ ಘೋಟ್ನೇಕರ್ ಬೆಂಬಲಿಗರು ಗೊಂದಲ ಸೃಷ್ಟಿಸಿದ ಘಟನೆ ಶಿರಸಿಯ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಅಂಬೇಡ್ಕರ್ ಭವನದಲ್ಲಿ ಕಾಂಗ್ರೆಸ್​ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಸಭೆಯಲ್ಲಿ ಘೋಟ್ನೇಕರ್ ಹಾಗೂ ಆರ್.ವಿ.ದೇಶಪಾಂಡೆ ಬೆಂಬಲಿಗರ ನಡುವೆ ಜಯಘೋಷದ ಗೊಂದಲ ಏರ್ಪಟ್ಟಿತು. ಭಾಷಣದ ವೇಳೆ ಹಳಿಯಾಳದ ರಾಜಕೀಯ ಸ್ಥಿತಿ ವಿವರಿಸಿ ದೇಶಪಾಂಡೆ ಹಾಗೂ ಬ್ಲಾಕ್ ಅಧ್ಯಕ್ಷರ ವಿರುದ್ಧ ವಿಧಾನ ಪರಿಷತ್ ಸದಸ್ಯ ಘೋಟ್ನೇಕರ್ …

Read More »

ಕಿಡಿಗೇಡಿಗಳ ಕಲ್ಲು ತೂರಾಟದಲ್ಲಿ ಸಾರ್ವಜನಿಕರ ತುರ್ತು ಸೇವೆಯ 112 ವಾಹನ.

  ಘಟಪ್ರಭಾ: ಸೋಮವಾರ ರಾತ್ರಿ 12 ಗಂಟೆ ಸುಮಾರಿಗೆ ಘಟಪ್ರಭಾದ ದಳವಾಯಿ ನಗರದಲ್ಲಿ ಜನರ ತುರ್ತು ಸೇವೆಗಾಗಿರುವ ಪೊಲೀಸ್ ಇಲಾಖೆಯ 112 ವಾಹನದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ವಾಹನ ಜಖುಂಗೊಳಿಸಿ ಪರಾರಿಯಾಗಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪೊಲೀಸರು ಅಪಾಯದಿಂದ ಪರಾಗಿದ್ದು 7 ಜನರ ಮೇಲೆ ಪೊಲೀಸರೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.   ಘಟನೆಯ ವಿವರ: ಗೋಕಾಕ ತಾಲೂಕಿನ ಶಿಂಗಳಾಪೂರ ಗ್ರಾಮದ ಯುವತಿಯೊರ್ವಳನ್ನ ಘಟಪ್ರಭಾ ದಳವಾಯಿ …

Read More »

ವಿದ್ಯುತ್ ಬಿಲ್ ವಸೂಲಿಗೆ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಹೊಡೆದ ಗ್ರಾಮಸ್ಥರು

ತುಮಕೂರು: ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ಬೆಸ್ಕಾಂ ಸಿಬ್ಬಂದಿಗೆ ಗ್ರಾಮಸ್ಥರು ಕಲ್ಲು, ದೊಣ್ಣೆಗಳಿಂದ ಹೊಡೆದ ಘಟನೆ ತುಮಕೂರು ಜಿಲ್ಲೆ, ಶಿರಾ ತಾಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ವಿದ್ಯುತ್ ಬಿಲ್ ವಸೂಲಿಗಾಗಿ ಶಾಖಾಧಿಕಾರಿ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಕಲ್ಲು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗ್ರಾಮಸ್ಥರು ಹಲ್ಲೆ ನಡೆಸಿರುವ ದೃಶ್ಯ ಮೊಬೈಲ್​ನಲ್ಲಿ ಸೆರೆಯಾಗಿದೆ. ಲೈನ್ ಮ್ಯಾನ್​ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಗಾಯಾಳುಗಳೆಲ್ಲರನ್ನೂ ಶಿರಾ …

Read More »

ಶಾಹೀನ್ ಚಂಡಮಾರುತ- ಅ.3ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ

ಬೆಂಗಳೂರು: ಶಾಹೀನ್ ಚಂಡಮಾರುತ ಹಿನ್ನೆಲೆ ಇಂದಿನಿಂದ ಅಕ್ಟೋಬರ್ 3 ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ ಶಾಹೀನ್ ಚಂಡಮಾರುತ ಅಪ್ಪಳಿಸುವ ಹಿನ್ನೆಲೆಯಲ್ಲಿ ಇಂದಿನಿಂದ ಕರ್ನಾಟಕದಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಅ.3ರ ವರೆಗೂ ಕರ್ನಾಟಕದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.   ಇಂದಿನಿಂದ ಅ.3 ರವರೆಗೆ ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, …

Read More »