Home / ರಾಷ್ಟ್ರೀಯ (page 826)

ರಾಷ್ಟ್ರೀಯ

ತಿರುಮಲ ತಿಮ್ಮಪ್ಪನ ದರ್ಶನ ಪಡೆದ ಸಚಿವ ರಮೇಶ್ ಜಾರಕಿಹೊಳಿ

ಆಂಧ್ರಪ್ರದೇಶ : ರಾಜ್ಯ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಮಂಗಳವಾರ ತಿರುಮಲ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಚಿತ್ತೂರು ಜಿಲ್ಲೆಯ ತಿರುಮಲ ಬೆಟ್ಟದ ಪಟ್ಟಣದಲ್ಲಿನ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದುಕೊಂಡಿದ್ದಾರೆ. ರಾಜ್ಯದಲ್ಲಿ ರಾಜಕೀಯ ಹೈಡ್ರಾಮಾ ನಡೆಯುತ್ತಿದ್ದರೆ, ಸಚಿವ ರಮೇಶ್ ಜಾರಕಿಹೊಳಿ ಅವರು, ತಿಮ್ಮಪ್ಪ ದರ್ಶನಕ್ಕೆ ತೆರಳಿದ್ದಾರೆ. ಜತೆಗೆ ಶಾಸಕ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಬಿಜೆಪಿ ಮುಖಂಡರು …

Read More »

ಸಭಾಪತಿ ರಾಜ್ಯಪಾಲರ ಮಾತು ಕೇಳಬೇಕೆಂದಿಲ್ಲ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಸದನದಲ್ಲಿ ನಡೆದ ಘಟನೆ ಸರಿಯಲ್ಲ. ಈ ರೀತಿಯಾಗಿ ನಡೆಯಬಾರದಿತ್ತು ಅಂತಾ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಪರಿಷತ್ ನ ಕಲಾಪದಲ್ಲಿ ನಡೆದ ಗಲಾಟೆ, ನೂಕಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಭಾಪತಿಗಳು ಸದನಕ್ಕೆ ಬರುವ ಮೊದಲೇ ಬಾಗಿಲು ಹಾಕಿದ್ದು, ಕಾನೂನು ಬಾಹಿರ. ಸಭಾಪತಿಗಳಿಗೆ ಅಪಮಾನ ಇತಿಹಾಸದಲ್ಲಿಯೇ ಇಲ್ಲ. ಎಂದರು. ಸಭಾಪತಿ ಇರುವಾಗಲೇ ಉಪ ಸಭಾಪತಿ ಪೀಠ ಅಲಂಕರಿಸಿರುವುದು ತಪ್ಪು. ರಾಜಭವನದ ಗೌರವ ಹಾಳು ಮಾಡಿದ್ದಾರೆ. ರಾಜ್ಯಪಾಲರು ನಿರ್ದೇಶನ …

Read More »

ತುಮಕೂರಿನ ಬಳಿ ರಸ್ತೆ ಅಪಘಾತ: ಮಹಿಳೆ ಸಾವು, ನಾಲ್ವರ ಸ್ಥಿತಿ ಗಂಭೀರ

ತುಮಕೂರು: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ತೊಡಗಿದ್ದ ವಾಹನ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಮಹಿಳೆ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಕಾರಿನಲ್ಲಿದ್ದ ಶಶಿಕಲಾ(50) ಅಪಘಾತದಲ್ಲಿ ಮೃತಪಟ್ಟ ಮಹಿಳೆ. ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ತೀಮ್ಲಾಪುರ ಗ್ರಾಮದ ಬಳಿ ರಸ್ತೆ ಕಾಮಗಾರಿ ನಡೆಯುತ್ತಿತ್ತು. ನೀರು ತುಂಬಿದ ಟ್ಯಾಂಕರ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದೆ. ತಾಲೂಕಿನ ಸೂಗೂರು ಮತ್ತಿಘಟ್ಟ ಗ್ರಾಮದವರಾಗಿದ್ದು, ದೇವಾಲಯಕ್ಕೆ ತೆರಳಿ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಇನ್ನೂ ನಾಲ್ವರ …

Read More »

ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಗೂಂಡಾಗಿರಿ ಪ್ರದರ್ಶಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಾಂಗ್ರೆಸ್ ಗುಂಡಾವರ್ತನೆ ತೋರಿಲ್ಲ. ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿ ಗೂಂಡಾಗಿರಿಯನ್ನು ಸದನದಲ್ಲಿ ಪ್ರದರ್ಶಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ವಿಧಾನಪರಿಷತ್ ನಲ್ಲಿನ ಗಲಾಟೆಯ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಇಂದಿನ ವಿಧಾನ ಪರಿಷತ್ ನಲ್ಲಿನ ಗಲಾಟೆಯ ಬಗ್ಗೆ ವಿಷಾದಿಸುತ್ತೇನೆ. ಆದ್ರೆ ಸಭಾಪತಿ ಇದ್ದಾಗ ಉಪಸಭಾಪತಿ ಹೇಗೆ ಬಂದ್ರು.? ಸಭಾಪತಿ ಬರುವ ಮೊದಲೇ ಉಪಸಭಾಪತಿ ಪೀಠ ಅಲಂಕಿರಿಸಿದ್ದೇಕೆ …

Read More »

ಬೆಳಗಾವಿ: ಹುಲಿಯ ಉಗುರು, ಆನೆ ದಂತದ ಕಡಗ ಮಾರಾಟ, ವ್ಯಕ್ತಿಯ ಬಂಧನ

ಬೆಳಗಾವಿ: ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ. ನಗರದ ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ. ಅವರಿಂದ 2 ಕಡಗ ಹಾಗೂ 5 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ಅರಣ್ಯ ಸಂಚಾರಿ ದಳದ ಪಿಎಸ್‌ಐ ರೋಹಿಣಿ ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.ಆರೋಪಿ ವಿರುದ್ಧ …

Read More »

ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ

ಗೋಕಾಕ ತಾಲ್ಲೂಕಿನ 34 ಬೆಣಚಿನಮರಡಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ (1) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -03 ಶ್ರೀಮತಿ ಸುನಂದಾ ಪ್ರಕಾಶ ಬಂಡಿವಡ್ಡರ್ (2) ಸಾಮಾನ್ಯ ವರ್ಗ ಮಹಿಳೆ ವಾರ್ಡ್ ಸಂಖ್ಯೆ -05 ಶ್ರೀಮತಿ ಮಂಜುಳಾ ಲಕ್ಷ್ಮಣ್ ಪಾಟೀಲ್ (3) ಎಸ್.ಟಿ. ವರ್ಗ ಮಹಿಳೆ ವಾರ್ಡ್ ಸಂಖ್ಯೆ-01 ಶ್ರೀಮತಿ ಸುರೇಖಾ ಮಯೂರ್ ಕುರಿ     ಗೋಕಾಕ್ ತಾಲೂಕಿನ ಶಾಸಕರಾದ ಸನ್ಮಾನ್ಯ ಶ್ರೀ ರಮೇಶಣ್ಣ ಲಕ್ಷ್ಮಣರಾವ್ …

Read More »

ಕೃಷ್ಣಾ ನದಿಯಲ್ಲಿ ಮುಳುಗಿ ಯುವಕ ಸಾವು

ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದ ಹನುಮಾನ ದೇವರ ಕಾರ್ತಿಕೋತ್ಸವದ ಅಂಗವಾಗಿ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಗಂಗಾ ಸ್ನಾನಕ್ಕೆಂದು ನದಿಗೆ ಹೋದಾಗ, ನದಿಯಲ್ಲಿ ಈಜಲು ಹೋದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾಂತೇಶ ಕವಡಿಮಟ್ಟಿ(19) ಮೃತ ಯುವಕ. ಸೆಳ್ಳಗಿ ಗ್ರಾಮದ ಬಳಿಯಲ್ಲಿನ ಕೃಷ್ಣಾ ನದಿಗೆ ಹನುಮಾನ ದೇವರ ಪಲ್ಲಕ್ಕಿಯನ್ನು ತೆಗೆದುಕೊಂಡು ಹೋಗಲಾಗಿತ್ತು. ಈ ವೇಳೆ ಗಂಗಾ ಸ್ನಾನಕ್ಕೆಂದು ತೆರಳಿದ ವೇಳೆ ನೀರಿನ ಸುಳಿವಿಗೆ ಸಿಲುಕಿ ಈ ದುರ್ಘಟನೆ ನಡೆದಿದೆ. ಯುವಕನ ಸಾವಿನ …

Read More »

ಸಂಸತ್ ನ ಈ ವರ್ಷದ ಚಳಿಗಾಲದ ಅಧಿವೇಶನ ರದ್ದು

ಹೊಸದಿಲ್ಲಿ: ಕೊರೋನ ವೈರಸ್ ಹಾವಳಿಯ ಕಾರಣಕ್ಕೆ ಈ ಬಾರಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸದಿರಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ. ಕೋವಿಡ್-19 ಹರಡುವುದನ್ನು ತಡೆಯಲು ಹಾಗೂ ಜನವರಿಯಲ್ಲಿ ನೇರವಾಗಿ ಬಜೆಟ್ ಅಧಿವೇಶನ ನಡೆಸುವ ಉದ್ದೇಶದಿಂದ ಚಳಿಗಾಲದ ಅಧಿವೇಶನ ರದ್ದುಪಡಿಸುವ ಕುರಿತಂತೆ ಸರ್ವಪಕ್ಷಗಳು ಒಲವು ಹೊಂದಿವೆ ಎಂದು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದಿಲ್ಲಿಯ ಹೈವೇಗಳಲ್ಲಿ ಸಾವಿರಾರು ರೈತರು ವಿವಾದಾತ್ಮಕ ರೈತ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡಸುತ್ತಿರುವ …

Read More »

ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಹೆಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ …

Read More »

ಬುಧವಾರ ಜೆಡಿಎಸ್ ಪ್ರಮುಖರ ಸಭೆ,ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ

ಬೆಂಗಳೂರು,ಡಿ.- ಗ್ರಾಮಪಂಚಾಯ್ತಿ ಚುನಾವಣೆ, ಪಕ್ಷ ಸಂಘಟನೆ, ಪ್ರಚಲಿತ ರಾಜಕೀಯ ವಿದ್ಯಮಾನ ಮೊದಲಾದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲು ನಾಳೆ ಮತ್ತು ಬುಧವಾರ ಜೆಡಿಎಸ್ ಪ್ರಮುಖರ ಸಭೆ ನಡೆಸಲು ಉದ್ದೇಶಿಸಲಾಗಿದೆ. ಇತ್ತೀಚೆಗೆ ಪಕ್ಷದಲ್ಲಿ ಉಂಟಾಗಿರುವ ಕೆಲವು ಗೊಂದಲಗಳನ್ನು ತಿಳಿಗೊಳಿಸುವ ಹಿನ್ನೆಲೆಯಲ್ಲಿ ಜೆಡಿಎಸ್ ಪ್ರಮುಖರ ಸಭೆ ನಡೆಸಲಾಗುತ್ತದೆ. ಪಕ್ಷದ ಮುಖಂಡರು, ಕಾರ್ಯಕರ್ತರಲ್ಲಿರುವ ಕೆಲವೊಂದು ಗೊಂದಲಗಳನ್ನು ನಿವಾರಿಸುವ ಹಾಗೂ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಸಭೆ ನಡೆಸಲಾಗುತ್ತದೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ …

Read More »