Breaking News

ರಾಷ್ಟ್ರೀಯ

ಕುಂದಾಪುರದಿಂದ ತಿರುಪತಿಗೆ ರೈಲು: ವಿಜಯ ದಶಮಿಯಂದು ಚಾಲನೆ

ಕುಂದಾಪುರ: ವಿಜಯದಶಮಿಯ ದಿನದಂದು ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಆರಂಭವಾಗಲಿದ್ದು, ಆ ಮೂಲಕ ಕರಾವಳಿಗರ ದೀರ್ಘ‌ ಕಾಲದ ಬೇಡಿಕೆ ಈಡೇರಿದಂತಾಗಲಿದೆ. ವಿಸ್ತರಣೆಗೊಂಡ ಕಾಚಿಗುಡ ರೇಣಿಗುಂಟ ತಿರುಪತಿ ಮಂಗಳೂರು ರೈಲಿನ ಮೊದಲ ಓಡಾಟವು ಶನಿವಾರ ಆರಂಭಗೊಳ್ಳಲಿದೆ. ಈ ರೈಲು ಕೊಯಮತ್ತೂರು ಮೂಲಕವೂ ಓಡಲಿರುವುದರಿಂದ ಸದ್ಗುರು ಜಗ್ಗಿ ವಾಸುದೇವರ ಈಶ ಯೋಗ ಕೇಂದ್ರ ಮತ್ತು ಆದಿ ಯೋಗಿ ದರ್ಶನಕ್ಕೂ ಸಹಾಯವಾಗಲಿದೆ. ವೇಳಾಪಟ್ಟಿ ಮುರುಡೇಶ್ವರದಿಂದ ಬುಧವಾರ, ಶನಿವಾರ, ತಿರುಪತಿಯಿಂದ ಮಂಗಳವಾರ, ಶುಕ್ರವಾರ ಎಂದು ವಾರಕ್ಕೆರಡು ದಿನ …

Read More »

ತಾಯಿ ಚಾಮುಂಡೇಶ್ವರಿ ಕೃಪೆ ನನ್ನ ಮೇಲಿದೆ, ಅದಕ್ಕೆ ದೀರ್ಘಕಾಲದಿಂದ ರಾಜಕೀಯದಲ್ಲಿದ್ದೇನೆ:ಸಿಎಂ

ಮೈಸೂರು : ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ …

Read More »

ಕರಾವಳಿಯಿಂದ ತಿರುಪತಿಗೆ ರೈಲು ಸಂಪರ್ಕ ಕಲ್ಪಿಸಿ

ಕುಂದಾಪುರ: ಪ್ರಸಿದ್ಧ ಯಾತ್ರಾ ಸ್ಥಳ ತಿರುಪತಿ ಹಾಗೂ ಹೈದರಾಬಾದ್‌ಗೆ ಕಾರವಾರದಿಂದ ಕುಂದಾಪುರ -ಉಡುಪಿ- ಮಂಗಳೂರು ಮೂಲಕ ರೈಲು ಸಂಪರ್ಕ ಆರಂಭಿಸಬೇಕು ಎನ್ನುವುದಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ರೈಲ್ವೇ ಸಚಿವ ಅಶ್ವಿ‌ನಿ ವೈಷ್ಣವ್‌ ಹಾಗೂ ರಾಜ್ಯ ಸಚಿವ ವಿ. ಸೋಮಣ್ಣಗೆ ಮನವಿ ಸಲ್ಲಿಸಿದ್ದಾರೆ.   ಕಳೆದೊಂದು ದಶಕದಿಂದ ತಿರುಪತಿಗೆ ರೈಲು ಸಂಪರ್ಕ ಬೇಕೆನ್ನುವ ಬೇಡಿಕೆಯನ್ನು ಕರಾವಳಿಯ ಎಲ್ಲ ಊರುಗಳ ಜನರು ಇಡುತ್ತಿದ್ದು, ಈ ಬಗ್ಗೆ ಕುಂದಾಪುರ ರೈಲು ಪ್ರಯಾಣಿಕರ ಹಿತರಕ್ಷಣ …

Read More »

ಅಯ್ಯಪ್ಪ ದರ್ಶನಕ್ಕೆ ಇನ್ನು ಆನ್‌ಲೈನ್‌ ನೋಂದಣಿ ಕಡ್ಡಾಯ

ತಿರುವನಂತಪುರ: ಈ ಬಾರಿ ಶಬರಿಮಲೆಗೆ ಅಯ್ಯಪ್ಪನ ದರ್ಶನಕ್ಕೆ ಬರುವ ಯಾತ್ರಾರ್ಥಿಗಳು ಆನ್‌ಲೈನ್‌ ಮೂಲಕವೇ ಬುಕ್ಕಿಂಗ್‌ ಮಾಡಿಕೊ ಳ್ಳುವುದು ಕಡ್ಡಾಯವಾಗಿದೆ. ಪ್ರತೀ ದಿನ 80,000 ಭಕ್ತರಿಗೆ ಮಾತ್ರವೇ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗು ತ್ತದೆ. ಭಕ್ತರು ಶಬರಿಮಲೆ ದೇಗು ಲದ ವೆಬ್‌ಸೈಟ್‌ನಲ್ಲಿ ವರ್ಚುವಲ್‌ ಬುಕಿಂಗ್‌ ಮಾಡ ಬೇಕಾಗುತ್ತದೆ. ಈ ವೇಳೆ ಯಾತ್ರಾರ್ಥಿ ಗಳು ಸಾಗುವ ಮಾರ್ಗವನ್ನೂ ಆಯ್ದು ಕೊ ಳ್ಳ ಬಹು ದಾಗಿದೆ. ಕಡಿಮೆ ಜನಸಂದಣಿ ಇರುವ ಮಾರ್ಗಗಳೂ ಲಭ್ಯವಿದೆ. ಕಾಡಿನ ಮಾರ್ಗದಲ್ಲಿ ಸಂಚರಿಸಲಿರುವ ಯಾತ್ರಾರ್ಥಿಗಳಿಗೆ ಅಗತ್ಯ ಸೌಲಭ್ಯ ಒದಗಿಸುವುದಾಗಿಯೂ ಸರಕಾರ ತಿಳಿಸಿದೆ.

Read More »

ಠೇವಣಿದಾರರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ

ಬೈಲಹೊಂಗಲ: ‘ಕಿತ್ತೂರು ರಾಣಿ ಚನ್ನಮ್ಮ ಸಹಕಾರಿಯ ಗ್ರಾಹಕರು, ಠೇವಣಿದಾರರು ಆತಂಕಕ್ಕೆ ಒಳಗಾಗಬಾರದು. ಆರು ತಿಂಗಳು ಕೊಟ್ಟರೆ ರಾಜ್ಯ ಸಂಯುಕ್ತ ಸಹಕಾರಿ ಮಹಾಮಂಡಳದಿಂದ ಪ್ರಾಮಾಣಿಕವಾಗಿ ಕೆಲಸ ಮಾಡಲಾಗುವುದು’ ಎಂದು ರಾಜ್ಯ ಸಹಕಾರಿ ಮಹಾಮಂಡಳದ ಉಪಾಧ್ಯಕ್ಷ ಜಗದೀಶ ಕವಟಗಿಮಠ ಹೇಳಿದರು.   ಪಟ್ಟಣದ ಹಳೇ ಪ್ರೇರಣಾ ಶಾಲೆ ಆವರಣದಲ್ಲಿ ಶನಿವಾರ ನಡೆದ ಸಹಕಾರಿಯ ಠೇವಣಿದಾರರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಪ್ರಭಾಕರ ಕೋರೆ ಅವರು ಚನ್ನಮ್ಮ ಸಹಕಾರಿಗೆ ಬೆನ್ನೆಲುಬು ಆಗಿ ನಿಂತಿದ್ದಾರೆ’ ಎಂದರು. ‘ಚನ್ನಮ್ಮ …

Read More »

ಮುಖ್ಯಮಂತ್ರಿಯಿಂದ ಕಾಮಗಾರಿಗಳ ಉದ್ಘಾಟನೆ 13ರಂದು

ಉಗರಗೋಳ: ‘ಯಲ್ಲಮ್ಮನಗುಡ್ಡದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಕೈಗೊಂಡಿರುವ ₹21 ಕೋಟಿ ವೆಚ್ಚದ ಕಾಮಗಾರಿಗಳನ್ನು ಅ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಉದ್ಘಾಟಿಸುವರು’ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು. ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಕೈಗೊಂಡ ಕಾಮಗಾರಿಗಳನ್ನು ಶನಿವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.   ಇಲಾಖೆ ನಿರ್ದೇಶಕ ಕೆ.ವಿ.ರಾಜೇಂದ್ರ, ‘ಸುಲಭ ಶೌಚಗೃಹ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲು ಮತ್ತು ನಿರ್ವಹಣೆಗಾಗಿ ಯಲ್ಲಮ್ಮ ದೇವಸ್ಥಾನದ ಆಡಳಿತ ಮಂಡಳಿಗೆ ಹಸ್ತಾಂತರಿಸಲು ಅಧಿಕಾರಿಗಳು …

Read More »

ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುವ ಬಿಜೆಪಿಯವರಿಗೆ ಕೆಲಸವಿಲ್ಲ: ಮಧು ಬಂಗಾರಪ್ಪ

ಮೈಸೂರು: ‘ಬಿಜೆಪಿ ನಾಯಕರಿಗೆ ಮಾಡಲು ಕೆಲಸವಿಲ್ಲ. ಆದ್ದರಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕೇಳುತ್ತಿದ್ದಾರೆ’ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟೀಕಿಸಿದರು. ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಎಫ್‌ಐಆರ್ ದಾಖಲಾದಾಕ್ಷಣ ರಾಜೀನಾಮೆ ನೀಡಬೇಕೆಂಬ ಕಾನೂನಿದೆಯೇ? ಬಿಜೆಪಿಯವರು ಸುಮ್ಮನೆ ಬಾಯಿ ಬಡಿದುಕೊಳ್ಳುತ್ತಿದ್ದಾರೆ. ಅವರಲ್ಲಿ ಎಷ್ಟು ಜನರು ಜಾಮೀನಿನ ಮೇಲಿಲ್ಲ? ಆ ಪಕ್ಷದ ಎಷ್ಟೋ ಮಂದಿಗೆ ರಾಜಕಾರಣಿ ಆಗಲು ಯೋಗ್ಯತೆ ಇದೆಯೇ? ಅವರು ರಾಜಕಾರಣ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ವಾಗ್ದಾಳಿ …

Read More »

ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Case) ಜೈಲಿನಲ್ಲಿರುವ ನಟ ದರ್ಶನ್‌(Actor Darshan) ಅವರ ಜಾಮೀನು ಅರ್ಜಿಯ ವಿಚಾರಣೆ ಶನಿವಾರ ಮತ್ತೆ (ಅ.5ರಂದು) ನಡೆದಿದೆ. 57ನೇ ಸಿಸಿಹೆಚ್‌ ಕೋರ್ಟಿನಲ್ಲಿ ದರ್ಶನ್‌ ಪರ ವಕೀಲ ಹಿರಿಯ ವಕೀಲರಾದ ಸಿ.ವಿ ನಾಗೇಶ್ ವಾದ ಮಂಡನೆ ಮಾಡಿದ್ದಾರೆ. ದರ್ಶನ್, ಪವಿತ್ರಾ ಗೌಡ ಸೇರಿ 7 ಮಂದಿಯ ಜಾಮೀನು ಅರ್ಜಿ ವಿಚಾರಣೆ 57ನೇ ಸಿಸಿಹೆಚ್‌ ಕೋರ್ಟ್‌ನಲ್ಲಿ ನಡೆಯುತ್ತಿದೆ. ದರ್ಶನ್ ಪರ ಹಿರಿಯ ವಕೀಲ ಸಿ.ವಿ ನಾಗೇಶ್ ವಾದ ಮಂಡಿಸಿದ್ದು …

Read More »

ಕಾರ್ಮಿಕರಿಗೆ ಗುಡ್‌ ನ್ಯೂಸ್‌ : ಸರ್ಕಾರದ ಈ ಯೋಜನೆಯಡಿ ಸಿಗಲಿದೆ 1 ಲಕ್ಷ ರೂ. ವಿಮೆ!

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೊಂದಾಯಿಸಿಕೊಳ್ಳಲು 20 ವರ್ಗಗಳ ಕಾರ್ಮಿಕರಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹಮಾಲರು, ಮನೆಗೆಲಸದವರು, ಚಿಂದಿ ಆಯುವವರು, ಟೈಲರ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಭಟ್ಟಿಕಾರ್ಮಿಕರು, ಗಿಗ್ ಕಾರ್ಮಿಕರು, ಸಿನಿ ಕಾರ್ಮಿಕರು, ನೇಕಾರರು, ಬೀದಿ ಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್‌ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ/ಸಭಾ ಭವನ/ಟೆಂಟ್/ಪೆAಡಾಲ್ ಕೆಲಸ ನಿರ್ವಹಿಸುವ ಎಲ್ಲಾ …

Read More »

ಭಾರತದೆಡೆ ಹೆಚ್ಚಿದ ವಿಶ್ವದ ನಿರೀಕ್ಷೆ: ಗಡ್ಕರಿ

ನಿಪ್ಪಾಣಿ: ‘ತಾಂತ್ರಿಕ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಪ್ರತಿಭಾವಂತ ಮಾನವಶಕ್ತಿ ಕೇವಲ ಭಾರತದಲ್ಲಿ ಮಾತ್ರ ಇರುವುದರಿಂದ ಇಡಿ ವಿಶ್ವವು ಭಾರತವನ್ನು ಬಹು ನಿರೀಕ್ಷೆಯಿಂದ ಗಮನಿಸುತ್ತಿದೆ. ಇಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ತಯಾರಿಸುವ ಕಾರ್ಯ ಕೆ.ಎಲ್.ಇ.ಯಂತಹ ಶಿಕ್ಷಣ ಸಂಸ್ಥೆಗಳು ಈ ಭಾಗದಲ್ಲಿ ಮಾಡುತ್ತಿವೆ’ ಎಂದು ಕೇಂದ್ರ ರಸ್ತೆ, ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತೀನ ಗಡ್ಕರಿ ಹೇಳಿದರು.   ನಿಪ್ಪಾಣಿಯ ವಿಎಸ್‍ಎಂ ಸೋಮಶೇಖರ ಆರ್. ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಡಾ. ಪ್ರಭಾಕರ ಕೋರೆ …

Read More »