Home / ರಾಷ್ಟ್ರೀಯ (page 830)

ರಾಷ್ಟ್ರೀಯ

ಅಂಬೇಡ್ಕರ್ ಕನಸನ್ನು ನೆನೆಸು ಮಾಡುವುದು ಸತೀಶ್ ಜಾರಕಿಹೊಳಿ ಅವರ ಕನಸು: ಡಾ.ಯಲ್ಲಪ್ಪ ಹಿಮ್ಮಡಿ

ಗೋಕಾಕ: ಸಮಾಜದ ಒಳಿತಿಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕಂಡಿದ್ದ ಕನಸನ್ನು ನೆನೆಸು ಮಾಡಲು ಶ್ರಮಿಸುತ್ತಿರುವರು ಶಾಸಕ ಸತೀಶ್ ಜಾರಕಿಹೊಳಿ ಅವರು ಎಂದು ಬಂಡಾಯ ಸಾಹಿತ್ಯ ಸಂಘಟನೆಯ ಡಾ. ಯಲ್ಲಪ್ಪ ಹಿಮ್ಮಡಿ ಹೇಳಿದರು. ನಗರದ ಮರಾಠ ಸಮಾಜ ಭೂಮಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ನೇತ್ರತ್ವದಲ್ಲಿ ಮಾನವ ಬಂಧುತ್ವ ವೇದಿಕೆಯಿಂದ ಪ್ರತಿವರ್ಷ ನಡೆಯುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಹಣ ದಿನದಂದು ಆಚರಿಸುವ ಮೌಢ್ಯ ವಿರೋಧಿ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. …

Read More »

ಸತೀಶ ಜಾರಕಿಹೊಳಿ ವೈಚಾರಿಕತೆ ಚಿಂತನೆ ಕರ್ನಾಟಕ ಅಷ್ಟೇ ಅಲ್ಲ ದೇಶದ ತುಂಬ ಹಬ್ಬಲಿ: ಅಶೋಕ ಪೂಜಾರಿ

ಗೋಕಾಕ: ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಗತ್ತಿನ ಶ್ರೇಷ್ಟ‌ ನಾಯಕ ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಬಣ್ಣಿಸಿದರು. ನಗರದ ಮರಾಠಾ ರುದ್ರಭೂಮಿಯಲ್ಲಿ ನಡೆದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಪರಿನಿರ್ವಾಣ ನಿಮಿತ್ತ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೌಡ್ಯ ವಿರೋಧಿ ಪರಿವರ್ತನಾ ದಿ‌ನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮೂಢನಂಬಿಕೆ ವಿರುದ್ದ ಹೋರಾಡುತ್ತಿರುವ ಸತೀಶ ಜಾರಕಿಹೊಳಿ ಅವರಿಗೆ ಅಭಿನಂದನೆ ಸಲ್ಲಿಸಬೇಕಿದೆ. ಮಾನವ ಬಂಧುತ್ವ ವೇದಿಕೆ ವೈಚಾರಿಕತೆ ಹೋರಾಟ ಕರ್ನಾಟಕ ಅಷ್ಟೇ ಅಲ್ಲ‌. …

Read More »

ಗ್ರಾಪಂ.ಚುನಾವಣೆಗೆ ಡಿ.7 ಮತ್ತು 11ರಂದು ಅಧಿಸೂಚನೆ : ಚುನಾವಣಾ ಅಕ್ರಮ ತಡೆಗೆ-ಬಿಗಿ ಬಂದೋಬಸ್ತ್

ಬೆಳಗಾವಿ: ಮೊದಲ ಹಂತದ ಗ್ರಾಮ ಪಂಚಾಯತಿ ಚುನಾವಣೆಗೆ ಸೋಮವಾರ (ಡಿ.7) ಮತ್ತು ಎರಡನೇ ಹಂತದ ಚುನಾವಣೆಗೆ ಶುಕ್ರವಾರ(ಡಿ.11) ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಭಾನುವಾರ (ಡಿ.6) ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಅಧಿಸೂಚನೆ ಹೊರಡಿಸಿದ ಬಳಿಕ ನಾಮಪತ್ರಗಳನ್ನು ಸ್ವೀಕಾರ ಪ್ರಕ್ರಿಯೆ ಆರಂಭಗೊಳ್ಳಲಿದೆ. ನಾಮಪತ್ರ ಸಲ್ಲಿಸಲು ಮೊದಲನೇ ಹಂತಕ್ಕೆ ಡಿ.11; ಎರಡನೇ ಹಂತಕ್ಕೆ ಡಿ.16 ಕಡೆಯ ದಿನವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಮೊದಲನೇ ಹಂತಕ್ಕೆ ಡಿ.12; …

Read More »

ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ : ಕುದರಿ

ಘಟಪ್ರಭಾ : ಅಂಬೇಡ್ಕರ ಬರೀ ವ್ಯಕ್ತಿಯಲ್ಲ. ಅವರೊಬ್ಬ ದೊಡ್ಡ ಶಕ್ತಿ. ದೇಶಕ್ಕೆ ವಿಶ್ವದಲ್ಲಿಯೇ ದೊಡ್ಡ ಸಂವಿಧಾನ ನೀಡಿರುವ ಅಂಬೇಡ್ಕರ ಅವರನ್ನು ಗೌರವಿಸಿ ಪೂಜಿಸಬೇಕಾದ ಅಗತ್ಯವಿದೆ ಎಂದು ಅರಭಾವಿ ಮಂಡಲ ಎಸ್‍ಸಿ ಮೋರ್ಚಾ ಅಧ್ಯಕ್ಷ ನಾಗಪ್ಪ ಕುದರಿ ಹೇಳಿದರು. ಭಾನುವಾರದಂದು ಇಲ್ಲಿಗೆ ಸಮೀಪದ ಅರಭಾವಿ ಪಟ್ಟಣದಲ್ಲಿ ವಾಲ್ಮೀಕಿ ಸಮುದಾಯ ಭವನದಲ್ಲಿ ಜರುಗಿದ ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ ಅವರ ಪರಿನಿರ್ವಾಣ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಬೇಡ್ಕರ ಅವರನ್ನು ಕೇವಲ …

Read More »

ಮದ್ವೆಗೆ ಮೂರು ದಿನ ಮುನ್ನ ಯುವಕನ ಮರ್ಮಾಂಗ ಕತ್ತರಿಸಿದ ಗೆಳೆಯರು!

ಲಕ್ನೋ: ಮದುವೆಗೆ ಮೂರು ದಿನವಿರುವಾಗಲೇ ಯುವಕನ ಮರ್ಮಾಂಗ ಕತ್ತರಿಸಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಕೊಟ್ಟಾಲಿ ನಗರದ ಇದಗ್ ಪ್ರದೇಶದಲ್ಲಿ ನಡೆದಿದೆ.ಸಮೀರ್ ಹಲ್ಲೆಗೊಳಗಾದ ಯುವಕ. ಸಮೀರ್ ಮದುವೆಗೆ ಮೂರು ದಿನಗಳ ಬಾಕಿ ಇತ್ತು. ಫರ್ವೇಜ್ ಎಂಬಾತನ ಬಳಿ ಸಮೀರ್ ಒಂದು ಲಕ್ಷ ರೂ. ಸಾಲ ಪಡೆದುಕೊಂಡಿದ್ದನು. ಅದೇ ವಿಚಾರವಾಗಿ ಇಬ್ಬರ ಮಧ್ಯೆ ಹಲವು ಬಾರಿ ಜಗಳ ನಡೆದಿತ್ತು. ಹಣಕಾಸಿನ ಸಂಬಂಧ ಸಮೀರ್ ಮತ್ತು ಫರ್ವೇಜ್ ನಡುವೆ ದ್ವೇಷದ ಜ್ವಾಲೆ ಹೊತ್ತಿಕೊಂಡಿತ್ತು. …

Read More »

ಸರ್ಕಾರ ಕೆಡುವುವ ಶಕ್ತಿ ಇದೆ, ಗೋಕಾಕ ಜಿಲ್ಲೆ ಮಾಡೋಕೆ ಯಾಕೆ ಆಗಲ್ಲ.. ?

ಚಿಕ್ಕೋಡಿ : ಗೋಕಾಕ ಜಿಲ್ಲೆಯನ್ನಾಗಿಸಲು ಕಳೆದ 40 ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ಗೋಕಾಕ ಜಿಲ್ಲೆಗಾಗಿ ಪ್ರಾಣ ನೀಡಲು ಸಿದ್ದ ಅಂತಾ ಗೋಕಾಕ ಜಿಲ್ಲಾ ಹೋರಾಟ ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ಮಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಮುಖಂಡ ಮಾತನಾಡಿ, ಗೋಕಾಕ ಜಿಲ್ಲೆಗಾಗಿ ಬ್ರಿಟಿಷ್ ಸರ್ಕಾರದ ಅವಧಿಯಿಂದಲೂ ಹೋರಾಟ, ಜಿಲ್ಲೆಯ ಕೂಗು ಇದೆ. ನಮ್ಮ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಗೋಕಾಕ ಮತ್ತು ಚಿಕ್ಕೋಡಿ ಇವರಲ್ಲಿ …

Read More »

ಗೋಕಾಕದಲ್ಲಿ ಮರಾಠಿ ಪ್ರಾದಿಕಾರ ಅಬಿವೃದ್ದಿ ವಿರೋದಿಸಿ ಪ್ರತಿಭಟನೆ

ಗೋಕಾಕ: ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಮತ್ತು ಕನ್ನಡಪರ ಸಂಘಟನೆಗಳು ಒಕ್ಕೂಟ ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ   ಗೋಕಾಕದ ಬಸವೇಶ್ವರ ವೃತ್ತದಲ್ಲಿ ತಾಲೂಕಾ ಕನ್ನಡಪರ ಸಂಘಟನೆಯ ಒಕ್ಕೂಟದಿಂದ ಪ್ರತಿಬಟನೆ ಮಾಡಲಾಯಿತು. ಈ ಪ್ರತಿಬಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡರಾದ ಕಿರಣ ಡಮಾಮಗರ, ಸಂತೋಷ ಖಂಡ್ರಿ, ಮಲಿಕ್ ತಳವಾರ.ಯಲ್ಲಪ್ಪ ಗೌಡರ, ಅರುಣ ರಂಗಸುಭೆ, ಅಜೀಜ ಮೊಕಾಶಿ, ಅಮಿತ ಗುಡವಾಲೆ, ಮುಬಾರಕ ಬಾಳೆಕುಂದ್ರಿ, ಕಲ್ಲಯ್ಯಾ ಮಠಪತಿ ಸೇರಿದಂತೆ ಅನೇಕರು …

Read More »

ಅಪ್ರಾಪ್ತ ಬಾಲಕಿ ಅಪಹರಣ, ಕೊಲೆ ಕೇಸ್: ಹಾರುಗೇರಿ ಪೊಲೀಸರಿಂದ ಮೂವರ ಬಂಧನ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಿಸಿ ಕೊಲೆ ಮಾಡಿದ ಆರೋಪದ ಅಪ್ರಾಪ್ತ ಬಾಲಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಳ್ಳಿ (24), ಕಿರಣ ಕೆಂಚಪ್ಪ ಜಗದಾಳ (24) ಹಾಗೂ ಅಪ್ರಾಪ್ತ ಬಾಲಕ ಬಂಧಿತರು. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ 2019ರ ನವೆಂಬರ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪರಣದ ಕುರಿತು ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಬಾಲಕಿಯೊಂದಿಗೆ ಸಲುಗೆ ಹೊಂದಿದ್ದ ಮಾಹಿತಿ ಪಡೆದುಕೊಂಡು ಆದರ್ಶ ಪಾರ್ಥನಳ್ಳಿ …

Read More »

ಟಿಆರ್‌ಎಸ್‌, ಓವೈಸಿಯ ಕೋಟೆ ಛಿದ್ರ – ಹೈದರಾಬಾದ್‌ನಲ್ಲಿ ಬಿಜೆಪಿ ಮುನ್ನಡೆ

ಹೈದರಾಬಾದ್‌: ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ (ಜಿಎಚ್‌ಎಂಸಿ) ಚುನಾವಣೆಯಲ್ಲಿ ಸಿಎಂ ಚಂದ್ರಶೇಖರ್‌ ರಾವ್‌ ಮತ್ತು ಅಸಾದುದ್ದೀನ್ ಒವೈಸಿಯ ಕೋಟೆಯನ್ನು ಛಿದ್ರಗೊಳಿಸಿ ಬಿಜೆಪಿ ಮೊದಲ ಬಾರಿಗೆ ಎರಡಂಕಿಯನ್ನು ದಾಟಿ  ಮುನ್ನಡೆಯುತ್ತಿದೆ. ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಒಟ್ಟು 150 ಸ್ಥಾನಗಳ ಪೈಕಿ ಟಿಆರ್‌ಎಸ್‌ 71ರಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 40, ಎಐಎಂಎಂ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್‌ 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.ವಿಶೇಷ ಏನೆಂದರೆ 2016ರ …

Read More »

ಪಲ್ಟಿ ಹೊಡೆದ ಲಾರಿ: ಭೀಕರ ಅಪಘಾತದಲ್ಲಿ ಚಾಲಕ ಸಾವು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ರಸ್ತೆ ಪಕ್ಕ ನಿಂತಿದ್ದ ಓಮ್ನಿ ಚಾಲಕ ಬಲಿ ಪಡೆದಿದೆ. ಜಿಲ್ಲೆಯ ವಿರಾಜಪೇಟೆ ಮಡಿಕೇರಿ ರಸ್ತೆಯ ಭೇತ್ರಿ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತನನ್ನು ಮೂರ್ನಾಡುವಿನ ಹರೀಶ್ ಎಂದು ಗುರುತಿಸಲಾಗಿದೆ. ಲಾರಿ ಮುಗುಚಿಬಿದ್ದು, ನಾಲ್ಕೈದು ಬಾರಿ ಪಲ್ಟಿ ಹೊಡೆದಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬಿದ್ದ ಪರಿಣಾಮ ಓಮ್ನಿ ವಾಹನ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಮೂರ್ನಾಡು ಪೋಲಿಸರು …

Read More »