ರಾಷ್ಟ್ರೀಯ

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

  ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. …

Read More »

ಅರಬಿ ಸಮುದ್ರದಲ್ಲಿ ಪತನಗೊಂಡ ಮಿಗ್‌ ಅವಶೇಷ ಪತ್ತೆ : ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ

ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್‌-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್‌ನ ಸುಳಿವು ಸಿಕ್ಕಿಲ್ಲ. ಗುರುವಾರ ಸಂಜೆ ಐಎನ್‌ಎಸ್‌ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್‌ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್‌, ಇಂಧನ ಟ್ಯಾಂಕ್‌ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ. ಇಬ್ಬರು ಪೈಲಟ್‌ಗಳ ಪೈಕಿ ಓರ್ವರನ್ನು ಗುರುವಾರವೇ …

Read More »

ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಕೃಷಿ, ತೋಟಗಾರಿಕೆ, ಪಶುಪಾಲನಾ ಪದವಿಯಲ್ಲಿ ಮೀಸಲಾತಿ ಹೆಚ್ಚಳವಾಗಲಿದ್ದು, ಇದರಲ್ಲಿ ದೊಡ್ಡ ಮತ್ತು ಸಣ್ಣ ರೈತರ ಮಕ್ಕಳು ಎಂಬ ಬೇಧ ಮಾಡದೇ ಎಲ್ಲರಿಗೂ ಸೌಲಭ್ಯ ಕಲ್ಪಿಸಲು …

Read More »

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಗ್ರಾಮಗಳ ಸಶಕ್ತಿಕರಣಕ್ಕೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೂ 1.5 ಕೋಟಿ ರೂ. ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೂ 1.5 ಕೋಟಿ ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಅದರ ಜೊತೆಗೆ ಗ್ರಾಮಪಂಚಾಯಿತಳ ಅಭಿವೃದ್ಧಿಗೆ 31 ಸಾವಿರ ಕೋಟಿ ರೂ. ಹಣ …

Read More »

ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿ.1 ರಂದು ಶಿವಸೇನೆಗೆ ಸೇರ್ಪಡೆ

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿಸಂಬರ್ 1 ರಂದು ಶಿವಸೇನೆಗೆ ಸೇರಲಿದ್ದಾರೆ. ನಟಿ ಊರ್ಮಿಳಾ ಮಂಗಳವಾರ ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು. ಊರ್ಮಿಳಾ ಹೆಸರನ್ನು …

Read More »

ರೈತರಿಂದ ದೆಹಲಿಯ 5 ಪ್ರವೇಶ ದ್ವಾರ ಬಂದ್ ಎಚ್ಚರಿಕೆ

ನವದೆಹಲಿ,  : ಕೊರೆಯುವ ಚಳಿಯ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ರೈತರು ಮುಂದುವರೆಸಿದ್ದಾರೆ. ದೆಹಲಿ-ಹರ್ಯಾಣದ ಸಿಂಘು ಗಡಿಯಲ್ಲಿ ಪೊಲೀಸರು ರೈತರನ್ನು ತಡೆದಿದ್ದಾರೆ. ರೈತರು ದೆಹಲಿಯ ಬುರಾಡಿ ಮೈದಾನಕ್ಕೆ ಬಂದರೆ ಅವರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಆದರೆ, ಪ್ರತಿಭಟನೆ ನಡೆಸುತ್ತಿರುವ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಬೆಳಗ್ಗೆ 11ಗಂಟೆಗೆ ಮುಂದಿನ ಹೋರಾಟದ ಬಗ್ಗೆ ರೈತರು ಸಭೆ ನಡೆಸಲಿದ್ದಾರೆ. ದೆಹಲಿ …

Read More »

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ.

ನವದೆಹಲಿ : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಾರಣಾಸಿಗೆ ಭೇಟಿ ನೀಡಲಿದ್ದಾರೆ. ನಗರಕ್ಕೆ ಹಲವು ಅಭಿವೃದ್ಧಿ ಯೋಜನೆಗಳನ್ನು ಅವರು ಭೇಟಿ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಇಂದು ಮಧ್ಯಾಹ್ನ 2.10ಕ್ಕೆ ನಗರಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, ರಾತ್ರಿ 8.50ರ ವರೆಗೂ ದೇವ್ ದೀಪಾವಳಿ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಪಟ್ಟಿಯ ಪ್ರಕಾರ, ಪಿಎಂ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸುಮಾರು ಏಳು ಗಂಟೆಗಳ ಕಾಲ ಕಳೆಯಲಿದ್ದು, ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ ಘಾಟ್ …

Read More »

ನೈಜೀರಿಯಾದ ಉತ್ತರ ಬೊರ್ನೊದ ಗದ್ದೆಗಳಲ್ಲಿ ಭಕ್ತ ಕಟಾವು ಮಾಡುತ್ತಿದ್ದ 40 ರೈತರು ಹತ್ತೆ

ಮೈದ್ಗುರಿ: ನೈಜೀರಿಯಾದ ಉತ್ತರ ಬೊರ್ನೊದ ಗದ್ದೆಗಳಲ್ಲಿ ಭಕ್ತ ಕಟಾವು ಮಾಡುತ್ತಿದ್ದ 40 ರೈತರು ಮತ್ತು ಮೀನುಗಾರರನ್ನು ಶಂಕಿತ ಇಸ್ಲಾಮಿಕ್ ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ. ಹಂತಕರು ಇಸ್ಲಾಮಿಕ್ ಉಗ್ರಗಾಮಿ ತಂಡದ ಬೊಕೊ ಹರಮ್ ಗುಂಪಿಗೆ ಸೇರಿದವರಾಗಿದ್ದಾರೆ. ಉತ್ತರ ಬೊರ್ನೊ ರಾಜ್ಯದ ಗರಿನ್-ಕ್ವಾಶೆಬೆಯ ಗದ್ದೆಯಲ್ಲಿ ರೈತರು ಭಕ್ತ ಕಟಾವು ಮಾಡುತ್ತಿದ್ದರು. ಈ ವೇಳೆ ಅವರನ್ನು ಸುತ್ತುವರಿದ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. 60ಕ್ಕೂ ಹೆಚ್ಚು ರೈತರ ಮೇಲೆ ದಾಳಿ ನಡೆದಿದೆ. ಹಾಗೂ …

Read More »

ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ.

ದೆಹಲಿ: ಮಾರಕ ಕೊರೊನಾ ವೈರಸ್ ಇಡೀ ಜಗತ್ತಿಗೆ ಹರಡಲು ಚೀನಾ ಕಾರಣ ಅನ್ನೋದು ಇಡೀ ಜಗತ್ತಿಗೆ ಗೊತ್ತಿರುವ ವಿಚಾರ. ಇದೇ ಕಾರಣಕ್ಕೆ ಡ್ರ್ಯಾಗನ್ ರಾಷ್ಟ್ರ ವಿಶ್ವ ಭೂಪಟದ ಒಂದೊಂದು ರಾಷ್ಟ್ರಗಳಿಂದ ಉಗಿಸಿಕೊಳ್ಳುತ್ತಿದೆ. ಆದರೆ ತಾನು ಮಾಡಿರುವ ತಪ್ಪನ್ನು ಭಾರತದ ಮೇಲೆ ಹಾಕಲು ಈಗ ಚೀನಾ ಕುತಂತ್ರ ನಡೆಸಿದ್ದು, ಕೊರೊನಾ ವೈರಸ್ ಹರಡಲು ಭಾರತ ಕಾರಣ ಎಂಬ ಅವೈಜ್ಞಾನಿಕ ಮಾಹಿತಿ ನೀಡಿದೆ. ಡ್ರ್ಯಾಗನ್ ದೇಶದ ಹೇಳಿಕೆ ಜಾಗತಿಕವಾಗಿ ಅಪಹಾಸ್ಯಕ್ಕೆ ಗುರಿಯಾಗಿದೆ. ಕೊರೊನಾ …

Read More »

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು ರವಿವಾರದಂದು ನಗರದ ಬಸವ ತಸ್ಸಂಗ ಸಮಿತಿ ಸಭಾಂಗಣದಲ್ಲಿ ಭಾವಯಾನ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಬಸವ ತಸ್ಸಂಗ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ …

Read More »
Sahifa Theme License is not validated, Go to the theme options page to validate the license, You need a single license for each domain name.