Breaking News
Home / ರಾಷ್ಟ್ರೀಯ (page 838)

ರಾಷ್ಟ್ರೀಯ

ಕೊರೊನಾ ಎರಡನೇ ಅಲೆ ಭೀತಿ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧ

ನವದೆಹಲಿ: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕೇಂದ್ರ ವಿಮಾನಯಾನ ನಿರ್ದೇಶನಾಲಯ ಡಿಸೆಂಬರ್ 31ರವರೆಗೆ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ವಿದೇಶ ಸಂಚಾರವನ್ನು ನಿರ್ಬಂಧಿಸಲು ವಿಮಾನಯಾನ ನಿರ್ದೇಶನಾಲಯ ಗುರುವಾರ ಈ ಆದೇಶ ಹೊರಡಿಸಿದೆ. ಪ್ರಯಾಣಿಕರ ವಿಮಾನ ಸಂಚಾರವನ್ನು ನಿಬರ್ಂಧಿಸಲಾಗಿದ್ದರೂ ಸರಕು ಸಾಗಾಣೆ ವಿಮಾನಗಳ ಹಾರಾಟದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More »

ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಆಸಕ್ತಿ ಇಲ್ಲ ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು , ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತು ಮುಂದಿನ ತಿಂಗಳಿನ ಮೊದಲ ವಾರದಲ್ಲಿ ಎರಡನೇ ಸುತ್ತಿನ ಸಭೆ ನಡೆಸಲಾಗುತ್ತದೆ. ಈ ವೇಳೆ ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದರು. ಕಾಂಗ್ರೆಸ್ ಪಕ್ಷದಲ್ಲಿ ಅಭ್ಯರ್ಥಿಗಳ ಕೊರತೆ ಇಲ್ಲ. ಮುಂದಿನ …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅಭಿಮತ… ಬೆಳಗಾವಿ ಜಿಲ್ಲೆ ವಿಭಜನೆಯಾಗಿ ಚಿಕ್ಕೋಡಿ, ಗೋಕಾಕ ಹೊಸ ಜಿಲ್ಲೆ ಅಸ್ತಿತ್ವಕ್ಕೆ ಬರಲಿ…

ಚಿಕ್ಕೋಡಿ ಹಾಗೂ ಗೋಕಾಕ ಹೊಸ ಜಿಲ್ಲೆ ರಚನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅಭಿಮತ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಭಿವೃದ್ದಿ ನಿಟ್ಟಿನಲ್ಲಿ 18 ಶಾಸಕರನ್ನು ಹೊಂದಿರುವ ದೊಡ್ಡ ಜಿಲ್ಲೆ ಬೆಳಗಾವಿ ವಿಭಜನೆಯಾಗುವುದು ಅನಿವಾರ್ಯ. ಜಿಲ್ಲೆ ವಿಭಜನೆ ಬಗ್ಗೆ ಮೊದಲಿನಿಂದಲೂ ನಾವು ಆ ಕುರಿತು ಪ್ರತಿಪಾದಿಸುತ್ತ ಬಂದಿರುವುದಾಗಿ ಹೇಳಿದರು. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಕುರಿತು ತಮ್ಮ ಹೆಸರು ಕೇಳಿ …

Read More »

ಬಿಜೆಪಿಯನ್ನು ‘ಸುಳ್ಳಿನ ಕಸ’ ಮತ್ತು ‘ರಾಷ್ಟ್ರಕ್ಕೆ ಅತಿ ದೊಡ್ಡ ಶಾಪ’ ಎಂದ: ಮಮತಾ ಬ್ಯಾನರ್ಜಿ

ಬಂಕುರ (ಪಶ್ಚಿಮ ಬಂಗಾಳ): ‘ಬಿಜೆಪಿಗಾಗಲಿ ಇನ್ನಾವುದೇ ಸಂಸ್ಥೆಗಳಿಗಾಗಲಿ ನಾನು ಹೆದರುವುದಿಲ್ಲ. ಅವರಿಗೆ (ಬಿಜೆಪಿ) ತಾಕತ್ತಿದ್ದರೆ ನನ್ನನ್ನು ಬಂಧಿಸಿ, ಕಂಬಿಗಳ ಹಿಂದೆ ಕೂರಿಸಲಿ. ಜೈಲಿನಿಂದಲೇ ಚುನಾವಣೆ ಎದುರಿಸುತ್ತೇನೆ. ಟಿಎಂಸಿ ಪಕ್ಷ ಗೆಲ್ಲುವುದು ಖಚಿತ’ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದರು. ‘ಕೋವಿಡ್ 19′ ನಂತರದ ಮೊದಲ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ತಮ್ಮ ಮಾತಿನ ಉದ್ದಕ್ಕೂ ಬಿಜೆಪಿ ವಿರುದ್ಧ ಹಾಗೂ ಪಕ್ಷಾಂತರ ಮಾಡಲು ಸಿದ್ಧವಾಗಿರುವ ತಮ್ಮ ಪಕ್ಷದ …

Read More »

ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲ್ಲೋಳಿ ಪಿಕೆಪಿಎಸ್ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ …

Read More »

ಗೋಕಾಕ: ತಾಪಂ. ಕಚೇರಿ ಎದುರು ಕೂಲಿ ಕಾರ್ಮಿಕರ ಪ್ರತಿಭಟನೆ

ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …

Read More »

ಲ್ಯಾಂಡ್‌ಲೈನ್‌ನಿಂದ ಮೊಬೈಲಿಗೆ ಕರೆ – ಆರಂಭದಲ್ಲಿ’0′ ಒತ್ತುವುದು ಕಡ್ಡಾಯ

ನವದೆಹಲಿ: ಜನವರಿ 1 ರಿಂದ ಲ್ಯಾಂಡ್‌ಲೈನ್‌ ಫೋನಿನಿಂದ ಯಾವುದೇ ಕಂಪನಿಯ ಮೊಬೈಲ್‌ ಸಂಖ್ಯೆಗೆ ಕರೆ ಮಾಡಬೇಕಾದರೆ ಆರಂಭದಲ್ಲಿ ‘0’ ಸಂಖ್ಯೆ ಒತ್ತುವುದನ್ನು ಕಡ್ಡಾಯ ಮಾಡಲಾಗಿದೆ. ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್‌) ಲ್ಯಾಂಡ್‌ಲೈನ್‌ನಿಂದ ಮೊಬೈಲ್‌ಗೆ ಕರೆ ಮಾಡುವ ಮುನ್ನ ʼ0ʼಯನ್ನು ಡಯಲ್‌ ಮಾಡಬೇಕೆಂದು ದೂರಸಂಪರ್ಕ ಸಚಿವಾಲಯಕ್ಕೆ ಮೇ 29 ರಂದು ಶಿಫಾರಸು ಮಾಡಿತ್ತು. ನವೆಂಬರ್‌ 20 ರಂದು ಸುತ್ತೋಲೆ ಹೊರಡಿಸಿ ಟ್ರಾಯ್ ಈ‌ ಶಿಫಾರಸನ್ನು ಜಾರಿಗೆ ತರುವುದಾಗಿ ಹೇಳಿದೆ.ಗ್ರಾಹಕರು ಆರಂಭದಲ್ಲಿ …

Read More »

ಬಂದಗೆ ಬೆಂಬಲ ಇಲ್ಲ ಯತ್ನಾಳ್ ನನ್ನ ಮಸಿ ಹಚ್ಚದೆ ಬಿಡಲ್ಲ:ಕರವೇ ಗಜ ಸೇನೆ ,ಪವನ ಮಹಾಲಿಂಗಪುರ

ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮಕ್ಕೆ ಯಡಿಯೂರಪ್ಪ ನವರೂ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಷಯ ರಾಜ್ಯಾದ್ಯಂತ ಬಹಳ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಕರ್ನಾಟಕ ಬಂದ ಘೋಷಣೆ ಮಾಡಿದ್ದರು, ಆದರೆ ಇದಕ್ಕೆ ಎಲ್ಲ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗುತ್ತದೆ. ಡಿಸೆಂಬರ ಐದ ರಂದು ಹಮ್ಮಿಕೊಂಡಿರುವ ಕನ್ನಡ ಸಂಘಟನೆ ಗಳ ಬಂದ ಗೆ ಕರವೇ ಗಜಸೇನೆ ವತಿಯಿಂದ ಬೆಂಬಲ ಇಲ್ಲ …

Read More »

ಮಹಾದಾಯಿ, ಮೇಕೆದಾಟು, ಗಟ್ಟಿ ಬಸವಣ್ಣದಂತಹ ಹಲವಾರು ಯೋಜನೆಗಳು ಡಿಪಿಆರ್ ಸಿದ್ಧಗೊಂಡಿದ್ದು

ಬೆಂಗಳೂರು, ನ.24- ಮೇಕೆದಾಟು, ಎತ್ತಿನಹೊಳೆ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗಳಿಗೆ ಕೇಂದ್ರ ಅರಣ್ಯ ಇಲಾಖೆಯ ಅನುಮತಿ ಪಡೆದುಕೊಳ್ಳಲು ಕ್ರಮ ಕೈಗೊಳ್ಳುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ನೀಡಿದ್ದಾರೆ. ಇಂದು ಹಿರಿಯ ಅ ಧಿಕಾರಿಗಳ ಜತೆ ಮಹತ್ವದ ಸಭೆ ನಡೆಸಿದ ಅವರು, ನೀರಾವರಿ ಯೋಜನೆಗಳು ಹಾಗೂ ಏತ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಅನುಮತಿ ಪತ್ರ ಪಡೆಯುವಲ್ಲಿ ವಿಳಂಬವಾಗುತ್ತಿದೆ. ಅರಣ್ಯ ಇಲಾಖೆ ಕೇಳುವ ಅಗತ್ಯ ದಾಖಲಾತಿಗಳನ್ನು ತುರ್ತಾಗಿ …

Read More »

ಕೊರೊನಾ ಪರೀಕ್ಷೆಗೆ 400 ರೂ. ದರ ನಿಗದಿ ಪಡಿಸಲು ಸುಪ್ರೀಂ ಸೂಚನೆ

ನವದೆಹಲಿ,ನ.24- ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಕೇವಲ 400 ರೂ. ದರ ನಿಗದಿ ಮಾಡಬೇಕು ಎಂದು ಒತ್ತಾಯಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಅಂಗೀಕರಿಸಿದ್ದು, ಕೇಂದ್ರ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ. ವಕೀಲ ಅಜಯ್ ಅಗರ್‍ವಾಲ್‍ಎಂಬುವರು ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ದೇಶಾದ್ಯಂತ ಕೊರೊನಾ ಪರೀಕ್ಷೆಗಾಗಿ ಏಕರೂಪದ ಕನಿಷ್ಟ ದರವನ್ನು ನಿಗದಿಮಾಡಬೇಕೆಂದು ಮನವಿ ಮಾಡಿದ್ದಾರೆ. ಅರ್ಜಿ ವಿಚಾರಣೆಗೆ ಅಂಗೀಕರಿಸುವುದಾಗಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ, ಎ.ಎಸ್.ಬೋಪಣ್ಣ, ವಿ.ರಾಮಸುಬ್ರಹ್ಮಣ್ಯ …

Read More »