Breaking News

ರಾಷ್ಟ್ರೀಯ

ನಿಯಂತ್ರಣ ತಪ್ಪಿ ಪಲ್ಟಿಯಾದ ಸಾರಿಗೆ ಸಂಸ್ಥೆಯ ಬಸ್​- ಅದೃಷ್ಟವಶಾತ್ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್

ಗದಗ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ ಬಸ್​ ಪಲ್ಟಿಯಾದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ.   ಹುಬ್ಬಳ್ಳಿ-ಇಳಕಲ್ ಮಾರ್ಗದ ಸಾರಿಗೆ ಸಂಸ್ಥೆಯ ಬಸ್ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ್ದು, ಏಕಾಏಕಿ ಪಲ್ಟಿಯಾಗಿದೆ. ಅದೃಷ್ಟವಶಾತ್​ ಬಸ್​ನಲ್ಲಿದ್ದ 30 ಕ್ಕೂ ಹೆಚ್ಚು ಪ್ರಯಾಣಿಕರು ಬಚಾವ್ ಆಗಿದ್ದಾರೆ. ಬಸ್ ಪಲ್ಟಿಯಾದ ಮೇಲೆ ಗ್ಲಾಸ್ ಒಡೆದು ಹೊರಗಡೆ ಬಂದ್ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಘಟನೆಯಲ್ಲಿ ಕೆಲ ಪ್ರಯಾಣಿಕರಿಗೆ ಸಣ್ಣ …

Read More »

ಕರ್ನಾಟಕದಲ್ಲಿ ಮೂರು ದಿನ ಮಳೆ; ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್ 13; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಇನ್ನೂ ಮೂರು ದಿನಗಳ ಕಾಲ …

Read More »

ಸೂತ್ರಧಾರಿ ಪಟ್ಟ ಅಳಿಯುತ್ತದೆ, ಸೂತ್ರಧಾರಿ ಸರಕಾರವನ್ನು ನಡೆಸುತ್ತಾನೆ: ಕೋಡಿಶ್ರೀಗಳ ಭವಿಷ್ಯ

ಕಳೆದ ಒಂದೂವರೆ ತಿಂಗಳಲ್ಲಿ ಕೋಡಿಮಠದ ಶ್ರೀಗಳು ಮತ್ತೊಮ್ಮೆ ಭವಿಷ್ಯವನ್ನು ನುಡಿದಿದ್ದಾರೆ. ಸಾಮಾನ್ಯವಾಗಿ, ಹಿಂದೂಗಳ ಹಬ್ಬದ ಸಂದರ್ಭಗಳಲ್ಲಿ ಭವಿಷ್ಯ ನುಡಿಯುವ ಶ್ರೀಗಳು, ಈಗ ತಾವು ಭಾಗವಹಿಸುವ ಧಾರ್ಮಿಕ ಕಾರ್ಯಕ್ರಮದ ನಂತರ ಕೂಡಾ ಭವಿಷ್ಯವನ್ನು ನುಡಿಯಲಾರಂಭಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದ ಬಗ್ಗೆ ಭವಿಷ್ಯ ನುಡಿದಿರುವ ಕೋಡಿಶ್ರೀಗಳು, ‘ಸೂತ್ರಧಾರಿ ಪಟ್ಟ ಅಳಿಯುತ್ತದೆ’ ಎಂದು ಹೇಳಿದ್ದು, ಒಂದು ತಿಂಗಳ ಹಿಂದೆ ಅವರು ಹೇಳಿದ ಭವಿಷ್ಯಕ್ಕೂ ಈಗ ಹೇಳುತ್ತಿರುವ ಭವಿಷ್ಯಕ್ಕೂ ತಾಳೆಯಾಗುತ್ತಿಲ್ಲ ಎನ್ನುವುದು ಗಮನಿಸಬೇಕಾದ ವಿಚಾರ. …

Read More »

ಮಹಿಳಾ ಉದ್ಯೋಗಿಗೆ ಮತ್ತು ಬರಿಸಿ ಚಲಿಸುವ ಕಾರ್ ನಲ್ಲೇ ಗ್ಯಾಂಗ್ ರೇಪ್; ಐವರು ಅರೆಸ್ಟ್

ಚೆನ್ನೈ: ತಮಿಳುನಾಡಿನ ಕಾಂಚೀಪುರಂ ಪೊಲೀಸರು ಚಲಿಸುತ್ತಿದ್ದ ಕಾರ್ ನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಐದು ಮಂದಿಯನ್ನು ಬಂಧಿಸಿದ್ದಾರೆ. ಮೊಬೈಲ್ ಫೋನ್ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ 20 ವರ್ಷದ ಮಹಿಳೆ ಪರಿಚಯಸ್ಥ ವ್ಯಕ್ತಿಯನ್ನು ಭೇಟಿಯಾಗಲು ತೆರಳಿದ್ದು, ಈ ವೇಳೆ ಆಕೆಗೆ ಮತ್ತು ಬರುವ ಪಾನೀಯ ನೀಡಿದ ಪರಿಚಯಸ್ಥ ತನ್ನ ಸ್ನೇಹಿತರೊಂದಿಗೆ ಸೇರಿ ಚಲಿಸುವ ಕಾರ್ ನಲ್ಲಿ ಅತ್ಯಾಚಾರ ಎಸಗಿದ್ದಾನೆ. ಕಾಂಚಿಪುರಂ ನಗರದ ರಸ್ತೆಗಳಲ್ಲಿ ಆರೋಪಿಗಳು ಆಕೆಯ ಮೇಲೆ ಕಾರ್ ನಲ್ಲೇ ಸಾಮೂಹಿಕ …

Read More »

ಈಜುಕೊಳವಾದ ವಿಮಾನ ನಿಲ್ದಾಣ! : ಧಾರಾಕಾರ ಮಳೆಗೆ ದಿಲ್ಲಿ ತತ್ತರ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿ 46 ವರ್ಷಗಳಲ್ಲೇ ದಾಖಲೆ ಎಂಬಂತೆ ಧಾರಾಕಾರ ಮಳೆ ಸುರಿದಿದ್ದು, ದಿಲ್ಲಿ ವಿಮಾನ ನಿಲ್ದಾಣ ಸೇರಿದಂತೆ ಹಲವು ಪ್ರಮುಖ ರಸ್ತೆಗಳಲ್ಲಿ ಶನಿವಾರ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಶನಿವಾರ ಮುಂಜಾನೆ 5.30ರಿಂದ ಮಧ್ಯಾಹ್ನ 2.30ರ ಅವಧಿಯಲ್ಲಿ 117.9 ಮಿ.ಮೀ. ಮಳೆ ಸುರಿದಿದೆ. ಏರ್‌ಪೋರ್ಟ್‌ಗೆ ನೀರು ನುಗ್ಗಿದ ಪರಿಣಾಮ, 3 ವಿಮಾನಗಳ ಹಾರಾಟ ರದ್ದಾಗಿದ್ದು, 5 ವಿಮಾನಗಳ ಮಾರ್ಗಗಳನ್ನು ತುರ್ತಾಗಿ ಬದಲಿಸಲಾಯಿತು. ಏರ್‌ಪೋರ್ಟ್‌ ಸಿಬಂದಿ ಕೇವಲ 30 ನಿಮಿಷಗಳಲ್ಲಿ ನೀರನ್ನು …

Read More »

ಮಹಾಲಿಂಗೇಶ್ವರ ನಗರ ಗೋಕಾಕ ನಲ್ಲಿ ಬಸವರಾಜ ಸಾಯನ್ನವರ ಅವರಿಂದ ಸರಳ ರೀತಿಯಲ್ಲಿ ಗಣೇಶ್ ಉತ್ಸವ ಆಚರಣೆ

ಗೋಕಾಕ : ಗೋಕಾಕನಲ್ಲಿ ಪ್ರತಿಯೊಂದು ವಿಶೇಷತೆ ಇದೆ ಗೋಕಾಕ ಜಲಪಾತ ಹಿಡಿದು , ಲಕ್ಷ್ಮಿ ದೇವಿ ಗುಡಿ , ಹಾಗೂ ರಾಜಕಾರಣಕ್ಕೆ ಮುಖ್ಯ ಬುಲಂದಿಯೆ ಗೋಕಾಕ , ಗೋಕಾಕ ಕರದಂಟು ಎಷ್ಟು ಫೇಮಸ್ ಇದೆಯೋ ಅದೇ ರೀತಿ ಗೋಕಾಕ ನಗರದ ಮಹಾಲಿಂಗೇಶ್ವರ ನಗರದ ಗಣಪತಿ ಉತ್ಸವ ಕೂಡ ಅಷ್ಟೇ ಜೋರಾಗಿ ವಿಜೃಂಭಣೆ ಯಿಂದ ಮಾಡುತ್ತ ಬಂದಿದ್ದಾರೆ . ಬಸವರಾಜ ಸಾಯನ್ನವರ ಅವರು.ಇವರು ಎ. ಪಿ.ಎಂ.ಸಿ.ನಿರ್ದೇಶಕರು ಕೂಡ ಹೌದು. ಈ ಬಾರಿ …

Read More »

ಅನಿಲ್ ಅಂಬಾನಿಗೆ ಬಿಗ್‌ ರಿಲೀಫ್‌: ರಿಲಯನ್ಸ್‌ ಇನ್ಫ್ರಾಗೆ 4,660 ಕೋಟಿ ರೂ. ಪ್ರಕರಣದ ಗೆಲುವು

ಅನಿಲ್ ಅಂಬಾನಿಗೆ ಸುಪ್ರೀಂ ಕೋರ್ಟ್ ನಿಂದ ದೊಡ್ಡ ಮಟ್ಟಿನ ಪರಿಹಾರ ಸಿಕ್ಕಂತಾಗಿದೆ. ಅನಿಲ್ ಅಂಬಾನಿ ನೇತೃತ್ವದ ಸಾಲದಲ್ಲಿ ಮುಳುಗಿರುವ ರಿಲಯನ್ಸ್ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ಎಡಿಎಜಿ) ಗೆ ಗೆಲುವಿನಲ್ಲಿ, ಸುಪ್ರೀಂ ಕೋರ್ಟ್ ADAG ಪರವಾಗಿ ಮಧ್ಯಸ್ಥಿಕೆ ಪ್ರಶಸ್ತಿಯನ್ನು ಎತ್ತಿಹಿಡಿದಿದೆ. ಕಳೆದ ನಾಲ್ಕು ವರ್ಷದಿಂದ ಕೋರ್ಟ್‌ನಲ್ಲಿ ವಾದ ವಿವಾದಗಳಿಗೆ ಎಡೆಮಾಡಿದ್ದ ಪ್ರಕರಣದಲ್ಲಿ ತೀರ್ಪು ಅನಿಲ್ ಅಂಬಾನಿ ಪರವಾಗಿ ಬಂದಿದೆ. ಆದರೆ ನ್ಯಾಯಾಲಯದ ತೀರ್ಪಿನ ವಿವರವಾದ ಪ್ರತಿಯನ್ನು ನಿರೀಕ್ಷಿಸಲಾಗುತ್ತಿದೆ. ಏನಿದು ಪ್ರಕರಣ? …

Read More »

ಗೋಕಾಕ ಸಾಹುಕಾರರು ಮತ್ತೆ ಮಂತ್ರಿ ಆಗಲಿದ್ದಾರೆ ಬಸವರಾಜ್ ಬೊಮ್ಮಾಯಿ ದೆಹಲಿ ಭೇಟಿ ಬಹುತೇಕ ಸಕ್ಸಸ್

ಗೋಕಾಕ: ಗೋಕಾಕ ಸಾಹುಕಾರರು ಮತ್ತೆ ಮಂತ್ರಿ ಆಗಲಿದ್ದಾರೆ ನಿನ್ನೆ ಬಸವರಾಜ್ ಬೊಮ್ಮಾಯಿ ದೆಹಲಿ ಭೇಟಿ ಬಹುತೇಕ ಸಕ್ಸಸ್ ಆಗಿದೆ. ಇನ್ನು ಅಧಿವೇಶನ ಬಳಿಕ ಉಳಿದ 4 ಸಚಿವ ಸ್ಥಾನದಲ್ಲಿ ಒಂದು ಮಂತ್ರಿ ಸ್ಥಾನ ರಮೇಶ ಜಾರಕಿಹೊಳಿ ಅವರಿಗೆ ಕೊಡೋದು ಫಿಕ್ಸ್ ಎಂಬ ಮಾಹಿತಿ ಸಿಕ್ಕಿದೆ. ಇದಕ್ಕೆ ಹಾಯ್ ಕಮಾಂಡ್ ಕೂಡ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ . ಉಳಿದ ನಾಲ್ಕು ಸಚಿವ ಸ್ಥಾನದಲ್ಲಿ ಒಂದು ರಮೇಶ್ ಜಾರಕಿಹೊಳಿ …

Read More »

2 ತಿಂಗಳ ಕಾಲ ಕೇರಳಕ್ಕೆ ಹೋಗುವುದು, ಬರುವುದಕ್ಕೆ ಸಂಪೂರ್ಣ ನಿಷೇಧ ➤ ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು, ಸೆ.09. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬಾರದಂತೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ …

Read More »

ಭ್ರಷ್ಟಚಾರ ಕೇಸಲ್ಲಿ ಸಿಕ್ಕಿಬಿದ್ದ ಅಧಿಕಾರಿ; ಎಸಿಬಿಗೆ ಮಾಹಿತಿ ನೀಡ್ತೀರಾ? ಎಂದು ಪಕ್ಕದ ಮನೆಯವ್ರ ಮೇಲೆ ಹಲ್ಲೆ

ದಾವಣಗೆರೆ: ಎಸಿಬಿ ದಾಳಿಗೆ ಮಾಹಿತಿ‌ ನೀಡಿದ್ದಾರೆ ಎಂಬ ಆರೋಪ ಮಾಡಿ ಸರ್ಕಾರ ಅಧಿಕಾರಿ ಹಾಗೂ ಸಂಬಂಧಿಕರು ಪಕ್ಕದ ಮನೆಯವರ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ನಗರಸಭೆಯ ಯೋಜನಾ ನಿರ್ದೇಶಕ ಎಚ್.ಕೆ.ಕೃಷ್ಣಪ್ಪ ಹಾಗೂ ಸಂಬಂಧಿಕರು ಹಲ್ಲೆ ಮಾಡಿದ್ದಾರೆ ಅಂತ ಇದೇ ಗ್ರಾಮದ ಎಚ್.ಜೆ.ಗಣೇಶ ಅವರ ಕುಟುಂಬಸ್ಥರಯ ಆರೋಪ ಮಾಡಿದ್ದಾರೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …

Read More »