Home / ರಾಷ್ಟ್ರೀಯ (page 840)

ರಾಷ್ಟ್ರೀಯ

ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ.

ಬೆಂಗಳೂರು: ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. ಮಾಧ್ಯಮಗಳು, ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಬೆನ್ನಿಗೆ ನಿಂತಿದೆ. ನಮ್ಮ ಕೆಪಿಸಿಸಿ ಅಧ್ಯಕ್ಷರು ಈಗಲಾದ್ರೂ ನಮ್ಮ ಪರ ನಿಲ್ಲಲಿ. ನನ್ನ ಪರ ಯಾಕೆ ನಿಂತಿಲ್ಲವೆಂದು ಇಂದು ಡಿಕೆ ಶಿವಕುಮಾರ್​ …

Read More »

ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಬಯಲಯಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ.ಅಭಿವೃದ್ಧಿ

ಕೋಟೆನಾಡು ಚಿತ್ರದುರ್ಗದ ಆಡುಮಲ್ಲೇಶ್ವರ ಪ್ರಾಣಿ ಸಂಗ್ರಹಾಲಯ ಬಯಲಯಸೀಮೆಯ ಏಕೈಕ ಪ್ರಾಣಿ ಸಂಗ್ರಹಾಲಯ. ಆದ್ರೆ, ಸರ್ಕಾರದ ನಿರ್ಲಕ್ಷದಿಂದಾಗಿ ಪ್ರಾಣಿ ಸಂಗ್ರಹಾಲಯದ ಅಭಿವೃದ್ಧಿ ನೆನೆಗುದಿಗೆ ಬಿದ್ದಿದೆ. ಹಾಗೇ ಪ್ರಾಣಿಗಳು ಸಹ ಸಂಕಟಕ್ಕೆ ಸಿಲುಕುವ ದುಸ್ಥಿತಿ ಎದುರಾಗಿದೆ. ಚಿತ್ರದುರ್ಗ ನಗರದ ಬಳಿಯ ಜೋಗಿಮಟ್ಟಿ ತಪ್ಪಲಲ್ಲಿರುವ ಆಡುಮಲ್ಲೇಶ್ವರ ಕಿರು ಪ್ರಾಣಿ ಸಂಗ್ರಹಾಲಯವು ಸಾಕಷ್ಟು ವರ್ಷಗಳ ಹಿಂದೆಯೇ ನಿರ್ಮಾಣ ಆಗಿದ್ದು, ಈ ಭಾಗದ ಜನರಿಗೆ ಕಾಡುಪ್ರಾಣಿಗಳನ್ನು ನೋಡುವ ಭಾಗ್ಯ ಕರುಣಿಸಿದೆ.   ಈ ಪ್ರಾಣಿ ಸಂಗ್ರಹಾಲಯ ವಿಸ್ತೀರ್ಣಗೊಳಿಸಿ …

Read More »

ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ ಸಂಪತ್​ ರಾಜ್​​ ಕೊನೆಗೂ ನಿನ್ನೆ ಅರೆಸ್ಟ್​ ಆಗಿದ್ದಾರೆ.

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪ್ರಕರಣದಲ್ಲಿ ಆರೋಪ ಹೊತ್ತು, ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ ಸಂಪತ್​ ರಾಜ್​​ ಕೊನೆಗೂ ನಿನ್ನೆ ಅರೆಸ್ಟ್​ ಆಗಿದ್ದಾರೆ. ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಡಿಸ್ಚಾರ್ಜ್​​​ ಆದ ಬಳಿಕ ಸಣ್ಣ ಸುಳಿವು ಸಿಗದೆ ಸಂಪತ್​ ರಾಜ್ ಕಣ್ಮರೆಯಾಗಿದ್ದರು. ಅವರನ್ನ ಹುಡುಕಲು ಪೊಲೀಸರು ಒಂದು ತಿಂಗಳಿನಿಂದ ಪ್ರಯತ್ನಿಸಿದ್ದರು. ಸಂಪತ್ ರಾಜ್​ರನ್ನ ಹಿಡಿಯೋದಿರಲಿ, ಅವರ ಸುಳಿವು ಪತ್ತೆ ಮಾಡೋದ್ರಲ್ಲೇ ಹೈರಾಣಾಗಿದ್ದರು. ನಾಗರಹೊಳೆ, …

Read More »

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು,

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನವೆಂಬರ್ 18 ರಿಂದ ಶಿಕ್ಷಕರ ವರ್ಗಾವಣೆಯ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್ 18 ರಿಂದ 30 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಜನವರಿ 4 ರಿಂದ ಮೂರು ಹಂತದ ಕೌನ್ಸಲಿಂಗ್ ನಡೆಯಲಿದೆ. ಮಾರ್ಚ್ ಮಧ್ಯಂತರದ ವರೆಗೆ ಮುಂದುವರೆಯಲಿದೆ. ಈ ವರ್ಷ ಲಕ್ಷಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಲಿದ್ದಾರೆ. ಇವರಲ್ಲಿ ಶೇ. …

Read More »

ನಾಳೆಯಿಂದ ಕಾಲೇಜ್ ಓಪನ್

ಬೆಂಗಳೂರು: ಕೊರೊನಾ ವೈರಸ್ ಮಧ್ಯೆ ನಾಳೆಯಿಂದ ಕಾಲೇಜ್ ಓಪನ್ ಆಗಲಿದೆ. ಬರೋಬ್ಬರಿ 8 ತಿಂಗಳ ಬಳಿಕ ಡಿಗ್ರಿ, ಪಿಜಿ, ಡಿಪ್ಲೋಮಾ, ಎಂಜಿನಿಯರಿಂಗ್ ಕಾಲೇಜ್ ಆರಂಭವಾಗಲಿದೆ. ಕಾಲೇಜ್ ಶುರು ಮಾಡಲು ಸರ್ಕಾರ ಏನು ಸಿದ್ಧತೆ ನಡೆಸಿದೆ?, ಮಾರ್ಗಸೂಚಿ ಏನು ಎಂಬುದರ ಬಗ್ಗೆ ಅದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ. ಕಾಲೇಜು ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ಕಠಿಣ ನಿಯಮ ಜಾರಿಗೆ ತಂದಿದೆ. ಈಗಾಗಲೇ ಕಾಲೇಜುಗಳಿಗೆ ಮಾರ್ಗಸೂಚಿಗಳ ವಿವರ ಕೂಡ ನೀಡಿದೆ. ಮಾರ್ಗಸೂಚಿ ಏನು..? ಕಾಲೇಜ್‍ಗೆ …

Read More »

14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ

ಹೈದರಾಬಾದ್: 14 ದಿನದ ಮಗುವನ್ನು ತಾಯಿಯೇ ಮೂರನೇ ಮಹಡಿಯಿಂದ ಎಸೆದು ಕೊಂದಿರುವ ಭಯಾನಕ ಘಟನೆ ಆಂಧ್ರ ಪ್ರದೇಶದ ಫತೇನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.ಲಾವಣ್ಯ ಮಗುವನ್ನ ಎಸೆದ ತಾಯಿ. 2016ರಲ್ಲಿ ಲಾವಣ್ಯ ಮದುವೆ ನೇತಾಜಿನಗರದ ವೇಣುಗೋಪಾಲ್ ಜೊತೆ ಮದುವೆಯಾಗಿತ್ತು. ಕೌಟುಂಬಿಕ ಕಲಹ ಹಿನ್ನೆಲೆ ಎರಡನೇ ಮಗುವಿನ ತಾಯಿಯಾಗುವ ವೇಳೆ ತವರು ಸೇರಿದ್ದಳು. ತವರು ಮನೆ ಸೇರಿದ ಕೆಲ ದಿನಗಳಲ್ಲೇ ಲಾವಣ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು ಮೂರನೇ …

Read More »

ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.

ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …

Read More »

ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.

ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …

Read More »

ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.

ಬೆಳಗಾವಿ : ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದಂದು ಕತ್ತಲಲ್ಲಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದೆ. ಹಬ್ಬದ ಸಂದರ್ಭದಲ್ಲಿ ಅವರಿಗೆ ಮುಂಚಿತವಾಗಿ ಹಣ ನೀಡಬೇಕಾಗಿತ್ತು. ಸಾರಿಗೆ ಇಲಾಖೆ ಸಿಬ್ಬಂದಿ ಸಾಮಾನ್ಯ ಕುಟುಂಬದಿಂದ ಬಂದವರು. ಮುಂಚಿತವಾಗಿ ಸಂಬಳ ನೀಡದಕ್ಕೆ ವಿಷಾದ …

Read More »

ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ.

ಪಟ್ನಾ: ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ. 2005ರಿಂದಲೂ (2013-17ರ ಅವಧಿ ಬಿಟ್ಟು) ಸುಶೀಲ್ ಕುಮಾರ್‌ ಮೋದಿ ಅವರು ಉಪಮುಖ್ಯಮಂತ್ರಿ ಆಗಿದ್ದರು. ಈ ಬಾರಿ, ಅವರನ್ನೇ ಆ ಹುದ್ದೆಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತ ಏರ್ಪಟ್ಟಿಲ್ಲ. ಕತಿಹಾರ್‌ ಶಾಸಕ ತಾರಕೇಶ್ವರ ಪ್ರಸಾದ್‌ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ರೇಣು ದೇವಿ ಅವರು ಉಪನಾಯಕಿ ಆಗಲಿದ್ದಾರೆ. ಈ ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ …

Read More »