Breaking News

ರಾಷ್ಟ್ರೀಯ

8ನೇ ತರಗತಿ ಮಕ್ಕಳಿಗೆ ಉಚಿತ ಬೈಸಿಕಲ್‌ ಯೋಜನೆಯನ್ನು ಸರ್ಕಾರ 2020-21ನೇ ಸಾಲಿನಲ್ಲಿ ಸ್ಥಗಿತಗೊಳಿಸಿತ್ತು.

ಬೆಂಗಳೂರು (ಆ.29: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷವೂ ಉಚಿತ ಬೈಸಿಕಲ್‌ ಭಾಗ್ಯವಿಲ್ಲ. ಹಣಕಾಸು ಕೊರತೆ ಹಿನ್ನೆಲೆಯಲ್ಲಿ ಸತತ ಎರಡನೇ ವರ್ಷವೂ ಉಚಿತ ಸೈಕಲ್‌ ಯೋಜನೆ ಅನುಷ್ಠಾನ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯವನ್ನು 2020ರ ಮಾ ರ್ಚ್ನಿಂದ ಕಾಡುತ್ತಿರುವ ಕೋವಿಡ್‌ನಿಂದಾಗಿ ಮಕ್ಕಳ ಶಾಲಾ ಶಿಕ್ಷಣ ಮಾತ್ರವಲ್ಲದೆ, ಅವರಿಗಾಗಿ ಜಾರಿಯಲ್ಲಿದ್ದ ಕೆಲ ಯೋಜನೆಗಳಿಗೂ ಹಣಕಾಸು ಕೊರತೆಯಿಂದ ಕೊಕ್ಕೆ ಬಿದ್ದಿದೆ. 2006-07ರ ಬಿಜೆಪಿ- ಜೆಡಿಎಸ್‌ …

Read More »

ಮೈಸೂರು ವಿದ್ಯಾರ್ಥಿನಿ ಮೇಲಿನ ಗ್ಯಾಂಗ್​ರೇಪ್ ಪ್ರಕರಣ

ಮೈಸೂರು: ದೆಹಲಿ ನಿರ್ಭಯಾ ಪ್ರಕರಣ ನೆನಪಿಸಿದ್ದ ಮೈಸೂರು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಸ್ ಟಿಕೆಟೊಂದರ ಸುಳಿವು ಪಡೆದು ಪ್ರಕರಣ ನಡೆದ 87 ಗಂಟೆಯಲ್ಲಿ ತಮಿಳನಾಡಿನ ಐವರು ಆರೋಪಿಗಳನ್ನು ಬಂಧಿಸಿರುವುದು ವಿಶೇಷ. ಬಂಧಿತರಲ್ಲಿ ಓರ್ವ ಅಪ್ರಾಪ್ತನಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದಿದ್ದ ಘಟನೆ ಸಾರ್ವಜನಿಕ ಆಕ್ರೋಶದ ಜತೆಗೆ ರಾಜಕೀಯ ಒತ್ತಡ, ಸಂಘಟನೆಗಳ ಪ್ರತಿಭಟನೆಯಿಂದಲೂ ಪೊಲೀಸರಿಗೆ ತಲೆನೋವು ತಂದಿಟ್ಟಿತ್ತು. …

Read More »

ಕರಾವಳಿ ಹಾಗೂ ಒಳನಾಡು ಸೇರಿದಂತೆ 12 ಜಿಲ್ಲೆಗಳಲ್ಲಿ ಹೈ-ಅಲರ್ಟ್

ಬೆಂಗಳೂರು: ಬಂಗಾಳ ಉಪಸಾಗರದ ಒಡಿಶಾ ಹಾಗೂ ಆಂಧ್ರಪ್ರದೇಶದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ರಾಜ್ಯಾದ್ಯಂತ ಇಂದಿನಿಂದ (ಆ.29) ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಕಾಖೆ ಹೇಳಿದೆ.   ಕರ್ನಾಟಕ ಹಾಗೂ ಕೇರಳ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದ್ದು ಈ ಪ್ರದೇಶದಲ್ಲಿ ಅಧಿಕ ಮಳೆ ಉಂಟಾಗಲಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಹೆಚ್ಚಿನ …

Read More »

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಮನೆ

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ.   ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಮನೆಯಿಂದ ಆಚೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.   ಮನೆಯಲ್ಲಿ ವೀಣಾ ಹಾಗೂ ಆಕೆಯ ಇಬ್ಬರು ಮಕ್ಕಳು ಇದ್ದರು. ಆದರೆ ಮನೆ ಸಂಪೂರ್ಣ ಭಸ್ಮವಾಗಿದೆ. ತುಂಬಿದ ಸಿಲೀಂಡರ್​ಗೆ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Read More »

ಸಾಹುಕಾರ ನೀಗೆ ಸಿಕ್ಕಿದೆ ಹೊಸ ಅಸ್ತ್ರ ಗೇಮ್ ಒಂದೇ ಬಾಕಿ…!

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈ ಮುನ್ನವೇ ದೆಹಲಿಗೆ ತಮ್ಮ ತಂಡದ ಶಾಸಕರೊಂದಿಗೆ ತರೆಳಿರುವ ಮಾಜಿ ಸಚಿವ ರಮೇಶ್​​ ಜಾರಕಿಹೊಳಿ, ಬೆಂಬಲಿಗರಿಗೆ ಸಚಿವ ಸ್ಥಾನ ಕೊಡಿಸಲು ವರಿಷ್ಠರ ಮೇಲೆ ಒತ್ತಡ ಹಾಕಲಿದ್ದಾರೆ. ಶಾಸಕರಾದ ಸಹೋದರ ಬಾಲಚಂದ್ರ ಜಾರಕಿಹೊಳಿ, ಮಹೇಶ್ ಕುಮಠಳ್ಳಿ, ಶ್ರೀಮಂತ ಪಾಟೀಲ್ ಜೊತೆ ದೆಹಲಿಯಲ್ಲೇ ರಮೇಶ್​​ ಜಾರಕಿಹೊಳಿ ಠಿಕಾಣಿ ಹೂಡಿದ್ದರು. ತಮ್ಮ ಬೆಂಬಲಿಗ ಶಾಸಕರಿಗೆ ಸಚಿವ ಸ್ಥಾನ ಕೊಡಿಸಲು ರಮೇಶ್ ಜಾರಕಿಹೊಳಿ ಬೆಳಗಾವಿ ಪಾಲಿಕೆ …

Read More »

ಯಮಕನಮರಡಿ: ಜಲಜೀವನ್ ಮಿಷನ್ ಅಡಿ ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ ಜಾರಕಿಹೊಳಿ

    ಯಮಕನಮರಡಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕರಾದ ಸತೀಶ ಜಾರಕಿಹೊಳಿ ಅವರು ಯಮಕನಮರಡಿ ಮತಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಇಂದು ಜಲಜೀವನ್ ಮಿಷನ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಚಾಲನೆ ನೀಡಿದರು.   ಶಾಸಕ ಸತೀಶ ಅವರು ಜಲಜೀವನ ಮಿಷನ್ ಯೋಜನೆಯಡಿ ಬಸ್ಸಾಪೂರ ಗ್ರಾಮದಲ್ಲಿ 1.12 ಕೋಟಿ ರೂ. ವೆಚ್ಚದ ಕಾಮಗಾರಿ, ಯಲ್ಲಾಪುರ ಗ್ರಾಮದಲ್ಲಿ 18.18 ಲಕ್ಷ ರೂ. ವೆಚ್ಚದ ಕಾಮಗಾರಿ ಹಾಗೂ ಹೊನಗಾದಲ್ಲಿ 3.69 …

Read More »

ಬೆಳಗಾವಿ ನಗರದ ಸಮಗ್ರ ಅಭಿವೃದ್ಧಿಯೇ ಕಾಂಗ್ರೆಸ್ ಧ್ಯೇಯ; ಪಕ್ಷದ ಅಭ್ಯರ್ಥಿಗಳನ್ನು ಬಹುಮತದಿಂದ ಗೆಲ್ಲಿಸುವಂತೆ ಮನವಿ

    ಬೆಳಗಾವಿ: ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ವಿವಿಧ ವಾರ್ಡ್ ಗಳಲ್ಲಿ ಮಹಾನಗರ ಪಾಲಿಕೆ ಚುನಾವಣೆಯ ಪಕ್ಷದ ಅಭ್ಯರ್ಥಿಗಳ ಪರ ಇಂದು (ಶನಿವಾರ) ಸಂಜೆ ಕಾಂಗ್ರೆಸ್ ಮುಖಂಡರು ಬಿರುಸಿನ ಪ್ರಚಾರ ನಡೆಸಿದರು.   ಬೆಳಗಾವಿ ಕಾಂಗ್ರೆಸ್ ಚುನಾವಣಾ ವೀಕ್ಷಕರಾದ ಗುಜರಾತ್ ರಾಜ್ಯಸಭಾ ಸದಸ್ಯೆ ಅಮೀ ಯಜನಿಕ್ , ಮಹಾರಾಷ್ಟ್ರ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಸತ್ಯಜೀತ್ ಪಾಂಬೆ ಪಾಟೀಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ …

Read More »

ರಕಾರಿ ಆಸ್ಪತ್ರೆಯನ್ನು 100 ರಿಂದ 250 ಬೆಡ್‌ಗೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು 100 ರಿಂದ 150 ಬೆಡ್ ಗೆ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು : ರಮೇಶ್ ಜಾರಕಿಹೊಳಿ

ಇಲ್ಲಿನ ಸರಕಾರಿ ಆಸ್ಪತ್ರೆಯನ್ನು 100 ರಿಂದ 250 ಬೆಡ್‌ಗೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು 100 ರಿಂದ 150 ಬೆಡ್ ಗೆ ಪರಿವರ್ತಿಸಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಾಜಿ ಸಚಿವರು ,ಶಾಸಕರು ಸಾಹುಕಾರ್ ಶ್ರೀ ರಮೇಶ್ ಜಾರಕಿಹೊಳಿ ಹೇಳಿದರು. ಶನಿವಾರದಂದು ನಗರದ ಶಾಸಕರ ಕಛೇರಿಯಲ್ಲಿ ನಡೆದ ವೈದ್ಯರ ಸಭೆಯಲ್ಲಿ ಅವರು ಮಾತನಾಡಿದರು. ಪ್ರಸ್ತುತ ಸರಕಾರಿ ಆಸ್ಪತ್ರೆಯಲ್ಲಿ ಆರೋಗ್ಯ ಸೇವೆ ಉತ್ತಮವಾಗಿದೆ. ಆಸ್ಪತ್ರೆಗಳು, ವೈದ್ಯಕೀಯ ಸೌಲಭ್ಯಗಳು, ಉತ್ತಮ ಪ್ರಮಾಣದಲ್ಲಿವೆ. ವೈದ್ಯರ …

Read More »

ಭಕ್ತರ ಅನುಕೂಲಕ್ಕಾಗಿ ಪ್ರತ್ಯೇಕ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮುಂದಾದ ಮಂತ್ರಾಲಯ ಮಠ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ದೇಶ – ವಿದೇಶಗಳಿಂದ ಭಕ್ತರು ಆಗಮಿಸುತ್ತಾರೆ. ರಸ್ತೆ ಹಾಗೂ ರೈಲು ಮಾರ್ಗ ಇದ್ದರೂ ಸಹ ವಿಮಾನ ನಿಲ್ದಾಣದ ಸೌಲಭ್ಯ ಇರಲಿಲ್ಲ. ರಾಯಚೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಆರಂಭವಾಗಿತ್ತಾದರೂ ನಿಧಾನಗತಿಯಲ್ಲಿ ಸಾಗಿದೆ. ರಾಜ್ಯ ರಾಜಕೀಯ ಅನಿಶ್ಚಿತತೆ ಸೇರಿದಂತೆ ಹಲವು ಕಾರಣಗಳಿಂದ ಕಳೆದ ಮೂರು ವರ್ಷಗಳಿಂದಲೂ ರಾಯಚೂರು ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಸಾಗಿತ್ತು. ಇದು ಕಲ್ಯಾಣ ಕರ್ನಾಟಕ ಭಾಗದ ಜನತೆಯ ಆಕ್ರೋಶಕ್ಕೆ …

Read More »

ನಡುರಸ್ತೆಯಲ್ಲಿ ದಂಡ ವಸೂಲಿ ಮಾಡುತ್ತಿದ್ದ ಪೊಲೀಸರಿಗೆ ಚಳಿ ಬಿಡಿಸಿದ ರಮೇಶ್ ಕುಮಾರ್

ಚಿಂತಾಮಣಿ : ನಡುರಸ್ತೆಯಲ್ಲಿ ನಿಂತು ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದ ಚಿಂತಾಮಣಿ ನಗರ ಠಾಣಾ ಪೊಲೀಸರಿಗೆ ಮಾಜಿ ಸ್ಪೀಕರ್ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಚಳಿ ಬಿಡಿಸಿದ ಘಟನೆ ನಡೆಯಿತು. ಶುಕ್ರವಾರ ನಗರ ಠಾಣಾ ಎಸ್‌ಐ ಮುಕ್ತಿಯಾರ್ ತಮ್ಮ ಸಿಬ್ಬಂದಿಯೊಂದಿಗೆ ತಾಲೂಕಿನ ಮಾಡಿಕೇರಿ ಕ್ರಾಸ್‌ನಲ್ಲಿ ವಾಹನಗಳನ್ನು ತಡೆದು ದಂಡ ವಿಧಿಸುತ್ತಿದ್ದು, ಈ ವೇಳೆ ಶ್ರೀನಿವಾಸಪುರದಿಂದ ಬೆಂಗಳೂರಿನ ಕಡೆ ಬಂದ ರಮೇಶ್ ಕುಮಾರ್ ರವರು ತಮ್ಮ ವಾಹನ ನಿಲ್ಲಿಸಿ …

Read More »