ಬೆಂಗಳೂರು,ಆ.27-ಮೈಸೂರಿನ ಚಾಮುಂಡಿ ತಪ್ಪಲಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರದ ಬೆನ್ನಲ್ಲೇ ಆತಂಕದ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ಜನವರಿಯಿಂದ ಮೇ 2021ರವರೆಗೆ ಸುಮಾರು 1, 168 ಅತ್ಯಾಚಾರ ಪ್ರಕರಣಗಳು ವರದಿಯಾಗಿದೆ. ಪ್ರತಿದಿನ ಸರಾಸರಿ ಒಂದು ಅತ್ಯಾಚಾರ ಘಟನೆ ನಡೆಯುತ್ತಿದೆ. 22 ಸಾಮೂಹಿಕ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿದ್ದು, ಹೆಚ್ಚು ಭೀತಿ ಹುಟ್ಟಿಸಿವೆ. ರಾಜ್ಯದ ಪೊಲೀಸರಿಂದ ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳ ಮಾಹಿತಿ ಲಭ್ಯವಾಗಿದ್ದು, ಪ್ರಸಕ್ತ …
Read More »ಆ ಹುಡುಗಿ ಕತ್ತಲಲ್ಲಿ ಹೋಗಲೇ ಬಾರದಿತ್ತು ಎಂದವರಿಗೆ ಉತ್ತರಿಸಿದ ಇಂದ್ರಜಿತ್ ಲಂಕೇಶ್
ಮೈಸೂರಲ್ಲಿ ನಡೆದ ಅತ್ಯಾಚಾರ ಪ್ರಕರಣದಲ್ಲಿ ಅನೇಕರು ಹುಡುಗಿಯದ್ದೇ ತಪ್ಪು ಎಂಬಂತೆ ಮಾತನಾಡಿದ್ದಾರೆ. ಆಕೆಗೆ ಕತ್ತಲಲ್ಲಿ ಹೋಗುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ. ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ತಲೆ ಎತ್ತಿದ್ದ ಡ್ರಗ್ಸ್ ಪ್ರಕರಣದಲ್ಲಿ ಹಲವು ಆರೋಪ ಮಾಡಿ ಸುದ್ದಿಯಾಗಿದ್ದ ಅವರು, ಇತ್ತೀಚಿಗಿನ ದರ್ಶನ್ ಪ್ರಕರಣದಲ್ಲಿ ಕೆಲ ಆರೋಪ ಮಾಡಿ ಗಮನ ಸೆಳೆದಿದ್ದರು. ಈಗ ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ವಿಚಾರವಾಗಿ ಅವರು ಮಾತನಾಡಿದ್ದಾರೆ. ಮೈಸೂರಲ್ಲಿ …
Read More »ಪೊಲೀಸ್ ಇಲಾಖೆಯ ಕಣ್ಣು ಕೆಂಪಾಗಿಸಿದ ಬಚ್ಚನ್ ಬಾಡಿಗಾರ್ಡ್ ವಾರ್ಷಿಕ ಆದಾಯ: ದಿಢೀರ್ ವರ್ಗಾವಣೆ..!
ಮುಂಬೈ: ವಾರ್ಷಿಕ ಆದಾಯ ಬರೋಬ್ಬರಿ ಒಂದೂವರೆ ಕೋಟಿ ರೂ. ಇದೆ ಎಂಬ ಆರೋಪಗಳು ಕೇಳಿಬಂದ ಬೆನ್ನಲ್ಲೇ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರ ಪೊಲೀಸ್ ಬಾಡಿಗಾರ್ಡ್ ಜೀತೇಂದ್ರ ಶಿಂಧೆ ಅವರನ್ನು ವರ್ಗಾವಣೆ ಮಾಡಲಾಗಿದ್ದು, ವಿಭಾಗೀಯ ತನಿಖೆಗೂ ಸಹ ಆದೇಶಿಸಲಾಗಿದೆ. ಕಾನ್ಸ್ಟೇಬಲ್ ಆಗಿರುವ ಶಿಂಧೆ ಅವರನ್ನು ಮುಂಬೈ ಪೊಲೀಸ್ ಇಲಾಖೆ ಬಚ್ಚನ್ ಅವರ ಬಾಡಿಗಾರ್ಡ್ ಆಗಿ ನೇಮಿಸಿತ್ತು. ಅನೇಕ ವರ್ಷಗಳಿಂದ ಬಿಗ್ಬಿ ಅವರ ಅಂಗರಕ್ಷಕರಾಗಿ ಸೇವೆ ಸಲ್ಲಿಸಿರುವ ಶಿಂಧೆ ವಿರುದ್ಧ …
Read More »ಘಟಪ್ರಭಾ : ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ.
ಘಟಪ್ರಭಾ : ಮೊನ್ನೆಯಷ್ಟೇ ಕ್ರೂರಿಗಳು ಮೈಸೂರಿನಲ್ಲಿ ಕಾಲೇಜು ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿ ಅಟ್ಟಹಾಸ ಮೆರೆದಿರುವ ಘಟನೆ ಮಾಸುವ ಮುನ್ನವೇ ಇಂತಹದೆ ಹೀನ ಕೃತ್ಯ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಒಂದು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸುಮಾರು 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ 5 ಜನ ಕ್ರೂರಿ ಕಾಮುಕರು ಪುಸಲಾಯಿಸಿ ಕರೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗುತ್ತಿದೆ. ಗೋಕಾಕ ತಾಲ್ಲೂಕಿನ ಘಟಪ್ರಭಾ ಪೊಲೀಸ್ …
Read More »ಮೈಸೂರು ಅತ್ಯಾಚಾರ ಪ್ರಕರಣ: ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಚಿವ ಆರಗ ಸಭೆ
ಮೈಸೂರು: ಸಾಮೂಹಿಕ ಅತ್ಯಾಚಾರದಂತಹ ಗಂಭೀರ ಪ್ರಕರಣ ನಡೆದಿರುವ ಹೊತ್ತಿನಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಮಧ್ಯಾಹ್ನದವರೆಗೂ ಯಾವುದೇ ಸಭೆ ನಡೆಸಿರಲಿಲ್ಲ. ನಂತರ ಮಧ್ಯಾಹ್ನ 1 ಗಂಟೆಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ಆರಂಭಿಸಿದ್ದಾರೆ. ಸಾಮೂಹಿಕ ಅತ್ಯಾಚಾರ ಹಾಗೂ ಚಿನ್ನದಂಗಡಿ ದರೋಡೆ ಪ್ರಕರಣ ಕುರಿತು ಮೊದಲಿಗೆ ಚರ್ಚೆ ಆರಂಭಿಸಿದ್ದು, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಕುರಿತೂ ಅಸಮಾಧಾನ ಹೊರಹಾಕಿದ್ದಾರೆ. ಗುರುವಾರ ರಾತ್ರಿ ನಗರಕ್ಕೆ ಬಂದ ಸಚಿವರು, ಶುಕ್ರವಾರ …
Read More »ಗ್ಯಾಂಗ್ ರೇಪ್ ಹಿನ್ನೆಲೆಯಲ್ಲಿ ಮೈಸೂರಿಗೆ ಬಂದು ಸುತ್ತಾಟದಲ್ಲೇ ಕಾಲ ಕಳೆದ ಸಚಿವ!
ಮೈಸೂರು: ಸಾಮೂಹಿಕ ಅತ್ಯಾಚಾರದ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯೇ ಮೈಸೂರಿಗೆ ಬಂದು ವಾಸ್ತವ್ಯ ಹೂಡಿದ್ದರೂ ಗೃಹ ಸಚಿವ ಆರಗ ಜ್ಞಾನೇಂದ್ರ ಶುಕ್ರವಾರ ಸುತ್ತಾಟ, ಪೂಜೆಗಳಲ್ಲೇ ಕಾಲ ಕಳೆದರು. ಶುಕ್ರವಾರ ಬೆಳಿಗ್ಗೆ ಚಾಮುಂಡಿಬೆಟ್ಟಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ, ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ಸುತ್ತಾಟ ನಡೆಸಿದರು. ಅಲ್ಲಿ ಫೈರಿಂಗ್ ಸ್ಟಿಮಿಲೇಟರ್‌ನ್ನು ಉದ್ಘಾಟಿಸಿ, ತಾವೂ ಫೈರಿಂಗ್ ನಡೆಸಿ ಖುಷಿಪಟ್ಟರು. ಮಾದರಿ ಪೊಲೀಸ್ ಠಾಣೆ, ಪರೀಕ್ಷಾರ್ಥಿಗಳ ಕೊಠಡಿ, ಸಭಾಂಗಣ, ಗ್ರಂಥಾಲಯ ವೀಕ್ಷಿಸಿದರು. ಅತ್ಯಾಚಾರ ಪ್ರಕರಣ ಹಾಗೂ …
Read More »ಗೃಹ ಸಚಿವರಿಂದ ಬೇಜವಾಬ್ದಾರಿ ಹೇಳಿಕೆ: ಸತೀಶ್ ಜಾರಕಿಹೊಳಿ ಆಕ್ರೋಶ
ಗೋಕಾಕ: ಗೃಹಸಚಿವರು ಅತ್ಯಾಚಾರ ಪ್ರಕರಣದ ಬಗ್ಗೆ ಬೇಜವಾಬ್ದಾರಿಯಾಗಿ ಹೇಳಿಕೆ ನೀಡಿದ್ದಾರೆ. ಇದು ಸರಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರ ಬಾಯಿಂದ ಈ ರೀತಿಯ ಮಾತು ಬರಬಾರದಿತ್ತು. ಅವರ ಹೇಳಿಕೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಜನರೇ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಅವರ ಸಾಮರ್ಥ್ಯದ ಬಗ್ಗೆ ಅವರೇ ಸವಾಲು ಎತ್ತಿದ್ದಾರೆ ಎಂದರು. ಅತ್ಯಾಚಾರ …
Read More »ಬೆಳಗಾವಿ: ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ.
ಬೆಳಗಾವಿ: ಇಲ್ಲಿನ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆಯ ಅಂತಿಮ ಕಣದಲ್ಲಿ 385 ಅಭ್ಯರ್ಥಿಗಳು ಉಳಿದಿದ್ದಾರೆ. 58 ವಾರ್ಡ್‌ಗಳ ಪೈಕಿ ಬಹುತೇಕ ಕಡೆಗಳಲ್ಲಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ಇದೆ. ಕೆಲವೆಡೆ ತ್ರಿಕೋನ ಪೈಪೋಟಿ ಕಂಡುಬಂದಿದೆ. ಶುಕ್ರವಾರದಿಂದ ಪ್ರಚಾರ ಕಣ ರಂಗೇರಲಿದೆ. ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ 468 ಮಂದಿಯ ನಾಮಪತ್ರಗಳು ಕ್ರಮಬದ್ಧವಾಗಿದ್ದವು. ಉಮೇದುವಾರಿಕೆ ವಾಪಸ್ ಪಡೆಯಲು ಗುರುವಾರ ಕೊನೆಯ ದಿನವಾಗಿತ್ತು. ಒಟ್ಟು 83 ಮಂದಿ …
Read More »ಗ್ಯಾಂಗ್‍ರೇಪ್ ಆರೋಪಿಗಳನ್ನು ಗಲ್ಲಿಗೇರಿಸಬೇಕು: ಯತ್ನಾಳ್
ಚಾಮರಾಜನಗರ: ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ. – ಮಲೆಮಹದೇಶ್ವರ ಬೆಟ್ಟದಲ್ಲಿ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿರ್ಧಾರ ಕೈಗೊಳ್ಳಬೇಕು. ಇಂತಹವನ್ನು ಯಾವುದೇ ಪರಿಸ್ಥಿತಿಯಲ್ಲಿ ಸಹಿಸಬಾರದು. ನ್ಯಾಯಂಗ ವ್ಯವಸ್ಥೆಯಲ್ಲಿ ಸಹ ಶೀಘ್ರ ನ್ಯಾಯ ನೀಡುವಂತಾಗಬೇಕು. ಹತ್ತಾರು ವರ್ಷಗಳ ಕಾಲ ಮುಂದೂಡಿದರೆ ಸಾಕ್ಷ್ಯ ನಾಶ, ಬೆದರಿಕೆ ಹಾಕುವ ಕೃತ್ಯ ನಡೆಸುತ್ತಾರೆ. ಹೀಗಾಗಿ …
Read More »ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೇ ಸಂಚಾರ, ಮಹಾರಾಷ್ಟ್ರ ಗಡಿಯಲ್ಲಿ ಕಾಟಾಚಾರದ ಚೆಕಿಂಗ್
ಚಿಕ್ಕೋಡಿ: ಶೀಘ್ರದಲ್ಲೇ ಕೊರೊನಾ ಮೂರನೇ ಅಲೆ ಅಪ್ಪಳಿಸಲಿದೆ ಎಂದು ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಹೀಗಾಗಿ ಸರ್ಕಾರ ಮಹಾರಾಷ್ಟ್ರ ಗಡಿಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಕೊರೊನಾ ನೆಗೆಟಿವ್ ವರದಿ ಇದ್ದವರಿಗೆ ಮಾತ್ರ ರಾಜ್ಯಕ್ಕೆ ಪ್ರವೇಶಿಸಲು ಬಿಡಬೇಕೆಂದು ಆದೇಶಿಸಿದೆ. ಆದರೆ ಚೆಕ್ ಪೋಸ್ಟ್‍ಗಳಲ್ಲಿ ಕಾಟಾಚಾರಕ್ಕೆ ಚೆಕ್ ಮಾಡಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರ ವಲಯದಲ್ಲಿ ಮಹಾರಾಷ್ಟ್ರದ ಗಡಹಿಂಗ್ಲಜ್ ತಾಲೂಕಿನ ಗಡಿಯಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್‍ನಲ್ಲಿ ಅಧಿಕಾರಿಗಳು ಕಾಟಾಚಾರಕ್ಕೆ ಎನ್ನುವಂತೆ …
Read More »
Laxmi News 24×7