Breaking News

ರಾಷ್ಟ್ರೀಯ

ಮಹಿಳಾ ಟಿ20 ವಿಶ್ವಕಪ್; ಅಕ್ಟೋಬರ್ 4ರಂದು ಭಾರತ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿ

ಪುರುಷರ ಟಿ-20 ವಿಶ್ವಕಪ್ ನಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯುವ ಮೂಲಕ ಸಂಭ್ರಮಿಸಿದ್ದು, ಇದೀಗ ಮಹಿಳಾ ಟಿ20 ವಿಶ್ವಕಪ್ ಗೆ ಕ್ಷಣಗಣನೆ ಆರಂಭವಾಗಿದೆ. ಇದೆ ಅಕ್ಟೋಬರ್ ಮೂರರಂದು ಮಹಿಳಾ ಟಿ20 ವಿಶ್ವಕಪ್ ಪ್ರಾರಂಭವಾಗಲಿದ್ದು, ಅಕ್ಟೋಬರ್ 4ಕ್ಕೆ ಭಾರತ ಹಾಗೂ ನ್ಯೂಜಿಲ್ಯಾಂಡ್ ಮುಖಾಮುಖಿಯಾಗಲಿವೆ. ಟಿ20 ವಿಶ್ವಕಪ್ ಗೆ ಮಹಿಳೆಯರೇ ರೆಫ್ರಿ-ಅಂಪೈರ್ಸ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.ಮಹಿಳಾ ಭಾರತ ತಂಡ; ಹರ್ಮನ್‌ಪ್ರೀತ್ ಕೌರ್ [ನಾಯಕಿ], ಯಾಸ್ತಿಕಾ ಭಾಟಿಯಾ , ಪೂಜಾ ವಸ್ತ್ರಾಕರ್, ಅರುಂಧತಿ …

Read More »

ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ

ಧಾರವಾಡ: ಗ್ರಾಮ ಆಡಳಿತಾಧಿಕಾರಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸಬೇಕು, ಮೊಬೈಲ್ ಆಯಪ್ ಗಳಲ್ಲಿ ವಿವರ ಅಪ್ ಲೋಡ್ ಮಾಡುವಂತೆ ಒತ್ತಡ ಹೇರುವುದನ್ನು ನಿಲ್ಲಿಸಬೇಕು ಎಂದು ಗ್ರಾಮ ಆಡಳಿತಾಧಿಕಾರಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆ ಆರಂಭಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಕುಳಿತಿದ್ದಾರೆ. ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್, ಡೇಟಾ ನೀಡಬೇಕು. ಮೇಜು, ಕುರ್ಚಿ, ಅಲ್ಮೆರಾ, ಗೂಗಲ್ ಕ್ರೋಮ್ ಬುಕ್, ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಕಸಬಾ …

Read More »

ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

ಮೈಸೂರು: ಖಾಸಗಿ ಜಮೀನಿನಲ್ಲಿ ನಡೆದ ರೇವ್ ಪಾರ್ಟಿಯ ಮೇಲೆ ಮೈಸೂರು ಪೊಲೀಸರು ದಾಳಿ ನಡೆಸಿದ್ದಾರೆ. ಒಟ್ಟು 50 ಕ್ಕೂ ಜನರನ್ನು ಪೊಲೀಸರು ಬಂಧಿಸಿದ್ದು, ಹಲವು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಸಾಂಸ್ಕೃತಿಕ ನಗರಿಯಲ್ಲಿ ದಸರಾ ಸಂದರ್ಭದಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು. ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಾರ್ಟಿ ಮೇಲೆ ದಾಳಿ ಮಾಡಿದ್ದಾರೆ. 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಎ.ಎಸ್.ಪಿ ಪಿ.ನಾಗೇಂದ್ರ ಹಾಗೂ ಡಿವೈಎಸ್ಪಿ ಕರೀಂ …

Read More »

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

ಬೀದರ್ : ಡ್ಯೂಟಿಗೆ ತಡವಾಗಿ ಬಂದಿರುವುದನ್ನು ಪ್ರಶ್ನಿಸಿದ್ದ ಮಹಿಳಾ ಪಿಎಸ್‌ಐ ಮೇಲೆ ಪೊಲಿಸ್ ಪೇದೆಯೊಬ್ಬ ಹಲ್ಲೆ ಮಾಡಿರುವ ಘಟನೆ ರವಿವಾರ(ಸೆ29)ನಗರದಲ್ಲಿ ನಡೆದಿದ್ದು, ಪೇದೆಯನ್ನು ಅಮಾನತು ಮಾಡಲಾಗಿದೆ. ಇಲ್ಲಿನ ಮಹಿಳಾ ಪೊಲೀಸ್ ಠಾಣೆ ಪಿಎಸ್‌ಐ ಮಲ್ಲಮ್ಮ ಎಂಬುವರೇ ಹಲ್ಲೆಗೊಳಗಾಗಿ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ ಪರೀಕ್ಷೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ನ್ಯೂಟೌನ್ ಠಾಣೆಯ ಪೇದೆ ಧನರಾಜ್ ಅವರು ಎರಡು ಗಂಟೆ ತಡವಾಗಿ ಹಾಜರಾಗಿದ್ದು, ಈ ಬಗ್ಗೆ ಪಿಎಸ್‌ಐ ಮಲ್ಲಮ್ಮ ಪ್ರಶ್ನಿಸಿದ್ದಾರೆ. …

Read More »

ಹೊಂಡ-ಗುಂಡಿಗಳ ರಸ್ತೆ: ಬಸ್ ಸಂಚಾರ ಬಂದ್‌

ಹಾನಗಲ್: ತಾಲ್ಲೂಕಿನ ಯಳ್ಳೂರ-ಬಸಾಪುರ ಗ್ರಾಮೀಣ ರಸ್ತೆ ಹದಗೆಟ್ಟಿದೆ. ಮೊಣಕಾಲು ಮಟ್ಟದ ತಗ್ಗುಗಳು ಸೃಷ್ಟಿಯಾಗಿದ್ದು ಸಾರಿಗೆ ಬಸ್‌ ಸಂಚಾರ ಕೂಡ ಅಸಾಧ್ಯವಾಗಿದೆ. ಈ ಭಾಗದ ಜನರು ಮತ್ತು ಶಾಲೆ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆ ಉಂಟಾಗಿದೆ. ಮಳೆಗಾಲದ ಆರಂಭದಿಂದಲೇ ರಸ್ತೆ ಸಂಚಾರ ದುಸ್ತರವಾಗುತ್ತಿದೆ. ಈಚೆಗಂತೂ ಹೆಜ್ಜೆಗೊಂದು ಗುಂಡಿ ಬಾಯ್ತೆರೆದುಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಈ ರಸ್ತೆಯಲ್ಲಿ ಹಾನಗಲ್ ಸಾರಿಗೆ ಘಟಕದ ಬಸ್‌ ಸಂಚಾರ ಬಂದ್‌ ಮಾಡಿ ಒಂದು ತಿಂಗಳು ಗತಿಸಿದೆ. ಮಹರಾಜಪೇಟೆ …

Read More »

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದರು. ಕೆಲವು ಪ್ರಗತಿಪರ ಸಂಘಟನೆಗಳು ಚಾಮುಂಡಿ‌ಬೆಟ್ಟದಲ್ಲಿ‌ ಭಾನುವಾರ ಹಮ್ಮಿಕೊಂಡಿರುವ ಮಹಿಷ ದಸರಾ ಆಚರಣೆ ಬಗ್ಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ‘ಕಾರ್ಯಕ್ರಮ ಮಾಡುವವರು ಕಾನೂನು-ಸುವ್ಯವಸ್ಥೆಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕಷ್ಟೆ’ ಎಂದರು.   ‘ಇಂಥದ್ದನ್ನು ಮಾಡಿ ಅಥವಾ ಮಾಡಬೇಡಿ ಎಂದು ಹೇಳಲು ನಾವ್ಯಾರು? ದೇಶದ ನಾಗರಿಕತೆಯಲ್ಲೇ ನೀರು, ಕಲ್ಲು, ಮಣ್ಣನ್ನು …

Read More »

ದಾಖಲೆ ಇಟ್ಟರೆ 6-7 ಸಚಿವರ ತಲೆದಂಡವಾಗುತ್ತೆ: HDK

ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರೆದಿದೆ. ದಾಖಲೆಗಳನ್ನು ನಾನು ಮುಂದಿಟ್ಟರೆ ರಾಜ್ಯದ 6-7 ಸಚಿವರ ತಲೆದಂಡವಾಗಲಿದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ ಕೊನೇಪಕ್ಷ 6ರಿಂದ 7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಿಡುತ್ತೇನೆ ಎಂದು …

Read More »

ಆರೀಕಟ್ಟಿ | ಸರ್ಕಾರಿ ಶಾಲೆಗೆ ಶತಮಾನ ಸಂಭ್ರಮ: ಬೇಕಿದೆ ಕಾಯಕಲ್ಪ

ಆರೀಕಟ್ಟಿ (ಹಂಸಬಾವಿ): ಇಲ್ಲಿಯ ಆರೀಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವ ಆಚರಿಸಿಕೊಳ್ಳುತ್ತಿದ್ದು, ಇದರ ಜೊತೆಯಲ್ಲಿಯೇ ಹಲವು ಮೂಲ ಸೌಕರ್ಯಗಳ ಕೊರತೆ ಎದುರಿಸುತ್ತಿವೆ. ಶತಮಾನೋತ್ಸವ ಸಮಾರಂಭವನ್ನು ಅದ್ಧೂರಿಯಾಗಿ ಆಚರಿಸಿದ ಗ್ರಾಮಸ್ಥರು, ‘ನಮ್ಮ ಶಾಲೆ ಮೂಲ ಸೌಕರ್ಯ ಕಲ್ಪಿಸಬೇಕು. ಶತಮಾನ ಸಂಭ್ರಮದಲ್ಲಿರುವ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಬೇಕು’ ಎಂದು ಒತ್ತಾಯಿಸಿದರು. ಶತಮಾನದ ಸಂಭ್ರಮದಲ್ಲಿರುವ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ದಾಖಲಾತಿ ಸಂಖ್ಯೆ ಕ್ಷೀಣಿಸುತ್ತಿದೆ. ದಾಖಲಾತಿ ಪ್ರಮಾಣ ಹೆಚ್ಚಿಸಲು ಶಿಕ್ಷಣ ಇಲಾಖೆ ಹಾಗೂ ಜನಪ್ರತಿನಿಧಿಗಳು …

Read More »

ಬಾಡಿಗೆ ಮನೆಯಲ್ಲಿ ಅಂಗನವಾಡಿ: ಮಳೆ ಬಂದರೆ ಆತಂಕ

ಅಡವಿಸೋಮಾಪುರ (ತಡಸ): ಕುನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಡವಿಸೋಮಾಪುರ ಗ್ರಾಮದಲ್ಲಿ ಎರಡು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ಅಂಗನವಾಡಿ ನಡೆಯುತ್ತಿದ್ದು, ಮಳೆ ಬಂದರೆ ಹಂಚಿನ ಮನೆ ಸೋರುತ್ತಿದೆ. ಇದರಿಂದಾಗಿ ಮಕ್ಕಳ ಪೋಷಕರಲ್ಲಿ ಆತಂಕ ಮನೆ ಮಾಡಿದೆ. ಅಡವಿಸೋಮಾಪುರ ಗ್ರಾಮದ 96ನೇ ಅಂಗನವಾಡಿ ಕೇಂದ್ರದ ಹಳೇ ಕಟ್ಟಡ ಎರಡು ವರ್ಷಗಳ ಹಿಂದೆ ಮಳೆಯಿಂದ ಹಾನಿಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಅಧಿಕಾರಿಗಳು, ಮಕ್ಕಳನ್ನು ಬಾಡಿಗೆ ಹಂಚಿನ ಮನೆಗೆ ಸ್ಥಳಾಂತರಿಸಿದ್ದರು. ಎರಡು ವರ್ಷವಾದರೂ ನೂತನ ಕಟ್ಟಡ ನಿರ್ಮಿಸುವಲ್ಲಿ …

Read More »

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಕಷ್ಟ: FIR ದಾಖಲಿಸುವಂತೆ ಕೋರ್ಟ್ ಸೂಚನೆ

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲು ಮಾಡುವಂತೆ ತಿಲಕನಗರ ಪೊಲೀಸರಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 10ಕ್ಕೆ ಮುಂದೂಡಿದೆ. ಚುನಾವಣಾ ಬಾಂಡ್ ಗಳ ಮೂಲಕ ಸುಲಿಗೆ …

Read More »