Breaking News

ರಾಷ್ಟ್ರೀಯ

ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಅವರನ್ನು ತಳ್ಳಲು ಆಗುತ್ತಾ? ಬಿ.ಸಿ.ಪಾಟೀಲ್

ಬೆಂಗಳೂರು: ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರೆ ತಪ್ಪೇನು? ಅವರು ಖುಷಿಯಿಂದ ಬಂದರೆ ನಾವೇನು ತಳ್ಳುವುದಕ್ಕೆ ಆಗುತ್ತಾ ಎಂದು ಸಚಿವ ಬಿ.ಸಿ ಪಾಟೀಲ್ ಸಂಭ್ರಮಾಚರಣೆಯನ್ನು ಸಮರ್ಥಿಸಿಕೊಂಡರು. ಸಚಿವರು ಸಂಭ್ರಮದಲ್ಲಿ ತೊಡಗಿದ್ದಾರೆಂಬ ಹೆಚ್‌ಡಿಕೆ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೋವಿಡ್ ಹೆಚ್ಚಳ ಆತಂಕದ ಕಾರಣ ಸರ್ಕಾರ ವೀಕೆಂಡ್, ನೈಟ್ ಕರ್ಪೂ ಮಾಡಿದೆ. ಗುಂಪು ಸೇರಬೇಡಿ, ಮಾಸ್ಕ್ ಧರಿಸಿ ಎಂದು ಹೇಳುತ್ತಿದ್ದೇವೆ. ಆದರೂ ಜನ ಗುಂಪು ಸೇರುತ್ತಾರೆ. ನಾವೇನು ಮಾಡಲು ಸಾಧ್ಯ ಎಂದರು. ಬಿಜೆಪಿಯಲ್ಲಿ …

Read More »

ಕೆಲವೇ ಗಂಟೆಗಳಲ್ಲಿ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ

ಕರ್ನಾಟಕ ರಾಜ್ಯ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ (SSLC Result 2021) ಪ್ರಕಟಣೆಗೆ ಸಿದ್ಧವಾಗಿದ್ದು, ಇಂದು ಲಭ್ಯವಾಗಲಿದೆ. ಮಧ್ಯಾಹ್ನ 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ನಿಗದಿಪಡಿಸಲಾದ ಸುದ್ದಿಗೋಷ್ಠಿಯಲ್ಲಿ ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಲಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ. …

Read More »

ನಾಡದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು(ಸೋಮವಾರ, ಆಗಸ್ಟ್ 9) ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ನಾಡದೇವತೆಯ ದರ್ಶನ ಪಡೆಯಲು ಆಗಮಿಸಿದ ಮುಖ್ಯಮಂತ್ರಿ ಬೊಮ್ಮಾಯಿಯವರಿಗೆ ಪೂರ್ಣ ಕುಂಭ ಸ್ವಾಗತ ಮಾಡಲಾಯಿತು. ತದನಂತರ ದೇವಿಯ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಮೈಸೂರಿನಲ್ಲಿಂದು ಸಿಎಂ ಪ್ರವಾಸ : ಮೈಸೂರಿನ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ವಿ.ಸೋಮಣ್ಣ, …

Read More »

ಕಂಬಳ ಭೀಷ್ಮ ಗುರುಪುರ ಕೆದುಬರಿ ಗುರುವಪ್ಪ ಅಪಘಾತದಲ್ಲಿ ನಿಧನ

ಮಂಗಳೂರು: ಕಂಬಳ ಕ್ಷೇತ್ರದ ಹಿರಿಯ ಭೀಷ್ಮ, ಕೃಷಿಕ, ಸರಳಜೀವಿ ಕೆದುಬರಿ ಗುರುವಪ್ಪ ಪೂಜಾರಿ (78) ಭಾನುವಾರ ಸಂಜೆ ಮಂಗಳೂರಿನ ಗುರುಪುರ ಸಮೀಪದ ಕುಕ್ಕುದಕಟ್ಟೆ ಬಳಿ ರಸ್ತೆ ಅಪಘಾತದಲ್ಲಿ ನಿಧನರಾದರು. ಕುಕ್ಕುದಕಟ್ಟೆಯಲ್ಲಿರುವ ಡೈರಿಗೆ ಹಾಲು ಹಾಕಲು ತನ್ನ ಸ್ಕೂಟಿಯಲ್ಲಿ ಸಾಗುತ್ತಿದ್ದ ವೇಳೆ ಕಾರು ಹಾಗೂ ಸ್ಕೂಟಿ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತರು ಮೂವರು ಪುತ್ರರು, ಓರ್ವ ಪುತ್ರಿ ಹಾಗೂ …

Read More »

ಮುಂಬರುವ ೩ ವರ್ಷಗಳಲ್ಲಿ ಭಾರತದ ರಸ್ತೆಗಳು ಅಮೆರಿಕದ ರಸ್ತೆಗಳಂತೆ ಆಗಲಿವೆ ! – ಕೇಂದ್ರ ಸಚಿವ ನಿತಿನ ಗಡಕರಿ

 (ಗುಜರಾತ) – ಮುಂಬರುವ ೩ ವರ್ಷಗಳಲ್ಲಿ ಭಾರತದಲ್ಲಿ ಅಮೆರಿಕದ ರಸ್ತೆಗಳ ಗುಣಮಟ್ಟವಿರುವ ರಸ್ತೆಗಳು ಕಾಣಲು ಸಿಗಲಿವೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ ಗಡಕರಿ ಅವರು ಹೇಳಿದರು. ಅವರು ಆನ್‌ಲೈನ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಬನಾಸಕಾಂಠಾ ಜಿಲ್ಲೆಯ ದಿಸಾ ನಗರದಲ್ಲಿ ೩.೭೫ ಕಿ.ಮೀ. ಉದ್ದದ ನಾಲ್ಕು ಪಥದ ಮೇಲ್ಸೇತುವೆಯನ್ನು ಆನ್‌ಲೈನ್ ಮುಖಾಂತರ ಗಡಕರಿಯವರು ಉದ್ಘಾಟಿಸಿದರು. ದೇಶದಾದ್ಯಂತ ರಸ್ತೆ ನಿರ್ಮಾಣ ಕಾರ್ಯವು ಭರದಿಂದ ಸಾಗಿದೆ. ಪ್ರಸ್ತುತ, ಭಾರತದಲ್ಲಿ ಪ್ರತಿದಿನ …

Read More »

ಮಂಜು ತಂದೆ-ತಾಯಿ ಬಳಿ ಮದುವೆ ಬಗ್ಗೆ ಮಾತಾಡಿದ್ದೇನೆ’; ಎಲ್ಲರ ಮುಂದೆ ವಿಷಯ ತಿಳಿಸಿದ ದಿವ್ಯಾ ಸುರೇಶ್​

ಬಿಗ್​ ಬಾಸ್​ ಕನ್ನಡ ಸೀಸನ್​ 8ರ ಫಿನಾಲೆಯನ್ನು (Bigg Boss Finale) ಕಿಚ್ಚ ಸುದೀಪ್​ ಅವರು ತುಂಬಾ ಲವಲವಿಕೆಯಿಂದ ನಡೆಸಿಕೊಟ್ಟಿದ್ದಾರೆ. ಯಾರು ವಿನ್ನರ್​ ಎಂಬುದನ್ನು ತಿಳಿಸುವುದರ ಜೊತೆಗೆ ಹಲವು ವಿಚಾರಗಳು ಈ ವೇದಿಕೆಯಲ್ಲಿ ಚರ್ಚೆ ಆಗಿವೆ. ಹತ್ತು ಹಲವು ತಮಾಷೆಯ ಮಾತುಗಳ ಮೂಲಕ ಇಡೀ ವಾತಾವರಣವನ್ನು ಸುದೀಪ್​ ರಂಗಾಗಿಸಿದ್ದಾರೆ. ಈ ವೇಳೆ ಮಂಜು ಪಾವಗಡ ಮತ್ತು ಅರವಿಂದ್​ ಕೆಪಿ ಅವರ ಮದುವೆ ಬಗ್ಗೆ ಒಂದು ಪ್ರಶ್ನೆ ಎದುರಾಯಿತು. ಅದಕ್ಕೆ ಸಂಬಂಧಪಟ್ಟಂತೆ …

Read More »

ಕೃಷಿ ಹೊಂಡಕ್ಕೆ ಎರಡು ಜೀವ ಬಲಿ; 4 ಮತ್ತು 6ನೇ ತರಗತಿ ವಿದ್ಯಾರ್ಥಿಗಳಿಬ್ಬರ ಸಾವು

ಚಿತ್ರದುರ್ಗ: ರಜೆಯಲ್ಲಿ ಮಕ್ಕಳು ನೀರಿಗಿಳಿದು ಅನಾಹುತ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಮುಂದುವರಿದಿದ್ದು, ಜಮೀನೊಂದರಲ್ಲಿದ್ದ ಕೃಷಿಹೊಂಡಕ್ಕೆ ಎರಡು ಜೀವಗಳು ಬಲಿಯಾಗಿವೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕು ಐಮಂಗಲ ಹೋಬಳಿಯ ವದ್ದಿಕೆರೆ ಗ್ರಾಮದಲ್ಲಿ ಈ ಅವಘಡ ಸಂಭವಿಸಿದೆ. ಜಮೀನಿನ ಕೃಷಿಹೊಂಡಕ್ಕೆ ಬಿದ್ದ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಆರನೇ ತರಗತಿಯ ರಘು (12), ನಾಲ್ಕನೇ ತರಗತಿ ಸಿದ್ಧೇಶ್​ (10) ಮೃತಪಟ್ಟವರು.

Read More »

ಎಸ್​ಎಸ್​ಎಲ್​ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟ

ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಎಸ್​ಎಸ್​ಎಲ್​ಸಿ ಫಲಿತಾಂಶ ಆಗಸ್ಟ್ 9 ರ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕೃತ ಆದೇಶ ಹೊರಡಿಸಿದೆ. ಸೋಮವಾರ ಮಧ್ಯಾಹ್ನ 3:30 ಕ್ಕೆ ಪರೀಕ್ಷೆಯ ಫಲಿತಾಂಶ ಹೊರಬೀಳಲಿದೆ. ವಿದ್ಯಾರ್ಥಿಗಳ ಮೊಬೈಲ್​ಗಳಿಗೆ ನೇರವಾಗಿ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶವನ್ನ ಕಳುಹಿಸಲಾಗುವುದು ಎಂದು ಹೇಳಲಾಗಿದೆ. ಅಂದು ಮಧ್ಯಾಹ್ನ 3:30ಕ್ಕೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್​​ ನೇತೃತ್ವದಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಸಚಿವರಿಗೆ ಇಲಾಖೆಯ ನಿರ್ದೇಶಕರು, ಕಾರ್ಯದರ್ಶಿಗಳು ಸಾಥ್ ನೀಡಲಿದ್ದಾರೆ.

Read More »

ಜೋಗ: ಅಧಿಕಾರಿಗಳ ಹಾಗೂ ಪ್ರವಾಸಿಗರ ಸಂಘರ್ಷ

ಕಾರ್ಗಲ್: ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ದೃಢೀಕರಣ ಕಡ್ಡಾಯಗೊಳಿಸಿರುವ ಜಿಲ್ಲಾಧಿಕಾರಿ ಆದೇಶ ಶುಕ್ರವಾರ ಸಂಘರ್ಷಕ್ಕೆ ಕಾರಣವಾಗಿತ್ತು. ಉತ್ತರ ಕರ್ನಾಟಕ ಮತ್ತು ಉತ್ತರ ಕನ್ನಡ ಜಿಲ್ಲೆಯಿಂದ ಬಂದಿದ್ದ ಭಾರಿ ಸಂಖ್ಯೆಯ ಪ್ರವಾಸಿಗರು, ‘ಆರ್‌ಟಿಪಿಸಿಆರ್ ಪರೀಕ್ಷಾ ವರದಿ ಕಡ್ಡಾಯ ಎಂದು ಸರ್ಕಾರ ಘೋಷಣೆ ಮಾಡಿಲ್ಲ. ಈ ಬಗ್ಗೆ ಎಲ್ಲಿಯೂ ಮುಂಚಿತವಾಗಿ ಮಾಹಿತಿ ನೀಡಿಲ್ಲ. ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುವ ಆಶಯದಿಂದ ನೂರಾರು ಕಿ.ಮೀ. ದೂರದಿಂದ ನಿರೀಕ್ಷೆಯೊಂದಿಗೆ ಬರುವ ನಮಗೆ ನಿರಾಸೆ ಮೂಡಿಸಿದಂತಾಗಿದೆ. …

Read More »

ಗಡಿಭಾಗಗಳಲ್ಲಿ ದಿಢೀರ್ ಕರ್ಫ್ಯೂ: ತರಕಾರಿಗಳನ್ನು ರಸ್ತೆಗೆ ಎಸೆದು ವ್ಯಾಪಾರಸ್ಥರ ಆಕ್ರೋಶ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿ ಹಿನ್ನೆಲೆಯಲ್ಲಿ ರೈತರು ಹಾಗು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಲಾಕ್​ಡೌನ್​ ಸಡಲಿಕೆ ನಂತರ ವ್ಯಾಪಾರ ವಹಿವಾಟು ಸಹಜ ಸ್ಥಿತಿಗೆ ಮರಳುವುದರೊಳಗೆ ಮತ್ತೆ ಕರ್ಫ್ಯೂ ಜಾರಿಯಾಗಿದ್ದರಿಂದ ರೈತರು ಮತ್ತು ವ್ಯಾಪಾರಸ್ಥರನ್ನು ಸಂಕಷ್ಟಕ್ಕೆ ತಳ್ಳಿದೆ. ಮಧ್ಯಾಹ್ನ 2 ಗಂಟೆಯವರೆಗೂ ತರಕಾರಿ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಇದ್ದರೂ ಮಾರ್ಕೆಟ್​ಗೆ ಜನ ಬರುತ್ತಿಲ್ಲ ಎಂದು ಗೋಳಾಡುತ್ತಿರುವ ವ್ಯಾಪಾರಸ್ಥರು, ದಿಢೀರ್​ ಕರ್ಫ್ಯೂನಿಂದ ವಹಿವಾಟು ಬಂದ್​ ಆಗಿದೆ ಎನ್ನುತ್ತಿದ್ದಾರೆ. ಇನ್ನು ಕಲಬುರಗಿ …

Read More »