ಬೆಂಗಳೂರು: ರಾಜ್ಯದಲ್ಲಿರುವ ಏಪಿಎಂಸಿಗಳ ಡಿಜಟಲೀಕರಣಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಕಾರ್ಯ ಪ್ರಾರಂಭಿಸಲಾಗಿದ್ದು, ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸಲಾಗುವುದು ಎಂದು ಕೃಷಿ ಮಾರುಕಟ್ಟೆ, ಜವಳಿ ಮತ್ತು ಸಕ್ಕರೆ ಇಲಾಖೆ ಸಚಿವರಾದ ಶಿವಾನಂದ ಪಾಟೀಲ್ ಅವರು ತಿಳಿಸಿದರು. ಇಂದು ಎಫ್‌ಕೆಸಿಸಿಐ ನ 107 ನೇ ಸರ್ವಸದಸ್ಯರ ಸಭೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಐದು ಸಾವಿರ ಸದಸ್ಯರನ್ನು ಹೊಂದಿರುವ ಕೈಗಾರಿಕಾ ಸಂಸ್ಥೆ ರಾಜ್ಯದ ಆರ್ಥಿಕ ಅಭಿವೃದ್ದಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದೆ. ನಮ್ಮ ಚುನಾವಣಾ …
Read More »ಮುಡಾ ಹಗರಣವನ್ನು ‘CBI ತನಿಖೆ’ಗೆ ವರ್ಗಾಹಿಸುವಂತೆ ಕೋರಿ ‘ಹೈಕೋರ್ಟ್’ಗೆ ಅರ್ಜಿ ಸಲ್ಲಿಕೆ | CM Siddaramaiah
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಕೋರ್ಟ್ ನಿರ್ದೇಶನದಂತೆ ಎಫ್‌ಐಆರ್ ದಾಖಲಿಸಿದ ಬೆನ್ನಲ್ಲೇ, ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಮೈಸೂರಿನ ಲೋಕಾಯುಕ್ತದಿಂದ ಎಫ್‌ಐಆರ್ ದಾಖಲಿಸಲಾಗಿದೆ. ಇನ್ನೂ ಮುಡಾ ಪ್ರಕರಣ …
Read More »ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ಧಿಗೋಷ್ಠಿ.
ಈಶ್ವರಪ್ಪ ಮನೆಯಲ್ಲಿ ಎನೂ ಚರ್ಚೆ ಅಗಿದೆ ಅಂತಾ ಗೊತ್ತಾದ್ರೇ ವಿಜಯೇಂದ್ರ ರಾಜುಗೌಡನ ಹೊಡೆಯುತ್ತಾನೆ: ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ಧಿಗೋಷ್ಠಿ. ಈಶ್ವರಪ್ಪ ಮನೆಯಲ್ಲಿ ಸಭೆ ವಿಚಾರ. ಸಭೆಯ ವಿಶೇಷತೆ ಎನೂ ಇಲ್ಲ. ಮುಂಬೈದಿಂದ ಬೆಂಗಳೂರಿಗೆ ಬಂದಿದ್ದೆ ಯತ್ನಾಳ್ ಕರೆ ಮಾಡಿದ್ರೂ. ಈಶ್ವರಪ್ಪ ಮನೆಗೆ ಹೋಗ್ತಿದ್ದೇನೆ ಬಾ ಅಂತಾ ಹೇಳಿದ್ರೂ. ಅಲ್ಲಿಗೆ ಹೋದೆ ರಾಜುಗೌಡ ಬಂದಿದ್ದು ಗೊತ್ತಿರಲಿಲ್ಲ. ಅವರು ಇದಿದ್ರೇ ನಾನು ಮನೆಗೆ ಹೋಗ್ತಿರಲಿಲ್ಲ ನಾನು ಹೊರ …
Read More »ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್‌ಐಆರ್ ಸಾಧ್ಯತೆ
ಮೈಸೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ ದಾಖಲಾಗಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು ಖುದ್ದಾಗಿ ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ಬೆಂಗಳೂರಿಗೆ ತೆರಳಿದ್ದು, ಮೈಸೂರಿಗೆ ಬಂದ ಬಳಿಕ ಶುಕ್ರವಾರ ಬೆಳಗ್ಗೆ ಸಿಎಂ ವಿರುದ್ಧ ಪ್ರಕರಣ ದಾಖಲಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬುಧವಾರ ಮಧ್ಯಾಹ್ನ ಆದೇಶವಾದ ಬಳಿಕ ಆದೇಶ ಪ್ರತಿ ಬರಬಹುದೆಂಬ ನಿರೀಕ್ಷೆಯಲ್ಲಿ ಸಂಜೆಯವರೆಗೂ ಕಚೇರಿಯಲ್ಲೇ ಇದ್ದ …
Read More »ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ವಿಶೇಷ ಕೋರ್ಟ್ ಆದೇಶ
ಬೆಂಗಳೂರು: ಮುಡಾ ಹಗರಣದ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಹೈಕೋರ್ಟ್ ಎತ್ತಿಹಿಡಿದ ಬೆನ್ನಲ್ಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ (ಸೆ.25) ಮೈಸೂರು ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖೆ ನಡೆಸಬೇಕೆಂದು ಆದೇಶ ನೀಡಿದೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್, CrPC 156(3) ಅಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ …
Read More »ದೂರು ನೀಡಿ ಎರಡುವರೆ ಗಂಟೆಯೊಳಗಡೆ ನಾಪತ್ತೆಯಾದ ಮಹಿಳೆಯನ್ನು ಪತ್ತೆ ಹಚ್ಚಿದ ಪೊಲೀಸರು
ದಾಂಡೇಲಿ: ನಾಪತ್ತೆಯಾಗಿದ್ದ ಮಹಿಳೆಯೋರ್ವರ ಬಗ್ಗೆ ದೂರು ನೀಡಿದ ಕೇವಲ ಎರಡುವರೆ ಗಂಟೆಯೊಳಗಡೆ ಪೊಲೀಸರು ಪತ್ತೆ ಹಚ್ಚಿ ಕುಟುಂಬಸ್ಥರಿಗೆ ಒಪ್ಪಿಸಿದ ಶ್ಲಾಘನಾರ್ಹ ಘಟನೆ ಅಂಬಿಕಾನಗರದ ಜಮಗಾದಲ್ಲಿ ನಡೆದಿದೆ. ಅಂಬಿಕಾನಗರದ ಜಮಗಾ ನಿವಾಸಿ 50 ವರ್ಷ ವಯಸ್ಸಿನ ಫಾತಿಮಾ ಮುಂಡಗೋಡ ಇವರು ಮಂಗಳವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಅಣಬೆ ತರಲೆಂದು ಕಾಡಿಗೆ ಹೋಗಿದ್ದವರು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆ ಮಂದಿಯೆಲ್ಲ ಸುತ್ತಮುತ್ತಲೂ ಹುಡುಕಿ, ಕೊನೆಗೆ ಸಂಜೆ 7.45 ನಿಮಿಷಕ್ಕೆ ಅಂಬಿಕಾನಗರ …
Read More »ಸಿಡಿಲು ಬಡಿದು ನಾಲ್ವರು ಮೃತಪಟ್ಟ ಪ್ರಕರಣ. ಸಚಿವ ಶರಣಬಸಪ್ಪ ದರ್ಶನಾಪುರ ಸಾಂತ್ವನ
ಯಾದಗಿರಿ: ಸೋಮವಾರ(ಸೆ. 23) ಸಿಡಿಲು ಬಡಿದು ನಾಲ್ವರು ಮೃತಪಟ್ಟದ್ದರು ಇಂದು ಯಾದಗಿರಿ ತಾಲ್ಲೂಕಿನ ಜಿನಕೇರಾ ತಾಂಡಕ್ಕೆ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ತಾಂಡಾಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇಂತಹ ಘಟನೆಗಳು ಆಗದಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ. ಆ ಕುಟುಂಬದ ನೋವನ್ನು ತಡೆದುಕೊಳ್ಳುವ ಶಕ್ತಿ ನೀಡಲಿ. ಸರ್ಕಾರದಿಂದ ಏನೆಲ್ಲ ಪರಿಹಾರ ಇದೆಯೋ ಅದನ್ನು ಆ ಕುಟುಂಬಗಳಿಗೆ ಒದಗಿಸಲು ಅಧಿಕಾರಿಗಳಿಗೆ …
Read More »ಲೈಂಗಿಕ ದೌರ್ಜನ್ಯ, ಯತ್ನಾಳ್ ವಿರುದ್ದ ಅವಹೇಳನಕ್ಕೆ ಖಂಡನೆ; ಮನವಿ ಸಲ್ಲಿಕೆ
ಮುಧೋಳ: ನಗರದ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ನಡೆದ ಪ್ರತಿಭಟನೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಸೆ.24ರ ಮಂಗಳವಾರ ಪ್ರತಿಭಟನೆ ನಡೆಸಿ ಡಿವೈಎಸ್ಪಿ ಶಾಂತವೀರ ಅವರಿಗೆ ಮನವಿ ಸಲ್ಲಿಸಿದರು. ಜಡಗಣ್ಣ ಬಾಲಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಶಿವಾಜಿ ವೃತ್ತಕ್ಕೆ ಬಂದು ಸಭೆಯಾಗಿ ಮಾರ್ಪಟ್ಟಿತು. ಈ ವೇಳೆ ಮಾತನಾಡಿದ ಹಿಂದೂ ಸಂಘಟನೆ ಮುಖಂಡ ಹನಮಂತ ಮಳಲಿ, …
Read More »ಅಕ್ರಮವಾಗಿ ಕರುಗಳ ಸಾಗಾಟ; ಕಂಟೈನರ್ ವಶ, ಇಬ್ಬರ ಬಂಧನ
ಹುಣಸೂರು: ಅಕ್ರಮವಾಗಿ ಒಂದೇ ಕಂಟೈನರ್‌ನಲ್ಲಿ 42 ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬಿಳಿಕೆರೆ ಠಾಣಾ ಪೊಲೀಸರು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ ಘಟನೆ ಸೆ.24ರ ಮಂಗಳವಾರ ನಡೆದಿದೆ. ಹುಣಸೂರು ತಾಲೂಕಿನ ರತ್ನಪುರಿ ಹಾಗೂ ಚಾಮರಾಜನಗರದ ಇಬ್ಬರನ್ನು ಬಂಧಿಸಿ, ವಾಹನ ವಶಕ್ಕೆ ಪಡೆಯಲಾಗಿದೆ. ಹುಣಸೂರು ತಾಲೂಕಿನ ರತ್ನಪುರಿಯಿಂದ ಕೆ.ಆರ್.ನಗರ, ಗೊಮ್ಮಟಗಿರಿ ಮಾರ್ಗವಾಗಿ ಮೈಸೂರು ಕಡೆಗೆ ಕಂಟೈನರ್‌ನಲ್ಲಿ ಜಾನುವಾರುಗಳನ್ನು ಸಾಗಿಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಂಗಳವಾರ ಬೆಳಗ್ಗೆ ಬೆನ್ನಟ್ಟಿ ಮನುಗನಹಳ್ಳಿ ಬಳಿಯಲ್ಲಿ …
Read More »ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ
ರಬಕವಿ-ಬನಹಟ್ಟಿ: ಶ್ರೀ ಕಾಡಸಿದ್ಧೇಶ್ವರ ರಥೋತ್ಸವಕ್ಕೆ ಅದ್ಧೂರಿ ಮಂಗಳವಾರ ರಾತ್ರಿ 8.00ಕ್ಕೆ ಚಾಲನೆ ದೊರೆಯಿತು. ಅದಕ್ಕೂ ಮುಂಚೆ ವಿದ್ಯುತ್‌ದೀಪ ಹಾಗೂ ಅಪಾರ ಪ್ರಮಾಣದ ಹೂವುಗಳಿಂದ ಅಲಂಕೃತವಾದ ರಥಕ್ಕೆ (ತೇರಿಗೆ) ನಗರದ ಸಮಸ್ತ ಹಿರಿಯರು ಸಂಜೆ 6 ಗಂಟೆಗೆ ಪೂಜೆ ಸಲ್ಲಿಸಿ ಕಾಯಿ ಒಡೆಯುವುದರ ಮೂಲಕ ಜಾತ್ರೆಗೆ ಚಾಲನೆ ನೀಡಿದರು. ಶ್ರೀ ಕಾಡಸಿದ್ಧೇಶ್ವರ ಮಹಾರಾಜ ಕಿ ಜೈ’ ಎಂಬ ಜಯಘೋಷಗಳ ಮಧ್ಯೆ ಜಾತ್ರೆಯ ಪ್ರಥಮ ದಿನ ಬಾನಂಗಳದಲ್ಲಿ ಹಾರಾಡಿದ ಪಟಾಕಿಗಳ ಸಂಭ್ರಮ, ಸಡಗರದ ನಡುವೆ …
Read More »