Breaking News

ರಾಷ್ಟ್ರೀಯ

ಪ್ರವಾಸಿಗರಿಗೆ ಸುರಕ್ಷತೆಯ ಕೊರತೆ

ರಬಕವಿ ಬನಹಟ್ಟಿ: ತಾಲ್ಲೂಕಿನ ಹಿಪ್ಪರಗಿ ಜಲಾಶಯ ಈಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪ್ರತಿನಿತ್ಯ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಅಥಣಿ ತಾಲ್ಲೂಕಿನ ನೂರಾರು ಜನರು ವೀಕ್ಷಣೆ ಮಾಡಲು ಬರುತ್ತಿದ್ದಾರೆ. ಆದರೆ ಜಲಾಶಯದ ಸುತ್ತಮುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ವೀಕ್ಷಣೆ ಮಾಡಲು ಬಂದ ಜನರು ಜಲಾಶಯದ ಎಲ್ಲ ಕಡೆಗೂ ಓಡಾಡುತ್ತಾರೆ. ಇಲ್ಲಿ ಹಾಕಲಾದ ಕಬ್ಬಿಣ …

Read More »

ಶರಾವತಿಗೆ ಕೆಪಿಸಿಯಿಂದ ಬಾಗಿನ ಅರ್ಪಣೆ

ಕಾರ್ಗಲ್: ನಾಡಿಗೆ ಬೆಳಕು ನೀಡಲು ಲಿಂಗನಮಕ್ಕಿ ಅಣೆಕಟ್ಟೆಯ ಒಡಲಿನಲ್ಲಿ ಭರ್ತಿಯಾಗುವ ಶರಾವತಿಗೆ ಸೋಮವಾರ ಕೆಪಿಸಿ ಇಲಾಖೆಯ ಪರವಾಗಿ ಬಾಗಿನ ಸಮರ್ಪಿಸಲಾಗುತ್ತಿದೆ ಎಂದು ಕೆಪಿಸಿ ಮುಖ್ಯ ಎಂಜಿನಿಯರ್ ನಾರಾಯಣ ಗಜಕೋಶ್ ತಿಳಿಸಿದರು. ಇಲ್ಲಿಗೆ ಸಮೀಪದ ಲಿಂಗನಮಕ್ಕಿ ಜಲಾಶಯದಲ್ಲಿ ಸೋಮವಾರ ಶರಾವತಿ ನದಿಗೆ ಬಾಗಿನ ಸಮರ್ಪಿಸಿ ಅವರು ಮಾತನಾಡಿದರು. ‘ಸಮುದ್ರ ಮಟ್ಟದಿಂದ ಗರಿಷ್ಠ 1,819 ಅಡಿ ಎತ್ತರದವರೆಗೂ ಜಲಸಂಗ್ರಹ ಸಾಮರ್ಥ್ಯವಿರುವ ಲಿಂಗನಮಕ್ಕಿ ಜಲಾಶಯದಲ್ಲಿ, 1,795 ಅಡಿ ನೀರು ಭರ್ತಿಯಾದಾಗ ಜಲಾಶಯದ ಅರ್ಧ ಭಾಗ …

Read More »

ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಐಜಿಪಿ ಪ್ರವೀಣ್ ಸೂದ್ ಖಡಕ್ ಸೂಚನೆ..

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಶಿಸ್ತು ಪಾಲನೆಗೆ ಖಡಕ್ ಆದೇಶ ಹೊರಡಿಸಲಾಗಿದೆ. ರೌಡಿಶೀಟರ್ಗಳು, ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳು, ಸಮಾಜಘಾತುಕ ವ್ಯಕ್ತಿಗಳ ಜತೆ ಸಂಪರ್ಕ ಇಟ್ಟುಕೊಳ್ಳಬಾರದು. ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಜತೆ ಭಾಗಿಯಾಗಬಾರದು. ಯಾವುದೇ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಸೂಕ್ತವಲ್ಲ ಎಂದು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಖಡಕ್ ಆದೇಶ ಹೊರಡಿಸಿದ್ದಾರೆ. ಪೊಲೀಸರು ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗುವುದಕ್ಕೆ ಮುನ್ನ ತಿಳಿದುಕೊಳ್ಳಬೇಕು. ಕಾರ್ಯಕ್ರಮ ಆಯೋಜಿಸಿರುವ ಸಂಸ್ಥೆ, ವ್ಯಕ್ತಿ ಹಿನ್ನೆಲೆ ತಿಳಿಯಬೇಕು ಎಂದು ಪ್ರವೀಣ್ …

Read More »

ಆ. 10 ರಂದು ಕತ್ತಲಲ್ಲಿ ಮುಳುಗಲಿದೆ ಇಡೀ ದೇಶ, ದೇಶಾದ್ಯಂತ ವಿದ್ಯುತ್ ಸ್ಥಗಿತಕ್ಕೆ ನಿರ್ಧಾರ

ದೇಶಾದ್ಯಂತ ಆಗಸ್ಟ್ 10 ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗುವುದು. ವಿದ್ಯುತ್ ಕಾಯ್ದೆ – 2003ರ ತಿದ್ದುಪಡಿ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ, ಅಧಿಕಾರಿಗಳ ಅಸೋಸಿಯೇಷನ್ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ. ಕೇಂದ್ರ ಸರ್ಕಾರ ವಿದ್ಯುತ್ ಕಾಯ್ದೆ 2003 ರ ತಿದ್ದುಪಡಿಯನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸುವುದಾಗಿ ಘೋಷಿಸಿದ್ದು ಇದನ್ನು ವಿರೋಧಿಸಿ ವಿದ್ಯುತ್ ನೌಕರರ ಸಂಘಟನೆಯ ಅಧಿಕಾರಿಗಳು, ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ ಹೋರಾಟ ಕೈಗೊಳ್ಳಲಿದ್ದಾರೆ. ಹೋರಾಟಕ್ಕೆ ರೈತ ಸಂಘಟನೆಗಳು, …

Read More »

ಡಿಸಿಎಂ ಹುದ್ದೆ ಆಸೆ ಇಟ್ಟುಕೊಂಡವರಿಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್!

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ರೇಸ್‌ನಲ್ಲಿದ್ದವರು, ಅದು ತಪ್ಪಿದ್ದರಿಂದ ಉಪ ಮುಖ್ಯಮಂತ್ರಿ ಆದರೂ ಆಗಬಹುದು ಎಂಬ ಲೆಕ್ಕಾಚಾರವನ್ನಿಟ್ಟುಕೊಂಡಿದ್ದರು. ಆದರೆ ಅವರಿಗೆ ಬಿಜೆಪಿ ಹೈಕಮಾಂಡ್ ಶಾಕ್ ಕೊಟ್ಟಿದೆ ಎಂಬ ಮಾಹಿತಿ ದೆಹಲಿಯಿಂದ ಬಂದಿದೆ. ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಬಳಿಕ ಇದೀಗ ಸಚಿವ ಸಂಪುಟ ವಿಸ್ತರಣೆ ಕಸರತ್ತು ಬಿಜೆಪಿಯಲ್ಲಿ ನಡೆದಿದೆ. ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಿದ್ದು, ಒಬ್ಬರಾದ ಮೇಲೆ ಒಬ್ಬರಂತೆ ಪಕ್ಷದ ವರಿಷ್ಠರನ್ನು ಭೇಟಿ …

Read More »

ಪ್ರವಾಹ ಪೀಡಿತ ಉತ್ತರ ಕನ್ನಡಕ್ಕೆ ಮಾಜಿ ಸಿಎಂ ಭೇಟಿ: ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಕಾರವಾರ: ಜುಲೈ ತಿಂಗಳಿನ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದು, ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಮಲ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಪ್ರತೀ ವರ್ಷ ಮಳೆಗಾಲದಲ್ಲಿ ಇದೇ ಪರಿಸ್ಥಿತಿ ಎದುರಾಗುತ್ತದೆ. ಮುನ್ಸೂಚನೆ ನೀಡದೆ ಏಕಾಏಕಿ ಕದ್ರಾ ಡ್ಯಾಂನಿಂದ ನೀರು ಬಿಡುತ್ತಾರೆ. ಗಂಗಾವಳಿ ನದಿ ದಡದಲ್ಲಿರುವ ಜನರ …

Read More »

ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸುತ್ತಿರುವುದು.

ಗೋಕಾಕ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಹಶೀಲದಾರ ಕಾರ್ಯಾಲಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯದರ್ಶಿ ಭೀಮಶಿ ಗದಾಡಿ ಅವರ ನೇತ್ರತ್ವದಲ್ಲಿ ರೈತ ಮುಖಂಡರು ತಹಶೀಲದಾರ ಪ್ರಕಾಶ ಹೊಳೆಪ್ಪಗೋಳ ಘೇರಾವು ಹಾಕಿ ನಂತರ ಸಭೆ ನಡೆಸಿದರು. ಕಳೆದ 2019ನೇ ಸಾಲಿನಲ್ಲಿ ಪ್ರವಾಹ ಹಾಗೂ ಮಳೆಯಿಂದ ಹಾನಿಯಾದ ಮನೆಗಳಿಗೆ ಇನ್ನೂವರೆಗೂ ಪರಿಹಾರ ದೊರಕಿಲ್ಲವಲ್ಲದೇ ಸರ್ವೆ ಮಾಡುವಲ್ಲಿ ಅಧಿಕಾರಿಗಳು ತಾರ್ಯತ್ಯಮ ಮಾಡಿದ್ದಾರೆಂದು ಆರೋಪಿಸಿದರು. ಕಲಾರಕೊಪ್ಪ, ಮೆಳವಂಕಿ ಗ್ರಾಮದಲ್ಲಿ ಮೂರು ಸಲ ಸರ್ವೆ ಕಾರ್ಯವನ್ನು …

Read More »

20 ಮಂದಿಯ ಹೆಸರು ಫೈನಲ್, ಆ.4 ಸಂಪುಟ ವಿಸ್ತರಣೆ ಫಿಕ್ಸ್..?

ಬೆಂಗಳೂರು, ಆ.2- ಬಹುನಿರೀಕ್ಷಿತ ಸಚಿವ ಸಂಪುಟ ರಚನೆ ದಿನಾಂಕ ಇಂದು ಸಂಜೆ ನಿಗದಿಯಾಗು ವುದು ಬಹುತೇಕ ಖಚಿತವಾಗಿದ್ದು, ಬುಧವಾರ ಪ್ರಮಾಣವಚನ ನಡೆಯುವ ಸಾಧ್ಯತೆಗಳಿವೆ. ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರ್ಜಾ ಬೊಮ್ಮಾಯಿ ಅವರು ಇಂದು ಬೆಳಗ್ಗೆ 9.30ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಬೇಕಿತ್ತಾದರೂ ಅದು ಸಂಜೆಗೆ ಮುಂದೂಡಲ್ಪಟ್ಟಿದೆ. ಸಂಜೆ ಉಭಯ ನಾಯಕರು ಭೇಟಿಯಾಗಿ ಮಾತುಕತೆ ನಡೆಸಿ ಸಂಪುಟ ರಚನೆ ಕುರಿತಂತೆ ಸಂಭವನೀಯರ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ ಬುಧವಾರ …

Read More »

ಬೊಮ್ಮಾಯಿ ಸಂಪುಟದಲ್ಲಿ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಸಚಿವ ಸ್ಥಾನ?

ದೆಹಲಿ : ರಾಜ್ಯದ ಸಚಿವ ಸಂಪುಟ ರಚನೆ ಸಂಬಂಧ ದೆಹಲಿಗೆ ಹೋಗಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಬೆಳಗ್ಗೆ 9 ಗಂಟಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಈ ನಡುವೆ ತಮ್ಮ ಪುತ್ರ ವಿಜಯೇಂದ್ರರಿಗೆ ಸಚಿವ ಸ್ಥಾನ ನೀಡುವಂತೆ ಬಿ.ಎಸ್. ಯಡಿಯೂರಪ್ಪ ಹೈಕಮಾಂಡ್ ಗೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.   ಸಚಿವ ಸಂಪುಟ ರಚನೆ ಕುರಿತಂತೆ ಈಗಾಗಲೇ ದೆಹಲಿಗೆ ತೆರಳಿರುವ ಸಿಎಂ ಬೊಮ್ಮಾಯಿ ಅವರು …

Read More »

ನಗ್ನ ವಿಡಿಯೋ ಮೂಲಕ ಬ್ಲ್ಯಾಕ್ ಮೇಲ್ ಬೆಳಗಾವಿಯಲ್ಲಿ ಹೆಚ್ಚಿದ ಸೈಬರ್ ವಂಚನೆ;

: ಸೈಬರ್‌ ವಂಚಕರು ಫೇಸ್ ಬುಕ್ ನಲ್ಲಿ ಯುವತಿಯರ ಹೆಸರಲ್ಲಿ ಫ್ರೆಂಡ್ ರಿಕ್ವೆಷ್ಟಗಳನ್ನು ಸಾರ್ವಜನಿಕರಿಗೆ ಕಳುಹಿಸಿ ಬಳಿಕ ನಗ್ನ ವಿಡಿಯೋ ಕರೆಗಳನ್ನು ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಪ್ರಕರಣ ಕುಂದಾನಗರಿ ಬೆಳಗಾವಿಯಲ್ಲೂ ಬೆಳಕಿಗೆ ಬಂದಿದೆ. ಫೇಸ್ ಬುಕ್ ನಲ್ಲಿ ಯುವತಿಯರ ರೂಪದಲ್ಲಿ ವಂಚಕರು ಫ್ರೆಂಡ್ಸ್ ರಿಕ್ವೆಸ್ಟ್ ಕಳುಹಿಸಿ ಸಾರ್ವಜನಿಕರ ಸಂಪರ್ಕ ಸಾಧಿಸುತ್ತಾರೆ. ರಿಕ್ವೆಸ್ಟ್ ಸ್ವೀಕರಿಸಿದ ನಂತರ ಅವರೊಂದಿಗೆ ಫೇಸ್‌ಬುಕ್ ಮೆಸೆಂಜರ್‌ನಲ್ಲಿ ಚಾಟ್ ಮಾಡಿ ಅವರ ವ್ಯಾಟ್ಸ್‌ಅಪ್ ನಂಬರ್ ಪಡೆದುಕೊಳ್ಳುತ್ತಾರೆ. ನಂತರ …

Read More »