Breaking News

ರಾಷ್ಟ್ರೀಯ

ಸಿಎಂ ಬೊಮ್ಮಾಯಿ ನಿವಾಸದ ಎದುರೇ ಬೈಕ್ ವ್ಹೀಲಿಂಗ್​ ಮಾಡ್ತಿದ್ದ ಪುಂಡರ ಬಂಧನ

ಬೆಂಗಳೂರು: ನೂತನ ಸಿಎಂ ಬಸವರಾಜ್​ ಬೊಮ್ಮಾಯಿಯವರ ಆರ್. ಟಿ ನಗರದ ಮನೆ ಸುತ್ತಮುತ್ತ ಬೈಕ್​ ವ್ಹೀಲಿಂಗ್​ ಮಾಡುವ ಪುಂಡರ ಹಾವಳಿ ಹೆಚ್ಚಾಗಿದೆ. ಸಿಎಂ ಮನೆ ಮುಂದೆ ವ್ಹೀಲಿಂಗ್​ ಮಾಡುತ್ತಿದ್ದ ಪುಂಡರನ್ನು ಪೊಲೀಸರು ಬಂಧಿಸಿದ್ದು ಬೈಕ್​ಗಳನ್ನ ಸೀಜ್​ ಮಾಡಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಮನೆ ಸುತ್ತಮುತ್ತ ಪೊಲೀಸ್​ರ ದಂಡೆ ಇದ್ದರು ಕ್ಯಾರೆ ಎನ್ನದ ಪುಂಡರ ಗುಂಪು ವ್ಹೀಲಿಂಗ್ ಮಾಡುತ್ತಿದ್ದರು. ಡಿಯೋ, ಌಕ್ಟಿವಾ ಬೈಕ್ ಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರ ಗ್ಯಾಂಗ್​ನ್ನು …

Read More »

ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್

ಜೆಡಿಎಸ್ ಯುವ ಘಟಕದ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಗೆ ಡೇಟ್ ಫಿಕ್ಸ್ ಆಗಿದೆ. ಹೌದು. ಇದೇ ಜುಲೈ 30 ರಂದು ಹುಬ್ಬಳ್ಳಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಸಮ್ಮುಖದಲ್ಲಿ ಮಧು ಬಂಗಾರಪ್ಪ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ವೇಳೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ …

Read More »

ಕುತೂಹಲ ಮೂಡಿಸಿದ ಈಶ್ವರಪ್ಪ ಸುದ್ದಿಗೋಷ್ಠಿ:ಶೆಟ್ಟರ್ ರೀತಿಯಲ್ಲೇ ನಿರ್ಧಾರ ಮಾಡ್ತಾರಾ BJPನಾಯಕ

ಶಿವಮೊಗ್: ರಾಜ್ಯದಲ್ಲಿ ಬಸವರಾಜ್ ಬೊಮ್ಮಯಿ ನೂತನ ಮುಖ್ಯಮಂತ್ರಿಯಾಗಿ ನೇಮಕವಾದ ಬಳಿಕ ಬಿಜೆಪಿ ಹಿರಿಯ ನಾಯಕರ ನಡೆಗಳು ಕುತೂಹಲಕ್ಕೆ ಕಾರಣವಾಗಿದೆ. ಇದೀಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಪತ್ರಿಕಾಗೋಷ್ಠಿ ಕರೆದಿದ್ದು, ಕುತೂಹಲ ಮೂಡಿಸಿದೆ. ಬಿಎಸ್ವೈ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದ ನೆಹರು ರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಟಿ ಕರೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತನ್ನ ಭವಿಷ್ಯದ ರಾಜಕೀಯ ನಿರ್ಧಾರವನ್ನು ಈಶ್ವರಪ್ಪ ಘೋಷಣೆ ಮಾಡುತ್ತಾರೆ. ಜಗದೀಶ್ ಶೆಟ್ಟರ್ ರೀತಿಯಲ್ಲೆ ನಿರ್ಧಾರ …

Read More »

ಇಷ್ಟು ದಿನ‌ ನೀವು ಏನು ಮಾಡಿದ್ದೀರಿ? ಎಂಬುದು ನನಗೆ ಬೇಕಿಲ್ಲ. ಆಡಳಿತದಲ್ಲಿ ನಾನು ಏನು ಆದೇಶ ಮಾಡುತ್ತೇನೊ ಅದು ಜಾರಿ ಆಗಲೇ ಬೇಕು: ಬೊಮ್ಮಾಯಿ ಗರಂ! .

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಗಳ ಮಹತ್ವದ ಸಭೆ ನಡೆಸಿದ್ದಾರೆ. ನಂತರ ರಾಜ್ಯ ಸಚಿವ ಸಂಪುಟ ಸಭೆಯನ್ನೂ ಮಾಡಿದ್ದಾರೆ. ಆದರೆ ಅಧಿಕಾರಿಗಳ ಸಭೆಯಲ್ಲಿ ಮಹತ್ವದ ಸೂಚನೆಗಳನ್ನು ಕೊಡುವ ಮೂಲಕ ತಮ್ಮ ಮುಂದಿನ ಆಡಳಿತದ ಮುನ್ಸೂಚನೆಯನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ. ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. …

Read More »

ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ : ಆತಂಕದಲ್ಲಿ ರೈತರು

  ಗಂಗಾವತಿ : ಗಂಗಾವತಿ ತಾಲ್ಲೂಕಿನ ರಾಂಪುರ ಮಲ್ಲಾಪೂರ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆಯ ಅಕ್ವಾಡೆಕ್ಟ್ ನಲ್ಲಿ ಸೋರಿಕೆ ಕಂಡುಬಂದಿದೆ. ಆತಂಕದಲ್ಲಿ ರೈತರಿದ್ದಾರೆ. ಕಳೆದ ವರ್ಷ ಇದೇ ಜಾಗದ ಬಲಭಾಗದಲ್ಲಿ ಸೋರಿಕೆ ಕಂಡು ಬಂದಿತ್ತು ಆಗ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು ಸಿಮೆಂಟ್ ಮೂಲಕ ಗ್ರೌಂಡಿಂಗ್ ಮಾಡಿ ಸೋರಿಕೆಯನ್ನು ತಡೆದಿದ್ದರು. ಜುಲೈ ಹದಿನೆಂಟ ರಂದು ಕಾಲುವೆಗೆ ನೀರು ಹರಿಸಲಾಗಿದ್ದು ಸದ್ಯ ಕಾಲುವೆಯಲ್ಲಿ 4ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದೆ. ಅಚ್ಚುಕಟ್ಟು ಪ್ರದೇಶದಲ್ಲಿ ಭರದಿಂದ …

Read More »

ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಸವರಾಜ ಬೊಮ್ಮಾಯಿ ಅವರನ್ನು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭೇಟಿ ಮಾಡಿ ಶುಭಾಶಯ ಕೋರಿದರು. ಬೆಂಗಳೂರಿನ ಆರ್‍ಟಿ ನಗರದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಬುಧವಾರ ಸಂಜೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಆಡಳಿತದಲ್ಲಿ ಸಾಕಷ್ಟು ಅನುಭವ …

Read More »

2020: ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿ : ಭಾರತಕ್ಕೆ ಎಷ್ಟನೇ ಸ್ಥಾನ?

ಟೋಕಿಯೋ ಒಲಿಂಪಿಕ್ಸ್ ಶುರುವಾಗಿ 5 ದಿನಗಳು ಕಳೆದಿವೆ. ಆರಂಭದಿಂದಲೂ ಜಪಾನ್ ಮತ್ತು ಚೀನಾ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡುತ್ತಿದ್ದು, ಪದಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕಾಗಿ ಭರ್ಜರಿ ಪೈಪೋಟಿ ನಡೆಸುತ್ತಿದೆ. ಇನ್ನು ಮೊದಲ ಐದು ದಿನಗಳಲ್ಲಿ ಹಲವು ವಿಭಾಗದಲ್ಲಿ ಸ್ಪರ್ಧಿಸಿದರೂ ಭಾರತಕ್ಕೆ ಕೇವಲ ಒಂದು ಪದಕ ಮಾತ್ರ ಲಭಿಸಿದೆ. 49 ಕೆಜಿ ವೇಟ್-ಲಿಫ್ಟಿಂಗ್ ಮಹಿಳಾ ವಿಭಾಗದಲ್ಲಿ ಸ್ಪರ್ಧಿಸಿದ್ದ ಮೀರಾಬಾಯಿ ಚಾನು ಒಟ್ಟು 202 ಕೆಜಿ ಭಾರ ಎತ್ತುವ (87 ಕೆಜಿ ಸ್ನ್ಯಾಚ್ ಮತ್ತು …

Read More »

ಗಾಯಗೊಂಡ ತಂದೆ, ಮಗಳನ್ನು ಭಾರಿ ಮಳೆಯಲ್ಲಿ ಸುರಕ್ಷಿತ ಜಾಗಕ್ಕೆ ತಲುಪಿಸಿದ ಮುಂಬೈ ಪೊಲೀಸ್

ಪ್ರತಿವರ್ಷ ಮುಂಬೈಯಲ್ಲಿ ಬೀಳುವ ಭಾರಿ ಮಳೆ ವಾತಾವರಣವನ್ನು ನೋಡಲು ಎಷ್ಟು ಸುಂದರ ಗೊಳಿಸುತ್ತದೆಯೋ, ಅಷ್ಟೇ ಭಯಾನಕವಾಗಿಯೂ ಸಹ ಇರುತ್ತದೆ. ಈ ಭಾರಿ ಮಳೆ ಬೀಳುವುದರಿಂದ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ. ರಸ್ತೆಯಲ್ಲಿ ನಡೆದು ಕೊಂಡು ಹೋಗಿ ಸುರಕ್ಷಿತವಾಗಿ ಒಂದು ಜಾಗಕ್ಕೆ ಸೇರುವುದೇ ಸುಮಾರು ಜನರಿಗೆ ಒಂದು ದೊಡ್ಡ ಸವಾಲಿನ ಕೆಲಸವಾಗಿದೆ. ಇಂತಹ ಮಳೆಯಲ್ಲಿ ಅನೇಕರಿಗೆ ರಸ್ತೆ ಕಾಣದೆ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆಗಳು ಸಹ ನಡೆದಿವೆ. ಮೊಣಕಾಲು ಉದ್ದಕ್ಕೆ ನೀರು ನಿಂತಿದ್ದರೆ ನಡೆದು …

Read More »

ಬಿ.ಎಸ್​.ಯಡಿಯೂರಪ್ಪ ಕೆಳಗಿಳಿದರು ಅದಕ್ಕೆ ಗಡ್ಡ ತೆಗೆದೆ; ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ನಾನಾ ಬಗೆಯ ಚರ್ಚೆಗಳು ನಡೆದಿದ್ದು, ಅನೇಕ ಶಾಸಕರು ಈ ಬಗ್ಗೆ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದರು. ಅದರಲ್ಲೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬದಲಾವಣೆಗಾಗಿ ಗಡ್ಡ, ತಲೆ ಕೂದಲು ಬಿಟ್ಟಿದ್ದು, ಹರಕೆ ಹೊತ್ತಿದ್ದರು ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿತ್ತು. ಈ ವಿಚಾರವಾಗಿ ಗಡ್ಡ ಬಿಟ್ಟಿರಲ್ಲಾ ಎಂದು ಕೇಳಿದ್ದ ಪ್ರಶ್ನೆಗೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ …

Read More »

ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ

ಬೆಂಗಳೂರು : ಇಂದು ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಪರಮಾಣ ವಚನ ಸ್ವೀಕರಿಸಿದ್ದಾರೆ. ಇಂತಹ ಸಿಎಂ ಬೊಮ್ಮಾಯಿಯವರ ನೇತೃತ್ವದಲ್ಲಿ ಸಚಿವ ಸಂಪುಟ ಒಂದು ವಾರದಲ್ಲೇ ರಚನೆಯಾಗಲಿದೆ   ಈ ಕುರಿತಂತೆ ರಾಜಭವನದಲ್ಲಿ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ, ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದಂತ ಮಾಜಿ ಸಚಿವ ಆರ್ ಅಶೋಕ್, ಇಂದು ಸಂಜೆ ನೂತನ ಸಿಎಂ ಆದಂತ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ …

Read More »