Home / ರಾಷ್ಟ್ರೀಯ (page 869)

ರಾಷ್ಟ್ರೀಯ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ 573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾರೀಶಗೌಡ …

Read More »

‘ಚಿರು ನನ್ನ ಮಗುವಾಗಿ ಯಾವಾಗ ಬರಬೇಕು ಅಂತಾರೋ ಆವಾಗ ಬರಲಿ’

ಚಿರು ಸರ್ಜಾ ಇಲ್ಲದ ಮೊದಲ ಹುಟ್ಟುಹಬ್ಬಕ್ಕೆ ಇಡೀ ಅಭಿಮಾನಿ ಬಳಗ ಕೊರಗುತ್ತಿದೆ. ಆದರೂ ಎಲ್ಲೆಡೆ ಚಿರುಗಾಗಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಒಂದೆಡೆ ಚಿರು ಹುಟ್ಟುಹಬ್ಬವಾದ್ರೆ, ಇನ್ನೊಂದೆಡೆ ಇಂದು ಚಿರು ಮತ್ತೆ ಹುಟ್ಟಿ ಬರ್ತಾರೆ ಅನ್ನೋ ಖುಷಿ, ಸಂಭ್ರಮ. ಇದರ ಜೊತೆಗೆ ಚಿರು ‘ಶಿವಾರ್ಜುನ’ ಸಿನಿಮಾ ಮತ್ತೆ ತೆರೆ ಕಂಡಿರೋದು ಮತ್ತೊಂದು ಖುಷಿ. ಸದ್ಯ, ಪತಿಯನ್ನ ನೋಡಲು ಮೇಘನಾ ರಾಜ್​ ಸರ್ಜಾ ಚಿರು ಸಮಾಧಿ ಕಡೆ ಹೊರಟಿದ್ದಾರೆ. ಚಿರು ಸಮಾಧಿಗೆ ಪೂಜೆ ಸಲ್ಲಿಸೋದಾಗಿ …

Read More »

ನೂತನ ಪೆಟ್ರೋಲ್ ಬಂಕ್ ಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ

ಬೆಳಗಾವಿ: ತಾಲೂಕಿನ ಕಲಕಂಬಾದಲ್ಲಿ ನಿರ್ಮಿಸಲಾದ ನೂತನ ಜಗನ್ನಾಥ್ ಪೆಟ್ರೋಲ್ ಬಂಕ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.     ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ್, ಜಿಪಂ ಸದಸ್ಯ ಯಲ್ಲಪ್ಪ ಬುಟರಿ, ಭಾರತ ಪೆಟ್ರೋಲಿಯಂ ಮ್ಯಾನೇಜರ್ ಕುಲದೀಪ ಗುಲಾಟಿ, ಸಂದೀಪ , ಶಾಸಕ ಸತೀಶ ಜಾರಕಿಹೊಳಿ ಆಪ್ತ ಸಹಾಯಕ …

Read More »

ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ.

ಬೆಳಗಾವಿ: ‘ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದಾಗಿ, ನೆರೆಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಯಬಾಗದ ಕುಡಚಿ-ಉಗಾರ ಸೇತುವೆ ಶುಕ್ರವಾರ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ. ಸೇತುವೆ ಜಲಾವೃತವಾಗಿರುವುದನ್ನು ತಹಶೀಲ್ದಾರ್‌ ಚಂದ್ರಕಾಂತ ಭಂಜತ್ರಿ ಪರಿಶೀಲಿಸಿದರು. ‘ಸತತ ಮಳೆಯಿಂದಾಗಿ ತಾಲ್ಲೂಕಿನ ಪ್ರಮುಖ ರಸ್ತೆಗಳು ಹಾಳಾಗಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು. ವಿವಿಧ 11 ಗ್ರಾಮಗಳಲ್ಲಿ ಬೆಳೆ ಹಾನಿಯಾಗಿದ್ದು …

Read More »

ಮೈಸೂರು ದಸರಾ ಉದ್ಘಾಟನೆಯನ್ನು

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, …

Read More »

ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ.

ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ, ಪತ್ನಿ ಮೇಘನಾ ರಾಜ್​ ಚಿರು ಸಮಾಧಿ ಬಳಿ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ ಅನ್ನೋದು ತಿಳಿದು ಬಂದಿದೆ. ಚಿರು ಸಮಾಧಿ ಬಳಿ ಹೋಗಿ, ಸುಂದರ್​ ರಾಜ್​ ಕುಟುಂಬ ಪೂಜೆ ನೆರವೇರಿಸಲಿದ್ದಾರೆ. ಸದ್ಯ ಮೇಘನಾ ರಾಜ್​ ಸರ್ಜಾ ತಮ್ಮ ಜೆ.ಪಿ.ನಗರದ ಮನೆಯಲ್ಲೇ ಇದ್ದಾರೆ. ಇನ್ನು, ಇಂದು ಮೇಘನಾರಾಜ್​ಗೆ ಹೆರಿಗೆ ಅಗುವ ಊಹಾಪೋಹಗಳಿಗೆ ತಂದೆ ಸುಂದರ್ ರಾಜ್ ತೆರೆ ಎಳೆದಿದ್ದಾರೆ. ‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್​ ಆಗೋದಿಲ್ಲ. ನಾವೆಲ್ಲರೂ …

Read More »

ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ.

ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ‌ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ‌ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ …

Read More »

ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್

ನವದೆಹಲಿ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಫೇಲ್ ಆಗಿದೆ. ಈ ಹಿನ್ನೆಲೆ ರಾಜ್ಯದ ಕೊರೊನಾ ವೈರಸ್ ನಿಯಂತ್ರಣ ಉಸ್ತುವಾರಿಗೆ ಕೇಂದ್ರ ಸರ್ಕಾರ ವಿಶೇಷ ತಂಡವನ್ನು ನಿಯೋಜಿಸಿದೆ. ಕರ್ನಾಟಕವೂ ಸೇರಿ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕೇರಳ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಛತ್ತೀಸಗಢ ರಾಜ್ಯಗಳಿಗೆ ಪ್ರತ್ಯೇಕ ತಜ್ಞರ ತಂಡಗಳನ್ನು ಕೇಂದ್ರ ಆರೋಗ್ಯ ಇಲಾಖೆ ನಿಯೋಜಿಸಿದೆ. ಕೇಂದ್ರದಿಂದ ನಿಯೋಜನೆಗೊಂಡಿರುವ ತಜ್ಞರ ತಂಡ ಕರ್ನಾಟಕಕ್ಕೆ …

Read More »

ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿ : ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾಳೆ

ಲಖನೌ: ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಯುವತಿಯೊಬ್ಬಳು ನ್ಯಾಯಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಕೋರಿ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾಳೆ. ಗಂಡನ ಮನೆಯವರು ಕೊಡುವ ಹಿಂಸೆಯನ್ನು ಸಹಿಸಲಾರದೇ ಉತ್ತರ ಪ್ರದೇಶದ ವಿಧಾನಸಭಾ ಕಟ್ಟಡದ ಎದುರೇ ಮೊನ್ನೆ ಬೆಂಕಿಹಚ್ಚಿಕೊಂಡಿದ್ದ ಈ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ಪೊಲೀಸರು ಹೇಳಿದ್ದಾರೆ. ಅಂಜನಾ ತಿವಾರಿ ಅಲಿಯಾಸ್​ ಆಯೇಷಾ ಈ ದುರ್ದೈವಿ. ಗಂಡನ ಮನೆಯವರ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದರಿಂದ ಮುಖ್ಯಮಂತ್ರಿಗಳನ್ನೇ ಭೇಟಿ …

Read More »

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ.

ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ. ನಗರದಲ್ಲಿ ಗುರುವಾರ ರಾತ್ರಿಯಿಂದ ಜಿಟಿಜಿಟಿ ಮಳೆ ಬಿದ್ದಿತು. ಬೆಳಿಗ್ಗೆಯಿಂದಲೂ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಮಳೆ ಪ್ರಮಾಣ ಗಣನೀಯವಾಗಿ ಕ್ಷೀಣಿಸಿದೆ. ಆದರೆ, ಮಹಾರಾಷ್ಟ್ರದಿಂದ ಕೃಷ್ಣಾ ಮತ್ತು ಉಪ ನದಿಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಮಾತ್ರ ನಿರಂತರ ಏರಿಕೆ ದಾಖಲಾಗುತ್ತಿದೆ. ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ನಿಂದ 1.04 ಲಕ್ಷ ಮತ್ತು ದೂಧ್‌ಗಂಗಾ ನದಿಯಿಂದ 15,135 ಕ್ಯುಸೆಕ್ ಸೇರಿದಂತೆ …

Read More »