Breaking News

ರಾಷ್ಟ್ರೀಯ

ಬುಧವಾರ ಬೆಳಿಗ್ಗೆ ದೇಶದ ಹಲವೆಡೆ ಲಘು ಭೂಕಂಪ

ನವದೆಹಲಿ: ಬುಧವಾರ ಬೆಳಗಿನ ಜಾವ ದೇಶದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ರಾಜಸ್ಥಾನದ ಬಿಕಾನೆರ್‌ನಲ್ಲಿ 5.3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವುದು ರಿಕ್ಟರ್‌ ಮಾಪಕದಲ್ಲಿ ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ವೀಕ್ಷಣಾ ಕೇಂದ್ರದ (ಎನ್‌ಸಿಎಸ್‌) ಪ್ರಕಾರ, ಬಿಕಾನೆರ್‌ನಲ್ಲಿ ಬೆಳಗಿನ ಜಾವ 5:24ಕ್ಕೆ ಭೂಕಂಪ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ ಯಾವುದೇ ಸಾವು-ನೋವು ಅಥವಾ ಆಸ್ತಿ-ಪಾಸ್ತಿಗೆ ಹಾನಿಯಾಗಿಲ್ಲ. ಮೇಘಾಲಯದ ಪಶ್ಚಿಮ ಗಾರೊ ಹಿಲ್ಸ್‌ ಮತ್ತು ಲಡಾಖ್‌ ಪ್ರದೇಶಗಳಲ್ಲಿ ಕ್ರಮವಾಗಿ ಬೆಳಗಿನ ಜಾವ 2:10 ಮತ್ತು …

Read More »

ರಾಜ್ಯದ 27 ವಲಯ ಅರಣ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು – ರಾಜ್ಯದ 27 ವಲಯ ಅರಣ್ಯಾಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಜುಲೈ 22ರ ವರೆಗೆ ವರ್ಗಾವಣೆಗೆ ಅವಕಾಶ ನೀಡಿದ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆ ಜೋರಾಗಿ ನಡೆಯುತ್ತಿದೆ. ವಲಯಾರಣ್ಯಾಧಿಕಾರಿಗಳ ವರ್ಗಾವಣೆ ವಿವರ ಇಲ್ಲಿದೆ –

Read More »

‘ನೀವು ಬಂದು ಲೈವ್​ ನೋಡಬೇಕು’; ಅಂಜಿಕ್ಯಾ ರಹಾನೆಗೆ ರಾಜ್​ ಕುಂದ್ರಾ ಹೀಗೆ ಹೇಳಿದ್ರು

ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ಪತಿ ರಾಜ್​ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್​ಗಳು ವೈರಲ್​ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್​ಗಳು ಕೂಡ ಹರಿದಾಡಿದೆ. ಟೀಂ ಇಂಡಿಯಾ ಟೆಸ್ಟ್​ ತಂಡದ ಉಪನಾಯಕ ಹಾಗೂ ರಾಜ್​ ಕುಂದ್ರಾ 2012ರಲ್ಲಿ ಟ್ವೀಟ್​ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್​ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್​ ಈಗ ಸಾಕಷ್ಟು ವೈರಲ್​ …

Read More »

ನಟಿ ಶಿಲ್ಪಾ ಶೆಟ್ಟಿ ಪತಿ, ರಾಜ್ ಕುಂದ್ರ ಪೋರ್ನ್ ಜಗತ್ತಿನ ಮಾಸ್ಟರ್ ಮೈಂಡ್; ಪೂನಂ

  ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರ ಬಂಧನದ ಬಳಿಕ ಅಡಲ್ಟ್ ಸ್ಟಾರ್ ಪೂನಂ ಪಾಂಡೆ ಹೇಳಿಕೆ ವೈರಲ್ ಆಗುತ್ತಿದೆ. 2019ರಲ್ಲಿ ರಾಜ್ ಕುಂದ್ರ ವಿರುದ್ಧ ದೂರು ದಾಖಲಿಸಿದ್ದ ಪೂನಂ, ರಾಜ್ ಕುಂದ್ರರನ್ನು ‘ಬ್ಲೂ ಫಿಲ್ಮ್ ದಂಧೆಯ ಮಾಸ್ಟರ್ ಮೈಂಡ್’ ಎಂದು ಆರೋಪಿಸಿದ್ದರು ಎನ್ನುವ ಸುದ್ದಿ ಈಗ ಬಾಲಿವುಡ್ ನಲ್ಲಿ ವೈರಲ್ ಆಗುತ್ತಿದೆ. ಕಳೆದ ಒಂದು ವರ್ಷದಿಂದ ಬ್ಲೂ ಫಿಲ್ಮ್ ದಂಧೆಯ ಹಿಂದೆ ಬಿದ್ದಿದ್ದ ಮುಂಬೈ …

Read More »

ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …

Read More »

ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …

Read More »

ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ

ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು.   ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ.     ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …

Read More »

ತಗ್ಗಿದ ಮಳೆಯ ಅಬ್ಬರ: ಜಲಾಶಯಗಳಲ್ಲಿ ಹೆಚ್ಚಿದ ನೀರು

ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಬಹುತೇಕ ಕಡೆ ಸೋಮವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಆರ್ಭಟಿಸಿದ್ದ ಮಳೆ ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಶಿವಮೊಗ್ಗ ಸೇರಿ ಹಲವೆಡೆ ಬಿಸಿಲ ದರ್ಶನವಾದರೆ, ಸೊರಬ, ಹೊಸನಗರ, ತೀರ್ಥಹಳ್ಳಿ, ಸಾಗರದ ಕೆಲವೆಡೆ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ. ಮಳೆ ಕ್ಷೀಣಿಸಿದರೂ ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಹೊಸನಗರ ತಾಲ್ಲೂಕಿನಲ್ಲಿ 17.1 ಸೆಂ.ಮೀ, ಹುಲಿಕಲ್‌ನಲ್ಲಿ 13.6 ಸೆಂ.ಮೀ, ಮಾಣಿಯಲ್ಲಿ 11.5 …

Read More »

ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‍ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …

Read More »

ವಿದ್ಯಾಕಾಶಿ ಧಾರವಾಡದಲ್ಲಿ SSLC ಪರೀಕ್ಷೆ : ವಿದ್ಯಾರ್ಥಿಗಳಿಗೆ ಚಾಕೊಲೇಟ್ ‌ಸ್ವಾಗತ

ಧಾರವಾಡ : ಜಿಲ್ಲೆಯಲ್ಲಿ ಎಸ್‌ಎಸ್‌ಎಲಸಿ‌ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ರೆಡ್ ಕಾರ್ಪೆಟ್ ಹಾಸಿ, ಚಾಕೊಲೇಟ್ ನೀಡಿ ಸ್ವಾಗತಿಸಿ ಗಮನ ಸೆಳೆದಿವೆ. ಇಲ್ಲಿನ.ಮಾಳಮಡ್ಡಿಯಲ್ಲಿರುವ ಕೆ.ಇ.ಬೋರ್ಡ್ ಶಾಲೆಯ ಆಡಳಿತ ಮಂಡಳಿಯ ಸದಸ್ಯರೆಲ್ಲಾ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿಗಳಿಗೆ ಚಾಕೊಲೇಟ್ ನೀಡಿ ಅವರಿಗೆ ಸ್ವಾಗತಿಸಿದರು. ಶಾಲೆಯ ದ್ವಾರ ಬಾಗಿಲಿಗೆ ಬಲೂನಿನಿಂದ ಅಲಂಕಾರ ಮಾಡಿ, ತಳಿರು ಕಟ್ಟಿಸಿಂಗರಿಸಲಾಗಿತ್ತು. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳು‌ಅಂಜಿಕೊಳ್ಳುವ ಅಗತ್ಯವಿಲ್ಲ. …

Read More »