ನೀಲಿಚಿತ್ರ ನಿರ್ಮಾಣ ಮಾಡುತ್ತಿದ್ದ ಆರೋಪದ ಮೇಲೆ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಬಂಧಿಸಲಾಗಿದೆ. ಅವರ ಬಂಧನದ ನಂತರದಲ್ಲಿ ಸಾಕಷ್ಟು ಹಳೆಯ ಟ್ವೀಟ್ಗಳು ವೈರಲ್ ಆಗಿವೆ. ಅಲ್ಲದೆ, ಈ ಬಗ್ಗೆ ಮೀಮ್ಗಳು ಕೂಡ ಹರಿದಾಡಿದೆ. ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಹಾಗೂ ರಾಜ್ ಕುಂದ್ರಾ 2012ರಲ್ಲಿ ಟ್ವೀಟ್ ಮೂಲಕ ಸಂಭಾಷಣೆ ನಡೆಸಿದ್ದರು. ರಾಜ್ ಬಗ್ಗೆ ರಹಾನೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು. ಈ ಟ್ವೀಟ್ ಈಗ ಸಾಕಷ್ಟು ವೈರಲ್ …
Read More »ನಟಿ ಶಿಲ್ಪಾ ಶೆಟ್ಟಿ ಪತಿ, ರಾಜ್ ಕುಂದ್ರ ಪೋರ್ನ್ ಜಗತ್ತಿನ ಮಾಸ್ಟರ್ ಮೈಂಡ್; ಪೂನಂ
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರ ಬಂಧನದ ಬಳಿಕ ಅಡಲ್ಟ್ ಸ್ಟಾರ್ ಪೂನಂ ಪಾಂಡೆ ಹೇಳಿಕೆ ವೈರಲ್ ಆಗುತ್ತಿದೆ. 2019ರಲ್ಲಿ ರಾಜ್ ಕುಂದ್ರ ವಿರುದ್ಧ ದೂರು ದಾಖಲಿಸಿದ್ದ ಪೂನಂ, ರಾಜ್ ಕುಂದ್ರರನ್ನು ‘ಬ್ಲೂ ಫಿಲ್ಮ್ ದಂಧೆಯ ಮಾಸ್ಟರ್ ಮೈಂಡ್’ ಎಂದು ಆರೋಪಿಸಿದ್ದರು ಎನ್ನುವ ಸುದ್ದಿ ಈಗ ಬಾಲಿವುಡ್ ನಲ್ಲಿ ವೈರಲ್ ಆಗುತ್ತಿದೆ. ಕಳೆದ ಒಂದು ವರ್ಷದಿಂದ ಬ್ಲೂ ಫಿಲ್ಮ್ ದಂಧೆಯ ಹಿಂದೆ ಬಿದ್ದಿದ್ದ ಮುಂಬೈ …
Read More »ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ’ ಕೃಷಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ …
Read More »ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಪೊಲೀಸರು ಬಂಧಿಸಿದ್ದಾರೆ.
ಮುಂಬೈ: ಉದ್ಯಮಿ ಮತ್ತು ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರನ್ನು ಸೋಮವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಚಿತ್ರಗಳನ್ನು ತಯಾರಿಸಿದ ಮತ್ತು ಕೆಲವು ಆಯಪ್‌ಗಳ ಮೂಲಕ ಅವುಗಳನ್ನು ಬಿತ್ತರಿಸಿದ ಆರೋಪ ಅವರ ಮೇಲಿದೆ. ಮುಂಬೈ ಅಪರಾಧ ವಿಭಾಗದ ಪೊಲೀಸರು ಕುಂದ್ರಾ ಅವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಕುಂದ್ರಾ ಅವರೇ ಪ್ರಮುಖ ಆರೋಪಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ‘ಅಶ್ಲೀಲ ಚಿತ್ರಗಳ ತಯಾರಿ ಮತ್ತು ಅವುಗಳನ್ನು ಕೆಲವು …
Read More »ನೂತನ ” ಶ್ರೀದೇವಿ ಇನ್ಸೂರೆನ್ಸ್ ಜೋನ್” ಉದ್ಘಾಟಿಸಿದ ಸತೀಶ ಜಾರಕಿಹೊಳಿ
ಸವದತ್ತಿ: ತಾಲೂಕಿನ ಯರಗಟ್ಟಿಯಲ್ಲಿ ನೂತನ ನಿರ್ಮಾಣವಾದ ಶ್ರೀದೇವಿ ಇನ್ಸೂರೆನ್ಸ್ ಜೋನ್ ನನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸೋಮವಾರ ಉದ್ಘಾಟಿಸಿ, ಹೊಲ್ ಸೆಲ್ ಕಿರಾಣಿ ಅಂಗಡಿಯನ್ನು ಪರಿಶೀಲಿಸಿದರು. ಕಾಂಗ್ರೆಸ್ ಮುಖಂಡರು ಬಸವರಾಜ್ ಸಾಯನ್ನವರ. ಪಂಚನಗೌಡ ದ್ಯಾಮನಗೌಡರ, ರವೀಂದ್ರ ಯಲಿಗಾರ, ವಿಶ್ವಾಸ ವೈದ್ಯ, ಯುವ ನಾಯಕ ಗೌತಮ ದ್ಯಾಮನಗೌಡರ ಮಲ್ಲು ಜಕಾತಿ, ಆ.ಆ. ಟೋಪೋಜಿ, ಯಶವಂತ ಯಲಿಗಾರ, ಈರಣ್ಣ ಸಂಗಪನವರ, ಹರಳಿ , ಹಾಗೂ ಸವದತ್ತಿ ತಾಲೂಕಿನ …
Read More »ತಗ್ಗಿದ ಮಳೆಯ ಅಬ್ಬರ: ಜಲಾಶಯಗಳಲ್ಲಿ ಹೆಚ್ಚಿದ ನೀರು
ಬೆಂಗಳೂರು: ಕರಾವಳಿ ಪ್ರದೇಶ ಸೇರಿದಂತೆ ರಾಜ್ಯದ ಬಹುತೇಕ ಕಡೆ ಸೋಮವಾರ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಆರ್ಭಟಿಸಿದ್ದ ಮಳೆ ಸೋಮವಾರ ಸ್ವಲ್ಪ ಬಿಡುವು ನೀಡಿದೆ. ಶಿವಮೊಗ್ಗ ಸೇರಿ ಹಲವೆಡೆ ಬಿಸಿಲ ದರ್ಶನವಾದರೆ, ಸೊರಬ, ಹೊಸನಗರ, ತೀರ್ಥಹಳ್ಳಿ, ಸಾಗರದ ಕೆಲವೆಡೆ ಮಧ್ಯಾಹ್ನದ ನಂತರ ಸಾಧಾರಣ ಮಳೆಯಾಗಿದೆ. ಮಳೆ ಕ್ಷೀಣಿಸಿದರೂ ಜಲಾಶಯಗಳಿಗೆ ಸಾಕಷ್ಟು ನೀರು ಹರಿದುಬರುತ್ತಿದೆ. ಹೊಸನಗರ ತಾಲ್ಲೂಕಿನಲ್ಲಿ 17.1 ಸೆಂ.ಮೀ, ಹುಲಿಕಲ್‌ನಲ್ಲಿ 13.6 ಸೆಂ.ಮೀ, ಮಾಣಿಯಲ್ಲಿ 11.5 …
Read More »ಗೋಕಾಕ-ಮೂಡಲಗಿ ತಾಲೂಕುಗಳಲ್ಲಿ 7 ಹಾಲು ಶಿಥಿಲೀಕರಣ ಘಟಕಗಳು ಇಷ್ಟರಲ್ಲಿಯೇ ಆರಂಭ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾಲು ಪೂರೈಸುತ್ತಿರುವ ರೈತ ಕಲ್ಯಾಣ ಸಂಘದ ಸದಸ್ಯರುಗಳ 16 ವಾರಸುದಾರರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇತ್ತೀಚೆಗೆ ತಲಾ 10 ಸಾವಿರ ರೂ.ಗಳ ಸಹಾಯಧನದ ಚೆಕ್‍ಗಳನ್ನು ವಿತರಿಸಿದರು. ಹಾಲು ಒಕ್ಕೂಟಕ್ಕೆ ಹಾಲು ಪೂರೈಕೆ ಮಾಡುತ್ತಿರುವ 16 ಜನರು ಮೃತಪಟ್ಟಿದ್ದರಿಂದ ಅವರ ಕುಟುಂಬಗಳ ವಾರಸುದಾರರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ ಚೆಕ್‍ಗಳನ್ನು ವಿತರಿಸಿದರು. ಜೊತೆಗೆ ಗುರ್ಲಾಪೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಸಿಬ್ಬಂದಿಯೋರ್ವ …
Read More »ವಿದ್ಯಾಕಾಶಿ ಧಾರವಾಡದಲ್ಲಿ SSLC ಪರೀಕ್ಷೆ : ವಿದ್ಯಾರ್ಥಿಗಳಿಗೆ ಚಾಕೊಲೇಟ್ ಸ್ವಾಗತ
ಧಾರವಾಡ : ಜಿಲ್ಲೆಯಲ್ಲಿ ಎಸ್‌ಎಸ್‌ಎಲಸಿ ಪರೀಕ್ಷೆ ಆರಂಭಗೊಂಡಿದ್ದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದ ಕೆಲವು ಖಾಸಗಿ ಶಾಲೆಗಳು ವಿದ್ಯಾರ್ಥಿಗಳಿಗೆ ರೆಡ್ ಕಾರ್ಪೆಟ್ ಹಾಸಿ, ಚಾಕೊಲೇಟ್ ನೀಡಿ ಸ್ವಾಗತಿಸಿ ಗಮನ ಸೆಳೆದಿವೆ. ಇಲ್ಲಿನ.ಮಾಳಮಡ್ಡಿಯಲ್ಲಿರುವ ಕೆ.ಇ.ಬೋರ್ಡ್ ಶಾಲೆಯ ಆಡಳಿತ ಮಂಡಳಿಯ ಸದಸ್ಯರೆಲ್ಲಾ ಪರೀಕ್ಷೆ ಬರೆಯಲು ಬಂದ ಎಲ್ಲಾ ವಿದ್ಯಾರ್ಥಿಗಳಿಗೆ ಚಾಕೊಲೇಟ್ ನೀಡಿ ಅವರಿಗೆ ಸ್ವಾಗತಿಸಿದರು. ಶಾಲೆಯ ದ್ವಾರ ಬಾಗಿಲಿಗೆ ಬಲೂನಿನಿಂದ ಅಲಂಕಾರ ಮಾಡಿ, ತಳಿರು ಕಟ್ಟಿಸಿಂಗರಿಸಲಾಗಿತ್ತು. ಕೋವಿಡ್ ಬಗ್ಗೆ ಪರೀಕ್ಷಾರ್ಥಿಗಳುಅಂಜಿಕೊಳ್ಳುವ ಅಗತ್ಯವಿಲ್ಲ. …
Read More »ಸಿಎಂ ಬದಲಾದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳುತ್ತದೆ: ರಂಭಾಪುರಿ ಶ್ರೀ
ರಾಯಚೂರು: ರಾಜಕೀಯದಲ್ಲಿ ಸಂಘರ್ಷ ಇರುವುದು ಸಹಜ, ಯಾರು ಏನೇ ಹೇಳಲಿ ನಮಗೆ ಆತ್ಮವಿಶ್ವಾಸವಿದೆ. ಇರುವಂತ ಅವಧಿವರೆಗೆ ಯಡಿಯೂರಪ್ಪನವರೇ ಸಿಎಂ ಆಗಿ ಇರುತ್ತಾರೆ. ಆಕಸ್ಮಿಕವಾಗಿ ಸಿಎಂ ಬದಲಾವಣೆ ಮಾಡಿದ್ರೆ ಬಿಜೆಪಿ ಪಕ್ಷದ ಮೇಲೆ ಬಹುದೊಡ್ಡ ಹೊಡೆತ ಬೀಳುವುದು ಅಂತ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಡಾ.ವೀರಸೋಮೇಶ್ವರ ಭಾಗವತ್ಪಾದರು ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಶ್ರೀಗಳು ತಮ್ಮ ಸ್ಪಷ್ಟನೆ ನೀಡಿದರು. ಯಡಿಯೂರಪ್ಪ ಇಳಿ ವಯಸ್ಸಿನಲ್ಲಿಯೂ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. …
Read More »ಗೊಂದಲದಲ್ಲಿರುವ ಬಿಜೆಪಿ ಸರ್ಕಾರ ಬಹಳ ದಿನ ಉಳಿಯುವುದಿಲ್ಲ: ಎನ್.ಎಸ್.ಬೋಸರಾಜು
ರಾಯಚೂರು: ಬಿಜೆಪಿ ಪಕ್ಷದಲ್ಲಿ ಕಳೆದ ಒಂದು ವರ್ಷದಿಂದ ಬಹಳ ಗೊಂದಲಗಳಿವೆ. ಪಕ್ಷದ ಗೊಂದಲಗಳಿಂದ ಸರ್ಕಾರ ಅಭಿವೃದ್ಧಿ ಕೆಲಸಗಳನ್ನೂ ಮಾಡುತ್ತಿಲ್ಲ. ಗೊಂದಲದಲ್ಲಿರುವ ಪಕ್ಷದ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಅಂತ ವಿಧಾನ ಪರಿಷತ್ ಮಾಜಿ ಸದಸ್ಯ ಎನ್.ಎಸ್.ಬೋಸರಾಜು ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಆಡಳಿತ ಚುಕ್ಕಾಣಿ ಹಿಡಿದ ಪಕ್ಷ ಸ್ಥಿರ ಸರ್ಕಾರ ಕೊಡಬೇಕು. ಬಿಜೆಪಿ ರಾಜ್ಯಾಧ್ಯಕ್ಷರ ಮಾತುಗಳನ್ನ ನೋಡಿದರೆ ಪಕ್ಷದಲ್ಲಿ ಸರಿಯಿಲ್ಲ ಅನ್ನೋದು ಸ್ಪಷ್ಟವಾಗಿ ಕಾಣುತ್ತಿದೆ. ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ. ಪಕ್ಷದ …
Read More »
Laxmi News 24×7