ಮಂಡ್ಯ: ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ(Mandya Urban Development Authority) ಹಗರಣ ಪ್ರಕರಣಕ್ಕೆ ಸಂಬಂಧಿಸಿ ಶಾಸಕರು, ಮಾಜಿ ಶಾಸಕರು, ಮಾಜಿ ಅಧ್ಯಕ್ಷರಿಗೆ ಬೆಂಗಳೂರಿನ ಸಿಬಿಐ ವಿಶೇಷ ಕೋರ್ಟ್‌ನಿಂದ(CBI Court) ಸಮನ್ಸ್ ಜಾರಿ ಮಾಡಲಾಗಿದೆ. 2009ರಲ್ಲಿ ನಡೆದಿದ್ದ 107 ಸೈಟ್ ಅಕ್ರಮ ಹಂಚಿಕೆ ಕೇಸ್ ದಾಖಲಿಸಿಕೊಂಡು ಸಿಬಿಐನಿಂದ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. 24 ಜನರ ವಿರುದ್ಧ ಸಿಬಿಐನಿಂದ ದೋಷಾರೋಪ ಪಟ್ಟಿ ಸಿದ್ಧವಾಗಿತ್ತು. ಸದ್ಯ ಸಿಬಿಐ ಚಾರ್ಜ್‌ಶೀಟ್ ಆಧಾರದ ಮೇಲೆ ಸಮನ್ಸ್ ಜಾರಿ ಮಾಡಲಾಗಿದೆ. …
Read More »ಶಿಕ್ಷಣ ಸಚಿವ ಸುರೇಶ್ ಕುಮಾರ್ ಗಮನಿಸಿ: ಎಸ್ಎಸ್ಎಲ್ಸಿ ಹಾಲ್ ಟಿಕೆಟ್ಗಾಗಿ ಶಾಲೆ ಎದುರು ವಿದ್ಯಾರ್ಥಿ, ಕುಟುಂಬದವರಿಂದ ಧರಣಿ
ಬಾಗಲಕೋಟೆ: ಇನ್ನೇನು ಜುಲೈ 19 ಎದುರಿಗೆ ಇದೆ. ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗುವ ದಿನ. ಅದರೆ ದುರ್ದೈವ ಅಂದ್ರೆ ಇನ್ನೂ ಅನೇಕ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್ ಕೈಗೆ ಸೇರಿಲ್ಲ. ಇದಕ್ಕೆ ಶಾಲಾ ಆಡಳಿತ ಮಂಡಳಿಗಳ ದಿವ್ಯ ನಿರ್ಲಕ್ಷ್ಯ ಕಾರಣವಾಗಿದೆ. ಜೊತೆಗೆ ಅದೇಕೋ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಈ ನತದೃಷ್ಟ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸದೆ ಮೌನಕ್ಕೆ ಶರಣಾಗಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ ಎಸ್ಎಸ್ಎಲ್ಸಿ ಹಾಲ್ ಟಿಕೆಟ್ಗಾಗಿ ವಿದ್ಯಾರ್ಥಿ …
Read More »ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರದು; 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನಿರ್ಬಂಧ ಸುತ್ತೋಲೆ ರದ್ದುಗೊಳಿದ ಕೋರ್ಟ್
ಬೆಂಗಳೂರು: 2ನೇ ಪತ್ನಿಯ ಮಕ್ಕಳಿಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡುವುದನ್ನು ನಿರ್ಬಂಧಿಸಿದ್ದ ಕೆಪಿಟಿಸಿಎಲ್ ನ ಸುತ್ತೋಲೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿದೆ. ತಂದೆ ತಾಯಿ ಇಲ್ಲದೇ ಮಕ್ಕಳು ಜನಿಸುವುದಿಲ್ಲ. ತಂದೆ ತಾಯಿ ಮಧ್ಯೆ ಅನೈತಿಕ ಸಂಬಂಧವಿರಬಹುದು. ಆದರೆ ಅನೈತಿಕ ಮಕ್ಕಳಿರುವುದಿಲ್ಲ. ಹುಟ್ಟಿನಲ್ಲಿ ಮಕ್ಕಳಿಗೆ ಆಯ್ಕೆ ಇರುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ. ಹಿಂದೂ ವಿವಾಹ ಕಾಯ್ದೆಯಲ್ಲಿ ಈ ತಾರತಮ್ಯ ಮಾಡದೇ 1 ನೇ ಮತ್ತು 2 ನೇ ಪತ್ನಿಯ ಮಕ್ಕಳಿಗೆ …
Read More »ಮಹಾ ಮಳೆಗೆ ಕೊಡಗು ಜಿಲ್ಲೆಯಲ್ಲಿ ಮೊದಲ ಬಲಿ
ಕೊಡಗು : ಮಹಾ ಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ. ಮಡಿಕೇರಿಯ ಆವಂದೂರು ಗ್ರಾಮದ ಕಿರು ಹೊಳೆಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿ ಮೃತದೇಹ ಪತ್ತೆಯಾಗಿದೆ. ಬಾಬಿ ಚಿಣ್ಣಪ್ಪ(70) ಮೃತರಾಗಿದ್ದಾರೆ. ಬಾಬಿ ಚಿಣ್ಣಪ್ಪ ನಿನ್ನೆ ಸಂಜೆ ಕಿರು ಹೊಳೆ ದಾಟುವಾಗ ಆಯತಪ್ಪಿ ಬಿದ್ದು, ನೀರಿನ ಸೆಳೆತಕ್ಕೆ ಸಿಕ್ಕಿ ಕೊಚ್ಚಿಹೋಗಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ್ದ ಅಗ್ನಿಶಾಮಕ ದಳ, ಪೊಲೀಸರು ಶೋಧ ಕಾರ್ಯಚರಣೆ ಮುಂದುವರೆಸಿದ್ದರು. ಆದ್ರೆ ಮಳೆ ಹೆಚ್ಚಾದ ಕಾರಣ ಕಾರ್ಯಚರಣೆ ಸ್ಥಗಿತಗೊಳಿಸಿದ್ದರು. ಇಂದು …
Read More »ಭಾರತದಲ್ಲಿ ಕಳೆದ 24ಗಂಟೆಯಲ್ಲಿ 38,949 ಕೋವಿಡ್ ಪ್ರಕರಣ ಪತ್ತೆ, 542 ಮಂದಿ ಸಾವು
ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಕಳೆದ 24ಗಂಟೆಯಲ್ಲಿ 39,949 ಕೋವಿಡ್ ಪ್ರಕರಣ ವರದಿಯಾಗಿದೆ. ಅಲ್ಲದೇ 542 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 16) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ. ದೇಶದಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ 4,30,422ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಯಲ್ಲಿ 542 ಮಂದಿ ಸಾವನ್ನಪ್ಪಿದ್ದು, 40,026 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ …
Read More »ವಿಶೇಷ ವಿಮಾನದಲ್ಲಿ ದಿಢೀರ್ ದೆಹಲಿಗೆ ಸಿಎಂ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ಭೇಟಿ -ಚರ್ಚೆ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಮಧ್ಯಾಹ್ನ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಂಝೆ 6.30 ರಿಂದ ರಾತ್ರಿ 8 ಗಂಟೆಯ ಒಳಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮೇಕೆದಾಟು ಜಲಾಶಯ ವಿಚಾರಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲಿದ್ದಾರೆ. ಈಗಾಗಲೇ ಅಧಿಕಾರಿಗಳು ದೆಹಲಿಗೆ ತೆರಳಿದ್ದಾರೆ. ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಸಿಎಮ ಚರ್ಚಿಸಲಿದ್ದಾರೆ. ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ, ಡಿಸಿಎಂ ಗೋವಿಂದ …
Read More »ವಿದ್ಯುತ್ ಕಂಬಕ್ಕೆ ಟಾಟಾ ಸುಮೋ ಡಿಕ್ಕಿ – ಮಹಿಳೆ ಸಾವು, ಮೂವರ ಸ್ಥಿತಿ ಗಂಭೀರ
ಶಿವಮೊಗ್ಗ: ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮಹಿಳೆ ಮೃತಪಟ್ಟು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ವರನಹೊಂಡ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ನೀಲಮ್ಮ (60) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ರಸ್ತೆಯ ಜಂಬಳ್ಳಿ ಕಡೆಯಿಂದ ರಿಪ್ಪನ್ ಪೇಟೆಗೆ ಆಗಮಿಸುತ್ತಿದ್ದ ಟಾಟಾ …
Read More »ಸುಮಲತಾ ಹೋರಾಟಕ್ಕೆ ರೈತ ಸಂಘದಿಂದ ಸಂಪೂರ್ಣ ಬೆಂಬಲ: ಚಾಮರಸ ಮಾಲಿಪಾಟೀಲ್
ರಾಯಚೂರು: ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಸಂಸದೆ ಸುಮಲತಾ ಹೋರಾಟಕ್ಕೆ ರಾಜ್ಯ ರೈತ ಸಂಘದಿಂದ ಸಂಪೂರ್ಣ ಬೆಂಬಲವಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ್ ಹೇಳಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಚಾಮರಸ ಮಾಲಿಪಾಟೀಲ್‍ರವರು, ರಾಜ್ಯದ ಹಲವೆಡೆ ಅಕ್ರಮ ಕಲ್ಲುಗಣಿಗಾರಿಕೆ ನಿರಂತರವಾಗಿ ನಡೆಯುತ್ತಿದೆ. ಮಂಡ್ಯ ಜಿಲ್ಲೆಯ ಬೇಬಿಬೆಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಅದೂ ಕೆಆರ್‍ಎಸ್ ನಿಂದ 5-6 ಕಿ.ಮೀನಲ್ಲಿ ಗಣಿಗಾರಿಕೆ ನಡೆಯುತ್ತಿದೆ. 20 ಕಿ.ಮೀ ಒಳಗೆ …
Read More »16 ವರ್ಷ ತಲೆಮರೆಸಿಕೊಂಡಿದ್ದ ಮಂಗಳೂರಿನ ಆರೋಪಿ ಮುಂಬೈನಲ್ಲಿ ಬಂಧನ
ಮಂಗಳೂರು: ನಗರದ ಹೊರವಲಯದ ಪೆರ್ಮುದೆ ಗ್ರಾಮದಲ್ಲಿ ನಡೆದ ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಭಾಗಿಯಾಗಿ 16 ವರ್ಷ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲತಃ ಮೂಲ್ಕಿ ನಿವಾಸಿ, ಸದ್ಯ ಮುಂಬೈನ ಸಕಿ ನಾಕಾದಲ್ಲಿ ವಾಸವಿರುವ ಚಂದ್ರಕಾಂತ್ ಪೂಜಾರಿ ಯಾನೆ ಅಣ್ಣು(55) ಬಂಧಿತ ಆರೋಪಿ ಎಂದು ವರದಿಯಾಗಿದೆ. ಏನಿದು ಪ್ರಕರಣ? ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10 ರಂದು ರಾತ್ರಿ ವಿಶ್ವನಾಥ್, ಅಮೀನ್ ಎಂಬವರ …
Read More »ತುಕ್ಕಾನಟ್ಟಿ ಗ್ರಾಮದಲ್ಲಿ 1.54 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ.
ಮೂಡಲಗಿ : ಚುನಾವಣೆ ಬಂದಾಗ ಮಾತ್ರ ರಾಜಕೀಯ ಮಾಡಿ. ಚುನಾವಣೆ ಮುಗಿದ ಬಳಿಕ ಎಲ್ಲರೂ ಒಂದಾಗಿ-ಒಗ್ಗಟ್ಟಾಗಿ ಗ್ರಾಮದ ಅಭಿವೃದ್ಧಿಗೆ ಪಣತೊಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಕಿವಿಮಾತು ಹೇಳಿದರು. ಗುರುವಾರದಂದು ತಾಲೂಕಿನ ತುಕ್ಕಾನಟ್ಟಿ ಗ್ರಾಮಕ್ಕೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಸೋತವರು ನಮ್ಮವರೇ. ಗೆದ್ದವರು ನಮ್ಮವರೇ. ತಮ್ಮಲ್ಲಿರುವ ಸಣ್ಣಪುಟ್ಟ ವ್ಯತ್ಯಾಸಗಳನ್ನು ಮರೆತು ಅಭಿವೃದ್ಧಿಯತ್ತ …
Read More »
Laxmi News 24×7