Breaking News

ರಾಷ್ಟ್ರೀಯ

ವಿಷಪೂರಿತ ಆಹಾರ ಸೇವಿಸಿ ಮೂವರ ದುರ್ಮರಣ; ಇಬ್ಬರು ಗಂಭೀರ

ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ.     ತಿಪ್ಪಾನಾಯ್ಕ್ (46), ಪತ್ನಿ ಸುಧಾಬಾಯಿ(43), ವೃದ್ಧೆ ಗುಂಡಿಬಾಯಿ (75) ಸಾವನ್ನಪ್ಪಿದವರು. ನಿನ್ನೆ ರಾತ್ರಿ ಮುದ್ದೆ ಸಾರು ಸೇವನೆ ಬಳಿಕ ಕುಟುಂಬಸ್ಥರು ಅಸ್ವಸ್ಥರಾಗಿದ್ದು ತಕ್ಷಣವೇ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು ಘಟನೆ ಕುರಿತು …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ ನಿಂದ ಸಕ್ಕರೆ ವಿತರಣೆ ಕಾರ್ಯಕ್ರಮ

ಗೋಕಾಕ: ಸೌಭಾಗ್ಯ ಲಕ್ಷ್ಮೀ ಶುಗರ್ಸ್ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷ ಕೂಡ ನಾವು ರೈತ ಬಾಂಧವರಿಗೆ ತಿಳಿಸುವುದು ಏನೆಂದರೆ ಈ ವರ್ಷ ನಾವು ನಮ್ಮ ಕಾರ್ಖಾನೆಗೆ ಕಬ್ಬು ಕಳುಹಿಸಿದ ಎಲ್ಲಾ ರೈತ ಬಾಂಧವರಿಗೆ ಪ್ರತಿ ಟನ್ ಗೆ ಅರ್ಧ ಕೇಜಿಯಂತೆ ಸಕ್ಕರೆ ವಿತರಿಸುವ ಕಾರ್ಯಕ್ರಮವನ್ನಾ ಯರಗಟ್ಟಿ, ಗೋಕಾಕ, ಹಾಗೂ ಮಮದಾಪೂರ ಈ ರೀತಿ ಮೂರು ವಿಭಾಗಗಳಾಗಿ ವಿಂಗಡಿಸಿ ಈ ಮೂರು ಝೋನ್ ಗಳಲ್ಲಿ ಸಕ್ಕರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿದೆ. …

Read More »

ಲಕ್ಕಿ ಸ್ಕೀಮ್ ಹೆಸರಿನಲ್ಲಿ ಹಳ್ಳಿ ಜನರಿಗೆ ಪಂಗನಾಮ ಹಾಕಿ ಆರೋಪಿಗಳು ಪರಾರಿ

ಯಾದಗಿರಿ: ಲಕ್ಕಿ ಸ್ಕೀಮ್ ಹೆಸರಿನಲ್ಲಿ ಹಳ್ಳಿ ಜನರಿಗೆ ಪಂಗನಾಮ ಹಾಕಿ ಆರೋಪಿಗಳು ಪರಾರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಯಾದಗಿರಿಯ ಕೆಎಎಸ್​​ಎಸ್ ಎಂಟರ್ಪ್ರೈಸಸ್ ಹೆಸರಿನ ಗುಂಪೊಂದು ನಿಮಗೆ ಕಾರು ,ಬೈಕ್ ಸಿಗುತ್ತದೆ ಎಂದು ಹೇಳಿ ಹಳ್ಳಿ ಜನರನ್ನು ನಂಬಿಸಿ ಲಕ್ಕಿ ಸ್ಕೀಮ್ ಹೆಸರಲ್ಲಿ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಳೆದ ಜನವರಿ ತಿಂಗಳಲ್ಲಿ ಯಾದಗಿರಿ ನಗರದಲ್ಲಿ ಕೆಎಸ್‌ಎಸ್ ಎಂಟರ್ಪ್ರೈಸಸ್ ಆರಂಭ ಮಾಡಿಲಾಗಿತ್ತು. 8 ಕಂತುಗಳಲ್ಲಿ ಪ್ರತಿ …

Read More »

ಈ ಗ್ರಾಮದ ಕಾಂಗ್ರೆಸ್​, ಬಿಜೆಪಿ ಕಾರ್ಯಕರ್ತರ ಮನೆಯಲ್ಲಿ ರಾಶಿ ರಾಶಿ ಅನ್ನಭಾಗ್ಯ ಅಕ್ಕಿ ಮೂಟೆ!

ಗದಗ: ಬಡ ಜನರಿಗೆ ಅನುಕೂಲವಾಗಲಿ ಎಂದು ಸರ್ಕಾರ ಅನ್ನಭಾಗ್ಯ ಯೋಜನೆ ಮೂಲಕ ಪಡಿತರ ಚೀಟಿಯುಳ್ಳವರಿಗೆ ನೀಡುತ್ತಿದ್ದ ಅಕ್ಕಿ ದಾರಿ ತಪ್ಪಿ ಖದೀಮರ ಪಾಲಾಗುತ್ತಿರೋದು ಬೆಳಕಿಗೆ ಬಂದಿದೆ.     ಜಿಲ್ಲೆಯ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದಲ್ಲಿ ಸೈಬರ್ ಠಾಣೆಯ ಇನ್ಸ್‌ಪೆಕ್ಟರ್ ಟಿ.ಮಹಾಂತೇಶ್ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿತ್ತು. ಗ್ರಾಮದ ಬಿಜೆಪಿ ಮುಖಂಡ ಮತ್ತು ಗುತ್ತಿಗೆದಾರ ಆನಂದ್ ನಾಗರಳ್ಳಿ, ಕಾಂಗ್ರೆಸ್ ಮುಖಂಡ ಮಹಬೂಬಸಾಬ್ ಮುಂಡರಗಿ ಹಾಗೂ ಷಣ್ಮುಖಪ್ಪ ಎಂಬುವವರು ಮನೆ …

Read More »

1983 ವಿಶ್ವಕಪ್ ಹೀರೋ ಯಶಪಾಲ್ ಶರ್ಮಾ ನಿಧನ

ಹೊಸದಿಲ್ಲಿ: ಟೀಂ ಇಂಡಿಯಾ ಮಾಜಿ ಆಟಗಾರ, 1983 ವಿಶ್ವಕಪ್ ವಿಜೇತ ತಂಡದ ಸದಸ್ಯ ಯಶಪಾಲ್ ಶರ್ಮಾ ಇಂದು ಹೃದಯಾಘಾತದಿಂದ ನಿಧನರಾದರು. 66 ವರ್ಷದ ಯಶಪಾಲ್ ಶರ್ಮಾ ಅವರು ನೋಯ್ಡಾದಲ್ಲಿ ವಾಸವಿದ್ದರು. ಮಂಗಳವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ಮನೆಯಲ್ಲಿಯೇ ಶರ್ಮಾ ನಿಧನರಾದರು ಎಂದು ಮೂಲಗಳು ತಿಳಿಸಿದೆ. ಯಶಪಾಲ್ ಶರ್ಮಾ 1978ರಿಂದ 1983ರವರೆಗೆ ಭಾರತದ ತಂಡದ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸುತ್ತಿದ್ದರು. 37 ಟೆಸ್ಟ್‌ ಪಂದ್ಯಗಳನ್ನು ಆಡಿರುವ ಶರ್ಮಾ 1,606 ರನ್‌ಗಳನ್ನು ಗಳಿಸಿದ್ದಾರೆ. …

Read More »

ಕರ್ನಾಟಕದಲ್ಲೂ ಜನಸಂಖ್ಯೆ ನಿಯಂತ್ರಣ ನೀತಿ ಜಾರಿಗೊಳಿಸಲು ಇದು ಸಕಾಲ: ಸಿ.ಟಿ.ರವಿ

ಬೆಂಗಳೂರು: ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸಲು ಕರ್ನಾಟಕವು ಅಸ್ಸಾಂ ಮತ್ತು ಉತ್ತರ ಪ್ರದೇಶದ ಮಾದರಿಯಲ್ಲಿ ಹೊಸ ಜನಸಂಖ್ಯಾ ನೀತಿಯನ್ನು ತರಲು ಇದು ಸೂಕ್ತ ಸಮಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಉತ್ತರ ಪ್ರದೇಶದ ಜನಸಂಖ್ಯಾ ನಿಯಂತ್ರಣ ನೀತಿಯ ಬಗ್ಗೆ ಚರ್ಚೆ ಆಗುತ್ತಿರುವ ಸಮಯದಲ್ಲೇ ಸಿ.ಟಿ.ರವಿ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಸೀಮಿತ ನೈಸರ್ಗಿಕ ಸಂಪನ್ಮೂಲಗಳು ಲಭ್ಯವಿರುವುದರಿಂದ, ಜನಸಂಖ್ಯೆಯ ಸ್ಫೋಟ ಸಂಭವಿಸಿದಲ್ಲಿ ಪ್ರತಿಯೊಬ್ಬ ನಾಗರಿಕನ ಅಗತ್ಯಗಳನ್ನು ಪೂರೈಸುವುದು ಕಷ್ಟವಾಗುತ್ತದೆ. …

Read More »

ಸಕಲ ಸರ್ಕಾರಿ ಗೌರವಗಳೊಂದಿಗೆ ಬೆಳಗಾವಿ ಯೋಧನ ಅಂತ್ಯಕ್ರಿಯೆ

ಗೋಕಾಕ : ಕಳೆದ ನಾಲ್ಕೈದು ದಿನಗಳ ಹಿಂದೆ ನ್ಯಾಗಾಲ್ಯಾಂಡ್ ಗಡಿ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಪಘಾತದಲ್ಲಿ ಅಸುನೀಗಿದ್ದ ಗೋಕಾಕ ತಾಲ್ಲೂಕಿನ ವೀರಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಜರುಗಿತು.   ಶಿವಾಪುರ ಗ್ರಾಮದ ಯೋಧ ಮಂಜುನಾಥ ಗೌಡಣ್ಣವರ (38) ಯೋಧ ಅಫಘಾತದಲ್ಲಿ ಸಾವನ್ನಪ್ಪಿದ್ದರು. ಮೃತ ಯೋಧನ ಪಾರ್ಥಿವ ಶರೀರ ಬೆಂಗಳೂರಿನಿಂದ ಇಂದು ಬೆಳಿಗ್ಗೆ 7 ಗಂಟೆಗೆ ಯೋಧನ‌ ಸ್ವಗ್ರಾಮ ಗೋಕಾಕ್ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಕರೆತರಲಾಯಿತು.   …

Read More »

ಕಪ್ಪತ್ತಗುಡ್ಡದಲ್ಲಿ ಖಾಕಿಯ ಟ್ರೆಕ್ಕಿಂಗ್‌ ಮಜಾ

ಗದಗ/ಶಿರಹಟ್ಟಿ: ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡದಲ್ಲಿ ರವಿವಾರ ಬೆಳಿಗ್ಗೆ ಮಂಜು ಮುಸುಕಿದ ವಾತಾವರಣವಿತ್ತು. ಕೈಗೆ ತಾಗುವಷ್ಟು ಮೋಡಗಳ ಮಧ್ಯೆ ಖಾಕಿ ಪಡೆಯ ಹೆಜ್ಜೆಗಳ ಸಪ್ಪಳ ಜೋರಾಗಿತ್ತು. ಹೌದು. ರವಿವಾರ ಬೆಳಗ್ಗೆ ಎಸ್ಪಿ ಎನ್‌.ಯತೀಶ್‌ ಅವರ ನೇತೃತ್ವದಲ್ಲಿ ಪೊಲೀಸ್‌ ಅಧಿ ಕಾರಿಗಳು ಹಾಗೂ ಆಯ್ದ ಸಿಬ್ಬಂದಿ ಟ್ರೆಕ್ಕಿಂಗ್‌ನಲ್ಲಿ ಒಬ್ಬರಿಗಿಂತ ಒಬ್ಬರು ಮೇಲೆಂಬಂತೆ ಗಿರಿ ಶಿಖರವನ್ನೇರಿ ಕಪ್ಪತ್ತಗಿರಿ ಸೌಂದರ್ಯ ಸವಿಯಲು ಬಂದಿದ್ದ ಪ್ರವಾಸಿಗರ ಮನ ಸೆಳೆದರು. ಸದಾ ಕೆಲಸದ ಒತ್ತಡ ಹಾಗೂ ಇತ್ತೀಚೆಗೆ ಕೋವಿಡ್‌ …

Read More »

ಉತ್ತರ ಕರ್ನಾಟಕಕ್ಕೆ ಸಿಎಂ ಸ್ಥಾನದ ಅವಕಾಶ ಸಿಗಬೇಕಿದೆ.: ಪ್ರಹ್ಲಾದ್​ ಜೋಶಿ,ಉಮೇಶ್​ ಕತ್ತಿ ಸಿಎಂ ಕನಸಿಗೆ ಪರೋಕ್ಷ ಬೆಂಬಲ

ಬಿಜೆಪಿ ಪಾಳಯದಲ್ಲಿ ಸಿಎಂ ಬದಲಾವಣೆಯ ಕೂಗು ಮುಗಿಯುವಂತೆ ಕಾಣುತ್ತಿಲ್ಲ. ಭಿನ್ನಮತ ಶಮನಕ್ಕೆ ಹೈಕಮಾಂಡ್​ ಪ್ರಯತ್ನದ ಬಳಿಕವೂ ಅಲ್ಲಲ್ಲಿ ಭಿನ್ನರಾಗಗಳು ಕೇಳಿ ಬರುತ್ತಲೇ ಇದೆ. ಸದಾ ಸಿಎಂ ಸ್ಥಾನದ ಕನಸು ಕಾಣುವ ಉಮೇಶ್​ ಕತ್ತಿ ಇಂದು ಮತ್ತೊಮ್ಮೆ ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಎಂದು ಹೇಳಿದ್ದಾರೆ. ಸಚಿವ ಉಮೇಶ್​ ಕತ್ತಿಯ ಈ ಮಾತಿಗೆ ಪರೋಕ್ಷ ಬೆಂಬಲ ಸೂಚಿಸಿ ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಕತ್ತಿ ಉತ್ತರ ಕರ್ನಾಟಕದವರು ಮುಂದಿನ …

Read More »

ಇಂದಿನಿಂದ ಮುಕ್ತ ವ್ಯಾಪಾರ,ವಹಿವಾಟು

ಹಾಸನ: ಕೊರೊನಾ 2ನೇ ಅಲೆಯು ಇಳಿಮುಖ ವಾಗುತ್ತಾ ಸಾಗಿರುವುದರಿಂದ ಹಾಸನ ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ್ದ ಇದ್ದ ಲಾಕ್‌ಡೌನ್‌ ಸೋಮವಾರದಿಂದ ಸಡಿಲಿಕೆಯಾಗುತ್ತಿದ್ದು, ಇನ್ನು ಪ್ರತಿದಿನವೂ ಮುಂಜಾನೆಯಿಂದ ರಾತ್ರಿವರೆಗೂ ಎಲ್ಲ ವಹಿವಾಟು ಮುಕ್ತವಾಗಿ ನಡೆಯಲಿವೆ. ಇದುವರೆಗೂ ವಾರದಲ್ಲಿ ಸೋಮವಾರ, ಬುಧ ವಾರ, ಶುಕ್ರವಾರ ಮಾತ್ರ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ವಹಿವಾಟಿಗೆ ಅವಕಾಶವಿತ್ತು. ಇನ್ನುಳಿದ 4 ದಿನ ಸಂಪೂರ್ಣ ಲಾಕ್‌ ಡೌನ್‌ ಜಾರಿಯಲ್ಲಿತ್ತು. ಆದರೆ ಸೋಮವಾರ …

Read More »