ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಧಾನ ತಾಲೂಕ್ ಅವರು ಮಂಡ್ಯಾಕೆ ಭೇಟಿ ನೀಡುವ ಸಂದರ್ಭದಲ್ಲಿ ಮಾರ್ಗ ಮಧ್ಯೆ ಅವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಆಕ್ರೋಶ ಹೊರಹಾಕಿದ ಪ್ರಮೋದ್ ಮುತಾಲಿಕ್, ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಇವೆಲ್ಲಾ ಗಲಭೆ ನಡೆಯುತ್ತಿವೆ. ಇಂತವರನ್ನು ಶೂಟ್ ಮಾಡಬೇಕು ಎಂದು ಕಿಡಿ ಕಾಡಿದರು. ಮದ್ದೂರಿನ ನಿಡಘಟ್ಟದ ಬಳಿ ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದು, …
Read More »ಅತ್ಯಾಚಾರ ಪ್ರಕರಣ; ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
ಬೆಂಗಳೂರು: ಆತ್ಯಾಚಾರ ಹಾಗೂ HIV ಸೋಂಕಿತ ಮಹಿಳೆಯನ್ನು ಹನಿಟ್ರ್ಯಾಪ್ಗೆ ಬಳಸಿಕೊಂಡ ಆರೋಪದ ಮೇಲೆ ಕಗ್ಗಲೀಪುರ ಪೊಲೀಸರ ವಶದಲ್ಲಿರುವ ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಮುನಿರತ್ನರನ್ನು ಪೊಲೀಸರು ಶನಿವಾರ ಕೋರ್ಟ್ಗೆ …
Read More »ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಮೊದಲ ಬಾರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ದರ್ಶನ್
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಆಗಿರುವ ದರ್ಶನ್ ಇದೀಗ ಅವರ ಪರ ವಕೀಲರಿಂದ ಜಾಮೀನು ಕೋರಿ ಬೆಂಗಳೂರಿನ ಸೆಷನ್ಸ್ ಕೋರ್ಟಿಗೆ ಮೊದಲ ಬಾರಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. ಹೌದು ಬೆಂಗಳೂರಿನ ಸೇಷನ್ಸ್ ಕೋರ್ಟಿಗೆ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಇತ್ತೀಚಿಗೆ ನಟ ದರ್ಶನ್ ಅವರನ್ನು ನೋಡಲು ತಾಯಿ ಮೀನಾ ತೂಗುದೀಪ್, ಅಕ್ಕ ಹಾಗೂ ಭಾವ, ಸೋದರ …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲ್ಲೂಕಿನ ತಿಮ್ಮಾಪುರ ಗ್ರಾಮದ ಶ್ರೀ ಕರಿಸಿದ್ದೇಶ್ವರ ದೇವರ ಹಾಗೂ ಶ್ರೀ ಹಣಮಂತ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ …
Read More »ಗಾಡಿ ಈ ತರ ಪಾರ್ಕಿಂಗ್ ಆಗಿರೋದನ್ನ ನೀವು ನೋಡಿರಲ್ಲ ಬಿಡಿ..!
ಸಾಮಾನ್ಯವಾಗಿ ರಸ್ತೆಗಳಲ್ಲಿರುವ ಗುಂಡಿಯಿಂದಾಗಿ ವಾಹನಗಳು ಪಲ್ಟಿ ಹಾಕೋದನ್ನ ನೋಡಿರ್ತೀವಿ. ಇದರಿಂದ ಅಪಘಾತಗಳು ಆಗೋದನ್ನೂ ಕೇಳಿರ್ತೀವಿ. ಆದರೆ, ಇದ್ದಕ್ಕಿದ್ದಂತೆ ಗುಂಡಿ ಬಿದ್ದು, ಅದರಲ್ಲಿ ಗಾಡಿ ಪಾರ್ಕ್ ಆಗೋದನ್ನು ಕೇಳಿರೋಕೆ ಸಾಧ್ಯವಿಲ್ಲ. ಮಹರಾಷ್ಟ್ರದ ಪುಣೆಯಲ್ಲಿ ಇಂತದ್ದೊಂದು ವಿಚಿತ್ರ ಘಟನೆ ನಡೆದು ಹೋಗಿದೆ. ಪುಣೆ ನಗರದ ಬುದ್ವಾರ್ ಪೇಠ್ ಪ್ರದೇಶದಲ್ಲಿರುವ ಅಂಚೆ ಕಚೇರಿಯ ಆವರಣದಲ್ಲಿ ಟ್ರಕ್ ತಲೆಕೆಳಗಾಗಿ ಗುಂಡಿಗೆ ಬಿದ್ದಿರುವ ಘಟನೆ ವರದಿಯಾಗಿದೆ. ಇನ್ನು ಇದ್ದಕ್ಕಿದ್ದಂತೆ ಅಂಚೆ ಕಚೇರಿಯ ಆವರಣದಲ್ಲಿ ಬೃಹತ್ ಗುಂಡಿ …
Read More »ಶಿವಸಾಗರ ಕಾರ್ಖಾನೆಯಿಂದ ಅನ್ಯಾಯ: ರೈತರ ಪ್ರತಿಭಟನೆ
ರಾಮದುರ್ಗ: ತಾಲ್ಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಷೇರುದಾರರ ಹಿತ ಕಾಯದೆ ಎನ್‍ಸಿಎಲ್‍ಟಿ ಹರಾಜು ಹಾಕಿ ಷೇರುದಾರರು, ರೈತರು ಮತ್ತು ನೌಕರರಿಗೆ ಅನ್ಯಾಯ ಮಾಡಿದೆಂದು ಆರೋಪಿಸಿ ಉತ್ತರ ಕರ್ನಾಟಕ ರೈತ ಮತ್ತು ಕಬ್ಬು ಬೆಳೆಗಾರರ ಸಂಘ ಮತ್ತು ಷೇರುದಾರರು ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಸಿದರು. ಜಿಲ್ಲಾಧಿಕಾರಿ ಇಲ್ಲವೇ ಸಕ್ಕರೆ ಆಯುಕ್ತರು ಸ್ಥಳಕ್ಕೆ ಆಗಮಿಸಿ ಪರಿಹಾರ ಒದಗಿಸುವ ತನಕ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ನೀರು, ಊಟ ಸೇವಿಸುವುದಿಲ್ಲ ಎಂದು ನೂರಾರು ಷೇರುದಾರರು ಹಾಗೂ …
Read More »5 ತಿಂಗಳಿಗೆ 597 ಕೆ.ಜಿ ಚಿನ್ನ ಉತ್ಪಾದನೆ
ಹಟ್ಟಿಚಿನ್ನದಗಣಿ: ಪ್ರಸಕ್ತ ಆರ್ಥಿಕ ವರ್ಷದ ಮೊದಲ 5 ತಿಂಗಳಲ್ಲಿ ಹಟ್ಟಿಚಿನ್ನದಗಣಿ ಕಂಪನಿ 613.686 ಕೆಜಿ ಗುರಿ ಪೈಕಿ 597.772 ಕೆಜಿ ಚಿನ್ನ ಉತ್ಪಾದಿಸಿದೆ. ಪ್ರತಿ ಟನ್ ಅದಿರಿನಲ್ಲಿ 2.23 ಗ್ರಾಂ ಉತ್ಪಾದನೆ ಗುರಿ ಹೊಂದಿದ್ದು, 2.74 ಗ್ರಾಂ. ಹಳದಿ ಲೋಹ ಉತ್ಪಾದನೆಯಾಗಿದೆ. ಏಪ್ರಿಲ್‌ನಲ್ಲಿ 118, ಮೇ 90, ಜೂನ್ 110, ಜುಲೈ 150, ಅಗಸ್ಟ್‌ನಲ್ಲಿ 127 ಕೆಜಿ ಚಿನ್ನ ಉತ್ಪಾದನೆಯಾಗಿದೆ. ಜುಲೈನಲ್ಲಿ 133 ಕೆ.ಜಿ ಚಿನ್ನ ಉತ್ಪಾದನೆ ಗುರಿ ಹೊಂದಲಾಗಿತ್ತು. …
Read More »ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಾಡಿದ್ದು, ಕೂಡಲೇ ಪೊಲೀಸರು ಈ ಧ್ವಜ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ(ಸೆ20) ನಡೆದಿದೆ. ಮೆರವಣಿಗೆಯಲ್ಲಿ ಕೆಲ ಯುವಕರು ಮೆರವಣಿಗೆ ವೇಳೆ ಕೈಯಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ಚಜ ಹಾರಾಡಿಸಿದ್ದಾರೆ. ಇದನ್ನು ಕಂಡ ಪ್ಯಾಲೇಸ್ತೀನ್ ಧ್ವಜ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈದ್ …
Read More »ಪ್ರಚೋದನಕಾರಿ ಭಾಷಣ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ‘FIR’ ದಾಖಲು
ಬಾಗಲಕೋಟೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆಯ ವೇಳೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದಂತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಧೋಳ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ನಿನ್ನೆ ಮುಧೋಳ ಪಟ್ಟಣದ ಜನ್ನತ್ ನಗರದ ಗಣೇಶ ಮೂರ್ತಿ ವಿಸರ್ಜನೆ ವೇಳೆಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಟಿಪ್ಪು ಸುಲ್ತಾನ್, ಔರಂಗಾಜೇಬ್ ಕುರಿತಂತೆ ಅಶ್ಲೀಲ ಪದ ಬಳಕೆ ಮಾಡಿ, ಪ್ರಚೋದನಕಾರಿ ಭಾಷಣ ಮಾಡಿದ್ದರು. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ …
Read More »ಬಯೋಲಾಜಿಕಲ್ ವಾರ್ ರೀತಿ ಇದೆ; ಮುನಿರತ್ನ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಡಿಕೆ ಸುರೇಶ್ ವಿಶೇಷ ಮನವಿ
ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಂದು ಅತ್ಯಾಚಾರ ಆರೋಪ ಪ್ರಕರಣ ಮುನ್ನಲೆಗೆ ಬಂದಿದೆ. ಅತ್ಯಾಚಾರ ಆರೋಪ ಪ್ರಕರಣ ಮಾತ್ರವಲ್ಲದೆ ಹೆಚ್‌ಐವಿ ಇರುವ ರೋಗಿಗಳ ರಕ್ತವನ್ನು ತನ್ನದೇ ಪಕ್ಷದ ನಾಯಕರಿಗೆ ಇಂಜೆಕ್ಟ್ ಮಾಡಲು ಮುನಿರತ್ನ ಸಂಚು ಮಾಡಿದ್ದರು ಎನ್ನುವ ಗಂಭೀರ ಆರೋಪವೊಂದು ಕೇಳಿಬಂದಿದ್ದು, ಬಿಜೆಪಿ ನಾಯಕರೇ ಇದನ್ನು ಕೇಳಿ ಬೆಚ್ಚಿಬಿದ್ದಿದ್ದಾರೆ. ಮಾಜಿ ಸಂಸದ ಡಿ.ಕೆ. ಸುರೇಶ್ ಈಗ …
Read More »