Breaking News

ರಾಷ್ಟ್ರೀಯ

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ

ಮುಂಬಯಿ: ಬಾಲಿವುಡ್‌ ನಟ ಸಲ್ಮಾನ್ ಖಾನ್ (Salman Khan) ಅವರ ತಂದೆ ಸಲೀಂ ಖಾನ್ (Salim Khan) ಅವರಿಗೆ ಬುರ್ಖಾಧಾರಿ ಮಹಿಳೆ ಹಾಗೂ ವ್ಯಕ್ತಿಯೊಬ್ಬನಿಂದ ಜೀವ ಬೆದರಿಕೆ ಬಂದಿರುವ ಘಟನೆ ನಡೆದಿರುವುದು ವರದಿಯಾಗಿದೆ. ಇತ್ತೀಚೆಗಷ್ಟೇ ಸಲ್ಮಾನ್‌ ಖಾನ್‌ ಅವರ ನಿವಾಸದ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿದ್ದರು. ಈ ಘಟನೆ ಕುಖ್ಯಾತ ಗ್ಯಾಂಗ್‌ ಸ್ಟರ್‌ ಲಾರೆನ್ಸ್ ಬಿಷ್ಣೋಯ್‍ಗೆ (Lawrence Bishnoi) ಅವರ ಸೂಚನೆಯ ಮೇರೆಗೆ ನಡೆದಿತ್ತು. ಸಲ್ಮಾನ್ ಖಾನ್ ಅವರ ತಂದೆ …

Read More »

ಧರ್ಮಸ್ಥಳ ಸಂಘದಿಂದ ಕಿರುಕುಳ ಆರೋಪ: ಸಾಲದ ಕಂತು ಕಟ್ಟಲಾಗದೇ ರೈತ ಮಹಿಳೆ ಸಾವು

ಮಂಡ್ಯ, ಸೆಪ್ಟೆಂಬರ್‌ 19: ಸಂಘದ ಸಾಲದ ಕಂತು ಕಟ್ಟಲಾಗದೇ ರೈತ ಮಹಿಳೆ ಸಾವಿಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮಲಿಯೂರು ಗ್ರಾಮದಲ್ಲಿ ನಡೆದಿದೆ. ಮಲಿಯೂರು ಗ್ರಾಮದ ಮಹಾಲಕ್ಷ್ಮೀ (38) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಧರ್ಮಸ್ಥಳ ಸಂಘದ ಸಾಲದ ಕಂತು ಕಟ್ಟಲಾಗದೇ ಕಿರುಕುಳ ತಾಳಲಾರದೇ ಮಹಿಳೆ ಸಾವಿಗೆ ಶರಣಾದ ಆರೋಪ ಕೇಳಿಬಂದಿದೆ.   ಮಲಿಯೂರು ಗ್ರಾಮದ ಮಹಾಲಕ್ಷ್ಮೀ ಕೆಲವು ಸಮಯದ ಹಿಂದೆ ಧರ್ಮಸ್ಥಳ ಸಂಘದಲ್ಲಿ …

Read More »

ಒಂದು ದೇಶ, ಒಂದು ಚುನಾವಣೆ’ ವ್ಯವಸ್ಥೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ : ಸಿಎಂ

ಬೆಂಗಳೂರು : ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಆಡಳಿತಾರೂಢ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ ‘ಒಂದು ದೇಶ ಒಂದು ಚುನಾವಣೆ’ ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ”ಒಂದು ದೇಶ ಒಂದು ಚುನಾವಣೆ” ಯ ವ್ಯವಸ್ಥೆಗೆ ವಿರುದ್ಧವಾಗಿದೆ. ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ …

Read More »

ನಾಡಹಬ್ಬದಲ್ಲಿ ಈ ಬಾರಿಯೂ ಅಧಿಕಾರಿಗಳದ್ದೇ ‘ದರ್ಬಾರ್‌’

ಮೈಸೂರು: ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಈ ಬಾರಿಯೂ ಅಧಿಕಾರಿಗಳದ್ದೇ ‘ದರ್ಬಾರ್‌’ ನಡೆಯುತ್ತಿದೆ. ಉಪ ಸಮಿತಿಗಳಿಗೆ ಅಧಿಕಾರೇತರರ ನೇಮಕ, ಭಾಗಿದಾರರು ಅಥವಾ ಸಾರ್ವಜನಿಕರ ಸಲಹೆಗಳನ್ನು ಆಲಿಸಿ ಸಹಭಾಗಿತ್ವ ಪಡೆದುಕೊಳ್ಳುವ ಕಾರ್ಯ ಈವರೆಗೂ ನಡೆದಿಲ್ಲ. ಮಹೋತ್ಸವಕ್ಕೆ ಅ.3ರಂದು ಚಾಲನೆ ದೊರೆಯಲಿದ್ದು, ಬಹಳ ದಿನಗಳೇನೂ ಉಳಿದಿಲ್ಲ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲ ಕಾರ್ಯಕ್ರಮಗಳ ರೂಪರೇಷೆಯ ಸ್ಪಷ್ಟ ಚಿತ್ರಣ ದೊರೆಯಬೇಕು. ಹೊರ ಜಿಲ್ಲೆ, ಹೊರ ರಾಜ್ಯ ಮತ್ತು ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ನಡೆಯುವ ಉತ್ಸವವನ್ನು ರೂಪಿಸುವಲ್ಲಿ …

Read More »

ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಪಾಪಿ ಪತಿ.!

ಕೊಪ್ಪಳ : ಪಾಪಿ ಪತಿಯೋರ್ವ ಗರ್ಭಿಣಿ ಪತ್ನಿಯನ್ನು ಕೊಂದು ಬಾವಿಗೆ ಎಸೆದ ಘಟನೆ ಕೊಪ್ಪಳದ ತಾಳಕನಪೂರದಲ್ಲಿ ನಡೆದಿದೆ. ಸಂಗೀತಾ ಎಂಬ ಮಹಿಳೆ ಕೊಲೆಯಾಗಿದ್ದು, ಪತಿ ಬಾಬು ಎಂಬಾತ ಈ ಕೃತ್ಯ ಎಸಗಿದ್ದಾನೆ. 4 ತಿಂಗಳ ಗರ್ಭಿಣಿಯಾಗಿದ್ದ ಪತ್ನಿ ಸಂಗೀತಾಳನ್ನು ಬಾಬು ಜಮೀನಿಗೆ ಕರೆದೊಯ್ದು ಕೊಲೆ ಮಾಡಿ ನಂತರ ಬಾವಿಗೆ ಎಸೆದಿದ್ದಾನೆ. ಕೊಳೆದ ಸ್ಥಿತಿಯಲ್ಲಿ ಸಂಗೀತಾಳ ಮೃತದೇಹ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Read More »

ಕೊಳ್ಳೇಗಾಲ: ನಕ್ಷತ್ರ ಆಮೆ ಸಾಗಾಟ ಮಾಡುತ್ತಿದ್ದ ಮೂವರ ಬಂಧನ

ಚಾಮರಾಜನಗರ, ಸೆಪ್ಟೆಂಬರ್, 19: ಇತ್ತೀಚೆಗಷ್ಟೇ ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳ ಬಂಧಿಸಿತ್ತು. ಇದೀಗ ಮತ್ತೆ ಮುಡಿಗುಂಡದ ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ ಜೀವಂತ ನಕ್ಷತ್ರ ಆಮೆಗಳನ್ನು ಸಾಗಣೆ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ.   ಚಾಮರಾಜನಗರ ತಾಲ್ಲೂಕು ಕುಳ್ಳೂರು ಗ್ರಾಮದ ಮಾದೇಶ್, ತಮಿಳುನಾಡಿನ ಸತ್ತಿ ತಾಲ್ಲೂಕಿನ ಕಾನಗೆರೆ …

Read More »

ಕನ್ನಡ ಸಾಹಿತ್ಯ ಪರಿಷತ್ತಿನ ಎಡವಟ್ಟು: ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿ ಆಯ್ಕೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಗರಿ ಮಂಡ್ಯ ಜಿಲ್ಲೆ ಸಿದ್ಧವಾಗುತ್ತಿರುವ ಹೊತ್ತಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಎಡವಟ್ಟೊಂದನ್ನು ಮಾಡಿದೆ. ತಾಲೂಕು ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಕೊಲೆ ಆರೋಪಿಯನ್ನು ಆಯ್ಕೆ ಮಾಡಿದ್ದು, ವಿವಾದಕ್ಕೆ ಕಾರಣವಾಗಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರನ್ನಾಗಿ ಎಂ.ಬಿ.ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಆದರೆ ಎಂ.ಬಿ.ಕುಮಾರ್ ವಿರುದ್ಧ ಕೊಲೆ ಆರೋಪವಿದೆ. ರೌಡಿಶೀಟರ್ ದೀಪು ಎಂಬಾತನ ಕೊಲೆ ಕೇಸ್ …

Read More »

ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ

ರಾಜ್ಯದಲ್ಲಿ ಡ್ರಗ್ಸ್ ದಂಧೆ ಹತೋಟಿಗೆ : ನೋವು ನಿವಾರಕ ಮಾತ್ರೆಗಳದೇ ಆತಂಕ : ಗೃಹ ಸಚಿವ ಪರಮೇಶ್ವರ ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ …

Read More »

ಬೀದರ್‌ | ಲೋಕ ಅದಾಲತ್‌ನಲ್ಲಿ 17,476 ಪ್ರಕರಣ ಇತ್ಯರ್ಥ, ₹7.98 ಕೋಟಿ ಪರಿಹಾರ

ಬೀದರ್‌: ‘ಸೆ. 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಟ್ಟು 17,476 ಪ್ರಕರಣಗಳನ್ನು ಇತ್ಯರ್ಥಗೊಳಿಸಿದ್ದು, ₹7.98 ಕೋಟಿ ಪರಿಹಾರ ಕಕ್ಷಿದಾರರಿಗೆ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಎ.ಬನಸೋಡೆ ತಿಳಿಸಿದರು.   ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು ಪ್ರಕರಣಗಳಲ್ಲಿ 6,788 ಪೆಂಡಿಂಗ್‌ ಪ್ರಕರಣಗಳಿದ್ದವು. ಜಿಲ್ಲೆಯಾದ್ಯಂತ ಒಟ್ಟು 10,688 ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ₹54.75 …

Read More »

HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ.!

ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 …

Read More »