Breaking News

ರಾಷ್ಟ್ರೀಯ

ಪ್ರಿಯತಮೆಗೆ ಪ್ರೇಮ ನಿವೇದನೆ ಮಾಡಲು 2.5 ಕಿ.ಮೀ ರಸ್ತೆ ಪೂರ್ತಿ ‘I Love You, I Miss You’ ಎಂದು ಬರೆದ ಪಾಗಲ್ ಪ್ರೇಮಿ

ಕೊಲ್ಹಾಪುರ: ಸಣ್ಣ ಪುಟ್ಟ ವಿಚಾರಗಳಿಂದ ಸಂಗಾತಿಯನ್ನು ಸೆಳೆಯುವುದು ಅಥವಾ ಪ್ರೀತಿಯನ್ನು ವಿಶೇಷವಾಗಿ ಹೇಳುವ ಮೂಲಕ ಸಂಗಾತಿಯ ಮುಖದಲ್ಲಿ ಮಂದಹಾಸವನ್ನು ತರಿಸಲು ಪರದಾಡುವ ಪ್ರೇಮಿಗಳನ್ನು ನಾವು ನೋಡಿದ್ದೇವೆ. ಆದರೆ ಮಹಾರಾಷ್ಟ್ರದ ಕೊಲ್ಲಾಪುರದ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಬಗ್ಗೆ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಹೋಗಿ ವ್ಯಕ್ತಿಯೊಬ್ಬ ಸಿನಿಮಾದಲ್ಲಿ ಮಾಡುವಂತೆ ಮಾಡಿದ್ದಾನೆ. ಶಿರೋಲ್ ತಾಲೂಕಿನ ಧರಂಗುಟಿ ಗ್ರಾಮದ ಅಪರಿಚಿತ ವ್ಯಕ್ತಿಯೊಬ್ಬ ಗ್ರಾಮದ ಮುಖ್ಯ ರಸ್ತೆಯಲ್ಲಿ 2.5 ಕಿ.ಮೀ.ದೂರದವರೆಗೆ ಪೈಂಟ್ ನಿಂದ ‘ಐ ಲವ್ ಯೂ’ …

Read More »

1-5 ಶಾಲೆಗಳ ಪ್ರಾರಂಭಕ್ಕೆ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು.?

ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಮಕ್ಕಳ ಹಿತದೃಷ್ಟಿಯಿಂದ ಕೈಗೊಂಡಿರುವ ಈ ನಿರ್ಧಾರವನ್ನು ಖಾಸಗಿ ಶಾಲೆಗಳೂ ಅನುಸರಿಸಬೇಕು ಎಂದು ಹೇಳಿದ್ದಾರೆ. …

Read More »

ಸತತ ಎರಡನೇ ದಿನ ಪೆಟ್ರೋಲ್ ಡೀಸೆಲ್ ದರದಲ್ಲಿ ಇಳಿಕೆ

ನವದೆಹಲಿ: ಸತತ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರಎರಡು ದಿನಗಳಿಂದ ಇಳಿದು ಮುಖದಲ್ಲಿ ಸಾಗುತ್ತಿದ್ದು, ಇಂದು ಕೂಡ ದರದಲ್ಲಿ ಇಳಿಕೆ ಕಂಡಿದೆ. ಪೆಟ್ರೋಲ್ ದರ 21 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 20 ಪೈಸೆ ಇಳಿಕೆಯಾಗಿದೆ. ಫೆಬ್ರವರಿ ತಿಂಗಳ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಇಂದು …

Read More »

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ನಾಯಕರ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಬೆಳಗಾವಿ ಉಪಚುನಾವಣಾ ಅಖಾಡ ರಂಗೇರುತ್ತಿದ್ದು, ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಂದಾನಗರಿ ಬೆಳಗಾವಿಗೆ ಆಗಮಿಸಲಿದ್ದಾರೆ. ಮರುದಿನ, ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಮಾರ್ಚ್ 28ರಿಂದ ಉತ್ತರ ಕರ್ನಾಟ ಭಾಗದಲ್ಲಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ರಾಯಚೂರು ಹಾಗೂ …

Read More »

ಕಲ್ಲು ಕ್ವಾರಿಗಳ ಮೇಲೆ ಗಣಿ ಇಲಾಖೆ, ಪರಿಸರ ಇಲಾಖೆ ಸರ್ಜಿಕಲ್ ಸ್ಟ್ರೈಕ್

ಗೋಕಾಕ: ಬೆಳಗಾವಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಚಿಕ್ಕೋಡಿ ಪರಿಸರ ಇಲಾಖೆಯ ಅಧಿಕಾರಿಗಳು ಉಪ ನಿರ್ದೇಶಕಿ ಶ್ರೀ ಬಿಂದನ ಪಾಟೀಲ್ ರವರ ಮಾರ್ಗದರ್ಶನದಲ್ಲಿ ಜಿಲ್ಲೆಯ ಗೋಕಾಕ್ ನ ಬಿಲಕುಂದಿ ಗ್ರಾಮದಲ್ಲಿರುವ ಕಲ್ಲು ಕ್ರಷರ್ ಗಳಿಗೆ ಭೇಟಿಕೊಟ್ಟು ನಿಯಮಗಳನ್ನು ಉಲ್ಲಂಘನೆ ಮಾಡಿರುವ 5 ಕಲ್ಲು ಕ್ವಾರಿ ಗಳನ್ನು ಸೀಜ್ ಮಾಡಲಾಯಿತು. ಶಿವಮೊಗ್ಗದಲ್ಲಿ ಆದ ಘಟನೆಯಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪರಿಸರ ಇಲಾಖೆ …

Read More »

ಬಸವಕಲ್ಯಾಣ ಅಭ್ಯರ್ಥಿಯಾಗಲು ಬಿಜೆಪಿಗೆ ಟಿಕೆಟ್ ಆಕಾಂಕ್ಷಿಯಿಂದ ದೊಡ್ಡ ಮಟ್ಟದ ಹಣ ಸಂದಾಯ: HDK

ಕಲಬುರಗಿ: ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಬಿಜೆಪಿ ಟಿಕೆಟ್ ಆಕಾಂಕ್ಷಿಯೋರ್ವ ನಾಯಕರಿಗೆ ದೊಡ್ಡ ಮಟ್ಟದ ಹಣ ಸಂದಾಯ ಮಾಡಿದ್ದಾರೆ‌. ಗಾಬರಿಯಾಗುವ ಮೊತ್ತವನ್ನು ಆ ಆಕಾಂಕ್ಷಿ ನೀಡಿದ್ದಾರೆ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣ ಸಂದಾಯವಾದ ಹಿನ್ನೆಲೆಯಲ್ಲಿ ಬಿಜೆಪಿ ಇನ್ನೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ರಾಜ್ಯದ ಹಣ ಲೂಟಿ ಮಾಡಿ ಬಿಜೆಪಿ ಚುನಾವಣೆ ಎದುರಿಸುತ್ತಿದೆ ಎಂದು ದೂರಿದರು. ಬಿಜೆಪಿಯವರು ಯಾರನ್ನ ನೆಮ್ಮದಿಯಿಂದ ಬದುಕಲು …

Read More »

ಹೃದಯ ಕರಗಿಸುತ್ತದೆ ‘ವಿಶೇಷ’ ಮಕ್ಕಳೊಂದಿಗೆ ಸಲ್ಮಾನ್ ಖಾನ್ ಮಾಡಿದ ನೃತ್ಯ

ಮಕ್ಕಳ ಎದುರು ಮಗುವಾಗಿಬಿಡುತ್ತಾರೆ ಸಲ್ಮಾನ್ ಖಾನ್. ಮಕ್ಕಳೊಂದಿಗೆ ಸಲ್ಮಾನ್ ಆಟವಾಡುತ್ತಿರುವ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಲಭ್ಯವಿವೆ. ಸಲ್ಮಾನ್ ಖಾನ್ ಇತ್ತೀಚೆಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪ್ರಕಟಿಸಿದ್ದು ವಿಡಿಯೋದಲ್ಲಿ ‘ವಿಶೇಷ’ ಮಕ್ಕಳೊಂದಿಗೆ ಸಲ್ಮಾನ್ ಖಾನ್ ನೃತ್ಯ ಮಾಡುತ್ತಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ. ಸಲ್ಮಾನ್ ಖಾನ್‌ರ ಆಪ್ತ ನಟಿ, ರಾಜಕಾರಣಿ ಬಿನಾ ಕಾಕ್ ಸ್ಥಾಪಿಸಿರುವ ವಿಶೇಷ ಮಕ್ಕಳ ಶಾಲೆ ಉಮಂಗ್ ಗೆ ಇತ್ತೀಚೆಗೆ ಭೇಟಿ ನೀಡಿದ್ದ …

Read More »

ರೌಡಿಯಲ್ಲ ಕ್ರಿಮಿನಲ್ ಅಲ್ಲ ಆದರೂ ಭೀಕರ ಹತ್ಯೆ

ಆತ ಆ ಏರಿಯಾದ ಯುವಕರಿಗೆಲ್ಲಾ ಅಚ್ಚು ಮೆಚ್ಚಿನ ಗೆಳೆಯ. ಮಾಡೊಕೆ ಕೆಲಸ ಇಲ್ಲ ಅಂದ್ರು, ಹುಡುಗರ ಜೊತೆ ಸೇರಿ ಓಡಾಡ್ಕೊಂಡು ಎಣ್ಣೆ ಪಾರ್ಟಿ ಮಾಡ್ಕೊಂಡು ಆರಾಮಾಗಿದ್ದ. ಆದರೆ, ಇತ್ತಿಚಿಗೆ ಅವೆಲ್ಲ ಬಿಟ್ಟು ಸೈಲೆಂಟ್ ಆಗಲು ನಿರ್ಧರಿಸಿದ್ದ. ಹೀಗಂತ ಎಲ್ಲಾ ಬಿಟ್ಟವನು ಇಂದು ಬೆಳಿಗ್ಗೆ ತನ್ನ ಪ್ರಾಣವನ್ನೇ ಬಿಟ್ಟಿದ್ದಾನೆ. ಅದು ದುಷ್ಕರ್ಮಿಗಳ ಸ್ಕೆಚ್​ಗೆ ಕೊಲೆಯಾಗಿದ್ದಾನೆ. ನಗರದಲ್ಲಿ ಭೀಕರವಾಗಿ ಹತ್ಯೆಯಾಗಿದೆ. ಮುಖ ಮೂತಿ ನೋಡದೆ ಮಚ್ಚೇಟು ನೀಡಿ ಎಸ್ಕೇಪ್ ಆಗಿದ್ದಾರೆ. ಮಂಜುನಾಥ್ ಅಲಿಯಾಸ್ …

Read More »

ಅಹೋರಾತ್ರನ ವಿರುದ್ಧ ಗುಡುಗಿದ ಸುನೀಲ್ ಕುರಿಬಾಂಡ್

ಕನ್ನಡ ನಟ ಕಿಚ್ಚ ಸುದೀಪ್ ಅವರ ಬಗ್ಗೆ ವೈಯಕ್ತಿಕವಾಗಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬರಹಗಾರ ಅಹೋರಾತ್ರ ವಿರುದ್ಧ ಸುನೀಲ್ ಕುರಿಬಾಂಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಹೋರಾತ್ರ ಮತ್ತು ಸುದೀಪ್ ಅಭಿಮಾನಿಗಳ ನಡುವಿನ ವಾಗ್ವಾದಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಿರುವ ಸುನೀಲ್ ಕುರಿಬಾಂಡ್, ಅಹೋರಾತ್ರರ ವಿರುದ್ಧ ಕಿಡಿಕಾರಿದ್ದಾರೆ. ’25 ವರ್ಷದಿಂದ ಚಿತ್ರಜಗತ್ತಿನಲ್ಲಿ ಕಲಾಸೇವೆ ಮಾಡಿಕೊಂಡು ಬಂದಿರುವ ಒಬ್ಬ ಮೇರು ಕಲಾವಿದನ ಬಗ್ಗೆ ಏಕವಚನದಲ್ಲಿ ಹೀಯಾಳಿಸುವುದು ಸರಿಯಲ್ಲ, ನಿನಗೆ ತಾಕತ್ ಇದ್ದರೆ, ಧೈರ್ಯ ಇದ್ದರೆ …

Read More »

ಪ್ರಕರಣ ದಾಖಲಿಸಿರುವುದಕ್ಕೆ ಹೆದರುವುದಿಲ್ಲ, ಮಸೂದೆ ಹಿಂಪಡೆಯದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ: ರಾಕೇಶ್ ಟಿಕಾಯತ್

ಬೆಂಗಳೂರು: ನನ್ನ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಹೆದರುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಮಸೂದೆಗಳನ್ನು ರದ್ದುಪಡಿಸಿದರೆ ಮಾತ್ರ ಪ್ರತಿಭಟನೆ ಕೈಬಿಡುತ್ತೇವೆಂದು ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಸಿಂಗ್ ಟಿಕಾಯತ್ ಹೇಳಿದ್ದಾರೆ. ದೆಹಲಿ ರೀತಿ ಬೆಂಗಳೂರನ್ನು ಮುತ್ತಿಗೆ ಹಾಕುವಂತೆ ಕರೆ ನೀಡಿದ ಹಿನ್ನೆಲೆಯಲ್ಲಿ ಟಿಕಾಯತ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಟಿಕಾಯತ್, ದೂರಿಗೆ ಹೆದರುವುದಿಲ್ಲ. ಕೇಂದ್ರ ಸರ್ಕಾರ ಜಾರಿಗೆ …

Read More »