Breaking News

ರಾಷ್ಟ್ರೀಯ

ಹೈಕೋರ್ಟ್‌ಗೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ಅಧಿಸೂಚನೆ

ನವದೆಹಲಿ, ಮಾ.25- ಕರ್ನಾಟಕ ಉಚ್ಛ ನ್ಯಾಯಾಲಯಕ್ಕೆ ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಇಬ್ಬರು ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ದೇಶದ 25 ಹೈಕೋರ್ಟ್‍ಗಳಲ್ಲಿ 1080 ನ್ಯಾಯಮೂರ್ತಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, 419 ನ್ಯಾಯಮೂರ್ತಿಗಳ ಹುದ್ದೆ ಖಾಲಿ ಇತ್ತು. ಇದೀಗ ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ಎಲ್ಲಾ ಹುದ್ದೆಗಳು ಭರ್ತಿಯಾಗಿವೆ. ಅಲಹಬಾದ್ ಹೈಕೋರ್ಟ್‍ಗೆ 40 ಹೆಚ್ಚುವರಿ ನ್ಯಾಯಮೂರ್ತಿಗಳ ನೇಮಕದಿಂದ ನ್ಯಾಯಾಧೀಶರ …

Read More »

ಇನ್ಮುಂದೆ ‘ಸರ್ಕಾರಿ ನೌಕರ’ರಿಗೆ ವಾರದಲ್ಲಿ 4 ದಿನ ಕೆಲಸ ‘3 ದಿನ’ ರಜೆ.?

ನವದೆಹಲಿ : ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ನೌಕರರ ಕೆಲಸದ ನಿಯಮದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಮುಂದುವರೆದ ಭಾಗವಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಇನ್ಮುಂದೆ ವಾರದಲ್ಲಿ 4 ದಿನ ಮಾತ್ರ ಕೆಲಸ ಮಾಡಿ, ಮೂರು ದಿನ ರಜೆ ನೀಡಲಾಗುತ್ತದೆ ಎಂಬುದಾಗಿ ಹೇಳಲಾಗುತ್ತಿದೆ. ಇಂತಹ ಊಹಾಪೋಹಳಿಗೆ ಕೇಂದ್ರ ಕಾರ್ಮಿಕ ಸಚಿವರು ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಏನ್ ಉತ್ತರಿಸಿದ್ದಾರೆ ಎನ್ನುವ ಬಗ್ಗೆ ಮುಂದೆ ಓದಿ.. ದೇಶದಲ್ಲಿ ಕೆಲವು ದಿನಗಳಿಂದ, ಮುಂಬರುವ …

Read More »

ದರ್ಶನ್‌-ಸುದೀಪ್‌ ಒಂದಾಗಬೇಕು: ಸೋಶಿಯಲ್‌ ಮೀಡಿಯಾದಲ್ಲಿ ಅಭಿಮಾನಿಗಳ ಅಭಿಯಾನ

ನಟ ದರ್ಶನ್‌ ಹಾಗೂ ಸುದೀಪ್‌ ಒಂದು ಸಮಯದಲ್ಲಿ ಕುಚುಕು ಗೆಳೆಯರಾಗಿದಿದ್ದು ನಿಮಗೆ ಗೊತ್ತೇ ಇದೆ. ಆ ನಂತರ ಇಬ್ಬರ ನಡುವೆ ಮುನಿಸು ಬಂದು ಈಗ ದೂರವಾಗಿದ್ದಾರೆ. ಆದರೆ, ಈಗ ಅವರ ಅಭಿಮಾನಿಗಳು ಅವರಿಬ್ಬರು ಮತ್ತೆ ಒಂದಾಗ ಬೇಕೆಂದು ಬಯಸಿದ್ದಾರೆ. ಇದರ ಪರಿಣಾಮವಾಗಿ ಅಭಿಮಾನಿಗಳು ಟ್ವೀಟರ್‌ನಲ್ಲಿ ಒಂದು ಅಭಿಯಾನ ವನ್ನೇ ಆರಂಭಿಸಿದ್ದಾರೆ. #DbossKicchaComeTogether ಅಭಿಯಾನದಡಿ ಅವರ ಅಭಿಮಾನಿಗಳು ಟ್ವೀಟ್‌ ಮಾಡಿದ್ದಾರೆ. ಜೊತೆಗೆ ದರ್ಶನ್‌ ಸುದೀಪ್‌ ಜೊತೆಗಿರುವ ಸಿಡಿಪಿಯೊಂದನ್ನು ಕೂಡಾ ಬಿಡುಗಡೆ ಮಾಡಿದ್ದಾರೆ. …

Read More »

ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ನಾಳೆ `ಭಾರತ್ ಬಂದ್’ ಗೆ ಕರೆ

ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ತಮ್ಮ ಆಂದೋಲನವನ್ನು ತೀವ್ರಗೊಳಿಸಿರುವ ರೈತ ಸಂಘಟನೆಗಳು ಮಾರ್ಚ್ 26 ರ ನಾಳೆ ಸಂಪೂರ್ಣ ಭಾರತ್ ಬಂದ್ ಗೆ ಕರೆ ನೀಡಿವೆ. ‘ 40 ರೈತ ಸಂಘಗಳ ಸಂಯುಕ್ತ ಕಿಸಾನ್ ಮೋರ್ಚಾ ಭಾರತ್ ಬಂದ್ ಗೆ ಕರೆ ನೀಡಿದ್ದು, ಕಾರ್ಮಿಕ ಸಂಘಗಳು, ಸಾರಿಗೆ ಮತ್ತು ಚಿಲ್ಲರೆ ವ್ಯಾಪಾರಿಗಳ ಸಂಘಗಳು ಮತ್ತು ಇತರೆ ಸಾಮೂಹಿಕ ಸಂಸ್ಥೆಗಳು ಭಾರತ್ ಬಂದ್ …

Read More »

ಗೋಕಾಕ: ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸುತ್ತಿರುವುದು.

ಗೋಕಾಕ: ಎಲ್ಲ ಕ್ಷೇತ್ರಗಳಲ್ಲಿಯೂ ಇಂದು ಮಹಿಳೆ ಮಾದರಿಯಾಗಿ ಕಾರ್ಯ ನಿರ್ವಹಿಸುತ್ತಾ ಅಬಲಿ ಎಂಬ ಸ್ಥಿತಿ ಮೀರಿ ಸಾಧನೆಯತ್ತ ದಾಪುಗಾಲು ಹಾಕುತ್ತಿದ್ದಾಳೆ ಎಂದು ಡಾ: ದೀಪಾ ತುಬಾಕಿ ಹೇಳಿದರು. ಬುಧವಾರದಂದು ನಗರದಲ್ಲಿ ಭಾವಯಾನ ವೇದಿಕೆಯವರು ಹಮ್ಮಿಕೊಂಡ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಾ ಕುಟುಂಬ ಮತ್ತು ವೃತ್ತಿ ನಿಭಾಯಿಸುತ್ತಾ ಮಹಿಳೆ ಸಾಧನೆಯತ್ತ ಮುನ್ನಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ: ಜ್ಯೋತಿಲಕ್ಷ್ಮೀ ವಾಲಿ, ಡಾ: ವಿಜಯಲಕ್ಷ್ಮೀ ಪಲೋಟಿ, …

Read More »

ಗೋಕಾಕ: ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು.

ಗೋಕಾಕ: ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ವಿಘ್ನಹಾರ ಪಾಟೀಲ, ಸಚೀನಗೌಡ, ರಾಕೇಶ ಕೊಳದುರ್ಗಿ ಇವರು ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮುಕ್ತ ಕರಾಟೆ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪ್ರಾಯೋಗಿಕ ವಿಭಾಗದಲ್ಲಿ ಚಿನ್ನ, ಲಿಖಿತ ವಿಭಾಗದಲ್ಲಿ ಬೆಳ್ಳಿಯ ಪದಕಗಳನ್ನು ಪಡೆಯುವ ಮೂಲಕ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಚೇರಮನ್ ಲಖನ ಜಾರಕಿಹೊಳಿ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯಿನಿ ಸಿ.ಬಿ.ಪಾಗದ, ತರಬೇತಿದಾರ ಅಮೃತ ಕದ್ದು ಸೇರಿದಂತೆ …

Read More »

ಮಸ್ಕಿ ಉಪ ಚುನಾವಣೆ; ಪ್ರತಾಪ್ ಗೌಡ ಪಾಟೀಲ್ ನಾಮಪತ್ರ

ರಾಯಚೂರು, ಮಾರ್ಚ್ 24: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಘೋಷಣೆಯಾಗಿದೆ. ಪ್ರತಾಪ್ ಗೌಡ ಪಾಟೀಲ್ ಬುಧವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಬಿಜೆಪಿ ಇನ್ನೂ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡಿಲ್ಲ. ಬುಧವಾರ ಪ್ರತಾಪ್ ಗೌಡ ಪಾಟೀಲ್ ಅಂಕಲಿಮಠಕ್ಕೆ ಭೇಟಿ ನೀಡಿದರು. ಗಚ್ಚಿನಮಠಕ್ಕೆ ಭೇಟಿ ಕೊಟ್ಟರು. ಬಳಿಕ ಬಿಜೆಪಿ ಕಚೇರಿಗೆ ಆಗಮಿಸಿದರು. ಅಲ್ಲಿಂದ ಕಾರ್ಯಕರ್ತರ ಜೊತೆ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಗೆ ಬಂದರು.   ಚುನಾವಣಾಧಿಕಾರಿ ಹಾಗೂ …

Read More »

ಸಿ.ಡಿ. ಪ್ರಕರಣ: ಕಾರು ಚಾಲಕನ ಸಮೇತ ಉದ್ಯಮಿ ನಾಪತ್ತೆ

ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ. ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ಮಾಡುತ್ತಿದ್ದಂತೆ ಗ್ರಾನೈಟ್ ಉದ್ಯಮಿ ಶಿವಕುಮಾರ್ ಕಾರು ಚಾಲಕನ ಸಮೇತ ನಾಪತ್ತೆಯಾಗಿದ್ದಾರೆ. ಸಿ.ಡಿ ಸೃಷ್ಟಿಸಿದ್ದ ಆರೋಪಿಗಳಿಗೆ ನೆರವು ನೀಡಿದ್ದ ಮಾಹಿತಿ ಮೇರೆಗೆ ಎಸ್‌ಐಟಿ ಅಧಿಕಾರಿಗಳು, ಜೆ.ಪಿ.ನಗರದಲ್ಲಿರುವ ಶಿವಕುಮಾರ್ ಮನೆ ಮೇಲೆ ಇತ್ತೀಚೆಗೆ ದಾಳಿ ಮಾಡಿದ್ದರು. ಕೆಲ ದಾಖಲೆಗಳನ್ನೂ ಜಪ್ತಿ ಮಾಡಿದ್ದರು. ಅದಾದ ಮರುದಿನದಿಂದಲೇ ಶಿವಕುಮಾರ್ ಹಾಗೂ ಅವರ …

Read More »

45+ ಎಲ್ಲರಿಗೂ ಲಸಿಕೆ : ಎ. 1ರಿಂದಲೇ ಜಾರಿಗೆ ಕೇಂದ್ರ ಸಂಪುಟ ನಿರ್ಧಾರ

ಹೊಸದಿಲ್ಲಿ: ನಿಮಗೆ 45 ವರ್ಷ ತುಂಬಿದ್ದರೆ ಎ. 1ರಿಂದ ನೀವು ಕೂಡ ಕೊರೊನಾ ಲಸಿಕೆ ಹಾಕಿಸಿಕೊಳ್ಳಬಹುದು. ಇದು ಕೇಂದ್ರ ಸಚಿವ ಸಂಪುಟ ಸಭೆಯ ನಿರ್ಣಯ. ಇದುವರೆಗೆ 45 ವರ್ಷಕ್ಕಿಂತ ಮೇಲ್ಪಟ್ಟ ಇತರ ರೋಗಪೀಡಿತರು ಮಾತ್ರ ಲಸಿಕೆ ಪಡೆಯಬಹುದಾಗಿತ್ತು. ಆದರೆ ಲಸಿಕೆ ವ್ಯರ್ಥವಾಗುವುದನ್ನು ತಪ್ಪಿಸಲು ಮತ್ತು ಲಸಿಕೆಗೆ ಬೇಡಿಕೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ 45 ವರ್ಷ ತುಂಬಿದ ಆರೋಗ್ಯವಂತರಿಗೂ ಲಸಿಕೆ ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವ ಕೇಂದ್ರ ಸಚಿವ ಪ್ರಕಾಶ್‌ ಜಾಬ್ಡೇಕರ್‌ …

Read More »

ʼಕೊರೊನಾʼ ಲಾಕ್ ಡೌನ್ ನಂತ್ರದ ವೈಯಕ್ತಿಕ ಸಾಲ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಕೊರೊನಾದಿಂದ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಕುಸಿದಿದ್ದು, ಇದ್ರ ಮಧ್ಯೆ ವೈಯಕ್ತಿಕ ಸಾಲಗಳ ಬೇಡಿಕೆ ವೇಗವಾಗಿ ಹೆಚ್ಚುತ್ತಿದೆ. ಮುಂಬೈನಲ್ಲಿ ಶೇಕಡಾ 25ರಷ್ಟು ಜನರು ಸ್ವಂತ ಉದ್ಯಮವನ್ನು ಪ್ರಾರಂಭಿಸಲು ವೈಯಕ್ತಿಕ ಸಾಲವನ್ನು ತೆಗೆದುಕೊಂಡಿದ್ದಾರೆ. ಶೇಕಡಾ 17 ರಷ್ಟು ಜನರು ದ್ವಿಚಕ್ರ ವಾಹನ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ತೆಗೆದುಕೊಂಡಿದ್ದಾರೆ. ಮನೆಯಿಂದ ಕೆಲಸ ಮಾಡ್ತಿರುವ ಶೇಕಡಾ 15ರಷ್ಟು ಮಂದಿ ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳಂತಹ ಎಲೆಕ್ಟ್ರಾನಿಕ್ ಉಪಕರಣಗಳನ್ನು ಖರೀದಿಸಲು ಸಾಲ ಪಡೆದಿದ್ದಾರೆ. ಇಂಡಿಯಾ ಲ್ಯಾಂಡ್ಸ್ ಈ …

Read More »