ಬೆಳಗಾವಿ: ತಾಲ್ಲೂಕಿನ ಮುಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿತತದಿಂದ ಬಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಮುಚಂಡಿ ಗ್ರಾಮದ ಸಂತೋಷ ವಟಾರ್( 34) ಹಾಗೂ 10 ವರ್ಷದ ಬಾಲಕ ಗಾಯಗೊಂಡಿದ್ದಾರೆ. ನಗರದ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯ ಮುಖ, ತೊಡೆ ಕಣ್ಣು ಹಾಗೂ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿವೆ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.
Read More »ಬಿಜೆಪಿ ಶಾಸಕ ಮುನಿರತ್ನ ಜೈಲು:ಇಂದು ‘ಜಾಮೀನು ಅರ್ಜಿ’ ವಿಚಾರಣೆ
ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿದ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಎರಡು ದಿನಗಳ ಪೊಲೀಸ್ ಕಸ್ಟಡಿ ಮುಗಿದ ನಂತರ ಬೆಂಗಳೂರಿನ ಆರ್.ಆರ್.ನಗರದ ಶಾಸಕರನ್ನು ಶಾಸಕರು / ಸಂಸದರ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್ -82) ಹಾಜರುಪಡಿಸಲಾಯಿತು. ಏತನ್ಮಧ್ಯೆ, ಮುನಿರತ್ನ ಪರ ವಕೀಲರು ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ನ್ಯಾಯಾಲಯವು ಬುಧವಾರ …
Read More »ಬೆಳಗಾವಿಯಲ್ಲಿ ಗಣೇಶ ವಿಸರ್ಜನೆಗೆ ಭಾರಿ ಪೊಲೀಸ್ ಬಂದೊಬಸ್ತ.!!!
ಬೆಳಗಾವಿಯಲ್ಲಿ ಗಣೇಶ ವಿಸರ್ಜನೆಗೆ ಭಾರಿ ಪೊಲೀಸ್ ಬಂದೊಬಸ್ತ.!!! ಮಂಡ್ಯದ ನಾಗಮಂಗಲ ಕೋಮು ಗಲಭೆಯ ನಂತರ ಅಲರ್ಟ್ ಆದ ಖಾಕಿ. ಅಹಿತರ ಘಟನೆ ನಡೆಯದಂತೆ ಗಣೇಶ ವಿಸರ್ಜನೆಗೆ ಭಾರಿ ಬಂದೊಬಸ್ತ. ಬೆಳಗಾವಿಯಲ್ಲಿ ಇಂದು ನಡೆಯಲಿರುವ ಗಣೇಶ ವಿಸರ್ಜನಾ ಕಾರ್ಯಕ್ರಮ. 300 ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ವಿಗ್ರಹಗಳ ವಿಸರ್ಜನಾ ಕಾರ್ಯಕ್ರಮ. ಬೆಳಗಾವಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಬಿಗಿ ಬಂದೋಬಸ್ತ 7 ಎಸ್ಪಿ,31 ಡಿಎಸ್ಪಿ,110 ಸಿಪಿಐ,140 ಪಿಎಸ್ಐ,150 ಎಎಸ್ಐ,10 ಕೆ ಎಸ್ ಆರ್ …
Read More »ಜೋಕುಮಾರನ ಹಬ್ಬ: ಸಾಂಪ್ರದಾಯಿಕ ಆಚರಣೆ
ಉಪ್ಪಿನಬೆಟಗೇರಿ: ಗಣೇಶ ವಿಸರ್ಜನೆಯ ಮರುದಿನ ಜೋಕುಮಾರಸ್ವಾಮಿ ಅಷ್ಟಮಿಯ ಗಡಗಿಯೊಳಗೆ ಹುಟ್ಟುತ್ತಾನೆ. ಆತನ ಆಯುಷ್ಯ ಏಳು ದಿನ. ಆ ಏಳು ದಿನಗಳಲ್ಲಿ ಬಾಲ್ಯ, ಯೌವ್ವನ, ಸಾವು ಎಲ್ಲವೂ ಸಂಭವಿಸುತ್ತದೆ. ಉತ್ತರ ಕರ್ನಾಟಕ ಸೇರಿ ನಾಡಿನ ಹಲವು ಹಳ್ಳಿಗಳಲ್ಲಿ ಈ ಹಬ್ಬವನ್ನು ಸಾಂಪ್ರದಾಯಿಕವಾಗಿ ಇಂದಿಗೂ ಆಚರಿಸಲಾಗುತ್ತದೆ. ಬಡಿಗೇರ ಮನೆಯವರು ತಯಾರಿಸುವ ಜೋಕುಮಾರನ ಮಣ್ಣಿನ ಮೂರ್ತಿಯನ್ನು ಅಂಬಿಗೇರ ಮನೆತನದ ಮಹಿಳೆಯರು ಬಿದಿರಿನ ಬುಟ್ಟಿಯಲ್ಲಿ ಇಟ್ಟು ಬೇವಿನ ತಪ್ಪಲಿನಿಂದ ಸಿಂಗರಿಸುತ್ತಾರೆ. ಸುಣಗಾರ ಮನೆ ಮಹಿಳೆಯರು …
Read More »ಅಕ್ರಮ ಆಸ್ತಿ ಗಳಿಕೆ ಪ್ರಕರಣ : `DCM ಡಿ.ಕೆ.ಶಿವಕುಮಾರ್’ ಗೆ ಸುಪ್ರೀಂಕೋರ್ಟ್ ನಿಂದ ನೋಟಿಸ್!
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಇದಿಗ ಸುಪ್ರೀಂ ಕೋರ್ಟಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳು ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಹಾಗೂ ಲೋಕಾಯುಕ್ತಕ್ಕೆ …
Read More »ಪಿತೃ ಪಕ್ಷ 2024 ಯಾವಾಗ ಆರಂಭ? ಈ ಸಮಯದಲ್ಲಿ ಏನು ಮಾಡಬಾರದು? ದಿನಾಂಕ ಮರೆತು ಹೋದ್ರೆ ಏನು ಮಾಡಬೇಕು?
ಪಿತೃ ಪಕ್ಷ 2024 ಯಾವಾಗ ಆರಂಭ? ಈ ಸಮಯದಲ್ಲಿ ಏನು ಮಾಡಬಾರದು? ದಿನಾಂಕ ಮರೆತು ಹೋದ್ರೆ ಏನು ಮಾಡಬೇಕು? ಸನಾತನ ಧರ್ಮದಲ್ಲಿ ಪಿತೃ ಪಕ್ಷಕ್ಕೆ ವಿಶೇಷ ಮಹತ್ವವಿದೆ. ಈ ಸಮಯದಲ್ಲಿ ಜನರು ತಮ್ಮ ಪೂರ್ವಜರನ್ನು ನೆನಪಿಸಿಕೊಳ್ಳುತ್ತಾರೆ ಮತ್ತು ಅವರಿಗೆ ತಿಥಿ ಕಾರ್ಯವನ್ನು ಮಾಡುತ್ತಾರೆ. ವಾಸ್ತವವಾಗಿ, ಶ್ರಾದ್ಧ ಪಕ್ಷದ 16 ದಿನಗಳ ಅವಧಿಯಲ್ಲಿ, ಸತ್ತವರು ಭೂಮಿಗೆ ಬರುತ್ತಾರೆ ಮತ್ತು ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಶ್ರಾದ್ಧವನ್ನು ಮಾಡಿದರೆ ಅದು ಅವರ ಆತ್ಮಕ್ಕೆ ಶಾಂತಿಯನ್ನು …
Read More »ಪೋಕ್ಸೊ ಪ್ರಕರಣ: ಶಿಕ್ಷಕ ಅಮಾನತು
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಪೋಕ್ಸೊ ಪ್ರಕರಣದಡಿ ಬಂಧಿತನಾಗಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮೊಹಮ್ಮದ್ ಸಾದಿಕ್ ಮೀಯಾಬೇಗ್ (39) ಎಂಬುವನನ್ನು ಅಮಾನತು ಮಾಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಬಿ. ಎ. ಮೇಕನಮರಡಿ ತಿಳಿಸಿದ್ದಾರೆ. 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ಶಿಕ್ಷಕನನ್ನು ಚಿಕ್ಕೋಡಿ ಠಾಣೆ ಪೊಲೀಸರು ಬಂಧಿಸಿದ್ದರು.
Read More »ರಾಜಿ ಸಂಧಾನ: 27,376 ಪ್ರಕರಣಗಳು ಇತ್ಯರ್ಥ
ಬಾಗಲಕೋಟೆ: ಜಿಲ್ಲಾ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಬಾಕಿ ಇರುವ 27,376 ಪ್ರಕರಣಗಳನ್ನು ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲಾಯಿತು. ವಿವಿಧ ನ್ಯಾಯಾಲಯಗಳಲ್ಲಿನ 7,151 ಪೈಕಿ 4,819 ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ 24,107 ಪೈಕಿ 22,557 ಪ್ರಕರಣಗಳು ಇತ್ಯರ್ಥ ಮಾಡಲಾಯಿತು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎನ್.ವಿ.ವಿಜಯ ನೇತೃತ್ವದಲ್ಲಿ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ₹25.11 ಕೋಟಿ ಮೊತ್ತದ ಪ್ರಕರಣಗಳಿಗೆ …
Read More »ಗೃಹಲಕ್ಷ್ಮಿ’ ಯೋಜನೆ ನಿತ್ಯ, ನಿರಂತರ : 2 ತಿಂಗಳ ಬಾಕಿ ಹಣ ಒಂದೇ ಬಾರಿ ಅಕೌಂಟ್‌ಗೆ ಜಮೆ : ಸಚಿವೆ ಹೆಬ್ಬಾಳ್ಕರ್ ಹೇಳಿಕೆ
ಬೆಂಗಳೂರು : ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಉಳಿದ ಎರಡು ತಿಂಗಳ ಹಣ ಒಟ್ಟಿಗೆ ಖಾತೆಗೆ ಜಮೆಯಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ. ಇನ್ನು ಯೋಜನೆ ಸ್ಥಗಿತವಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಮ್ಮೆಗೆ ಖಾತೆ ಜಮೆ …
Read More »ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲು ಬೆಳಗಾವಿವರೆಗೆ ವಿಸ್ತರಿಸಲು ಕ್ರಮ: ಸೋಮಣ್ಣ
ಬೆಳಗಾವಿ: ‘ಪ್ರಯಾಣಿಕರ ಬೇಡಿಕೆಯಂತೆ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿನ ಸೇವೆಯನ್ನು ಬೆಳಗಾವಿವರೆಗೆ ವಿಸ್ತರಿಸಲು ಕ್ರಮ ವಹಿಸಲಾಗುವುದು’ ಎಂದು ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸಲು ರೈಲ್ವೆ ಅಧಿಕಾರಿಗಳು ಏನು ತಾಂತ್ರಿಕ ಕಾರಣ ಕೊಟ್ಟಿದ್ದಾರೆ ಗೊತ್ತಿಲ್ಲ. ಆಗ ನಾನು ಸಚಿವನಾಗಿರಲಿಲ್ಲ. ಹಳೆಯದ್ದನ್ನೇ ಕೆದಕಿ ಕೆಲಸ ಮಾಡಲಾಗುವುದಿಲ್ಲ. ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಆರಂಭಿಸುವ ಕುರಿತು …
Read More »