Breaking News

ರಾಷ್ಟ್ರೀಯ

ವಿಡಿಯೋದಲ್ಲಿರುವುದು ರಮೇಶ್‌ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಎಸ್‌ಐಟಿ ತನಿಖೆಗೆ ವಹಿಸಿರುವ ಸಿಡಿ ಪ್ರಕರಣದ ವಿಡಿಯೋದಲ್ಲಿರುವುದು ರಮೇಶ್‌ ಜಾರಕಿಹೊಳಿ ಹೌದೋ ಅಲ್ಲವೋ ಎಂಬುದಕ್ಕಿಂತ ಯಡಿಯೂರಪ್ಪ ಭ್ರಷ್ಟ ಎಂದು ಹೇಳಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ವಿಡಿಯೋದಲ್ಲಿ ಯಾರಿದ್ದಾರೆ ಎನ್ನುವುದಕ್ಕಿಂತ ಯಡಿಯೂರಪ್ಪ ಭ್ರಷ್ಟ, ಕನ್ನಡಿಗರು ಹಾಗೂ ಮಾಧ್ಯಮಗಳ ನಿಂದನೆ, ಬೆಳಗಾವಿ ಪ್ರತ್ಯೇಕ ರಾಜ್ಯ ಎಂದು ಹೇಳಿರುವುದು ಗಂಭೀರ ವಿಚಾರಗಳಾಗಿವೆ. ಇವುಗಳ ಬಗ್ಗೆ ಚರ್ಚೆ ಆಗಬೇಕು ಎಂದು …

Read More »

ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ : ಈ ತಿಂಗಳೊಳಗೆ ಪ್ರಯಾಣಿಕ ರೈಲುಗಳ ಸಂಚಾರ ಆರಂಭ

ನವದೆಹಲಿ: ಕೇಂದ್ರ ಸರ್ಕಾರ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಈ ತಿಂಗಳೊಳಗೆ ಶೇಕಡ 85ರಷ್ಟು ಪ್ರಯಾಣಿಕ ರೈಲುಗಳ ಕಾರ್ಯಾರಂಭ ಮಾಡಲಿವೆ ಎಂದು ರೈಲ್ವೆ ಸಚಿವ ಪೀಯೂಷ್‌ ಗೋಯಲ್‌ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಸದ್ಯ ಉಪನಗರ ರೈಲುಗಳ ಪೈಕಿ ಶೇಕಡ 95ರಷ್ಟು ರೈಲುಗಳು ಸಂಚಾರ ಆರಂಭಗೊಂಡಿದ್ದು, ಶೇ 75ರಷ್ಟು ಮೇಲ್‌ ಹಾಗೂ ಎಕ್ಸ್‌ಪ್ರೆಸ್‌ ರೈಲುಗಳು ಓಡಾಡುತ್ತಿವೆ. ಈ ಪ್ರಮಾಣವನ್ನ ಶೀಘ್ರವೇ ಶೇಕಡ 85ರಷ್ಟು ಹೆಚ್ಚಿಸಲಾಗುವುದು’ ಎಂದರು.  

Read More »

16 ವರ್ಷ ಮೇಲ್ಪಟ್ಟರೆ ಬಾಲಾರೋಪಿ ಅಲ್ಲ?

ನವದೆಹಲಿ: ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸುವ ಕಾಯ್ದೆ (ಪೋಸ್ಕೊ) ಅಡಿಯಲ್ಲಿ ವಯಸ್ಕ ಆರೋಪಿಯ ವಯೋಮಿತಿಯನ್ನು 18ರಿಂದ 16 ವರ್ಷಕ್ಕೆ ಇಳಿಸಬೇಕು ಎಂದು ಉನ್ನತಮಟ್ಟದ ಸಮಿತಿಯೊಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. 2017ರಲ್ಲಿ ಪೋಸ್ಕೊ ಅಡಿಯಲ್ಲಿ 32,608 ಪ್ರಕರಣಗಳು ದಾಖಲಾಗಿದ್ದವು. 2019ರಲ್ಲಿ ಈ ಪ್ರಮಾಣ 47,325ಕ್ಕೆ (ಶೇ. 45) ಏರಿಕೆ ಆಗಿದೆ. ಆದ್ದರಿಂದ ವಯೋಮಿತಿಯನ್ನು ಪುನರ್ ಪರಿಶೀಲಿಸುವ ಮತ್ತು ಸೈಬರ್ ಅಪರಾಧ ಎಸಗುವವರ ವಯಸ್ಸನ್ನು ಪುನರ್ ವಿಮಶಿಸಬೇಕಿದೆ ಎಂದು ಸಮಿತಿ ಶಿಫಾರಸು …

Read More »

ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ

ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ …

Read More »

ಸಹೋದರನ ಹಾದಿಯನ್ನೇ ಹಿಡಿದ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸಗೆ ಸೇರ್ಪಡೆ…

ನಟ, ರಾಜಕಾರಣಿ ಮಧು ಬಂಗಾರಪ್ಪ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಕೈಹಿಡಿದಿದ್ದಾರೆ. ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ. ಈ ನಡುವೆ ಸಹೋದರನ ಹಾದಿಯನ್ನೇ ಅಕ್ಕ ಗೀತಾ ಶಿವರಾಜ್ ಕುಮಾರ್ ಸಹ ಹಿಡಿಯಲಿದ್ದಾರೆ ಎನ್ನಲಾಗುತ್ತಿದೆ. ನಟ ಶಿವರಾಜ್ ಕುಮಾರ್ ಅವರ ಪತ್ನಿ, ಜೆಡಿಎಸ್ ಸದಸ್ಯೆ ಗೀತಾ ಶಿವರಾಜ್‌ ಕುಮಾರ್ ಅವರು ಸಹ ಕಾಂಗ್ರೆಸ್‌ಗೆ ಹೋಗಲಿದ್ದಾರೆ ಎನ್ನುವ ಸುದ್ದಿ ಬಲವಾಗಿ ಕೇಳಿ ಬರುತ್ತಿದೆ. ಸದಾಶಿವನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ …

Read More »

ಮಹಾರಾಷ್ಟ್ರದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ಕೊರೊನಾ; ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್​ ಒಂದೇ ರಾಜ್ಯದಲ್ಲಿ ದಾಖಲು

ಮಹಾರಾಷ್ಟ್ರ: ನೆರೆರಾಜ್ಯ ಮಹಾರಾಷ್ಟ್ರದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈಗಾಗಲೇ ದೇಶದ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಿದ್ದು, ರಾಜ್ಯದ ಜನತೆಯಲ್ಲಿ ಆತಂಕ ಮೂಡುವಂತಾಗಿದೆ. ಮೊನ್ನೆ ಸುಮಾರು13,000 ನಿನ್ನೆ ಸುಮಾರು 14,000 ಕೊರೊನಾ ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ. ದೇಶದ ಅರ್ಧಕ್ಕಿಂತ ಹೆಚ್ಚು ಕೇಸ್​ಗಳು ಇದೊಂದೇ ರಾಜ್ಯದಲ್ಲಿ ದಾಖಲಾಗಲು ಮೂರು ಮುಖ್ಯ ಕಾರಣಗಳನ್ನ ಆರೋಗ್ಯ ಇಲಾಖೆ ತಿಳಿಸಿದೆ. ಕಡಿಮೆ ಟೆಸ್ಟಿಂಗ್ :​- …

Read More »

ನಮ್ಮ ದೇಶದ ಸರ್ಕಾರಿ ಶಾಲಾ ಮಕ್ಕಳ ಟ್ಯಾಲೆಂಟ್ ಕಡಿಮೆ ಏನೂ ಇಲ್ಲ..!

ನಮ್ಮ ದೇಶದ ಸರ್ಕಾರಿ ಶಾಲಾ ಮಕ್ಕಳ ಟ್ಯಾಲೆಂಟ್ ಕಡಿಮೆ ಏನೂ ಇಲ್ಲ..! ತಮಿಳುನಾಡಿನ ತಿರುಚ್ಚಿಯ ಪ್ರೌಢಶಾಲಾ ಮಕ್ಕಳ ಹೊಸ ಆವಿಷ್ಕಾರ ಇದು…!! ವಾಟರ್ ಕ್ಯಾನ್’ಗಳನ್ನು ಬಳಸಿ ತುಂಬಾ ಕಡಿಮೆ ಖರ್ಚಿನಲ್ಲಿ ಟಾಯ್ಲೆಟ್ ಬಾತ್’ಗಳನ್ನು ಉಪಯೋಗಿಸುವುದನ್ನು ಕಂಡುಹಿಡಿದಿದ್ದಾರೆ…!! ಪಬ್ಲಿಕ್ ಟಾಯ್ಲೆಟ್, ಕಲ್ಯಾಣ ಮಂಟಪ, ಸರ್ಕಾರಿ ಕಚೇರಿ, ಶಾಲೆ ಕಾಲೇಜು, ಇತರೆ ಜಾಗಗಳಲ್ಲಿ ಕಡಿಮೆ ಖರ್ಚಿನಲ್ಲಿ ಟಾಯ್ಲೆಟ್ ಬಾತ್ ಗಳು ಉಪಯೋಗಿಸುತ್ತಿದ್ದಾರೆ…!

Read More »

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.  

Read More »

ಮಾರ್ಚ್ 11ರಂದು ಬಿಟ್ ಕಾಯಿನ್ ಮೌಲ್ಯ ಭಾರಿ ಏರಿಕೆ

ಬೆಂಗಳೂರು, ಮಾರ್ಚ್11: ಕಳೆದ ಕೆಲ ದಿನಗಳು ಕುಸಿತ ಕಾಣುತ್ತಿದ್ದ ಬಿಟ್ ಕಾಯಿನ್ ಮೌಲ್ಯ ಸತತವಾಗಿ ಏರಿಕೆ ಕಾಣುತ್ತಿದೆ. ಗುರುವಾರ(ಮಾರ್ಚ್ 11)ರಂದು ಈ ಸಮಯಕ್ಕೆ ಏರಿಕೆ ಕಂಡು 55, 000 ಡಾಲರ್ ಗಡಿ ದಾಟಿದೆ. ಡಿಜಿಟಲ್ ದುಡ್ಡು ಬಿಟ್ ಕಾಯಿನ್ 1 ಟ್ರಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ದಾಟಿ ಅಚ್ಚರಿ ಮೂಡಿಸಿದ ಬಳಿಕ ಭಾರಿ ಕುಸಿತ ಕಂಡಿತ್ತು. ಕಳೆದ ವರ್ಷ ಇದೇ ಅವಧಿಯಲ್ಲಿ 27,734 ಡಾಲರ್ ಮೌಲ್ಯ ಹೊಂದಿದ್ದ ಬಿಟ್ ಕಾಯಿನ್ …

Read More »

ಗೋಕಾಕ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..

ಗೋಕಾಕ ಫಾಲ್ಸ್‌ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …

Read More »