Breaking News

ರಾಷ್ಟ್ರೀಯ

ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದ ಸಿಎಂ

ಬೆಂಗಳೂರು: ಇ.ಡಿ. ನೋಟಿಸ್ ರಾಜಕೀಯ ಪ್ರೇರಿತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಡಿ ನೋಟಿಸ್ ರಾಜಕೀಯ ಪ್ರೇರಿತವೇ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸುತ್ತಾ, ಇದು ರಾಜಕೀಯ ಪ್ರೇರಿತ ಅಲ್ಲದೆ ಇನ್ನೇನು?. ಮುಡಾ ಕೇಸೇ ರಾಜಕೀಯ ಪ್ರೇರಿತ ಎಂದು ಆರೋಪಿಸಿದರು. ಸಿಬಿಐಗೆ ತನಿಖೆ ಕೊಡೋ ಆತಂಕ ಇದೆಯಾ? ಎಂಬ ಬಗ್ಗೆ ಪ್ರತಿಕ್ರಿಯಿಸುತ್ತಾ, ನ್ಯಾಯಾಧೀಶರು ಏನು ಮಾಡ್ತಾರೆ ಗೊತ್ತಿಲ್ಲ. ನ್ಯಾಯಾಧೀಶರು ಆದೇಶವನ್ನ ಕಾಯ್ದಿರಿಸಿದ್ದಾರೆ. ನನಗೆ ಯಾಕೆ ಆತಂಕ ಆಗುತ್ತದೆ? ನನಗೆ ನ್ಯಾಯ …

Read More »

ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರು. ಇವರು ಫೀಲ್ಡ್ಗೆ ಹೋಗಿ ಈ ಕೆಲಸ ಮಾಡದಿದ್ದರೆ ಆಧಾರ್ ಸೀಡಿಂಗ್ ಸಾಧ್ಯವೇ …

Read More »

ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ಮುಂದೂಡಿಕೆ: ಬಿಜೆಪಿ ಪ್ರತಿಭಟನೆ

ವಿಜಯಪುರ:ತೀವ್ರ ಕುತೂಹಲ ಕೆರಳಿಸಿರುವ ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ನಡೆಯುತ್ತಿದ್ದ ವೇಳೆಯೇ ಟ್ವಿಸ್ಟ್ ಪಡೆದುಕೊಂಡಿದೆ. ಮೇಯರ್, ಉಪ ಮೇಯರ್ ಆಯ್ಕೆ ಪ್ರಕ್ರಿಯೆ ವೇಳೆ ಚುನಾವಣೆಯೆ ರದ್ದಾಗಿದೆ ಎನ್ನಲಾಗುತ್ತಿದೆ. ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಉಪ ಮೇಯರ್ ಎಲೆಕ್ಷನ್ ಮುಂದೂಡಲಾಗಿದೆ. ಇನ ಪಾಲಿಕೆ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ಪ್ರಕ್ರಿಯೆ ವೇಳೆ ಸದಸ್ಯರ ಸದಸ್ಯತ್ವ ರದ್ದು ಕೋರಿ ಪ್ರಾದೇಶಿಕ ಆಯುಕ್ತರಿಗೆ ಉಪ ಮೇಯರ್ ದಿನೇಶ ಹಳ್ಳಿ …

Read More »

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ರಿಂದ ಜನತಾ ದರ್ಶನ…ಸರದಿ‌ ಸಾಲಿನಲ್ಲಿ ನಿಂತು ಸಮಸ್ಯೆಗಳನ್ನು ಹೇಳಿಕೊಂಡ ಜನತೆ…

ಸಿಎಂ ಸಿದ್ದರಾಮಯ್ಯವರು‌ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನ‌ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ‌ ವೈ- ನಗರದ ಜಿಲ್ಲಾ‌ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ‌ ನಡೆಸಲಾಗಿದ್ದು, ಲಾಡ್ ಅವರಿಗೆ ನವಲಗುಂದ ಶಾಸಕ ಎನ್ ಹೆಚ್ …

Read More »

ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸರ್ಕಾರ ಸಾಲ ನೀಡದಿರುವುದರಿಂದ ಮೈಕ್ರೋ ಫೈನಾನ್ಸ್‌ನ ಮೊರೆ ಹೋದ ಜನರು, ಸರ್ಕಾರ ಮಾಡಿದ ಪಾಪದಿಂದ ಜನರು ಆತ್ಮಹತ್ಯೆಗೆ ಶರಣು: ಪ್ರತಿಪಕ್ಷ ನಾಯಕ ಆರ್‌.ಅಶೋಕ ಸಾಲ ಮನ್ನಾ ಮಾಡುತ್ತೇವೆಂದು ಮುಖ್ಯಮಂತ್ರಿ ಹೇಳಿದ್ದರಿಂದಲೇ ಸಮಸ್ಯೆ ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ …

Read More »

ಏರ್ ಶೋಗೆ ಮಾಂಸ ಮಾರಾಟ ನಿಷೇಧ?

ಬೆಂಗಳೂರು, ಜನವರಿ 27: ಏರೋ ಇಂಡಿಯಾ (Aeroindia) ವತಿಯಿಂದ ಯಲಹಂಕದಲ್ಲಿ ನಡೆಯುವ 2025ನೇ ಸಾಲಿನ ಏರ್ ಶೋಗೆ (Air Show) ಸಿದ್ಧತೆ ಭರದಿಂದ ಸಾಗಿದೆ. ಎರಡು ವರ್ಷಗಳಿಗೊಮ್ಮೆ ನಡೆಯುವ ಏರ್ ಶೋಗೆ ಕೌಂಟ್ ದಿನಗಣನೆ ಆರಂಭವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ನಡೆಯುವ ಅಂತರರಾಷ್ಟ್ರೀಯ ಏರ್ ಶೋವನ್ನು ನೋಡಲು ಬೆಂಗಳೂರು ಜನ ಕಾತುರರಾಗಿದ್ದಾರೆ. ಏರ್ ಶೋಗೆ ಸಕಲ ತಯಾರಿ ನಡೆಯುತ್ತಿದೆ. ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವ ಕಣ್ತುಂಬಿಕೊಳ್ಳೋಕೆ ಸಿಟಿಮಂದಿ ಕಾತುರರಾಗಿದ್ದಾರೆ. ಅಂತರರಾಷ್ಟ್ರೀಯ …

Read More »

3 ಕೋಟಿ ಅಂತರದಲ್ಲಿ ವಿನ್ ಆದ ದೋಸ್ತಹನುಮಂತ

ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರು ವಿನ್ನರ್ ಎಂದು ಘೋಷಣೆ ಆಗಿದೆ. ಅವರು ದೊಡ್ಮನೆಯಲ್ಲಿ ಕೆಲ ವಾರಗಳ ಬಳಿಕ ಎಂಟ್ರಿ ಕೊಟ್ಟರೂ ಮೆಚ್ಚುಗೆ ಪಡೆದರು. ಈಗ ದೊಡ್ಮನೆಯಲ್ಲಿ ಅವರು ಕಪ್ ಎತ್ತುವ ಮೂಲಕ ಗಮನ ಸೆಳೆದಿದ್ದಾರೆ. ಅವರ ಗೆಲುವಿನ ಬಗ್ಗೆ ಫ್ಯಾನ್ಸ್ ಕೂಡ ಖುಷಿ ವ್ಯಕ್ತಪಡಿಸಿದ್ದಾರೆ. ಅವರು ದೊಡ್ಡ ಅಂತರದಿಂದ ಗೆದ್ದಿದ್ದಾರೆ ಅನ್ನೋ ವಿಚಾರ ರಿವೀಲ್ ಆಗಿದೆ. ಬಿಗ್ ಬಾಸ್ ಕನ್ನಡ ಸೀಸನ್ 11’ರ ವಿಜೇತನಾಗಿ ಹನುಮಂತ …

Read More »

ಒನ್ ನೇಶನ್-ಒನ್ ಎಲೆಕ್ಷನ್ ಜಾರಿಯಾದರೆ, 1 ವರ್ಷ ಹೆಚ್ಚುವರಿ ಸಿಗುತ್ತದೆ : ಸತೀಶ್ ಜಾರಕಿಹೊಳಿ

ಬೆಳಗಾವಿ : ಈ ಅವಧಿಯಲ್ಲಿ ನಮಗೆಲ್ಲ ಒಂದು ವರ್ಷ ಜಾಸ್ತಿ ಅವಕಾಶ ಸಿಗುತ್ತದೆ. ಒನ್ ನೇಶನ್-ಒನ್ ಎಲೆಕ್ಷನ್ ಜಾರಿಗೆ ಬಂದರೆ ಆರು ವರ್ಷ ನಾವು ಶಾಸಕರಾಗಿ ಇರಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಅವಧಿ ಪೂರ್ವ ಚುನಾವಣೆ ಬರುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ, ಕೇಂದ್ರ ಸರ್ಕಾರ ಒನ್ ನೇಶನ್-ಒನ್ ಎಲೆಕ್ಷನ್ ಜಾರಿಗೆ …

Read More »

ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯೊಂದು ಮನೆ ಜಪ್ತಿ ಮಾಡಿ, ಏಳು ತಿಂಗಳ ಗರ್ಭಿಣಿ ಸೇರಿದಂತೆ ಕುಟುಂಬಸ್ಥರನ್ನು ಮನೆಯಿಂದ ಹೊರಹಾಕಿರುವ ಆರೋಪ ಕೇಳಿಬಂದಿದೆ.

ಧಾರವಾಡ: ಮೈಕ್ರೋ ಫೈನಾನ್ಸ್​ಗಳ ವಿರುದ್ಧ ಕಿರುಕುಳ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಮಹತ್ವದ ಸಭೆ ನಡೆಸಿದ್ದಾರೆ. ಅಲ್ಲದೆ, ಕಾನೂನು ಮೀರಿ ಸಾಲ ವಸೂಲಾತಿಗೆ ಇಳಿದ ಸಂಸ್ಥೆಗಳಿಗೆ ಎಚ್ಚರಿಕೆಯನ್ನೂ ನೀಡಿದ್ದಾರೆ. ಈ ನಡುವೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಿಗಿ ಗ್ರಾಮದಲ್ಲಿ 7 ತಿಂಗಳ ಗರ್ಭಿಣಿ ಡೀನಾ ಫೀಲಿಪ್ ಅವ ರನ್ನು ಮನೆಯಿಂದ ಹೊರಹಾಕಿರುವ ಆರೋಪ ಆರೋಪ ಕೇಳಿಬಂದಿದೆ. ”ಫೈನಾನ್ಸ್​ ಕಂಪನಿಯೊಂದರಲ್ಲಿ ಸಾಲ ಪಡೆದುಕೊಂಡಿದ್ದೆವು. ಪ್ರತಿ ತಿಂಗಳಿಗೊಮ್ಮೆ ಹಣ …

Read More »

ಪಂಚ ಗ್ಯಾರಂಟಿ ಯೋಜನೆಗಳ ಮಧ್ಯೆ ಆರ್ಥಿಕ ಪ್ರಗತಿಯಲ್ಲಿ ರಾಜ್ಯ ಮುಂದು: ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಕರ್ನಾಟಕ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯ ಎರಡನ್ನೂ ಸಮನಾಗಿ ನಿಭಾಯಿಸುತ್ತಾ ದೇಶದಲ್ಲೇ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಬೆಂಗಳೂರಿನ ಮಾಣಿಕ್ ಷಾ ಮೈದಾನದಲ್ಲಿ 76ನೇ ಗಣರಾಜ್ಯೋತ್ಸವ ಪ್ರಯುಕ್ತ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಿ ಬಳಿಕ ವಿವಿಧ ತುಕಡಿಗಳಿಂದ ಗೌರವ ರಕ್ಷೆ ಸ್ವೀಕರಿಸಿ, ತೆರೆದ ವಾಹನದಲ್ಲಿ ಕವಾಯತು ವೀಕ್ಷಿಸಿದರು. ನಂತರ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದರು. …

Read More »