ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾದನಾಯಕನಹಳ್ಳಿ ಬಳಿ ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದುಕೊಂಡು ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಗುರು ಪ್ರಸಾದ್ ನಿರ್ದೇಶಿಸಿದ್ದ, ನವರಸನಾಯಕ ಜಗ್ಗೇಶ್ ಅಭಿನಯದ ಮಠ ಸಿನಿಮಾ ಭಾರಿ ಜನಪ್ರಿಯತೆ ಪಡೆದುಕೊಂಡಿತ್ತು. ಹಲವಾರು ಸಿನಿಮಾಗಳಲ್ಲಿ ನಟನಾಗಿ, ನಿರ್ದೇಶಕನಾಗಿ ಕಾರ್ಯನಿರ್ವಹಿಸಿದ್ದ ಗುರುಪ್ರಸಾದ್, ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗುರುಪ್ರಸಾದ್ ಇತ್ತೀಚೆಗೆ ಎರಡನೇ ವಿವಾಹವಾಗಿದ್ದರು. …
Read More »ಬಿಗ್ ಬಾಸ್‌ನಿಂದ ಹೊರಬರಲು ಅಸಲಿ ಕಾರಣ ಇದೇ
ನಟ ಸುದೀಪ್ ಬಿಗ್ ಬಾಸ್ ಕಾರ್ಯಕ್ರಮ ನಿರೂಪಣೆಯಿಂದ ಹೊರ ಬರಲು ನಿರ್ಧರಿಸಿದ್ದಾರೆ. ಇದೇ ನನ್ನ ಕೊನೆಯ ಬಿಗ್ ಬಾಸ್, ಮುಂದಿನ ಸೀಸನ್‌ನಲ್ಲಿ ನಾನು ನಿರೂಪಣೆ ಮಾಡುವುದಿಲ್ಲ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ್ದರು. ಕಾರ್ಯಕ್ರಮ ನಿರೂಪಣೆ ಮಾಡದೇ ಇರಲು ಕಾರಣವನ್ನು ನೀಡದೇ ಇದ್ದರು ಅವರ ದಿಢೀರ್ ನಿರ್ಧಾರ ಎಲ್ಲರಿಗೂ ಅಚ್ಚರಿ ಮೂಡಿಸಿತ್ತು. 11 ಆವೃತ್ತಿಗಳಲ್ಲಿ ಬಿಗ್ ಬಾಸ್ ಕಾರ್ಯಕ್ರಮವನ್ನು ಸುದೀಪ್ ಯಶಸ್ವಿಯಾಗಿ ನಿರೂಪಣೆ ಮಾಡಿದ್ದಾರೆ. ಸುದೀಪ್‌ಗಾಗಿ ಅಪಾರ ವೀಕ್ಷಕರು …
Read More »Bigg Boss ಸೀಸನ್-11ಕ್ಕೆ ಎಂಟ್ರಿ ಪಡೆದ ನಾಲ್ವರು ಸ್ಫರ್ಧಿಗಳು
ಬೆಂಗಳೂರು: ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್ಬಾಸ್ (Bigg Boss) ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ಬಾರಿಯೂ ನಟ ಕಿಚ್ಚ ಸುದೀಪ್ ಅವರೇ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಈಗಾಗಲೇ ಯಶಸ್ವಿ 10 ಆವೃತ್ತಿಯನ್ನು ಮುಗಿಸಿರುವ ಬಿಗ್ಬಾಸ್ ಶೋ 11ನೇ ಆವೃತ್ತಿಗೆ ಭರ್ಜರಿ ತಯಾರಿ ಮಾಡಿಕೊಂಡಿದೆ. ಈ ಬಾರಿ ಸ್ವರ್ಗ-ನರಕ ಎಂಬ ಥೀಮ್ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೊಸ ಅಧ್ಯಾಯದ ಮೇಲೆ ಜನರು ಹೆಚ್ಚಿನ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ. ಬಿಗ್ಬಾಸ್ ಸೀಸನ್-11ರ ಮೊದಲ ಸ್ಫರ್ಧಿಯಾಗಿ ನಟಿ …
Read More »ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್
ಬೆಂಗಳೂರು: ನಟ ಉಪೇಂದ್ರ (Actor Upendra) ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ‘ಬುದ್ಧಿವಂತ’ನ ಹುಟ್ಟುಹಬ್ಬವನ್ನು ಆಚರಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ. ಉಪ್ಪಿ ಕೂಡಾ ಕತ್ರಿಗುಪ್ಪೆಯ ತಮ್ಮ ಮನೆಯಲ್ಲಿ ಅಭಿಮಾನಿಗಳ ಜೊತೆಗೆ ಬರ್ತ್‌ಡೇ ಆಚರಿಸಲಿದ್ದಾರೆ. ಈ ನಡುವೆಯೇ ಉಪೇಂದ್ರ ಅವರ ‘ಯುಐ’ (UI MOVIE) ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಆ ಕುರಿತಾದ ಅಪ್ ಡೇಟ್ ಕೂಡಾ ಹೊರಬಿದ್ದಿದೆ. ಕೊಂಬು ಇರುವ ಕುದುರೆ ಮೇಲೆ ಕೂತಿರುವ ಹೊಸ ಪೋಸ್ಟರ್ ರಿಲೀಸ್ ಮಾಡಿ …
Read More »ಧ್ರುವ ಮ್ಯಾನೇಜರ್ ಅಶ್ವಿನ್ ಅರೆಸ್ಟ್
ಬೆಂಗಳೂರು: ಜಿಮ್ ಟ್ರೇನರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಬಂಧನ ಆಗಿದೆ ಎನ್ನಲಾಗಿದೆ. ಬನಶಂಕರಿ ಪೊಲೀಸರು ಆರೋಪಿ ಅಶ್ವಿನ್ನ ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಮೇ.26 ರಂದು ರಾತ್ರಿ ಪ್ರಾಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆದಿತ್ತು. ಹರ್ಷ ಮತ್ತು ಸುಭಾಷ್ ಎಂಬುವವರು ಪ್ರಶಾಂತ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆ ಮಾಡಿಸಿದ್ದು ಧ್ರುವ ಸರ್ಜಾ ಬಳಿ ಕೆಲಸ ಮಾಡಿಕೊಂಡಿದ್ದ ನಾಗೇಂದ್ರ. ಧ್ರುವ ಸರ್ಜಾಗೆ ನಾಗೇಂದ್ರ ಚಾಲಕನಾಗಿಯೂ ಕೆಲಸ …
Read More »ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ
ಬೆಂಗಳೂರು,ಸೆ.9- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ ಮಾಡಿ ನ್ಯಾಯಾಲಯ ಆದೇಶಿಸಿದೆ. ನಟ ದರ್ಶನ್, ಪವಿತ್ರಗೌಡ ಸೇರಿದಂತೆ 17 ಆರೋಪಿಗಳನ್ನು ಪ್ರತ್ಯೇಕ ಜೈಲಿನಿಂದ ವಿಡಿಯೋ ಕಾನ್ಫರೆನ್‌್ಸ ಮೂಲಕ ವಿಚಾರಣೆ ನಡೆಸಿದ 24ನೇ ಎಸಿಎಂಎಂ ನ್ಯಾಯಾಲಯ ನ್ಯಾಯಾಂಗ ಬಂಧನ ಅವಧಿಯನ್ನು 3 ದಿನಗಳ ಕಾಲ (ಸೆ.12) ವಿಸ್ತರಿಸಿದೆ. ಇಂದಿನ ವಿಚಾರಣೆ ಸಂದರ್ಭದಲ್ಲಿ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಅವರು …
Read More »ನಿರ್ದೇಶಕ ಯೋಗರಾಜ್ ಭಟ್ ಮೇಲೆ ಎಫ್ಐಆರ್
ಕಳೆದ ಕೆಲವು ದಿನಗಳಿಂದ ‘ಮನದ ಕಡಲು’ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. 30 ಅಡಿ ಎತ್ತರದಲ್ಲಿದ್ದ ಲೈಟ್ ಬಿಚ್ಚುವ ಸಂದರ್ಭದಲ್ಲಿ ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂಬುವವರು ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಹಾಗೂ ಇತರರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ. ‘ಮನದ ಕಡಲು’ ಸಿನಿಮಾದ ಶೂಟಿಂಗ್ ವೇಳೆ ದುರ್ಘಟನೆ ಸಂಭವಿಸಿದೆ. 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ನಿಧನರಾಗಿದ್ದಾರೆ. ಈ …
Read More »ಕಿಚ್ಚನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಹೊಸ ಸಿನಿಮಾ ಘೋಷಣೆ ಮಾಡಿದ ನಟ ಸುದೀಪ್
ಬೆಂಗಳೂರು : ಹುಟ್ಟು ಹಬ್ಬದ ದಿನವೇ ನಟ ಕಿಚ್ಚ ಸುದೀಪ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಹೌದು, ನಟ ಸುದೀಪ್ ‘ಬಿಲ್ಲಾ ರಂಗಾ ಭಾಷಾ ಸಿನಿಮಾ’ ಘೋಷಣೆ ಮಾಡಿದ್ದು, ಅಭಿಮಾನಿಗಳಲ್ಲಿ ಬಹಳ ಕುತೂಹಲ ಮೂಡಿದೆ. ಬಿಲ್ಲಾ ರಂಗ ಭಾಷಾ ಸಿನಿಮಾದ ಟೈಟಲ್ ಲೋಗೋ ಮತ್ತು ಪರಿಕಲ್ಪನೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಂಚಿಕೊಂಡಿದ್ದಾರೆ. ವಿಕ್ರಾಂತ್ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ ತಯಾರಾಗುತ್ತಿದೆ. ಒಂದಾನೊಂದು ಕಾಲದಲ್ಲಿ ಕ್ರಿ.ಶಕ 2209ರಲ್ಲಿ …
Read More »ರಾಜ್‌ಪಾಲ್ ಯಾದವ್ ರ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ
ಮುಂಬಯಿ: ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರ ತವರು ಪಟ್ಟಣವಾದ ಶಹಜಹಾನ್‌ಪುರದಲ್ಲಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಬ್ಯಾಂಕ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಉತ್ತರ ಪ್ರದೇಶದ ಶಹಜಹಾನ್‌ಪುರಕ್ಕೆ ಆಗಮಿಸಿ ಭಾನುವಾರ ಆಸ್ತಿಯ ಮೇಲೆ ಬ್ಯಾನರ್ ಹಾಕಿದ್ದಾರೆ. ಆಸ್ತಿಯು ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ್ದು, ಯಾವುದೇ ರೀತಿಯ ಖರೀದಿ ಅಥವಾ ಮಾರಾಟವನ್ನು ಮಾಡಲು ಸಾಧ್ಯವಿಲ್ಲ ಎಂದು …
Read More »ಜೈಲಲ್ಲಿರುವ ನಟ ದರ್ಶನ್ ಕೈ ಸೇರಲಿದೆ ‘ಹುಬ್ಬಳ್ಳಿ ಸಿದ್ಧಾರೂಢ ಮಠದ ಕೃತಿ’
ಹುಬ್ಬಳ್ಳಿ, ಆಗಸ್ಟ್ 01: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪದಲ್ಲಿ ನಟ ದರ್ಶನ್ ಬೆಂಗಳೂರು ಸೆಂಟ್ರಲ್ ಜೈಲು ಸೇರಿದ್ದಾರೆ. ನಟ ದರ್ಶನ್ ಹುಬ್ಬಳ್ಳಿಗೆ ಹೋದಾಗ ಅಲ್ಲಿನ ಶ್ರೀ ಸಿದ್ಧರೂಢ ಮಠಕ್ಕೆ ಕೆಲವು ಭಾರಿ ಭೇಟಿ ನೀಡಿದ್ದರು. ಶ್ರೀಗಳ ಗದ್ದುಗೆಯ ಆಶೀರ್ವಾದ ಪಡೆಯುತ್ತಿದ್ದರು. ಇದೀಗ ಇದೇ ಮಠದ ಪ್ರಸಾದ ಮತ್ತು ಕೃತಿ ಕೋರಿಯರ್ ಮೂಲಕ ಜೈಲಿಗೆ ಕಳಹಿಸಲಾಗಿದೆ. ಹೌದು, ಕೊಲೆ ಆರೋಪಿಯಾಗಿ ಸುಮಾರು 50 ದಿನಗಳಿಂದ ಜೈಲಿನಲ್ಲಿ ವಿಚಾರಣಾಧೀನ ಖೈದಿಯಾಗಿರುವ ನಟ …
Read More »