Breaking News

ಹುಬ್ಬಳ್ಳಿ

ಶಾರ್ಟ್ ಸರ್ಕ್ಯೂಟ್- ಪೊರಕೆ, ಹುಬ್ಬಳ್ಳಿ ಫಿನಾಯಿಲ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ

ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಫಿನಾಯಿಲ್ ಹಾಗೂ ಪೊರಕೆ ತಯಾರಿಕೆ ಕಾರ್ಖಾನೆಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಫಿನಾಯಿಲ್ ಹಾಗೂ ಪೊರಕೆಗಳು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿಯ ಸಮೀಪದ ಶೇರವಾಡ ಗ್ರಾಮದ ಬಳಿಯ ವಿಭವ್ ಇಂಡಸ್ಟ್ರೀಯಲ್ ನಲ್ಲಿ ನಡೆದಿದೆ. ಸಂಜೆ ವಿದ್ಯುತ್ ನಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಕುಂದಗೋಳ ಹಾಗೂ ಹುಬ್ಬಳ್ಳಿಯ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿ …

Read More »

ಕುಲ್ಕರ್ಣಿ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ

ಹುಬ್ಬಳ್ಳಿ: ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿಗೆ ದೊಡ್ಡ ಹುದ್ದೆ ಸಿಗುತ್ತಿತ್ತು ಎಂಬ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಈ ಬಗ್ಗೆ ಚರ್ಚೆ ನಡೆದಿರುವ ಕುರಿತು ನನಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ದಿ.ಸುರೇಶ್ ಅಂಗಡಿಯವರಿಗೆ ಶೀಘ್ರದಲ್ಲಿಯೇ ದೊಡ್ಡ ಹುದ್ದೆ ಸಿಗುವುದರಲ್ಲಿತ್ತು ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ, ಬಿಜೆಪಿ ರಾಷ್ಟ್ರಾಧ್ಯಕ್ಷರ ಜೊತೆ ನಾನು ಸಂಪರ್ಕದಲ್ಲಿದ್ದೇನೆ. ಅಂತಹ ಚರ್ಚೆ ನಡೆದಿರುವ …

Read More »

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದಂತ ಕಾಂಗ್ರೆಸ್ ಮುಖಂಡ ನಿರೀಕ್ಷಣಾ ಜಾಮೀನು ಪಡೆದಿದ್ದಾರೆ

ಹುಬ್ಬಳ್ಳಿ : ಹೌದು.. ಹುಬ್ಬಳ್ಳಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವರ ಆಪ್ತರಾಗಿದ್ದಂತ ಗಿರೀಶ್ ಗದಿಗೆಪ್ಪಗೌಡರೇ ಹೀಗೆ ನಿರೀಕ್ಷಣಾ ಜಾಮೀನು ಪಡೆದಂತ ಕೈ ಮುಖಂಡ ಆಗಿದ್ದಾರೆ. ನಟಿ ರಾಗಿಣಿ ಜೊತೆಗೆ ನಂಟು ಹೊಂದಿದ್ದರಿಂದಾಗಿ, ಡ್ರಗ್ಸ್ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿ ಗಿರೀಶ್ ಗದಿಗೆಪ್ಪಗೌಡರ ಇದ್ದರು. ಇದೇ ಕಾರಣದಿಂದಾಗಿ ಸಿಸಿಬಿ ಪೊಲೀಸರಿಂದ ಯಾವುದೇ ಸಂದರ್ಭದಲ್ಲಿಯಾದರೂ ಬಂಧನದ ಭೀತಿ ಕೂಡ ಎದುರಿಸುವಂತಾಗಿತ್ತು. ಈ ಹಿನ್ನಲೆಯಲ್ಲಿ ಮುಂಜಾಗ್ರತೆಯಾಗಿ ಧಾರವಾಡ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಲಯದಿಂದ …

Read More »

ಧಾರವಾಡದ ನಾರಾಯಣ ಹೃದಾಯಲಯ ನವಜಾತ ಶಿಶುವಿಗೆ ಪುನರ್ಜನ್ಮ ನೀಡಿದೆ.

  ಧಾರವಾಡ: ಗಂಭೀರ ಹೃದಯ ರೋಗದಿಂದ ಬಳಲುತ್ತಿದ್ದ 20 ದಿನದ ಮಗುವಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಧಾರವಾಡದ ನಾರಾಯಣ ಹೃದಾಯಲಯ ನವಜಾತ ಶಿಶುವಿಗೆ ಪುನರ್ಜನ್ಮ ನೀಡಿದೆ. ಹುಬ್ಬಳ್ಳಿ ಮೂಲದ ಫಾರುಕ್ ಮತ್ತು ಮುಬಿನ್ ದಂಪತಿಯ 20 ದಿನದ ಮಗು ಹುಟ್ಟಿದಾಗ 2.3 ಕೆಜೆ ತೂಕವಿತ್ತು. ಮಗುವಿನ ಹೃದಯದಲ್ಲಿ ರಕ್ತ ಪರಿಚಲನೆ ಸಮಸ್ಯೆ ಕಾರಣದಿಂದ ಕುಟುಂಬದವರು ಮಗುವಿನ ಚಿಂತೆಯಲ್ಲೇ ಹಲವು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮಾಡಿಸಿದರೂ ಅದು ಸರಿಯಾಗಿರಲಿಲ್ಲ. ನಂತರ …

Read More »

ಪ್ರಯಾಣಿಕರ ಸಂಖ್ಯೆಯಲ್ಲಿ ಏರಿಕೆ- ವಾಯುವ್ಯ ಸಾರಿಗೆ ಸಂಸ್ಥೆಯ ಆದಾಯದಲ್ಲಿ ಚೇತರಿಕೆ

ಹುಬ್ಬಳ್ಳಿ: ಲಾಕ್‍ಡೌನ್ ಬಹುತೇಕ ಸಡಿಲಿಗೊಳಿಸಿದ ಹಿನ್ನೆಲೆಯಲ್ಲಿ ಜನರ ಕೋವಿಡ್ ಪೂರ್ವ ಸ್ಥಿತಿಗೆ ಮರಳುತ್ತಿದ್ದು, ಇದರೊಂದಿಗೆ ಬಸ್ ಪ್ರಯಾಣಿಕರ ಸಂಖ್ಯೆಯೂ ಏರಿಕೆಯಾಗಿದೆ. ಕಳೆದ ತಿಂಗಳಿಗಿಂತ ಅಕ್ಟೋಬರ್ ನಲ್ಲಿ ವಾಕರಸಾ ಸಂಸ್ಥೆಯ ಹುಬ್ಬಳ್ಳಿ ವಿಭಾಗದ ಸಾರಿಗೆ ಆದಾಯ ಹೆಚ್ಚಾಗಿದ್ದು, ಮತ್ತಷ್ಟು ಮಾರ್ಗಗಳಲ್ಲಿ ಬಸ್ಸುಗಳನ್ನು ಹೆಚ್ಚಿಸಲಾಗಿದೆ. ಲಾಕ್‍ಡೌನ್ ಪೂರ್ವದಲ್ಲಿ ಹುಬ್ಬಳ್ಳಿ ವಿಭಾಗದಲ್ಲಿ 419 ಬಸ್ಸುಗಳು ಪ್ರತಿದಿನ 1.63 ಲಕ್ಷ ಕಿ.ಮೀ ಸಂಚರಿಸುತ್ತಿದ್ದವು. 1.25 ಲಕ್ಷ ಜನರಿಂದ 1.35 ಲಕ್ಷ ಜನರು ಪ್ರತಿದಿನ ಪ್ರಯಾಣ ಮಾಡುತ್ತಿದ್ದರು. …

Read More »

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಸೋಂಕು,ಕೋವಿಡ್ ವಾರ್ಡಿಗೆ ಹೋಗೋಕೆ ಸಿಬ್ಬಂದಿಗೆ ಭಯ

ಹುಬ್ಬಳ್ಳಿ: ರಾಜ್ಯದಲ್ಲಿ ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ಚಿಕ್ಕವರಿಂದ ಹಿಡಿದು ವಯೋವೃದ್ಧರವರೆಗೂ ಸೋಂಕು ಇನ್ನಿಲ್ಲದಂತೆ ಹರಡುತ್ತಿದೆ. ಈ ಮಧ್ಯೆ ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೂ ಸಹ ಕೊರೊನಾ ಬೆನ್ನು ಬಿಡದೇ ಕಾಡ್ತಾ ಇದೆ. ಹೀಗಾಗಿ ನೂರಾರು ವೈದ್ಯರು, ವೈದ್ಯಕೀಯ ಸಿಬ್ಬಂದಿಗೆ ಸೋಂಕು ಹರಡುತ್ತಿರುವ ಪರಿಣಾಮ ವೈದ್ಯರು ಸಹ ಚಿಕಿತ್ಸೆ ನೀಡಲು ಹಿಂದೆ ಮುಂದೆ ನೋಡುವಂತಾಗಿದೆ. ರಾಜ್ಯದಲ್ಲಿ ಕಿಲ್ಲರ್ ಕೊರೊನಾ ದಿನೇ ದಿನೇ ಹೆಚ್ಚಾಗುತ್ತಲೇ ಸಾಗಿದೆ. ಅದರಲ್ಲೂ ಧಾರವಾಡ ಜಿಲ್ಲೆಯಲ್ಲೂ ಸಹ …

Read More »

ಕೆಐಎಡಿಬಿ ಕಾರ್ಯದರ್ಶಿಯ ಆಸ್ತಿ ನೋಡಿ ದಂಗಾದ ಎಸಿಬಿ

ಹುಬ್ಬಳ್ಳಿ: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಕಾರ್ಯದರ್ಶಿ ಹರೀಶ್ ಹಳಪೇಟ ಆಸ್ತಿ ನೋಡಿ ಎಸಿಬಿ ಅಧಿಕಾರಿಗಳೇ ದಂಗಾಗಿ ಹೋಗಿದ್ದಾರೆ. ಹುಬ್ಬಳ್ಳಿ, ಧಾರವಾಡ ಹಾಗೂ ಬೆಂಗಳೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದ ಧಾರವಾಡದ ಎಸಿಬಿ ಅಧಿಕಾರಿಗಳು ಕೆಐಎಡಿಬಿ ಕಾರ್ಯದರ್ಶಿಯ ಅಪಾರ ಪ್ರಮಾಣದ ಆಸ್ತಿಯನ್ನ ಪತ್ತೆ ಮಾಡುವಲ್ಲಿ ಯಶ್ವಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೆಐಎಡಿಬಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಹರೀಶ್ ಹಳಪೇಟ ಮನೆಯ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಪತ್ತೆಯಾದ ಸ್ಥಿರಾಸ್ತಿ ಹಾಗೂ ಚರಾಸ್ತಿಗಳ ಪಟ್ಟಿಯನ್ನ …

Read More »

ಬಿಜೆಪಿ  ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ: ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಜೆಪಿ  ನಾಯಕರು ಕಚ್ಚಾಡಿಕೊಂಡು ಸರ್ಕಾರ ಬಿದ್ರೆ, ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು,  ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆಯ ಅಭ್ಯರ್ಥಿಯನ್ನು ಒಂದು ವರ್ಷದ ಮೊದಲ ಆಯ್ಕೆ ಮಾಡಿದ್ದೇವೆ. ಈ ಮೊದಲು ಪದವೀಧರರ ಚುನಾವಣೆಯನ್ನ ನಾವು ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ. ಆದರೆ ಈ ಬಾರಿ ಚುನಾವಣೆಗಳನ್ನ ಕಾಂಗ್ರೆಸ್ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದರು. ಕರ್ನಾಟಕದ ಎರಡು ಪದವೀಧರರ ಕ್ಷೇತ್ರಕ್ಕೆ ಚುನಾವಣೆ …

Read More »

ಕಾಂಗ್ರೆಸ್ ಬಿಟ್ಟು ಬಿ ಜೆ ಪಿ ಗೆ ಸೇರಿದ ಮಾಜಿ ಸಚಿವರು

ಹುಬ್ಬಳ್ಳಿ : ಮಾಜಿ ಸಚಿವರಾದ ವಿನಯ ಕುಲಕರ್ಣಿ, ಎಂ.ಬಿ. ಪಾಟೀಲ್‌ ಅವರು ಬಿಜೆಪಿ ಸೇರುವ ಬಗ್ಗೆ ಯಾವುದೇ ಪ್ರಸ್ತಾಪ ಬಂದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಬಿಜೆಪಿಗೆ ಯಾವುದೇ ರಾಜಕೀಯ ಅಸ್ಪೃಶ್ಯತೆ ಇಲ್ಲ, ಪಕ್ಷಕ್ಕೆ ಹೊರೆಯಾಗದಿದ್ದರೆ ಹಾಗೂ ಸಿದ್ಧಾಂತ ಒಪ್ಪಿದರೆ ಯಾರನ್ನಾದರೂ ಸೇರಿಸಿಕೊಳ್ಳುತ್ತೇವೆ ಎಂದರು. 3 ವರ್ಷ ಬಿಎಸ್‌ವೈ ರಾಜ್ಯದ ಸಿಎಂ, ಬದಲಾವಣೆ ಮಾತೇ ಇಲ್ಲ: ಗುಡುಗಿದ ಬಿಜೆಪಿ ಸಾರಥಿ! … ಸುದ್ದಿಗೋಷ್ಠಿಯಲ್ಲಿ ಮಾತನಾಡಿ, …

Read More »

ಲಂಡನ್ ಮೂಲದ ಯುವತಿ ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾಳೆ

ಹುಬ್ಬಳ್ಳಿ : ಮ್ಯಾಟ್ರಿಮೋನಿ ಮೂಲಕ ಪರಿಚಯವಾದ ಲಂಡನ್ ಮೂಲದ ಯುವತಿ ಮದುವೆಯಾಗುವುದಾಗಿ ನಂಬಿಸಿ ಹುಬ್ಬಳ್ಳಿಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ಹಣ ವಂಚಿಸಿದ್ದಾಳೆ. ಹುಬ್ಬಳ್ಳಿಯ ನವನಗರದ ನಿವಾಸಿ ಗುತ್ತಿಗೆದಾರ ಪ್ರಮೋದ್ ಕುಲಕರ್ಣಿ ಮೋಸ ಹೋಗಿದ್ದು ಈಗ ಸೈಬರ್ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಧು ಹುಡುಕಾಟದಲ್ಲಿದ್ದ ಪ್ರಮೋದ್‌ಗೆ ‘ಸಂಗಮ’ ಹೆಸರಿನ ಮ್ಯಾಟ್ರಿಮೋನಿಯಲ್ಲಿ ಲಂಡನ್ ಮೂಲದ ಯುವತಿ ಅನ್ನಾ ಮೊಹಮ್ಮದ್‌ ಪರಿಚಯವಾಗಿದ್ದಾಳೆ. ಮೊದ‌ ಮೊದಲು ವಾಟ್ಸಪ್‌ನಲ್ಲಿ ಮೆಸೇಜ್‌ ಮಾಡುತ್ತಿದ್ದ ಯುವತಿ ಬಳಿಕ ಪ್ರತಿನಿತ್ಯ ಚಾಟ್‌ …

Read More »