Breaking News

ಹುಬ್ಬಳ್ಳಿ

ಆಗಸ್ಟ್ 22ರಿಂದ ಮದ್ಯ ಮಾರಾಟ ನಿಷೇಧ: d.c…

ಧಾರವಾಡ: ಅಗಸ್ಟ್ 22ರಿಂದ ಸೆಪ್ಟಂಬರ್ 4ರವರೆಗೆ ಗಣೇಶ ಹಬ್ಬದ ಆಚರಣೆ ಪ್ರಯುಕ್ತ ಧಾರವಾಡ ಜಿಲ್ಲೆಯ ನಗರ ಮತ್ತು ಗ್ರಾಮಗಳಲ್ಲಿ ಗಣೇಶ ವಿಗ್ರಹಗಳ ವಿಸರ್ಜನಾ ನಡೆಯುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಮದ್ಯ ಮಾರಾಟ ನಿಷೇಧಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21(1) ಕಾಯ್ದೆಯಡಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಮುಂಜಾಗ್ರತಾ ಕ್ರಮವಾಗಿ ಈ ಆದೇಶ ಹೊರಡಿಸಲಾಗಿದೆ. ಸಮಾರಂಭ, …

Read More »

ರೌಡಿಶೀಟರ್ ಪ್ರೂಟ್ ಇರ್ಫಾನ್ ಹತ್ಯೆ ಪ್ರಕರಣ- ಭೂಗತ ಪಾತಕಿ ಬಚ್ಚಾಖಾನ್ ಸಹಚರರ ಬಂಧನ

ಹುಬ್ಬಳ್ಳಿ: ರೌಡಿಶೀಟರ್ ಫ್ರೂಟ್ ಇರ್ಫಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರಿಂದ ಬಂಧಿತರ ಸಂಖ್ಯೆ ಏಳಕ್ಕೇರಿದಂತಾಗಿದೆ. ಬಂಧಿತರಿಬ್ಬರು ಬಚ್ಚಾಖಾನ್ ಸಹಚರರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಮೈಸೂರಿನ ಶಿವರಾತ್ರಿ ಶೇಶ್ವನಗರದ ಬನ್ನಿಮಂಟಪ ಲೇಔಟ್ ನ ಶಹಜಾನ ಆಶ್ರಫ್. ಕೆ (24) ಹಾಗೂ ಮೈಸೂರು ಗಾಂಧಿನಗರದ ಸೈಯದ್ ಸೋಹೈಲ್ ಪೀರ್ ಸೈಯದ ಆಜೀಮ್ ಪೀರ್ (22) ಬಂಧಿತರು. ಆರೋಪಿಗಳಿಂದ ಎರಡು ಮೊಬೈಲಗಳನ್ನು ವಶಕ್ಕೆ ಪಡೆಯಲಾಗಿದೆ. …

Read More »

ರೌಡಿಶೀಟರ್ ಇರ್ಫಾನ್ ಹತ್ಯೆ- ಐವರು ಆರೋಪಿಗಳು ಅರೆಸ್ಟ್‌

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯನ್ನು ಬೆಚ್ಚಿಬೀಳಿಸಿದ ಶೂಟೌಟ್ ಪ್ರಕರಣವನ್ನು ಬೆನ್ನಟ್ಟಿದ ಹು-ಧಾ ಮಹಾನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಧಾರವಾಡ ಫ್ರೂಟ್ ಇರ್ಫಾನ್ ಎಂಬುವ ರೌಡಿಶೀಟರ್ ಅನ್ನು ಹಳೇ ಹುಬ್ಬಳ್ಳಿ ಅಲ್ತಾಜ್ ಸಭಾ ಭವನ ಬಳಿ ಆಗಸ್ಟ್ 6ರಂದು ಗುಂಡಿನ ಮಳೆಗೆರೆದು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಪ್ರಕರಣದಲ್ಲಿ ಎಸ್ಕೇಪ್ ಆಗಲು ನೆರವಾಗಿದ್ದ ಮತ್ತು ಕೃತ್ಯದಲ್ಲಿ ಭಾಗಿಯಾಗಿದ್ದ ಐವರನ್ನು …

Read More »

ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆಗೆ ಸನ್ಮಾನ

ಹುಬ್ಬಳ್ಳಿ: ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ 74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ, ಹುಬ್ಬಳ್ಳಿ ಸಾಯಿನಗರದ ಟೀಚರ್ಸ್ ಕಾಲನಿಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು.     ಶ್ರೀರಾಮ್ ವಿಷ್ಣು ಪಂತ್ ತೆಂಬೆ ಅವರು ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ ಕಾರ್ಡಿನಡಿ ಲಭ್ಯವಾಗುವ ಔಷಧಗಳನ್ನು ಬೆಂಗಳೂರಿನಿಂದ ತೆಗೆದುಕೊಂಡು ಬರುವುದು ಕಷ್ಟವಾಗುತ್ತದೆ. ಕಾರ್ಡನ್ನು ಹುಬ್ಬಳ್ಳಿಗೆ ವರ್ಗಾಯಿಸುವಂತೆ ಇದೇ ವೇಳೆ ಮನವಿ ಮಾಡಿಕೊಂಡರು. ಇದಕ್ಕೆ …

Read More »

ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅದ್ದೂರಿಯಾಗಿ ಸ್ವಾಗತಿ

ಹುಬ್ಬಳ್ಳಿ: ಕೊರೊನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು. ಪೂರ್ವ ಸಂಚಾರಿ ಪೊಲೀಸ್ ಠಾಣೆ ಸಿಬ್ಬಂದಿಗೆ ಇತ್ತೀಚಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ  ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊರೊನಾ ವರದಿ ನೆಗಟಿವ್ ಬಂದ ಹಿನ್ನೆಲೆಯಲ್ಲಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸುದ್ದಿ ತಿಳಿದು ಠಾಣೆಯ ಇತರ ಸಿಬ್ಬಂದಿ, ಪೇದೆಗೆ ಶಾಲು, ಹೂವಿನ ಮಾಲೆ ಹಾಕಿ ಸನ್ಮಾನ ಮಾಡಿದರು.

Read More »

5ನೇ ದಿನಕ್ಕೆ ಕಾಲಿಟ್ಟ ಕಿಮ್ಸ್ ವೈದ್ಯಕೀಯ ಸಿಬ್ಬಂದಿಯ ಪ್ರತಿಭಟನೆ

ಹುಬ್ಬಳ್ಳಿ: ಎನ್.ಪಿ.ಎಸ್ ಸೌಲಭ್ಯ ಸೇರಿದಂತೆ ಜ್ಯೋತಿ ಸಂಜೀವಿನಿ ಒದಗಿಸುವಂತೆ ಆಗ್ರಹಿಸಿ ಕಿಮ್ಸ್ ಶುಶ್ರೂಷಾ ಸಿಬ್ಬಂದಿ ನಡೆಸುತ್ತಿರುವ ಪ್ರತಿಭಟನೆ ಐದನೇ ದಿನಕ್ಕೆ ಕಾಲಿಟ್ಟಿದೆ. ಇಂದು ಕೂಡ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಯಾವುದೇ ದಕ್ಕೆ ಉಂಟಾಗದಂತೆ ಪ್ರತಿಭಟನೆ ನಡೆಸಿದರು.ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಹುಬ್ಬಳ್ಳಿಯ ಕಿಮ್ಸ್ ಆವರಣದ ಎದುರು ಕಪ್ಪು ಪಟ್ಟಿ ಧರಿಸಿ ಕೋವಿಡ್ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದೆ ಕಾರ್ಯ ಮಾಡಿದ್ದೇವೆ. ಪಿಂಚಣಿ ಸೌಲಭ್ಯ ಕುಟುಂಬ ಕಲ್ಯಾಣ …

Read More »

ಕಳ್ಳತನದ ಮೂಲಕ ಆತಂಕ ಸೃಷ್ಟಿಸಿದ್ದ ಫೈರೋಜ್ ಜಫ್ರಿ ಬಂಧನ

  ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕಳ್ಳತನದ ಮೂಲಕ ಜನರಲ್ಲಿ ಆತಂಕ ಸೃಷ್ಟಿಸಿದ್ದ ಖತರ್ನಾಕ್ ಕಳ್ಳ ಫೈರೋಜ್ ಜಫ್ರಿ ಕಳ್ಳನನ್ನು ಬಂಧಿಸುವಲ್ಲಿ ಉಪನಗರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಫೈರೋಜ್ ಜಫ್ರಿ ರಾಜೇಸಾಬ(38) ಬಂಧಿತ ಆರೋಪಿ. ರಾತ್ರಿ ವೇಳೆ ಮಾರುಕಟ್ಟೆಯಲ್ಲಿ ಶಟರ್ ಮುರಿದು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಬಂಧಿಸಿರುವ ಪೊಲೀಸರು, ಆತನಿಂದ 30,300 ರೂ ನಗದು, ಕಬ್ಬಿಣದ ರಾಡ್ ವಶಪಡಿಸಿಕೊಂಡಿದ್ದಾರೆ. ಲಬ್ ರಸ್ತೆ ವಿನಾಯಕ ಮೆಡಿಕಲ್ …

Read More »

ಲಾರಿ, ಕಾರು ಡಿಕ್ಕಿ- ಓರ್ವ ಸಾವು, ನಾಲ್ವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ಲಾರಿ ಮತ್ತು ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿ ನಾಲ್ಕು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಸಮೀಪದ ಅದರಗುಂಚಿ ಕ್ರಾಸ್ ಬಳಿ ನಡೆದಿದೆ.ರಸ್ತೆ ಪಕ್ಕ ನಿಲ್ಲಿಸಿದ ಲಾರಿಗೆ ಹಿಂಬದಿಯಿಂದ ಬಂದು ಕಾರು ಡಿಕ್ಕಿಯಾಗಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ತಮಿಳುನಾಡು ಮೂಲದ ಅಯ್ಯನಾರ್(35) ಎಂದು ಗುರುತಿಸಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿದ್ದ ಜನರು ನಾಲ್ಕು ಜನರ ಪ್ರಾಣ ಉಳಿಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಕಾರಿನಲ್ಲಿದ್ದವರ …

Read More »

ಕ್ವಿಟ್ ಇಂಡಿಯಾ ಚಳುವಳಿ ಸ್ಮರಣಾರ್ಥ ಹೋರಾಟಗಾರರಿಗೆ ರಾಷ್ಟ್ರಪತಿಗಳ ಪರವಾಗಿ ಸನ್ಮಾನ

ಧಾರವಾಡ/ಹುಬ್ಬಳ್ಳಿ: ಕ್ವಿಟ್ ಇಂಡಿಯಾ ಚಳುವಳಿ ಸ್ಮರಣಾರ್ಥ ಹೋರಾಟಗಾರರಿಗೆ ರಾಷ್ಟ್ರಪತಿಗಳ ಪರವಾಗಿ ಸನ್ಮಾನ ಮಾಡಲಾಗಿದೆ.ಭಾರತೀಯ ಇತಿಹಾಸದಲ್ಲಿ ಐತಿಹಾಸಿಕ ದಿನವಾಗಿರುವ ಆಗಸ್ಟ್ 9ರ ಕ್ವಿಟ್ ಇಂಡಿಯಾ ಚಳುವಳಿ ಅಂಗವಾಗಿ ಭಾರತದ ರಾಷ್ಟ್ರಪತಿಗಳು ಧಾರವಾಡ ಜಿಲ್ಲೆಯ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರಿಗೆ ತಮ್ಮ ಕಚೇರಿಯಿಂದ ಶಾಲು, ಹಾರ ಮತ್ತು ಸಂದೇಶಪತ್ರಗಳನ್ನು ಅವರಿಗೆ ತಲುಪಿಸಿ ಗೌರವಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿದ್ದರು ರಾಷ್ಟ್ರಪತಿಗಳ ಸಂದೇಶದೊಂದಿಗೆ ಜಿಲ್ಲಾಧಿಕಾರಿಗಳ ಪ್ರತಿನಿಧಿಯಾಗಿ ಉಪವಿಭಾಗಾಧಿಕಾರಿ ಮಹ್ಮದ ಜುಬೇರ್ ಅವರು ಇಂದು ಬೆಳಗ್ಗೆ ಹುಬ್ಬಳ್ಳಿಯ ಉಣಕಲ್ …

Read More »

ರೈಲು ದೇಶದ ಪ್ರಗತಿಯ ಎಂಜಿನ್: ಸಚಿವ ಪಿಯುಷ್ ಗೋಯಲ್

ಬೆಳಗಾವಿ, ಆ.9(ಕರ್ನಾಟಕ ವಾರ್ತೆ): ಹುಬ್ಬಳ್ಳಿಯಲ್ಲಿ ಸ್ಥಾಪಿಸಲಾಗಿರುವ ಉತ್ತರ ಕರ್ನಾಟಕದ ಪ್ರಥಮ ರೈಲು ಮ್ಯೂಸಿಯಂ ಅನ್ನು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಇಲಾಖೆಯ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಭಾನುವಾರ ದೇಶಕ್ಕೆ ಸಮರ್ಪಿಸಿದರು. ನೈರುತ್ಯ ರೈಲ್ವೆ ವತಿಯಿಂದ ವರ್ಚುವಲ್ ವೇದಿಕೆಯ ಮೂಲಕ ಭಾನುವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಹುಬ್ಬಳ್ಳಿಯ ರೈಲು ಮ್ಯೂಸಿಯಂ ಅನ್ನು ದೇಶಕ್ಕೆ ಸಮರ್ಪಿಸಲಾಯಿತು. ನಂತರ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ ಅವರು, ಐತಿಹಾಸಿಕ ಮಹತ್ವ ಹೊಂದಿರುವ ಹುಬ್ಬಳ್ಳಿಯಲ್ಲಿ …

Read More »