Breaking News

ಹುಬ್ಬಳ್ಳಿ

ಆ್ಯಂಟಿಜೆನ್ ಟೆಸ್ಟ್‌ಗೆ ಹೆದರಿ ಮಾರುಕಟ್ಟೆಯನ್ನೇ ಬಂದ್ ಮಾಡಿದ ವ್ಯಾಪಾರಸ್ಥರು!

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಹಾವಳಿ ಜೋರಾಗುತ್ತಿದಂತೆ ಜಿಲ್ಲಾಡಳಿತ ಆ್ಯಂಟಿಜೆನ್ ಟೆಸ್ಟ್‍ಗೆ ಮುಂದಾಗಿದೆ. ನಗರದ ಜನನಿಬಿಡ ಪ್ರದೇಶ, ಮಾರುಕಟ್ಟೆಗಳಲ್ಲಿ ಆ್ಯಂಟಿಜೆನ್ ಟೆಸ್ಟ್ ಮಾಡಲಾಗುತ್ತಿದೆ. ಆದರೆ ಈ ಟೆಸ್ಟ್ ಗೆ ಹೆದರಿ ಹುಬ್ಬಳ್ಳಿಯಲ್ಲಿ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನ ಬಂದ್ ಮಾಡಿದ್ದಾರೆ.   ಹುಬ್ಬಳ್ಳಿಯ ದುರ್ಗದ ಬೈಲ್ ಸೇರಿದಂತೆ ಅವಳಿನಗರದ 15 ಕಡೆಗಳಲ್ಲಿ ಧಾರವಾಡ ಜಿಲ್ಲಾಡಳಿತ ಇಂದಿನಿಂದ ರ‍್ಯಾಪಿಡ್ ಟೆಸ್ಟ್ ಆರಂಭಿಸಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಹುಬ್ಬಳ್ಳಿಯ ದುರ್ಗದ ಬೈಲ್ ಗೆ ಭೇಟಿ …

Read More »

ಕುಮಾರಸ್ವಾಮಿ ಅವರೀಗೇ ಬಿಜೆಪಿ ಮೇಲೆ ಸ್ವಲ್ಪ ಲವ್ ಆಗಿದೆ.:ಹೊರಟ್ಟಿ

ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಹೇಳಿಕೆ ಕುರಿತು ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಕುರಿತು ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ. ಈ ಕುರಿತು ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡರು ಸಭೆ ಕರೆದು ಸ್ಪಷ್ಟಪಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. , ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರ ಮೇಲೆ ಸಾಫ್ಟ್ ಕಾರ್ನರ್ ಹೊಂದಿರುವುದು ಸತ್ಯ. ಆದರೆ ಅವರು …

Read More »

ಪಾಕ್ ಪರ ಘೋಷಣೆ ಪ್ರಕರಣ- ಆರೋಪಿಗಳಿಗೆ ಕಾಶ್ಮೀರಕ್ಕೆ ತೆರಳಲು ನ್ಯಾಯಾಲಯ ನಿರಾಕರಣೆ

ಹುಬ್ಬಳ್ಳಿ: ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ತಮ್ಮ ಮೂಲ ಸ್ಥಳಕ್ಕೆ ಹೋಗಲು ಅರ್ಜಿ ಸಲ್ಲಿಸಿದ್ದರು. ವಿದ್ಯಾರ್ಥಿಗಳ ಅರ್ಜಿಯನ್ನು ಹುಬ್ಬಳ್ಳಿಯ ಎರಡನೇ ಜೆಎಂಎಫ್‍ಸಿ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.ಫೆಬ್ರವರಿ 15 ರಂದು ಕೆಎಲ್‍ಇ ಕಾಲೇಜಿನಲ್ಲಿ ಕಾಶ್ಮೀರಿ ಮೂಲದ ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ವಿದ್ಯಾರ್ಥಿಗಳ ಜಾಮೀನಿಗೆ ಸಂಬಂಧಿಸಿದಂತೆ ಬೆಂಗಳೂರಿನ ವಕೀಲರ ತಂಡ ವಿದ್ಯಾರ್ಥಿಗಳ ಪರ ವಕಾಲತ್ತು ವಹಿಸಿತ್ತು. ಈ ವೇಳೆ …

Read More »

ವಾಯವ್ಯ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗದಿಂದ ಎಸಿ ಬಸ್ ಸಂಚಾರ ಆರಂಭ

ಹುಬ್ಬಳ್ಳಿ: ಲಾಕ್‍ಡೌನ್ ಪರಿಣಾಮ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಳಿಸಲಾಗಿದ್ದ ಎಸಿ ಬಸ್‍ಗಳ ಸಂಚಾರವನ್ನು ಸರ್ಕಾರದ ಅನುಮತಿ ಮೇರೆಗೆ ಸೋಮವಾರದಿಂದ ಪುನರಾರಂಭಿಸಲಾಗುತ್ತಿದೆ. ಮೊದಲ ಹಂತದಲ್ಲಿ ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಮೈಸೂರಿನ ನಡುವೆ ಎಸಿ ಸ್ಲೀಪರ್ ಮತ್ತು ವೋಲ್ವೋ ಬಸ್‍ಗಳ ಸಂಚಾರ ಆರಂಭಿಸಲಾಗುತ್ತದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ತಿಳಿಸಿದ್ದಾರೆ. ಬಸ್ ಹೊರಡುವ ಸಮಯದ ವಿವರ: ಹುಬ್ಬಳ್ಳಿಯಿಂದ ಬೆಂಗಳೂರಿಗೆ ವೋಲ್ವೊ ಬಸ್ ಮಧ್ಯಾಹ್ನ 3 ಗಂಟೆಗೆ ಮತ್ತು ರಾತ್ರಿ 10.30ಕ್ಕೆ ಹೊರಡುತ್ತದೆ. ಎಸಿ …

Read More »

ಪೊಲೀಸ್ ಠಾಣೆ ಎದುರಲ್ಲೇ ಇರುವ ಶ್ವಾನವೊಂದು, ಕೊರೊನಾ ಸೊಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದ ಕೊರೊನಾ ವಾರಿಯರ್ ಗೆ ಸ್ವಾಗತ ಮಾಡಿಕೊಂಡಿದೆ.

ಧಾರವಾಡ: ಯಾವತ್ತೂ ಧಾರವಾಡದ ಪೊಲೀಸ್ ಠಾಣೆ ಎದುರಲ್ಲೇ ಇರುವ ಶ್ವಾನವೊಂದು, ಕೊರೊನಾ ಸೊಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಂದ ಕೊರೊನಾ ವಾರಿಯರ್ ಗೆ ಸ್ವಾಗತ ಮಾಡಿಕೊಂಡಿದೆ. ಕಳೆದ 15 ದಿನಗಳ ಹಿಂದೆ ನಗರದ ಶಹರ ಪೊಲೀಸ್ ಠಾಣೆಯ ಮಹಿಳಾ ಮುಖ್ಯ ಪೇದೆಗೆ ಕೊರೊನಾ ಸೊಂಕು ತಗುಲಿತ್ತು. ಗುಣಮುಖರಾಗಿ ಇವತ್ತು ಮುಖ್ಯ ಪೇದೆ ಕರ್ತವ್ಯಕ್ಕೆ ಹಾಜರಾಗಲು ಠಾಣೆಗೆ ಬಂದಾಗ ಎಸಿಪಿ ಅನುಷಾ ಮುಖ್ಯ ಪೇದೆಯನ್ನು ಸ್ವಾಗತಿಸಿಕೊಂಡರು. ಇದೇ ವೇಳೆ ಸ್ಥಳದಲ್ಲಿದ್ದ ಈ …

Read More »

ಬಿಜೆಪಿ ಮುಖಂಡನಿಂದ ಎರಡನೇ ಪತ್ನಿ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ

ಹುಬ್ಬಳ್ಳಿ: ಬಿಜೆಪಿ ಮುಖಂಡನೊಬ್ಬ ಗುಟ್ಟಾಗಿ ಎರಡನೇ ಮದುವೆಯಾಗಿದ್ದು, ಪಡೆದುಕೊಂಡ ಹಣವನ್ನು ವಾಪಸ್ ಕೇಳಿದ್ದಕ್ಕೆ ಪತ್ನಿಯನ್ನೇ ರಸ್ತೆಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಹುಬ್ಬಳ್ಳಿಯ ಅಕ್ಷಯ ಕಾಲೋನಿಯಲ್ಲಿ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಿಜೆಪಿ ಮುಖಂಡ, ಆತನ ಮೊದಲ ಪತ್ನಿ ಮತ್ತು ಮಕ್ಕಳು ಸೇರಿಕೊಂಡು ಎರಡನೇ ಪತ್ನಿ ಹಾಗೂ ಆಕೆಯ ಸಂಬಂಧಿಕರ ಮೇಲೆ ಹಲ್ಲೆ ಮಾಡಿದ್ದಾರೆ. ಮೊದಲ ಪತ್ನಿ ಇದ್ದರೂ ಆಕೆ ಮೃತಪಟ್ಟಿರುವುದಾಗಿ ನಂಬಿಸಿದ್ದ ಬಿಜೆಪಿ ಮುಖಂಡ 2012 ರಲ್ಲಿ ಎರಡನೇ ಮದುವೆಯಾಗಿದ್ದಾನೆ. …

Read More »

ಜು.27ರಿಂದ ರಾಜ್ಯಾದ್ಯಂತ ಎಪಿಎಂಸಿ ಬಂದ್‍ಗೆ ನಿರ್ಧಾರ: ಶಂಕರಣ್ಣ ಮುನವಳ್ಳಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಒಂದು ದೇಶ ಒಂದು ದರವನ್ನು ರಾಜ್ಯ ಸರ್ಕಾರ ಜಾರಿ ಮಾಡಬೇಕು. ಅಲ್ಲದೆ ಎಪಿಎಂಸಿ ಸೆಸ್ ಗೊಂದಲವನ್ನು ರಾಜ್ಯ ಸರ್ಕಾರ ನಿವಾರಣೆ ಮಾಡಬೇಕೆಂದು ಒತ್ತಾಯಿಸಿ ಜು.27ರಿಂದ ರಾಜ್ಯಾದ್ಯಂತ ಅನಿರ್ಧಿಷ್ಟ ಅವಧಿಯವರೆಗೆ 162 ಎಪಿಎಂಸಿ ಬಂದ್ ಮಾಡಲಾಗುತ್ತದೆ ಎಂದು ಚೆಂಬರ್ ಆಫ್ ಕಾಮರ್ಸ್ ಮುಖ್ಯಸ್ಥ ಶಂಕರಣ್ಣ ಮುನವಳ್ಳಿ ಎಚ್ಚರಿಸಿದ್ದಾರೆ. ನಗರದಲ್ಲಿ ಇಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಪದಾಧಿಕಾರಿಗಳ ಹಾಗೂ ವರ್ತಕರ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿ …

Read More »

ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಿಗೆ ಪಲ್ಸ್ ಆಕ್ಸಿಮೀಟರ್: ಧಾರವಾಡ ಎಸ್‍ಪಿ

ಧಾರವಾಡ: ಕೊರೊನಾ ವಿರುದ್ಧ ನಮ್ಮ ಪೊಲೀಸರು ಹೋರಾಡಬೇಕಿದೆ, ಕೆಲಸ ಮಾಡಬೇಕಿದೆ. ಹೀಗಾಗಿ ಮುನ್ನೆಚ್ಚರಿಕಾ ಪರಿಕರಗಳ ಅಗತ್ಯವಿದೆ ಎಂದು ಧಾರವಾಡ ಎಸ್‍ಪಿ ವರ್ತಿಕಾ ಕಟಿಯಾರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಠಾಣೆಗೆ ಪಲ್ಸ್ ಆಕ್ಸಿಮೀಟರ್ ಕೊಟ್ಟಿದ್ದೇವೆ, ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಠಾಣೆಯವರು ಪಲ್ಸ್ ಆಕ್ಸಿಮೀಟರ್ ರೀಡಿಂಗ್ ತೆಗೆಯಬೇಕು ಎಂದು ಹೇಳಿದರು. ಈಗಾಗಲೇ ನಮ್ಮಲ್ಲಿ 8 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಆಗಿದೆ, ಇಬ್ಬರು ಗುಣಮುಖರಾಗಿದ್ದಾರೆ, ನಮ್ಮೊಂದಿಗೆ ಕರ್ತವ್ಯ …

Read More »

ಕೊರೊನಾ ಗೆದ್ದು ಬಂದವರಿಂದ್ಲೇ ಜಾಗೃತಿ- ಜಿಲ್ಲಾಡಳಿತದಿಂದ ವಿನೂತನ ಪ್ರಯತ್ನ

ಹುಬ್ಬಳ್ಳಿ: ಕೊರೊನಾ ಭಯವನ್ನು ಹೋಗಲಾಡಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಆತ್ಮಸ್ಥೈರ್ಯ ಹೆಚ್ಚಿಸಲು ಜಿಲ್ಲಾಡಳಿತವು ಮಹಾನಗರ ಪಾಲಿಕೆ ಸಹಯೋಗದೊಂದಿಗೆ ವಿನೂತನ ಪ್ರಯತ್ನವನ್ನು ಕೈಗೆತ್ತಿಕೊಂಡಿದೆ. ಈ ಮೂಲಕ ಜನರಲ್ಲಿರುವ ಆತಂಕ ದೂರ ಮಾಡುವ ಮಾರ್ಗವಾಗಿದೆ. ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಬಂದವರ ವಿಶೇಷ ತಂಡಗಳನ್ನು ರಚಿಸಿ, ಎನ್‍ಜಿಒ ಸಹಭಾಗಿತ್ವದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಆತ್ಮಸ್ಥೈರ್ಯ ಮೂಡಿಸುವ ಯೋಜನೆಯೊಂದನ್ನು ಜಿಲ್ಲಾಡಳಿತ ರೂಪಿಸಿದ್ದು, ಚಿಕಿತ್ಸೆ ಪಡೆದು ಗುಣಮುಖರಾಗಿ ಹೊರಗೆ ಬಂದವರೇ ಇದಕ್ಕೆ …

Read More »

ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಸುವ ಕುರಿತು ಜಿಲ್ಲಾಡಳಿತ, ಜನಪ್ರತಿನಧಿಗಳು ಹಾಗೂ ಸಂಘ ಸಂಸ್ಥೆಗಳ ಅಭಿಪ್ರಾಯ ಪಡೆದು ತೀರ್ಮಾನ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಲಾಕ್‍ಡೌನ್ ಮುಂದುವರಿಸುವ ಕುರಿತು ಜಿಲ್ಲಾಡಳಿತ, ಜನಪ್ರತಿನಧಿಗಳು ಹಾಗೂ ಸಂಘ ಸಂಸ್ಥೆಗಳ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ನಗರದ ಮಧುರ ಕಾಲೋನಿಯ ನಿವಾಸದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡುವ ಅವಶ್ಯಕತೆ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿಗಳು ಹಾಗೂ ಮುಖ್ಯಕಾರ್ಯದರ್ಶಿಗಳ ಒಪ್ಪಿಗೆ ಪಡೆದು …

Read More »