Breaking News

ಹುಬ್ಬಳ್ಳಿ

ಹುಬ್ಬಳ್ಳಿ:ಕೋವಿಡ್-19 ಸೋಂಕಿನಿಂದ ಗುಣಮುಖರಾದ ರೋಗಿಗಳು ರಕ್ತ ನೀಡಲು ಒಪ್ಪುತ್ತಿಲ್ಲ.

ಹುಬ್ಬಳ್ಳಿ: ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿಗೆ ಹುಬ್ಬಳ್ಳಿಯ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಐಸಿಎಂಆರ್ ನಿಂದ ಅನುಮತಿ ನೀಡಲಾಗಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕಿಮ್ಸ್ ವೈದ್ಯರು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ರಕ್ತವೇ ಸಿಗುತ್ತಿಲ್ಲ. ಕೋವಿಡ್-19 ಸೋಂಕಿನಿಂದ ಗುಣಮುಖರಾದ ರೋಗಿಗಳು ರಕ್ತ ನೀಡಲು ಒಪ್ಪುತ್ತಿಲ್ಲ. ಮೊದಲು ರಕ್ತ ನೀಡಲು ಒಪ್ಪಿಕೊಂಡಿದ್ದ ಕೊರೊನಾ ಸೋಂಕಿನಿಂದ ಗುಣಮುಖರಾದವರು ಈಗ ರಕ್ತ ನೀಡಲು ಸಾಧ್ಯವಿಲ್ಲ ಎನ್ನುತ್ತಿದ್ದಾರೆ. ಹೊರ ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾದವರ ರಕ್ತಕ್ಕಾಗಿ ಕಿಮ್ಸ್ …

Read More »

ಸಾರ್ವಜನಿಕವಾಗಿ ಉಗುಳಿ ಸಿಕ್ಕಿಹಾಕಿಕೊಂಡ ಕುಖ್ಯಾತ ರೌಡಿ ಸಲೀಂ……….

ಹುಬ್ಬಳ್ಳಿ: ಕಲಬುರಗಿಯಲ್ಲಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ಸಲೀಂ ಬಳ್ಳಾರಿಯನ್ನು ಹುಬ್ಬಳ್ಳಿ ನೇಕಾರ ನಗರದ ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರ ಕೈಗೆ ಸಿಕ್ಕಾಗಲೂ ಚಳ್ಳೆ ಹಣ್ಣು ತಿನ್ನಿಸಿ ಪರಾರಿಯಾಗಿದ್ದ ಸಲೀಂ ಬಳ್ಳಾರಿಯನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಲಬುರಗಿಯಲ್ಲಿ ಕೊಲೆ ಮಾಡಿರುವ ಸಲೀಂ ಬಳ್ಳಾರಿ ತಲೆಮರೆಸಿಕೊಂಡಿದ್ದು, ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಲಬುರಗಿ ಪೊಲೀಸರು ಹುಡುಕುವುದನ್ನು ಸ್ಥಗಿತಗೊಳಿಸಿದ್ದರು. ಈತ ಅನೇಕ ಪ್ರಕರಣಗಳಲ್ಲಿ ಬೇಕಾಗಿರುವ ವ್ಯಕ್ತಿಯಾಗಿದ್ದ. ಕಲಬುರಗಿಯಲ್ಲಿ ಸುಪಾರಿ ಪಡೆದು ಕೊಲೆ ಮಾಡಿರುವ …

Read More »

ಕಿಮ್ಸ್ ವೈದ್ಯರ ಜೊತೆ ಕೊರೊನಾ ಚಿಕಿತ್ಸೆ ಬಗ್ಗೆ ಬೊಮ್ಮಾಯಿ ಚರ್ಚೆ………

ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯ ವೈದ್ಯರ ನಿಯೋಗ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಹುಬ್ಬಳ್ಳಿಯ ಗೃಹ ಕಛೇರಿಯಲ್ಲಿ ಭೇಟಿ ಮಾಡಿ, ಕೋವಿಡ್-19 ಕುರಿತು ಚರ್ಚಿಸಿದರು. ಕಿಮ್ಸ್ ಆಸ್ಪತ್ರೆ ವೈದ್ಯರ ತಂಡ ಕೊರೊನಾ ವಿರುದ್ಧ ಹೋರಾಟದಲ್ಲಿ ತೊಡಗಿಕೊಂಡಿದ್ದು, ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಐಸಿಎಂಆರ್ ಕಿಮ್ಸ್‍ಗೆ ಅನುಮತಿ ನೀಡಿದೆ. ಹೀಗಾಗಿ ತಮ್ಮ ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಮನವಿಯನ್ನು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅವರ ನೇತೃತ್ವದ ತಂಡ ಗೃಹ ಸಚಿವರಿಗೆ ಸಲ್ಲಿಸಿದೆ. ಮನವಿಯನ್ನು …

Read More »

ತಾಯಂದಿರೊಂದಿಗೆ ನರ್ಸ್‍ಗಳ ಅನುಚಿತ ವರ್ತನೆ- ಸಾರ್ವಜನಿಕರ ಆಕ್ರೋಶ

ಹುಬ್ಬಳ್ಳಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಹಾಗೂ ನರ್ಸ್ ಗಳು ತಮ್ಮ ಜೀವ ಪಣಕ್ಕಿಟು ರೋಗಿಗಳ ಉಪಚಾರ ಮಾಡುತ್ತಿದ್ದಾರೆ. ಆದರೆ ಹಳೇ ಹುಬ್ಬಳ್ಳಿಯ ಹೆಗ್ಗೇರಿ ನಗರ ಆರೋಗ್ಯ ಕೇಂದ್ರದ ನರ್ಸ್ ಗಳು ಮಾತ್ರ ಮಕ್ಕಳು ಹಾಗೂ ಪೋಷಕರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಹೆಗ್ಗೇರಿ ಆರೋಗ್ಯ ಕೇಂದ್ರದಲ್ಲಿ ಪ್ರತಿ ಗುರುವಾರ ನವಜಾತ ಶಿಶುಗಳಿಂದ ಹಿಡಿದು 10 ವರ್ಷದ ಮಕ್ಕಳಿಗೆ ಓಪಿವಿ, ಬಿಸಿಜಿ, ಪೆಂಟಾ, ಐಪಿವಿ, ವಿಟಮಿನ್ ಲಸಿಕೆಯನ್ನು ಹಾಕಲಾಗುತ್ತದೆ. …

Read More »

ವೈನ್ ಶಾಪ್ ತೆರೆಯಲು ಹಣದ ಬೇಡಿಕೆ- ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ!

ಹುಬ್ಬಳ್ಳಿ: ವೈನ್ ಶಾಪ್ ತೆರೆಯಲು ಅನುಮತಿ ನೀಡಲು ಲಂಚ ಪಡೆಯುತ್ತಿದ್ದ ಪಿಡಿಒ ಅಧಿಕಾರಿಯನ್ನ ಎಸಿಬಿ ಬಲೆಗೆ ಬಿದಿದ್ದಾರೆ. ಜಿಲ್ಲೆಯ ವರೂರು ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ್ ಬಡಿಗೇರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಗ್ರಾಮದ ‘ಗಾಯತ್ರಿ ವೈನ್ಸ್’ ಮುಚ್ಚಿಸಲು ಮಹಿಳಾ ಸಂಘದವರು, ಗ್ರಾಮಸ್ಥರು ಅರ್ಜಿ ಕೊಟ್ಟಿದ್ದರು. ಇದನ್ನೇ ಹಣ ಪೀಕಲು ಬಳಸಿಕೊಂಡ ಪಿಡಿಒ ಬಸವರಾಜ್, ಗ್ರಾಮಸ್ಥರು ನೀಡಿರುವ ಅರ್ಜಿ ತಿರಸ್ಕಾರ ಮಾಡಿ ವೈನ್ ಶಾಪ್ ತೆರಯಲು ತೊಂದರೆ ಇಲ್ಲದಂತೆ ಮಾಡಲು …

Read More »

ರಕ್ತದಾನ ಮಾಡಿ ಮಾದರಿಯಾದ ಪಿಎಸ್‍ಐ…………

ಹುಬ್ಬಳ್ಳಿ: ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿರುವ ಪೊಲೀಸ್ ಅಧಿಕಾರಿಯೊಬ್ಬರು ಕರ್ತವ್ಯದಲ್ಲಿರುವಾಗಲೇ ರಕ್ತದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಹುಬ್ಬಳ್ಳಿಯ ಸುಚಿರಾಯು ಆಸ್ಪತ್ರೆಯಲ್ಲಿ ರೋಗಿಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮಾಡಿದ ಹಿನ್ನೆಲೆಯಲ್ಲಿ ರಕ್ತದ ಅವಶ್ಯಕತೆ ಇತ್ತು. ಸುದ್ದಿ ತಿಳಿಯುತ್ತಿದ್ದಂತೆ ಧಾರವಾಡ ಜಿಲ್ಲೆಯ ಗುಡಗೇರಿ ಪೊಲೀಸ್ ಠಾಣೆಯ ಪಿಎಸ್‍ಐ ನವೀನ ಜಕ್ಕಲಿಯವರು ಆಸ್ಪತ್ರೆಗೆ ಭೇಟಿ ನೀಡಿ ರಕ್ತದಾನ ಮಾಡುವ ಮೂಲಕ ರೋಗಿಯೊಬ್ಬರಿಗೆ ಜೀವದಾನ ಮಾಡಿದ್ದಾರೆ. ವಿಲಿಯಂ ವರ್ಗೀಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಲಾಕ್‍ಡೌನ್ ಸಂದರ್ಭದಲ್ಲಿ …

Read More »

ಫೇಸ್‍ಬುಕ್ ನಲ್ಲಿ ಅಗ್ಗದ ಐಫೋನ್ ಜಾಹೀರಾತು ನೋಡಿ ವ್ಯಕ್ತಿಯೊಬ್ಬ ಆರ್ಡರ್ ಮಾಡುವ ಮೂಲಕ 20 ಸಾವಿರ ವಂಚನೆಗೆ ಒಳಗಾಗಿದ್ದಾನೆ.

ಹುಬ್ಬಳ್ಳಿ: ಫೇಸ್‍ಬುಕ್ ನಲ್ಲಿ ಅಗ್ಗದ ಐಫೋನ್ ಜಾಹೀರಾತು ನೋಡಿ ವ್ಯಕ್ತಿಯೊಬ್ಬ ಆರ್ಡರ್ ಮಾಡುವ ಮೂಲಕ 20 ಸಾವಿರ ವಂಚನೆಗೆ ಒಳಗಾಗಿದ್ದಾನೆ. ಆನ್‍ಲೈನ್‍ನಲ್ಲಿ ಐಪ್ಯಾಡ್, ಐವಾಚ್, ಐಫೋನ್ ಆರ್ಡರ್ ಮಾಡಿದ ವ್ಯಕ್ತಿಗೆ ಕೊರಿಯರ್ ಹಾಗೂ ರಿಜಿಸ್ಟ್ರೇಷನ್ ಶುಲ್ಕದ ನೆಪದಲ್ಲಿ ಆನ್‍ಲೈನ್ ಕಳ್ಳ 20 ಸಾವಿರ ಪಡೆದು ವಂಚಿಸಿದ್ದಾನೆ. ಧಾರವಾಡದ ಪವನಕುಮಾರ್ ವಂಚನೆಗೆ ಒಳಗಾಗಿದ್ದು, ಪವನಕುಮಾರ್ ಅವರು ಮೊಬೈಲ್ ನಲ್ಲಿ ಫೇಸ್‍ಬುಕ್ ನೋಡುತ್ತಿದ್ದಾಗ ಬ್ಲಿಂಕ್ ಆಗುತ್ತಿದ್ದ, `ಐ ಫೋನ್ ಅಟ್ ಚೀಪೆಸ್ಟ್ ಪ್ರೈಸ್’ …

Read More »

ಅಣ್ಣನನ್ನು ಕೊಂದು ಹುಣಸೆಮರಕ್ಕೆ ನೇತು ಹಾಕಿದ ತಮ್ಮ……..

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ತಮ್ಮನೊಬ್ಬ ತನ್ನ ಸ್ವಂತ ಅಣ್ಣನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಮಾವನೂರಿನಲ್ಲಿ ನಡೆದಿದೆ. ಅಣ್ಣ ಮಂಜುನಾಥ ಸುಳ್ಳದ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ಕಲ್ಮೇಶ ಸುಳ್ಳದ ಎಂದು ಗುರುತಿಸಲಾಗಿದೆ. ಮೇ 9ರಂದು ಪಾನಮತ್ತನಾಗಿ ಮನೆಗೆ ಬಂದಿದ್ದ ಮಂಜುನಾಥ, ಆಸ್ತಿ ಮತ್ತು ಮನೆಯಲ್ಲಿ ತನಗೆ ಪಾಲು ಕೊಡುವಂತೆ ತಾಯಿ ಶಿವಲಿಂಗವ್ವ ಜೊತೆ ಜಗಳವಾಡಿ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವಿಚಾರ ತಿಳಿದು ಕೆರಳಿದ ತಮ್ಮ ಕಲ್ಮೇಶ ಅಣ್ಣನ …

Read More »

ಹುಬ್ಬಳ್ಳಿ-ಧಾರವಾಡದಲ್ಲಿ ಪಾರ್ಸಲ್ ಸೇವೆ ಪ್ರಾರಂಭಿಸಿದ ಇಂದಿರಾ ಕ್ಯಾಂಟಿನ್

ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವ ಭೀತಿಯಿಂದ ಲಾಕ್‍ಡೌನ್ ಘೋಷಣೆಯಾಗಿದ್ದ ದಿನದಿಂದ ಅವಳಿ ನಗರ ಹುಬ್ಬಳ್ಳಿ-ಧಾರವಾಡದಲ್ಲಿ ಬಂದ್ ಆಗಿದ್ದ ಇಂದಿರಾ ಕ್ಯಾಂಟೀನ್‍ಗಳು ಈಗ ಪಾರ್ಸಲ್ ಸೌಲಭ್ಯ ಆರಂಭಿಸಿದೆ. ಹುಬ್ಬಳ್ಳಿಯಲ್ಲಿ ಮೂರು ಹಾಗೂ ಧಾರವಾಡದಲ್ಲಿ ಎರಡು ಇಂದಿರಾ ಕ್ಯಾಂಟಿನ್‍ಗೆ ಪಾರ್ಸಲ್ ಸೌಲಭ್ಯ ಆರಂಭಿಸಲು ಅನುಮತಿ ನೀಡಲಾಗಿದೆ. ಹುಬ್ಬಳ್ಳಿಯಲ್ಲಿ ಏಳು ಮತ್ತು ಧಾರವಾಡದಲ್ಲಿ ಎರಡು ಇಂದಿರಾ ಕ್ಯಾಂಟೀನ್‍ಗಳಿದ್ದು, ಮೊದಲ ಹಂತದಲ್ಲಿ ಐದು ಕ್ಯಾಂಟೀನ್‍ಗಳನ್ನು ಆರಂಭಿಸಲಾಗಿದೆ. ಹುಬ್ಬಳ್ಳಿಯಲ್ಲಿ ಕಿಮ್ಸ್, ಉಣಕಲ್ ಮತ್ತು ಹೊಸ ಬಸ್ ನಿಲ್ದಾಣ, …

Read More »

ಪತಿಯ ಅಂತ್ಯಕ್ರಿಯೆಗೆ ತೆರಳಲು 20 ನಿಮಿಷದಲ್ಲೇ ಪಾಸ್ ನೀಡಿದ ತಾಲೂಕಾಡಳಿತ………

ಹುಬ್ಬಳ್ಳಿ: ಪತಿಯ ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ಇಲ್ಲದೆ ಪುಟ್ಟ ಮಕ್ಕಳೊಂದಿಗೆ ಪರದಾಡುತ್ತಿದ್ದ ಮಹಿಳೆಗೆ 20 ನಿಮಿಷದಲ್ಲಿ ಪಾಸ್ ವ್ಯವಸ್ಥೆ ಮಾಡುವ ಮೂಲಕ ಹುಬ್ಬಳ್ಳಿ ತಾಲೂಕ ಆಡಳಿತ ಕಾರ್ಯದಕ್ಷತೆಯನ್ನು ಮೆರೆದಿದೆ. ಅರವಿಂದ ನಗರದ ಯಶೋಧ ಲೋಕಾಪುರ ಎಂಬವರ ಪತಿ ಬಾಗಲಕೋಟೆಯ ನವನಗರದಲ್ಲಿ ಸಾವನ್ನಪ್ಪಿದ್ದರು. ಬಾಗಲಕೋಟೆಗೆ ತೆರಳು ಪಾಸ್ ಇಲ್ಲದೆ ಎರಡು ಚಿಕ್ಕ ಮಕ್ಕಳ ಜೊತೆ ತಹಶೀಲ್ದಾರ ಕಚೇರಿಗೆ ಆಗಮಿಸಿದ್ದರು. ಅಂತ್ಯ ಸಂಸ್ಕಾರಕ್ಕೆ ತೆರಳಲು ಪಾಸ್ ನೀಡುವಂತೆ ಮನವಿ ಮಾಡಿದ್ದಾರೆ. ಮಹಿಳೆಯ …

Read More »