Breaking News

ಹುಬ್ಬಳ್ಳಿ

ಬ್ಯಾಂಕ್​ ಅಧಿಕಾರಿಗಳ ಜೊತೆ ಹು-ಧಾ ಪೊಲೀಸ್​ ಕಮಿಷನರ್​ ಸಭೆ

ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಮತ್ತು ಧಾರವಾಡ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ವಿವಿಧ ಬ್ಯಾಂಕ್​​ ಮತ್ತು ಹಣಕಾಸು ಸಂಸ್ಥೆಗಳ ಅಧಿಕಾರಿಗಳ ಜೊತೆ ನಗರ ಪೊಲೀಸ್​ ಕಮಿಷನರ್​ ಎನ್​. ಶಶಿಕುಮಾರ್​ ಇಂದು ನಗರದ ಬಿವಿಬಿ ಕಾಲೇಜಿನಲ್ಲಿ ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿ ಪೊಲೀಸ್​ ಕಮಿಷನರ್​ ಎನ್​. ಶಶಿಕುಮಾರ್, “ಬ್ಯಾಂಕ್​​ ಮತ್ತು ಹಣಕಾಸು ಸಂಸ್ಥೆಗಳ ಜೊತೆ ಎರಡು ಗಂಟೆ ಸುರಕ್ಷತಾ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ …

Read More »

ಧಾರವಾಡ ಶಹರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ,

– ಧಾರವಾಡ ಶಹರ ಠಾಣೆಯ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ, ಓರ್ವ ಚಾಲಾಕಿ ಕಳ್ಳ ಅಂದರ್…. ಬಂಧಿತನಿಂದ 6ಲಕ್ಷ 45 ಸಾವಿರ ಮೌಲ್ಯದ ಚಿನ್ನಾಭರಣ ಜಪ್ತಿ… ಧಾರವಾಡ ಶಹರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಧಾರವಾಡ ಕವಲಗೇರಿ ರಸ್ತೆಯ ರಾಹುಲ್ ಗಾಂಧಿ‌ನಗರದಲ್ಲಿನ ಮನೆ ಕಳ್ಳತನ ಪ್ರಲರಣಕ್ಲೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ವೈ- ಗದಗ ಮೂಲದ ಸುನೀಲ ಮುಳಗುಂದ ಬಂಧಿತ ಚಾಲಾಕಿ ಕಳ್ಳನಾಗಿದ್ದಾನೆ. ಕಳೆದ 2024 ಡಿಸೆಂಬರ 8 …

Read More »

ಬಿಜೆಪಿಯು ದ್ವೇಷ ಹಾಗೂ ಹಿಂಸೆಯ ರಾಜಕಾರಣ‌ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ದೂರಿದರು.

ಹುಬ್ಬಳ್ಳಿ: “ಬೆಳಗಾವಿಯಲ್ಲಿ ನಡೆಸುತ್ತಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ಬಿಜೆಪಿಯು ಕಾಂಗ್ರೆಸ್ ನಾಯಕರನ್ನು ಹೆದರಿಸುತ್ತಿದೆ” ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮುಡಾ ಹಗರಣದಲ್ಲಿ 300 ಕೋಟಿ ಆಸ್ತಿ ಜಪ್ತಿ ಮಾಡಿರುವುದಾಗಿ ಇ.ಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಮೂಲಕ ಬಿಜೆಪಿ ದ್ವೇಷ ಹಾಗೂ ಹಿಂಸೆಯ ರಾಜಕಾರಣ‌ ಮಾಡುತ್ತಿದೆ. ಕಾಂಗ್ರೆಸ್​ನ ಪ್ರಭಾವಿ …

Read More »

ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸ ಮಾಡುತ್ತೇವೆ : ಡಿ ಕೆ ಶಿ

ಹುಬ್ಬಳ್ಳಿ: ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ ಎನ್ನುವ ಮೂಲಕ ಬೆಳಗಾವಿಯಿಂದಲೇ ಕಾಂಗ್ರೆಸ್ ಪತನ ಎನ್ನುವ ಬಿಜೆಪಿ ಹೇಳಿಕೆಗೆ ಡಿಸಿಎಂ ಡಿ‌. ಕೆ ಶಿವಕುಮಾರ್ ತಿರುಗೇಟು ನೀಡಿದರು. ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾತನಾಡಿದ ಅವರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗನಲ್ಲಿ ಜೈ ಬಾಪೂ, ಜೈ ಭೀಮ, ಜೈ ಸಂವಿಧಾನ ಕಾರ್ಯಕ್ರಮ ಜ. 21 ರಂದು ನಡೆಯಲಿದೆ. ಈ ಹಿನ್ನೆಲೆ ಜ. 18 ರಂದು ಪೂರ್ವಭಾವಿ …

Read More »

ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ:

ಹುಬ್ಬಳ್ಳಿ: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಉತ್ತರ ಪ್ರದೇಶದ ತುಂಡ್ಲಾ ರೈಲು ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ಓಡಿಸಲು ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಯಾತ್ರಾರ್ಥಿಗಳಿಗೆ ಅನುಕೂಲಕರ ಪ್ರಯಾಣದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿವೆ. ವಿವರಗಳು ಈ ಕೆಳಗಿನಂತಿವೆ.. ಹುಬ್ಬಳ್ಳಿ-ತುಂಡ್ಲಾ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸಂಚಾರ: ರೈಲು ಸಂಖ್ಯೆ 07379 – …

Read More »

ಮುಡಾ ಹಗರಣ ‘CBI’ ತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಜ.27ಕ್ಕೆ ಮುಂದೂಡಿಕೆ

ಧಾರವಾಡ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ಜ.27ಕ್ಕೆ ಮುಂದೂಡಿದೆ. ಸ್ನೇಹಮಯಿ ಕೃಷ್ಣ ಪರ ವಕೀಲ ವಸಂತಕುಮಾರ ಮಾತನಾಡಿ, “ಮುಡಾ ಹಗರಣ ಸಂಬಂಧ ಎರಡ್ಮೂರು ಬಾರಿ ವಿಚಾರಣೆ ಬೆಂಗಳೂರನಲ್ಲಿ ನಡೆದಿತ್ತು. ಮುಡಾ ಹಗರಣ ಸಂಬಂಧ ಲೋಕಾಯುಕ್ತದಲ್ಲಿ ಎಫ್‌ಐಆರ್ ಆಗಿದೆ. ಆ ತನಿಖೆ ಪ್ರಮಾಣಿಕವಾಗಿ ಆಗಬೇಕೆಂದು ವಿಶೇಷ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದೆವು. ಲೋಕಾಯುಕ್ತ ರಾಜ್ಯ ಸರ್ಕಾರದ ಕೈ …

Read More »

45 ರೌಡಿಶೀಟರ್​ಗಳ ಗಡಿಪಾರು ಮಾಡಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ

ಹುಬ್ಬಳ್ಳಿ: ಅವಳಿ- ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ನಿರತರಾಗಿರುವ 45 ಮಂದಿ ರೌಡಿಶೀಟರ್‌ಗಳಿಗೆ ಗಡಿಪಾರು ಮಾಡಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ರೌಡಿಶೀಟರ್‌ಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ಭೂ ಮಾಫಿಯಾ ಸೇರಿದಂತೆ ಇನ್ನಿತರ ಪ್ರಕರಣಗಳಲ್ಲಿ ಭಾಗಿಯಾಗಿರುವ ರೌಡಿಶೀಟರ್​ಗಳಿಂದ …

Read More »

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ: ಜೋಶಿ‌ ಕಿಡಿ

ಹುಬ್ಬಳ್ಳಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮಾಜ ವಿಧ್ರೋಹಿಗಳಿಗೆ ಶಕ್ತಿ ಬಂದಂತಾಗಿದೆ. ಅಧಿಕಾರಕ್ಕೆ ಬಂದಾಗೆಲ್ಲ ಪಿಎಫ್​ಐ, ಎಸ್​ಡಿಪಿಐ ಮೇಲಿನ ಕೇಸ್​ಗಳನ್ನ ಹಿಂಪಡೆದ ಹಿನ್ನೆಲೆ ಕೆಲವರಿಗೆ ಶಕ್ತಿ ಬಂದಿದೆ. ಹೀಗಾಗಿ ಹಸು ಕೆಚ್ಚಲು ಕೊಯ್ಯುವ ಮಟ್ಟಕ್ಕೆ ಬಂದಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ‌ಜೋಶಿ‌ ರಾಜ್ಯ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದರು. ನಗರದಲ್ಲಿಂದು ‌ಮಾತನಾಡಿದ‌ ಅವರು, ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕ್ರಿಮಿನಲ್​ಗಳಿಗೆ ಧೈರ್ಯ ಬಂದಿದೆ. ಏನಾದರೂ ಆದ್ರೆ ರಕ್ಷಿಸಿಸುತ್ತಾರೆ ಅನ್ನೋ ಧೈರ್ಯ ಹುಟ್ಟಿಕೊಂಡಿದೆ. …

Read More »

ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು,

ಮೈಸೂರು: ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಸುರಕ್ಷತಾ ಕ್ರಮವಾಗಿ ಕಂಪನಿಯ ಟ್ರೈನಿ ಉದ್ಯೋಗಿಗಳಿಗೆ ಜನವರಿ 26ರವರೆಗೆ ರಜೆ ಘೋಷಣೆ ಮಾಡಲಾಗಿದೆ.   ಕಳೆದ 10 ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಚಿರತೆ, ಬೋನಿಗೆ ಬೀಳದೆ ಅರಣ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸುತ್ತಿದೆ. ಕ್ಯಾಮೆರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಆದರೆ ಕಾರ್ಯಾಚರಣೆ ವೇಳೆ ಇನ್ನೂ ಪತ್ತೆಯಾಗದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.   …

Read More »

ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಒಪ್ಪದ ವ್ಯಕ್ತಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಕೇಶ್ವಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ : ಅನೈಸರ್ಗಿಕ ಲೈಂಗಿಕ ಕ್ರಿಯೆಗೆ ಒಪ್ಪದಿದ್ದಾಗ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೇಶ್ವಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸೋನಿಯಾಗಾಂಧಿ ನಗರದ ನಿವಾಸಿಯಾದ ಕುಮಾರ್ ಬೆಟಗೇರಿ (57) ಎಂಬಾತ ಮೃತ ವ್ಯಕ್ತಿಯಾದ್ರೆ, ದೇವಾಂಗಪೇಟೆ ನಿವಾಸಿಯಾದ ಗೌಸ್ ಮೊಹಮ್ಮದ್ ನದಾಫ್ (40) ಎಂಬಾತ ಬಂಧಿತ ಆರೋಪಿ. ಗೌಸ್ ಮೊಹಮ್ಮದ್ ಡಿ. 22 ರಂದು ಸುಳ್ಳ ರೋಡ್ ಇಂದ್ರಪ್ರಸ್ಥ ಲೇಔಟ್​ನಲ್ಲಿ ಕುಮಾರ್ ಬೆಟಗೇರಿಯನ್ನ ಕೊಲೆ ಮಾಡಿ ಪರಾರಿಯಾಗಿದ್ದು, ಈ ಕುರಿತು …

Read More »