Breaking News
Home / ಹುಬ್ಬಳ್ಳಿ (page 12)

ಹುಬ್ಬಳ್ಳಿ

2ಎ ಮೀಸಲಾತಿ ಹೋರಾಟ: ಅ.13 ರಂದು ಗಬ್ಬೂರು ಬೈಪಾಸ್​ನಲ್ಲಿ ಇಷ್ಟಲಿಂಗ ಮಹಾಪೂಜೆ: ಬಸವಜಯ ಮೃತ್ಯಂಜಯ ಶ್ರೀ

ಹುಬ್ಬಳ್ಳಿ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಧಾರವಾಡ ಜಿಲ್ಲಾ ಘಟಕದ ಆಶ್ರಯದಲ್ಲಿ ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿಗಾಗಿ ಒತ್ತಾಯಿಸಿ 6 ನೇ ಹಂತದ ಚಳವಳಿಯನ್ನು ಅಕ್ಟೋಬರ್ 13 ರಂದು ಬೆಳಗ್ಗೆ 10ಕ್ಕೆ ನಗರದ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯಂಜಯ ಸ್ವಾಮೀಜಿ ತಿಳಿಸಿದರು. ಹೋರಾಟ ಯಾತ್ರೆ: ನಗರದಲ್ಲಿ ಇಂದು (ಬುಧವಾರ) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ”ಈಗಾಗಲೇ ಬೆಳಗಾವಿ‌ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾಧನೆ: ಕೆಎಂಎಫ್-24ರಲ್ಲಿ 3ನೇ ಸ್ಥಾನ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್​-24ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಉತ್ತಮ ಸಾಧನೆ ಮಾಡಿದೆ. ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲಿಕೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ರಾಜ್ಯದಲ್ಲಿ 3ನೇ ಸ್ಥಾನ ಪಡೆದುಕೊಂಡಿದೆ. ಎಲ್ಲ ಸ್ಥಿರಾಸ್ತಿಗಳನ್ನು ತೆರಿಗೆ (ಆಸ್ತಿ ಕರ) ವ್ಯಾಪ್ತಿಗೆ ತರುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಪೌರಾಡಳಿತ ನಿರ್ದೇಶನಾಲಯವು …

Read More »

ಸೈಕಲ್ ಯಾತ್ರೆ ‌ಮೂಲಕ ಅಪ್ಪು ಅಭಿಮಾನಿಯಿಂದ ಪರಿಸರ ಜಾಗೃತಿ

ಹುಬ್ಬಳ್ಳಿ : ದಿ.ಪುನೀತ್‌ ರಾಜ್​ಕುಮಾರ್‌ ಅವರ ಪರಿಸರ ಕಾಳಜಿ ಮೆಚ್ಚಿಕೊಂಡ ಅಭಿಮಾನಿಯೊಬ್ಬರು ಕರ್ನಾಟಕದಾದ್ಯಂತ ಸೈಕಲ್ ಯಾತ್ರೆ ನಡೆಸುತ್ತಾ ಜಾಗೃತಿ ಮೂಡಿಸುತ್ತಿದ್ದಾರೆ. ಸೈಕಲ್‌ ಯಾತ್ರೆ ನಡೆಸುತ್ತಿರುವ ಸುರೇಶ ಎಂಬವರು ಡಾ.ರಾಜ್​ಕುಮಾರ್​ ಅವರ ಹುಟ್ಟೂರು ಗಾಜನೂರಿನ ಪಕ್ಕದ ಜೀನಹಳ್ಳಿಯವರು. ಊರು, ಪಟ್ಟಣ, ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡುವ ಇವರು, ಅಲ್ಲಿನ ಶಾಲೆ, ಕಾಲೇಜು, ವಿಶ್ವವಿದ್ಯಾಲಯ, ಸಂಘ ಸಂಸ್ಥೆಗಳು ಹಾಗೂ ಅನೇಕ ಜನಪರ, ಕನ್ನಡಪರ ಆಟೋ ಚಾಲಕರ, ಮಾಲೀಕರ ಸಂಘದ ಸಹಯೋಗದೊಂದಿಗೆ ಸಸಿ …

Read More »

ಧಾರವಾಡ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷಿತರ ಪಟ್ಟಿ ಹೆಚ್ಚಾಗುತ್ತಿದೆ.

ಧಾರವಾಡ: ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಅಧಿಕಾರದ ಗದ್ದುಗೆ ಏರಿದೆ. ಇನ್ನೇನಿದ್ರು ಲೋಕಸಭಾ ಚುನಾವಣೆ ಮೇಲೆ ಎಲ್ಲ ಪಕ್ಷಗಳ ಕಣ್ಣುಗಳು ನೆಟ್ಟಿವೆ. ಜೊತೆಗೆ ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್​ಗಾಗಿ ಆಕಾಂಕ್ಷಿತರು ಈಗಲೇ ತಮ್ಮ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಹಾಗೆಯೇ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ಗಾಗಿ ಕೂಡ ಆಕಾಂಕ್ಷಿಗಳು ಬಹಿರಂಗವಾಗಿಯೇ ಸ್ಪರ್ಧಿಸುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಈಗಿನಿಂದಲೇ ಸಂಸತ್ ಚುನಾವಣೆಗೆ ಸಿದ್ಧತೆಗಳು ಶುರುವಾಗಿವೆ. ಹೀಗಾಗಿ ಸಹಜವಾಗಿ ಆಕಾಂಕ್ಷಿಗಳು ಮುನ್ನಲೆಗೆ ಬರುತ್ತಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿಯೂ ಸ್ಪರ್ಧೆಗಿಳಿಯಲು …

Read More »

ಹುಬ್ಬಳ್ಳಿಯಲ್ಲಿವೆ ಅನಧಿಕೃತ ವಾಣಿಜ್ಯ ಮಳಿಗೆಗಳು.. ವಾಣಿಜ್ಯ ಸಂಸ್ಥೆ ಕಾಯಿದೆ ಉಲ್ಲಂಘನೆ

ಹುಬ್ಬಳ್ಳಿ: ಹುಬ್ಬಳ್ಳಿಯು ಉತ್ತರ ಕರ್ನಾಟಕದ ಪ್ರಮುಖ ವಾಣಿಜ್ಯ ಕೇಂದ್ರವಾಗಿದೆ. ವಿವಿಧ ವಾಣಿಜ್ಯ ಚಟುವಟಿಕೆಗಳಿಂದಾಗಿ ರಾಜ್ಯದಲ್ಲೇ ಉತ್ತಮ ಹೆಸರು ಮಾಡಿದೆ. ಆದರೆ ಈ ನಗರದಲ್ಲಿ ವಾಣಿಜ್ಯ ಸಂಸ್ಥೆ ಕಾಯಿದೆಗೆ ಬೆಲೆಯೇ ಇಲ್ಲದಂತಾಗಿದೆ. ಯಾಕೆಂದರೆ ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ ಇಂದಿಗೂ ಕೆಲ ವಾಣಿಜ್ಯ ಮಳಿಗೆ ಸಂಸ್ಥೆ ಮತ್ತು ಅಂಗಡಿಯವರು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆ ಕಾಯ್ದೆ-1961 ಅನ್ವಯ ನೋಂದಣಿ ಮಾಡಿಸಿ, ಪರವಾನಗಿ ಪತ್ರ ಪಡೆದಿಲ್ಲ. ಹೀಗಾಗಿ ಕರ್ನಾಟಕ ಅಂಗಡಿ ವಾಣಿಜ್ಯ ಸಂಸ್ಥೆ ಕಾಯ್ದೆ-1961 …

Read More »

ಕರ್ನಾಟಕವನ್ನು ಗೂಂಡಾರಾಜ್ಯ ಮಾಡಲು ಈ ಸರಕಾರ ಪಣತೊಟ್ಟಂತಿದೆ : ಪ್ರಲ್ಹಾದ ಜೋಶಿ

ಹುಬ್ಬಳ್ಳಿ, ಅ.02: ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಯಲ್ಲಿ ಹಿಂದೂಗಳ ಮನೆಗಳ ಮೇಲೆ ದಾಳಿ ಹಾಗೂ ಹಿಂದೂ ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದರೂ ಸಹ “ಕರ್ನಾಟಕದಲ್ಲಿ ಇಂತಹ ಘಟನೆಗಳು ಹೊಸತೇನಲ್ಲ” ಎಂದಿರುವ ಗೃಹ ಸಚಿವ ಪರಮೇಶ್ವರ (G Parameshwara) ಅವರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಗುತ್ತಿಗೆ ಪಡೆದಿದ್ದೀರಾ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು (Pralhad Joshi) ಪ್ರಶ್ನಿಸಿದ್ದಾರೆ. ಶಿವಮೊಗ್ಗದಲ್ಲಿ ನಡೆದ ಘಟನೆ ಬಗ್ಗೆ ವೀಡಿಯೋ ಹೇಳಿಕೆ ನೀಡಿರುವ ಪ್ರಲ್ಹಾದ ಜೋಶಿಯವರು, …

Read More »

ಜಗದೀಶ್ ಶೆಟ್ಟರ್​ಗೆ ಡಿಸಿಎಂ ಸ್ಥಾನ ನೀಡಬೇಕು”: ವೀರಶೈವ ಮಹಾಸಭಾದಿಂದ ಸಿಎಂ ಸಿದ್ದರಾಮಯ್ಯಗೆ ಪತ್ರ

ಹುಬ್ಬಳ್ಳಿ: ಬಿಜೆಪಿಯಲ್ಲಿ ವೀರಶೈವ ಸಮಾಜವನ್ನು ಕಡೆಗಣನೆ ಮಾಡಲಾಗುತ್ತಿದೆ. ಹೀಗಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ವೀರಶೈವ ಮಹಾಸಭಾ ಕುಂದಗೋಳ ತಾಲೂಕು ಘಟಕದ ಅಧ್ಯಕ್ಷ ಮಂಜುನಾಥ ಯಂಟ್ರಾವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ವೀರಶೈವ ಸಮಾಜದ ಜಗದೀಶ್ ಶೆಟ್ಟರ್​ಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಬಿಜೆಪಿಯಲ್ಲಿ ವೀರಶೈವ ಸಮಾಜ‌ವನ್ನು ಕಡೆಗಣನೆ ಮಾಡಲಾಗುತ್ತಿದೆ. ಹೀಗಾಗಿ ವೀರಶೈವ ಸಮಾಜಕ್ಕೆ ಉನ್ನತ ಸ್ಥಾನಕ್ಕಾಗಿ ಜಗದೀಶ್ ಶೆಟ್ಟರ್​ಗೆ …

Read More »

ಕರ್ನಾಟಕ ಬಂದ್​: ಹುಬ್ಬಳ್ಳಿ ಧಾರವಾಡದಲ್ಲಿ ಮಿಶ್ರ ಪ್ರತಿಕ್ರಿಯೆ… ಶಾಲಾ ಕಾಲೇಜಿಗಿಲ್ಲ ರಜೆ, ಎಂದಿನಂತೆ ಆಟೋ ಬಸ್ ಸಂಚಾರ

ಹುಬ್ಬಳ್ಳಿ-ಧಾರವಾಡ/ಹಾವೇರಿ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವದನ್ನು ಖಂಡಿಸಿ ಕರ್ನಾಟಕ ಬಂದ್​​ಗೆ ಹುಬ್ಬಳ್ಳಿ, ಧಾರವಾಡ ಮತ್ತು ಹಾವೇರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಮಹದಾಯಿ ಹೋರಾಟಗಾರರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯ ಹೊಸೂರ ವೃತ್ತದಲ್ಲಿ ನಮ್ಮ ಕರ್ನಾಟಕ ಸೇನೆ ಕಾರ್ಯಕರ್ತರು ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಕಾವೇರಿ ನಮ್ಮದು, ಕಾವೇರಿ ಹೋರಾಟಕ್ಕೆ ಜಯವಾಗಲಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆದರೇ ಆಟೋ ಸಂಚಾರ, ಬಸ್ ಸಂಚಾರ …

Read More »

ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿ- ಮೋಹನ್​ ಲಿಂಬಿಕಾಯಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದು, ಕೆಪಿಸಿಸಿ ಅಧ್ಯಕ್ಷರ ಬಳಿ ಟಿಕೆಟ್ ಕೇಳಿದ್ದೇನೆ. ಕ್ಷೇತ್ರದಲ್ಲಿ ಕೆಲಸ ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚಿಸಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಕರೆಸಿದ್ದರು. ಅವರೊಂದಿಗೆ ಸುದೀರ್ಘವಾದ ಚರ್ಚೆಯೂ ಆಯಿತು. ಚರ್ಚೆಯಾಗಿ ಅವರು ಪೂರಕವಾಗಿ ಸ್ಪಂದಿಸುತ್ತೇವೆ ಎಂದು …

Read More »

ರಾಷ್ಟ್ರಧ್ವಜ ತಯಾರಿಸುವ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ

ಧಾರವಾಡ : ರಾಷ್ಟ್ರಧ್ವಜ ತಯಾರಿಸುವ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಸಿಕ್ಕಿದೆ. ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಸಂಘ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯ ಸರ್ಕಾರದಿಂದ ಕೊಡಮಾಡುವ ಪ್ರಶಸ್ತಿಗೆ ಬಾಜನವಾಗಿದ್ದು, ಅಕ್ಟೋಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ. ಐದು ಲಕ್ಷ ರೂ. ನಗದು ಒಳಗೊಂಡ ಪ್ರಶಸ್ತಿ ಇದಾಗಿದೆ‌. ವಿಶ್ರಾಂತ ನ್ಯಾಯಮೂರ್ತಿ ಬಿ ವೀರಪ್ಪ ಅಧ್ಯಕ್ಷತೆ ಸಮಿತಿಯಿಂದ ಪ್ರಶಸ್ತಿ ಆಯ್ಕೆಯಾಗಿದೆ. ಸಂಘ ಐದು ದಶಕಗಳಿಂದ …

Read More »