Breaking News

ಹುಬ್ಬಳ್ಳಿ

ಹುಬ್ಬಳ್ಳಿ: ಕಾಯಕಯೋಗಿ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

ಹುಬ್ಬಳ್ಳಿ: ತಾಲ್ಲೂಕಿನ ಮಂಟೂರು, ಕಲಘಟಗಿ ತಾಲ್ಲೂಕಿನ ಬಮ್ಮಿಗಟ್ಟಿ ಅಡವಿಸಿದ್ಧೇಶ್ವರ ಮಠ ಹಾಗೂ ಶಿವಮೊಗ್ಗ ಜಿಲ್ಲೆ ಬಳ್ಳಿಗಾವಿಯ ಶ್ರೀ ಅಲ್ಲಮಪ್ರಭು ಅನುಭಾವ ಪೀಠ ವಿರಕ್ತಮಠದ ಪೀಠಾಧಿಪತಿಯಾಗಿದ್ದ ಶಿವಲಿಂಗೇಶ್ವರ ಸ್ವಾಮೀಜಿ (82) ಭಾನುವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿದ್ದಾರೆ.   ಹೃದಯಾಘಾತವಾಗಿದ್ದ ಸ್ವಾಮೀಜಿ ಅವರನ್ನು ಇಲ್ಲಿನ ತತ್ವದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಭಾನುವಾರ ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.‌ ಮಂಟೂರು ಮಠದ ಅವರಣದಲ್ಲಿ ಅಂತ್ಯಕ್ರಿಯೆ …

Read More »

ಪುರುಷರಿಗೆ ಸಾರಿಗೆ ಬಸ್ ಗಳಲ್ಲಿ ‘ಉಚಿತ ಪ್ರಯಾಣ’ ಪ್ರಸ್ತಾವನೆ ಸದ್ಯಕ್ಕೆ ಇಲ್ಲ : ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಹುಬ್ಬಳ್ಳಿ : ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ನಿನ್ನೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಕ್ಕಳ ಜೊತೆಗೆ ಸಂವಾದದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಒಬ್ಬ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ಪುರುಷರಿಗೂ ಕೂಡ ಶಕ್ತಿ ಯೋಜನೆ ಅಡಿಯಲ್ಲಿ ಸಾರಿಗೆ ಬಸವಗಳಲ್ಲಿ ಉಚಿತ ಪ್ರಯಾಣದ ಕುರಿತು ಸುಳಿವು ನೀಡಿದ್ದರು.   ಆದರೆ ಈ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮಾತನಾಡಿ, ಸಾರಿಗೆ ಬಸ್ ನಲ್ಲಿ ಪುರುಷರಿಗೆ ಉಚಿತ …

Read More »

ನ. 22ಕ್ಕೆ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ಸಿನಿಮಾ ಮರು ಬಿಡುಗಡೆ

ಹುಬ್ಬಳ್ಳಿ: ‘ಹೊಸ ತಂತ್ರಜ್ಞಾನ ಅಳವಡಿಸಿಕೊಂಡು ಸಿದ್ಧಪಡಿಸಲಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಲನಚಿತ್ರ ನವೆಂಬರ್‌ 22ರಂದು ರಾಜ್ಯದಾದ್ಯಂತ ಮರು ಬಿಡುಗಡೆಯಾಗಲಿದೆ’ ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ ಸುರೇಶ ಗೋಕಾಕ ಹೇಳಿದರು.   ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಒತ್ತಾಯದ ಮೇರೆಗೆ ಚಿತ್ರ ಮತ್ತೊಮ್ಮೆ ಬಿಡುಗಡೆಯಾಗಲಿದೆ. ರಾಯಣ್ಣನ ಸಾಹಸ ಹಾಗೂ ದೇಶಪ್ರೇಮವನ್ನು ಜನತೆಗೆ ತಿಳಿಸಬೇಕು ಎನ್ನುವುದು ಇದರ ಉದ್ದೇಶ’ ಎಂದರು. ಸಿನಿಮಾದ ಹಂಚಿಕೆದಾರ …

Read More »

ನಿಸ್ವಾರ್ಥ ಸೇವೆಯಿಂದ ಕೆಎಲ್‌ಇ ಸಂಸ್ಥೆಯ ಬೆಳವಣಿಗೆ: ಡಾ. ಎಸ್.ಸಿ. ಧಾರವಾಡ

ಬೆಳಗಾವಿ: ‘ನಿಸ್ವಾರ್ಥ ಸೇವಾ ಮನೋಭಾವದಿಂದ ಯಾವುದೇ ಸಂಸ್ಥೆ ಬೆಳವಣಿಗೆ ಹೊಂದಲು ಸಾಧ್ಯವಾಗುತ್ತದೆ. ಇದಕ್ಕೆ ಕೆಎಲ್‌ಇ ಸಂಸ್ಥೆಯೇ ಸಾಕ್ಷಿ’ ಎಂದು ನಿರ್ದೇಶಕ ಡಾ. ಎಸ್.ಸಿ. ಧಾರವಾಡ ಹೇಳಿದರು. ಇಲ್ಲಿನ ಕೆಎಲ್‌ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೆಎಲ್‌ಇ ಸಂಸ್ಥೆಯ 109ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಕೆಎಲ್‌ಇ ಹೊಮಿಯೋಪಥಿಕ್‌ ಕಾಲೇಜಿನ ಪ್ರಾಚಾರ್ಯ ಡಾ.ಎಂ.ಎ.ಉಡಚನಕರ ‘ಶಿಕ್ಷಣ ದಾಸೋಹದ ಉದ್ದೇಶದಿಂದ ಆರಂಭಗೊಂಡ ಕೆಎಲ್‌ಇ ಸಂಸ್ಥೆ ಇಂದು ಶಿಕ್ಷಣ, ವೈದ್ಯಕೀಯ ಶಿಕ್ಷಣ, ತಾಂತ್ರಿಕ …

Read More »

ಪಹಣಿಯಲ್ಲಿ ‘ವಕ್ಫ್‌’: ವಿಎಚ್‌ಪಿ-ಬಜರಂಗದಳ ಪ್ರತಿಭಟನೆ

ಹುಬ್ಬಳ್ಳಿ: ‘ರಾಜ್ಯ ಸರ್ಕಾರ ವಕ್ಫ್‌ ಹೆಸರಲ್ಲಿ ರೈತರ ಜಮೀನನ್ನು ಕಬಳಿಸುತ್ತಿದ್ದು, ತಕ್ಷಣ ವಕ್ಫ್‌ ಹೆಸರು ರದ್ದುಗೊಳಿಸಬೇಕು’ ಎಂದು ಆಗ್ರಹಿಸಿ ವಿಶ್ವಹಿಂದೂ ಪರಿಷತ್‌ ಬಜರಂಗದಳದ ಕಾರ್ಯಕರ್ತರು ಸೋಮವಾರ ನಗರದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಬೈರಿದೇವರಕೊಪ್ಪದ ಶಿವಾನಂದ ಮಠದ ಎದುರು, ವಿದ್ಯಾನಗರದ ಕೋತಂಬ್ರಿ ಕಾಲೇಜು ಎದುರು, ಗೋಕುಲ ರಸ್ತೆ ಅಕ್ಷಯ ಪಾರ್ಕ್‌ ವೃತ್ತ, ಹಳೇಹುಬ್ಬಳ್ಳಿ ಇಂಡಿಪಂಪ್‌ ವೃತ್ತ, ಬಂಕಾಪುರ ಚೌಕ, ಗದಗ ರಸ್ತೆಯ ರಲ್ವೆ ಬ್ರಿಡ್ಜ್‌ ಮತ್ತು ಕೇಶ್ವಾಪುರದ ಸರ್ವೋದಯ ವೃತ್ತದ ಬಳಿ ‘ನಮ್ಮ …

Read More »

ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್

ಹುಬ್ಬಳ್ಳಿ: ವಕ್ಫ್ ವಿವಾದ ಬಿಜೆಪಿಯ ಸೃಷ್ಟಿ. ನಮ್ಮ ಸರ್ಕಾರವು ರೈತರನ್ನು ರಕ್ಷಿಸಲು ಬದ್ಧವಾಗಿದ್ದು, ಯಾರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಗುರುವಾರ (ನ.07) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ತಿದ್ದುಪಡಿ ಮಸೂದೆ ಸಂಬಂಧ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷರ ಭೇಟಿ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ವಿವಾದ ಸೃಷ್ಟಿಸಿದೆ. ರಾಜ್ಯದ ಆಸ್ತಿ ರಾಜ್ಯಕ್ಕೆ ಸಂಬಂಧಿಸಿದ ವಿಚಾರ. ವಕ್ಫ್ ಆಸ್ತಿ ವಿಚಾರವಾಗಿ ಧಾರವಾಡ ಸೇರಿದಂತೆ ಬೇರೆ ಜಿಲ್ಲೆಗಳಲ್ಲಿ …

Read More »

ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

ಹುಬ್ಬಳ್ಳಿ: ಸಂಸತ್ತಿನ ಜಂಟಿ ಸಂಸದೀಯ ಸಮಿತಿ ರಚನೆಯಾಗಿರುವುದು ವಕ್ಫ್ ತಿದ್ದುಪಡಿ ಮಸೂದೆ ಕುರಿತು. ಆದರೆ ಇವರು ವಿಜಯಪುರಕ್ಕೆ ಬರುತ್ತಿರುವುದು ಅನಧಿಕೃತ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿ ರಚನೆ ಮಾಡುವ ಅಧಿಕಾರ ಕೇಂದ್ರ ಸರಕಾರಕ್ಕಿದೆ. ಆದರೆ ಜೆಪಿಸಿ ರಚಿಸಿರುವುದು ತಿದ್ದುಪಡಿ ಮಸೂದೆಗಾಗಿ ವಿನಃ ಇಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ಅಲ್ಲ. ಇದರಲ್ಲಿ ಯಾವುದೇ ಗೊಂದಲ ಇರಲಿಲ್ಲ. ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ. ಇದಕ್ಕೆ …

Read More »

ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್

ಹುಬ್ಬಳ್ಳಿ: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ ತೋರಿದ ಆರೋಪದ‌ ಮೇರೆಗೆ ಮುಖ್ಯ ಪೇದೆಯೊಬ್ಬರ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೇಶ್ವಾಪುರ ಠಾಣೆ ವ್ಯಾಪ್ತಿಯ ಶಬರಿ ನಗರದ ಎಂ.ಎ. ಖಾದಿರನವರ ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈತನು ರವಿವಾರ ಮಧ್ಯಾಹ್ನ 9 ವರ್ಷದ ಬಾಲಕಿ ಪುಸಲಾಯಿಸಿ ಮನೆಗೆ ಕರೆಯಿಸಿ ಅನುಚಿತ ವರ್ತನೆ ತೋರಿದ್ದಾನೆ.   ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸಟೇಬಲ್ ಆಗಿರುವ ಈತನು ಮೂರು ಮಕ್ಕಳ ತಂದೆಯಾಗಿದ್ದರೂ ಇಂತಹ …

Read More »

ರಾಷ್ಟ್ರಕ್ಕೆ ಅನ್ನ ನೀಡುವ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲು ಸಂಚು:ಮುನೇನಕೊಪ್ಪ

ಹುಬ್ಬಳ್ಳಿ: ತುಷ್ಟೀಕರಣ ನೀತಿ ಮುಂದುವರಿದರೆ ಮತ್ತೊಂದು ರೈತರ ದಂಗೆ ನಡೆಯುವ ಸಾಧ್ಯೆತೆಯಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನವಲಗುಂದದ ರೈತರು ತಮ್ಮ ಜಮೀನು, ಮನೆ ಮತ್ತು ಖಾಲಿ ಆಸ್ತಿ ಸಂಬಂಧ ಅಧಿಕೃತ ದಾಖಲೆಗಳನ್ನು ಪಡೆಯುವಂತೆ ಅವರು ಒತ್ತಾಯಿಸಿದರು.   ರಾಷ್ಟ್ರಕ್ಕೆ ಅನ್ನ ನೀಡುವ ರೈತರಿಂದ ಭೂಮಿಯನ್ನು ವಶಪಡಿಸಿಕೊಳ್ಳಲು ಸಂಚು ಮಾಡುತ್ತಿದ್ದಾರೆ. ಸರಕಾರದ ಸುಗ್ರೀವಾಜ್ಞೆ ವಿರುದ್ಧ ನವಲಗುಂದದ ರೈತರು ಈ ಹಿಂದೆ ನಡೆಸಿದ …

Read More »

ನರಕ ಚತುರ್ದಶಿ; ಲಕ್ಷ್ಮಿ ಪೂಜೆ ಸಂಭ್ರಮ

ಹುಬ್ಬಳ್ಳಿ: ನಗರದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಗುರುವಾರ ನಗರದ ವಿವಿಧೆಡೆ ನರಕ ಚತುರ್ದಶಿ ಹಾಗೂ ಲಕ್ಷ್ಮಿ ಪೂಜೆಯನ್ನು ಸಂಭ್ರಮದಿಂದ ನೆರವೇರಿಸಲಾಯಿತು. ಹಬ್ಬದ ಪ್ರಯುಕ್ತ ಬೆಳಿಗ್ಗೆಯೇ ಮನೆ ಎದುರು ಶುಚಿಗೊಳಿಸಿ ರಂಗೋಲಿ ಹಾಕಿ, ಬಾಗಿಲಿಗೆ ತಳಿರು ತೋರಣ ಕಟ್ಟಿದ್ದರು. ಸಂಜೆ ಮನೆ ಮುಂದೆ, ತುಳಸಿಕಟ್ಟೆ ಎದುರು ದೀಪ ಹಚ್ಚಿ ಜನರು ಸಂಭ್ರಮಿಸಿದರು. ಲಕ್ಷ್ಮಿ ಪೂಜೆ ಅಂಗವಾಗಿ ಕೆಲವು ವ್ಯಾಪಾರಿಗಳು ಅಂಗಡಿಗಳನ್ನು ಬಗೆಬಗೆಯ ವಿದ್ಯುತ್‌ ದೀಪಗಳಿಂದ ಅಲಂಕರಿಸಿ, ಸಂಜೆ ವೇಳೆಗೆ ಪೂಜೆ …

Read More »