ಹುಬ್ಬಳ್ಳಿ: ನಗರದೆಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಗುರುವಾರ ನಗರದ ವಿವಿಧೆಡೆ ನರಕ ಚತುರ್ದಶಿ ಹಾಗೂ ಲಕ್ಷ್ಮಿ ಪೂಜೆಯನ್ನು ಸಂಭ್ರಮದಿಂದ ನೆರವೇರಿಸಲಾಯಿತು. ಹಬ್ಬದ ಪ್ರಯುಕ್ತ ಬೆಳಿಗ್ಗೆಯೇ ಮನೆ ಎದುರು ಶುಚಿಗೊಳಿಸಿ ರಂಗೋಲಿ ಹಾಕಿ, ಬಾಗಿಲಿಗೆ ತಳಿರು ತೋರಣ ಕಟ್ಟಿದ್ದರು. ಸಂಜೆ ಮನೆ ಮುಂದೆ, ತುಳಸಿಕಟ್ಟೆ ಎದುರು ದೀಪ ಹಚ್ಚಿ ಜನರು ಸಂಭ್ರಮಿಸಿದರು. ಲಕ್ಷ್ಮಿ ಪೂಜೆ ಅಂಗವಾಗಿ ಕೆಲವು ವ್ಯಾಪಾರಿಗಳು ಅಂಗಡಿಗಳನ್ನು ಬಗೆಬಗೆಯ ವಿದ್ಯುತ್ ದೀಪಗಳಿಂದ ಅಲಂಕರಿಸಿ, ಸಂಜೆ ವೇಳೆಗೆ ಪೂಜೆ …
Read More »ದೀಪಾವಳಿಗೆ ಆಕಾಶಬುಟ್ಟಿ ಹೊಳಪು
ಧಾರವಾಡ: ‘ಬೆಳಕಿನ ಹಬ್ಬ’ ದೀಪಾವಳಿಗೆ ಕಣ್ಣು ಕೋರೈಸುವ `ದೇಸಿ ಆಕಾಶಬುಟ್ಟಿ’ಗಳು ಮತ್ತು ತರಹೇವಾರಿ `ಮಣ್ಣಿನ ಹಣತೆ’ಗಳು ನಗರದ ಮಾರುಕಟ್ಟೆಗೆ ಬಂದಿದ್ದು, ಗ್ರಾಹಕರಿಗೆ ಹಬ್ಬದ ಸಂಭ್ರಮವನ್ನು ಹೆಚ್ಚಿಸಿವೆ. ಬಟ್ಟೆ, ಕಟ್ಟಿಗೆ, ಮಿಂಚಿನ ಹಾಳೆ, ಉಲನ್ ದಾರದಿಂದ ತಯಾರಿಸಿದ ವಿಭಿನ್ನ ಶೈಲಿಯ ಆಕಾಶಬುಟ್ಟಿಗಳನ್ನು ನೋಡುಗರ ಗಮನ ಸೆಳೆಯುತ್ತಿವೆ. ಸ್ಟಾರ್, ಗಣಪ, ಲಕ್ಷ್ಮೀ ಬಣ್ಣದ ಬಟ್ಟೆಗಳು ಸೇರಿದಂತೆ 50ಕ್ಕೂ ಹೆಚ್ಚು ವಿವಿಧ ಬಗೆಯ ಆಕಾಶಬುಟ್ಟಿಗಳು ಮಾರುಕಟ್ಟೆಯಲ್ಲಿ ಸಿಗುತ್ತಿವೆ. ಪ್ರತಿ ವರ್ಷ ಚೀನಾದ ಆಕಾಶಬುಟ್ಟಿಗಳು ಮಾರುಕಟ್ಟೆಗೆ …
Read More »‘ಹಸಿರು’ ದೀಪಾವಳಿಗೆ ಇರಲಿ ಆದ್ಯತೆ
ಹುಬ್ಬಳ್ಳಿ: ದೀಪಾವಳಿ ಹಬ್ಬವೆಂದರೆ ಎಲ್ಲೆಡೆ ಸಡಗರ. ಹಬ್ಬದಲ್ಲಿ ದೀಪಗಳಿಗೆ ಎಷ್ಟು ಮಹತ್ವ ಇದೆಯೋ ಅಷ್ಟೇ ಮಹತ್ವವನ್ನು ಜನರು ಪಟಾಕಿಗಳಿಗೂ ನೀಡುತ್ತಾರೆ. ಪಟಾಕಿಗಳೆಂದರೆ ಮಕ್ಕಳಿಂದ ಹಿಡಿದು ಎಲ್ಲರಿಗೂ ಅಚ್ಚುಮೆಚ್ಚು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ, ಅ.31ರಿಂದ ನ.2ರವರೆಗೆ ರಾತ್ರಿ 8ರಿಂದ 10 ಗಂಟೆವರೆಗೆ ಮಾತ್ರ ಪಟಾಕಿಗಳನ್ನು ಹಾರಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಿದೆ. ಪಟಾಕಿ ಹಚ್ಚಿದಾಗ ಬರುವ ಶಬ್ದ, ವಿವಿಧ ಬಣ್ಣ, …
Read More »ಪಹಣಿಯಲ್ಲಿ ವಕ್ಫ್ ಹೆಸರು: ನ.5ರಂದು ತಹಶೀಲ್ದಾರ್ ಬಳಿ ಹಾಜರಾಗಲು ರೈತರಿಗೆ ಸೂಚನೆ
ಧಾರವಾಡ: ತಾಲ್ಲೂಕಿನ ಉಪ್ಪಿನಬೆಟಗೇರಿಯ ಕೆಲವು ರೈತರ ಪಹಣಿಯಲ್ಲಿ ‘ಜಮೀನು ವಕ್ಫ್ ಆಸ್ತಿಗೆ ಒಳಪಟ್ಟಿರುತ್ತದೆ’ ಎಂದು ನಮೂದಾಗಿರುವ ಕುರಿತು ಚರ್ಚಿಸಲು ನವೆಂಬರ್ 5ರಂದು ತಹಶೀಲ್ದಾರ್ ಕಚೇರಿಗೆ ಹಾಜರಾಗುವಂತೆ ರೈತರಿಗೆ ಮೌಖಿಕವಾಗಿ ತಿಳಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿ (ವಿಎ) ಚೈತನ್ಯ ಮಳಿಯೆ ಅವರು ಮಂಗಳವಾರ ರೈತರ ಮನೆಗಳಿಗೆ ತೆರಳಿ ಮಾಹಿತಿ ನೀಡಿದ್ದಾರೆ. ಜಮೀನಿನ ದಾಖಲೆಗಳೊಂದಿಗೆ ತಹಶೀಲ್ದಾರ್ ಕಚೇರಿಗೆ ಹಾಜರಾಗಲು ತಿಳಿಸಿದ್ಧಾರೆ. ‘ನಮ್ಮದು ಪಿತ್ರಾರ್ಜಿತ ಆಸ್ತಿ. ನಮ್ಮ ಜಮೀನಿನ ಪಹಣಿಯಲ್ಲಿ ‘ವಕ್ಫ್’ ಎಂದು ಯಾಕೆ ನಮೂದಾಗಿದೆ …
Read More »ವಕ್ಫ್ ಕಾನೂನು ತೆಗೆದು ಹಾಕುವುದೇ ಸೂಕ್ತ: ಸಚಿವ ಜೋಶಿ
ಧಾರವಾಡ: ಭಾರತದಲ್ಲಿ ವಕ್ಫ್ ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆಹರು ಕಾಲದಲ್ಲಿ ಕಾಂಗ್ರೆಸ್ ಅದೇಕೆ ವಕ್ಪ್ ಕಾನೂನು ಮಾಡಿತೋ ಗೊತ್ತಿಲ್ಲ. ಆದರೆ, 2013ರಲ್ಲಿ ವಕ್ಫ್ ಗೆ ಮತ್ತೆ ಅಪರಿಮಿತ ಅಧಿಕಾರ ಕೊಟ್ಟಿದ್ದೇಕೆ? ದೇಶದಲ್ಲಿ ವಕ್ಫ್ ಕಾನೂನು ಮಾಡಿದ್ದೇ ಮೊದಲ ತಪ್ಪು. ಅಂತದ್ದರಲ್ಲಿ ಸುಪ್ರೀಂಕೋರ್ಟ್ ಸಹ ಪ್ರಶ್ನಿಸದಂತಹ …
Read More »ಶಿಗ್ಗಾವಿ ಬೈ ಎಲೆಕ್ಷನ್ : ನಾಳೆ ಅಜ್ಜಂಪೀರ್ ಖಾದ್ರಿ ಸ್ವಇಚ್ಛೆಯಿಂದ ನಾಮಪತ್ರ ಹಿಂಪಡೆಯುತ್ತಾರೆ : ಸಚಿವ ಜಮೀರ್ ಅಹ್ಮದ್
ಹುಬ್ಬಳ್ಳಿ : ಕಾಂಗ್ರೆಸ್ ನಿಂದ ಟಿಕೆಟ್ ಸಿಗಲಿಲ್ಲವೆಂದು ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಬಂಡಾಯ ಅಭ್ಯರ್ಥಿಯಾಗಿ ಶಿಗ್ಗಾವಿ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆಗೆ ಅಜ್ಜಂಪೀರ್ ಖಾದ್ರಿ ಸಂಧಾನ ಯಶಸ್ವಿಯಾಗಿದ್ದು ಈ ಹಿನ್ನಲೆಯಲ್ಲಿ ನಾಳೆ ಅಜ್ಜಂಪೀರ್ ಖಾದ್ರಿ ನಾಮಪತ್ರ ಹಿಂಪಡೆಯುತ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಕಳೆದ ಕೆಲವು ದಿನಗಳಿಂದ ಅಜ್ಜಂಪೀರ್ ಖಾದ್ರಿ ಬೆಂಗಳೂರಿನ ಸಚಿವ ಜಮೀರ್ …
Read More »ಹಿಂದುಳಿದ ವರ್ಗಗಳ ಮಠಾಧೀಶರು, ನಾಯಕರ ಸಭೆ ನ.3ರಂದು
ಹುಬ್ಬಳ್ಳಿ: ರಾಷ್ಟ್ರೀಯ ಕೋಲಿ ಬೆಸ್ತ ಹಿಂದುಳಿದ ವರ್ಗಗಳ ಮಠಾಧೀಶರ ಮಹಾಸಭಾ ವತಿಯಿಂದ ನ.3ರಂದು ಬೆಳಿಗ್ಗೆ 10 ಗಂಟೆಗೆ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಉಪ್ಪಾರ ಭಗೀರಥ ಗುರುಪೀಠದ ಭಗೀರಥಾನಂದಪುರಿ ಸ್ವಾಮೀಜಿ ಹೇಳಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೋಕುಲ ರಸ್ತೆಯ ಆರ್.ಎಂ.ಲೋಹಿಯಾನಗರದ ಅಪ್ಪು ಪ್ಲಾಜಾದಲ್ಲಿ ಕಾರ್ಯಕ್ರಮ ನಡೆಯಲಿದೆ. ಕೋಲಿ ಬೆಸ್ತ, ಉಪ್ಪಾರ, ಶಿಕ್ಕಲಗಾರ, ಲಂಬಾಣಿ, ಕುರುಬ, ಕಮ್ಮಾರ, ಕಿಂಚಿ ಕೊರವರ ಸೇರಿದಂತೆ ವಿವಿಧ ಹಿಂದುಳಿದ ವರ್ಗಗಳ …
Read More »ಅಂಜಲಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ
ಹುಬ್ಬಳ್ಳಿ: ಕೆಲ ತಿಂಗಳ ಹಿಂದೆ ವೀರಾಪುರ ಓಣಿಯ ಮನೆಯಲ್ಲಿ ಕೊಲೆಯಾದ ಯುವತಿ ಅಂಜಲಿ ಅಂಬಿಗೇರ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ₹5ಲಕ್ಷ ಪರಿಹಾರದ ಚೆಕ್ ಅನ್ನು ಇಲ್ಲಿನ ವಿಮಾನ ನಿಲ್ದಾಣದಲ್ಲಿ ವಿತರಿಸಿದರು. ಅಂಬಿಗೇರ ಸಮಾಜದ ಮುಖಂಡ ಮನೋಜ ಕರ್ಜಗಿ ಮಾತನಾಡಿ, ‘ಅಂಜಲಿ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ ಸ್ಥಳೀಯ ಜನಪ್ರತಿನಿಧಿ ಗಳ ಸಹಕಾರ ದೊಡ್ಡದು. ₹25 ಲಕ್ಷ ಪರಿಹಾರಕ್ಕೆ ಒತ್ತಾಯಿಸಲಾಗಿತ್ತು. ಸದ್ಯ ಸಿಎಂ ಪರಿಹಾರ …
Read More »ಸಂಕಷ್ಟದಲ್ಲಿ ಅಲೆಮಾರಿಗಳ ಬದುಕು
ಹುಬ್ಬಳ್ಳಿ: ‘ಇವತ್ತು ಈ ಊರು, ನಾಳೆ ಮತ್ತೊಂದು ಊರು. ನಮ್ಮಂತಹ ಅಲೆಮಾರಿಗಳಿಗೆ ಸ್ವಂತ ಜಾಗ, ಮನೆ ಎಂಬುದು ಇರುವುದಿಲ್ಲ. ಆಶ್ರಯ ಸಿಕ್ಕ ಕಡೆ ಉಳಿಯುತ್ತೇವೆ. ಕೆಲ ದಿನಗಳ ಬಳಿಕ ಮತ್ತೆ ಮುಂದಿನ ಊರಿಗೆ ಪ್ರಯಾಣಿಸುತ್ತೇವೆ. ಆಯಾ ಸಮಯಕ್ಕೆ ಸಿಗುವ ವಸ್ತುಗಳನ್ನು ಮಾರುತ್ತ ಬದುಕುತ್ತೇವೆ’ ತಮ್ಮ ದೈನಂದಿನ ಬದುಕನ್ನು ಹೀಗೆ ಸಂಕ್ಷಿಪ್ತವಾಗಿ ವಿವರಿಸಿದವರು ಮಲ್ಲಶೆಟ್ಟಿ. ಅಲೆಮಾರಿ ಸಮುದಾಯದ ಅವರು ಕುಟುಂಬ ಸದಸ್ಯರ ಜೊತೆಗೆ ಹುಬ್ಬಳ್ಳಿಯ ಆರ್‌ಟಿಒ ಕಚೇರಿ ಬಳಿ ತಾತ್ಕಾಲಿಕ ನೆಲೆ …
Read More »ಡಿಜಿಟಲ್ ಅರೆಸ್ಟ್; ವಂಚಕರ ಹೊಸ ಟ್ರಿಕ್!
ಹುಬ್ಬಳ್ಳಿ: ತಂತ್ರಜ್ಞಾನ ಆವಿಷ್ಕಾರಗಳು ಹೆಚ್ಚುತ್ತಾ ಹೋದಂತೆ, ಸೈಬರ್ ವಂಚಕರ ಯೋಜನೆ ಮತ್ತು ಯೋಚನೆಗಳು ಸಹ ವಿಸ್ತಾರವಾಗುತ್ತ ಹೋಗುತ್ತಿವೆ. ಒಟಿಪಿ, ಲಿಂಕ್ ಕಳುಹಿಸಿ ಹಣ ವರ್ಗಾವಣೆ, ಮಾರುಕಟ್ಟೆಯಲ್ಲಿ ಹಣ ಹೂಡಿಕೆ ನೆಪದಲ್ಲಿ ಆನ್‌ಲೈನ್ ಕಳ್ಳರು, ಇದೀಗ ‘ಡಿಜಿಟಲ್ ಅರೆಸ್ಟ್’ ಹೆಸರಲ್ಲಿ ಕೋಟಿ ಕೋಟಿ ವಂಚಿಸುತ್ತಿದ್ದಾರೆ. ಹುಬ್ಬಳ್ಳಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಒಂದು ವಾರದ ಅವಧಿಯಲ್ಲಿ ‘ಡಿಜಿಟಲ್ ಅರೆಸ್ಟ್’ ಸಂಬಂಧಿಸಿ ಮೂರು ಪ್ರಕರಣಗಳು ದಾಖಲಾಗಿದ್ದು, ಒಟ್ಟು ₹1.84 ಕೋಟಿ ವರ್ಗಾಯಿಸಿಕೊಂಡಿದ್ದಾರೆ. …
Read More »