Breaking News
Home / ಹುಬ್ಬಳ್ಳಿ (page 17)

ಹುಬ್ಬಳ್ಳಿ

ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ

ಧಾರವಾಡ : ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂಬ ಮಾಹಿತಿಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.   ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಜಿಲ್ಲೆಯಲ್ಲಿ ಬಿಜೆಪಿಗರು ಕಾಂಗ್ರೆಸ್​ಗೆ ಬರುತ್ತಿದ್ದಾರೆ. ಹಾಗೇ ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ. ಬಿಜೆಪಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ ಕಾಂಗ್ರೆಸ್ ಪಕ್ಷಕ್ಕೆ‌ ಬರ್ತಾರೆ …

Read More »

ಆಸ್ತಿ ವಿವಾದ ಹಿನ್ನೆಲೆಯಲ್ಲಿ ಜಗಳಧಾರವಾಡದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ವ್ಯಕ್ತಿ

ಧಾರವಾಡ: ಆಸ್ತಿ ವಿವಾದ ಸಂಬಂಧ ಎರಡು ಕಡೆಯವರ ನಡುವೆ ಗಲಾಟೆ ನಡೆದು, ಆತಂಕದಿಂದ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಇಲ್ಲಿನ ಅತ್ತಿಕೊಳ್ಳ ಬಡಾವಣೆಯಲ್ಲಿ ಬುಧವಾರ ನಡೆದಿದೆ. ಮುಂಬೈ ಮೂಲದ ಸುಶಾಂತ ಅಗರವಾಲ್‌ ಎಂಬಾತ ಗುಂಡು ಹಾರಿಸಿದ್ದು, ಮತ್ತೊಂದು ಕಡೆಯವರನ್ನು ಹೆದರಿಸಲು ಫೈರಿಂಗ್​ ಮಾಡಿರುವುದಾಗಿ ಪೊಲೀಸ್​ ವಿಚಾರಣೆಯಿಂದ ತಿಳಿದುಬಂದಿದೆ. ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿದ ಆರೋಪಿ ಸುಶಾಂತ ಮುಂಬೈನಲ್ಲಿದ್ದ ಎಂದು ತಿಳಿದುಬಂದಿದೆ. ನಿವೇಶನದ ಸಂಬಂಧ ಸುಶಾಂತ್​ ಹಾಗೂ ಪವನ ಕುಲಕರ್ಣಿ …

Read More »

ಅನಾರೋಗ್ಯದಿಂದ ಸಾವನ್ನಪ್ಪಿದ್ದಾನೆ ಅಂದುಕೊಂಡ ಮಗು ಅಂತ್ಯಸಂಸ್ಕಾರ ಮಾಡುವ ವೇಳೆ ಜೀವಂತ

ಧಾರವಾಡ: ಮೃತಪಟ್ಟಿದ್ದಾನೆ ಅಂದುಕೊಂಡಿದ್ದ ಮಗುವೊಂದು ಸ್ಮಶಾನದಲ್ಲಿ ಅಂತ್ಯಸಂಸ್ಕಾರ ಮಾಡುವಾಗ ಜೀವಂತವಾಗಿರುವುದು ಗೊತ್ತಾದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬಸಾಪುರ ಗ್ರಾಮದಲ್ಲಿ ನಡೆದಿದೆ. ಒಂದೂವರೆ ವರ್ಷದ ಆಕಾಶ ಬಸವರಾಜ ಪೂಜಾರ ಎಂಬ ಮಗು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿತ್ತು. ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ ಎಂದು ಕಿಮ್ಸ್ ವೈದ್ಯರು ಹೇಳಿದ್ದರು. ಹೀಗಾಗಿ ಆಕಾಶನನ್ನು ಊರಿನಲ್ಲಿಯೇ ಅಂತ್ಯಕ್ರಿಯೆ ಮಾಡಲು ಪಾಲಕರು ಬಸಾಪುರ ಗ್ರಾಮಕ್ಕೆ ತೆಗೆದುಕೊಂಡು …

Read More »

ಮುತ್ತಯ್ಯ ಮುರಳೀಧರನ್‌ ಧಾರವಾಡದಲ್ಲಿ ತಂಪು ಪಾನೀಯ ಮತ್ತು ಕ್ಯಾನ್ ತಯಾರಿಸುವ ಕಂಪನಿ ಸ್ಥಾಪಿಸಲು ಯೋಜಿಸಿದ್ದು, ಇದೀಗ ಇಲ್ಲಿನ ಪರಿಸರವಾದಿಗಳು ಉದ್ಯಮಕ್ಕೆ ವಿರೋಧ

ಧಾರವಾಡ: ಶ್ರೀಲಂಕಾದ ಮಾಜಿ ಸ್ಪಿನ್‌ ಬೌಲರ್ ಮುತ್ತಯ್ಯ ಮುರಳೀಧರನ್‌ ಅವರು ಧಾರವಾಡದಲ್ಲಿ ಸ್ಥಾಪನೆ ಮಾಡಲು ಮುಂದಾಗಿರುವ ತಂಪು ಪಾನೀಯ ಉದ್ಯಮಕ್ಕೆ ಪರಿಸರವಾದಿಗಳಿಂದ ವಿರೋಧ ವ್ಯಕ್ತವಾಗಿದೆ. ಪರಿಸರವಾದಿ ಸುರೇಶ್ ಹೆಬ್ಳೀಕರ್ ನೇತೃತ್ವದಲ್ಲಿ ವಿರೋಧ ವ್ಯಕ್ಯವಾಗಿದ್ದು, ತಂಪು ಪಾನೀಯ, ಎನರ್ಜಿ ಡ್ರಿಂಕ್ ಹಾಗೂ ಅವುಗಳ ಕ್ಯಾನ್ ತಯಾರಿಸುವ ಕಂಪನಿ ಸ್ಥಾಪಿಸಲು ಮೆ.ಸಿಲೋನ್ ಬಿವರೇಜ್ ಕ್ಯಾನ್ ಪ್ರೆವೈಟ್ ಲಿಮಿಟೆಡ್ ಕಂಪನಿ ಸ್ಥಾಪನೆಗೆ ಮುತ್ತಯ್ಯ ಮುರಳಿಧರನ್‌ ಮುಂದಾಗಿದ್ದರು. ಕಂಪನಿ ಅಡಿ 900 ಕೋಟಿ ಹೂಡಿಕೆಗೆ ಧಾರವಾಡ ತಾಲೂಕಿನ …

Read More »

ಲಿಂಗಾಯತಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೇವೆ. :ಬಸವ ಜಯಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ : ಲಿಂಗಾಯತಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಮತ್ತೆ ಹೋರಾಟ ಮಾಡುತ್ತೇವೆ. ಇದೇ ತಿಂಗಳಿನಿಂದ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಕೂಡಲಸಂಗಮ ಪಂಚಮಸಾಲಿ‌ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಸಮುದಾಯದಲ್ಲಿ ನಿರಾಸೆ ಮೂಡಿದೆ. ಕೂಡಲೇ ತಜ್ಞರ ಸಭೆ ಕರೆದು ಈ ವಿಚಾರವನ್ನು ಇತ್ಯರ್ಥ ಮಾಡಬೇಕು. 2ಎ ಮೀಸಲಾತಿ ಹೈಕೋರ್ಟ್‌ನಲ್ಲಿದೆ, 2ಡಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬಜೆಟ್ ಅಧಿವೇಶನದ ನಂತರ ಸಭೆ ಕರೆದು …

Read More »

ವಿಶೇಷ ಬಸ್​ಗಳ ವ್ಯವಸ್ಥೆ: ಬೆಳಗಾವಿಯಿಂದ ಒಂದು ದಿನದ ಟೂರ್ ಪ್ಯಾಕೇಜ್; ಶಕ್ತಿ ಯೋಜನೆಗಿಲ್ಲ ಅವಕಾಶ

ಹುಬ್ಬಳ್ಳಿ : ಮಳೆಗಾಲದ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಆರಂಭಿಸಲಾದ ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್​ಗಳಿಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.   ಈ ವ್ಯವಸ್ಥೆಯನ್ನು ಬೇರೆ ಸ್ಥಳಗಳಿಗೂ ವಿಸ್ತರಿಸುವಂತೆ ಬೇಡಿಕೆ ಬರುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿಯಿಂದ ಮತ್ತಷ್ಟು ಒಂದು ದಿನದ ಟೂರ್ ಪ್ಯಾಕೇಜ್ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗುತ್ತಿದೆ. ವಿಶೇಷ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ …

Read More »

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಆರೋಪಿಯನ್ನು ಬಂಧಿಸಿರುವುದಾಗಿ ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ತಿಳಿಸಿದ್ದಾರೆ.

ಹುಬ್ಬಳ್ಳಿ : ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಬಿಂಬಿಸುವಂತಹ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಘಟನೆ ಇತ್ತೀಚೆಗೆ ನಡೆದಿತ್ತು. ಈ ಸಂಬಂಧ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್ ಕಮೀಷನರ್ ಸಂತೋಷ ಬಾಬು ಮಾಹಿತಿ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆರೋಪಿ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಂಧಿತನ ಇ-ಮೇಲ್ ಐಡಿ ಮತ್ತು ಸಾಮಾಜಿಕ ಜಾಲತಾಣಗಳ ವಿವರಗಳನ್ನು ವಿಧಿ …

Read More »

ಧಾರವಾಡದಲ್ಲಿ ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸಲಿದ್ದಾರೆ. ಮುತ್ತಯ್ಯ ಮುರಳೀಧರನ್

ಧಾರವಾಡ : ಶ್ರೀಲಂಕಾದ ಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಧಾರವಾಡದಲ್ಲಿ ಸ್ವಂತ ತಂಪು ಪಾನೀಯ ಉದ್ಯಮ ಪ್ರಾರಂಭಿಸಲು ಮುಂದಾಗಿದ್ದಾರೆ. ಈಗಾಗಲೇ ಶ್ರೀಲಂಕಾದಲ್ಲಿ ಸಿಲೋನ್ ಬೇವರೆಜಸ್ ಕ್ಯಾನ್ ಕಂಪನಿ ಮೂಲಕ ತಂಪು ಪಾನೀಯ ಮತ್ತು ಎನರ್ಜಿ ಡ್ರಿಂಕ್ ಉತ್ಪಾದನಾ ಉದ್ಯಮದಲ್ಲಿ ತೊಡಗಿರುವ ಅವರು ಧಾರವಾಡದಲ್ಲಿ ತಮ್ಮದೇ ತಂಪು ಪಾನೀಯ ಉದ್ಯಮ ಆರಂಭಿಸಲಿದ್ದಾರೆ. ಈ ಸಂಬಂಧ ಕಳೆದ ವಾರವಷ್ಟೇ ಮುತ್ತಯ್ಯ ಮುರಳೀಧರನ್​ ಅವರು ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಕೈಗಾರಿಕಾ ಪ್ರದೇಶದ ಬಳಿ ಇರುವ …

Read More »

ಹುಬ್ಬಳ್ಳಿ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಂದು ವಾರ ಕಾಲೇಜಿನಿಂದ ಪ್ರಿನ್ಸಿಪಾಲ್ ಡಾ. ಈಶ್ವರ ಹೊಸಮನಿ ಅಮಾನತ್ತು

ಹುಬ್ಬಳ್ಳಿ : ನರ್ಸ್​ಗಳನ್ನು ಕುರಿತು ಕನ್ನಡ ಚಿತ್ರವೊಂದರ ಹಾಡಿಗೆ ರೀಲ್ಸ್ ಮಾಡಿ ಕಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಕಿಮ್ಸ್ ಆಸ್ಪತ್ರೆಯ ನರ್ಸ್​ಗಳಿಗೆ ಅಪಮಾನ ಮಾಡಲಾಗಿದೆ. ಈ 11 ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೆ ನರ್ಸ್ ಅಸೋಸಿಯೇಷನ್ ಅಧ್ಯಕ್ಷೆ ಸುನೀತಾ ನಾಯ್ಕ ಸೋಮವಾರ ದೂರು ಸಲ್ಲಿಸಿದ್ದರು. ಹುಬ್ಬಳ್ಳಿ ಕಿಮ್ಸ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ನರ್ಸ್​ಗಳನ್ನು ಗುರಿಯಾಗಿಟ್ಟುಕೊಂಡು ಯಾವುದೇ ಅನುಮತಿ ಪಡೆಯದೆ …

Read More »

ರಾಷ್ಟ್ರ ಧ್ವಜಗಳಿಗೆ ಭಾರೀ ಬೇಡಿಕೆ: ಸಿದ್ಧವಾಗುತ್ತಿವೆ ಸಾವಿರಾರು ತ್ರಿವರ್ಣ ಧ್ವಜಗಳು

ಹುಬ್ಬಳ್ಳಿ: ರಾಷ್ಟ್ರಧ್ವಜ ತಯಾರಿಕೆಗೆ ಭಾರತೀಯ ಮಾನಕ ಸಂಸ್ಥೆ (ಬಿಐಎಸ್)ಯಿಂದ ಮಾನ್ಯತೆ ಪಡೆದ ದೇಶದ ಏಕೈಕ ಸಂಸ್ಥೆ ಎಂದರೆ ಅದು ಹುಬ್ಬಳ್ಳಿಯ ಬೆಂಗೇರಿಯ ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘ. ಕೋವಿಡ್ ನಂತರ ಮತ್ತೆ ಇಲ್ಲಿನ ರಾಷ್ಟ್ರಧ್ವಜಗಳಿಗೆ ದೇಶಾದ್ಯಂತ ಬೇಡಿಕೆ ಹೆಚ್ಚಾಗಿದೆ. ಈ ಹಿನ್ನೆಲೆ ಸಂಸ್ಥೆಯು ಈ ವರ್ಷ ಮೂರು ಕೋಟಿ ರೂಪಾಯಿ ವಹಿವಾಟು ನಡೆಸುವ ನಿರೀಕ್ಷೆಯನ್ನು ಹೊಂದಿದೆ. ದೇಶದ ಎಲ್ಲ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಅಧಿಕೃತವಾಗಿ ರಾಷ್ಟ್ರಧ್ವಜಗಳನ್ನು ಸರಬರಾಜು ಮಾಡುವ ಹುಬ್ಬಳ್ಳಿಯ …

Read More »