Breaking News

ಹುಬ್ಬಳ್ಳಿ

ಧಾರವಾಡದಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ಬಿದ್ದ ಮರ

ಧಾರವಾಡದಲ್ಲಿ ಚಲಿಸುತ್ತಿದ್ದ ಆಟೋ ಮೇಲೆ ಏಕಾಏಕಿ ಬಿದ್ದ ಮರ….ಧಾರವಾಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ತಪ್ಪಿದ ಅನಾಹುತ ಚಲಿಸುತ್ತಿದ್ದ ಆಟೊ ಮೇಲೆ ಬೃಹತ್ ಮರವೊಂದು ಏಕಾಏಕಿ ಬಿದ್ದಿದ್ದು, ಚಾಲಕ ಹಾಗೂ ಆಟೊದಲ್ಲಿ ಪ್ರಯಾಣಿಸುತ್ತಿದ್ದ ವೃದ್ಧೆ ಪ್ರಾಣಾಪಾಯದಿಂದ ಪಾರಾದ ಘಟನೆ ಧಾರವಾಡದ ಸುಭಾಷ ರಸ್ತೆಯಲ್ಲಿ ಸಂಭವಿಸಿದೆ. ಧಾರವಾಡದ ಸುಭಾಷ ರಸ್ತೆಯ ಮೂಲಕ ಆಟೊ ತೆರಳುತ್ತಿತ್ತು. ಈ ವೇಳೆ ರಸ್ತೆಯ ಪಕ್ಕ ಇದ್ದ ಮರ ಏಕಾಏಕಿ ಚಲಿಸುತ್ತಿದ್ದ ಆಟೊ ಮೇಲೆಯೇ ಬಿದ್ದಿದೆ. …

Read More »

ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿರುವ ಆದಿಕವಿ ಪಂಪ್ ಸ್ಮಾರಕ ಭವನದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಿದರು.

ಧಾರವಾಡ ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿರುವ ಆದಿಕವಿ ಪಂಪ್ ಸ್ಮಾರಕ ಭವನದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ನಡೆಸಿದರು. ಈ ಸಂದರ್ಭದಲ್ಲಿ, ಅವರು ನಾಗರಿಕರಿಂದ ವಿವಿಧ ದೂರುಗಳು ಮತ್ತು ಸಮಸ್ಯೆಗಳನ್ನು ಆಲಿಸಿದರು. ಗಮನಾರ್ಹವಾಗಿ, ಸಚಿವರು ಕೆಲವು ದೂರುಗಳನ್ನು ಸ್ಥಳದಲ್ಲೇ ಪರಿಹರಿಸುವ ಮೂಲಕ ನಾಗರಿಕರಿಗೆ ಪರಿಹಾರ ನೀಡಿದರು.ಅಣ್ಣಿಗೇರಿ ಮತ್ತು ಅದರ ಸುತ್ತಮುತ್ತಲಿನ ಸಾವಿರಾರು ನಾಗರಿಕರು ಈ ಸಭೆಯಲ್ಲಿ ಭಾಗವಹಿಸಿ ಸಚಿವರ ಮುಂದೆ …

Read More »

ಹುಬ್ಬಳ್ಳಿಯಲ್ಲಿ ಏರೋ‌ಸ್ಪೇಸ್ ಪಾರ್ಕ್ ಸ್ಥಾಪನೆಗೆ ಹೆಚ್ಚಿದ ಒತ್ತಡ

ಹುಬ್ಬಳ್ಳಿ : ದೇವನಹಳ್ಳಿ ಬಳಿ ಚನ್ನರಾಯಪಟ್ಟಣ ಭೂಸ್ವಾಧೀನವನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಉದ್ದೇಶಿತ ಏರೊಸ್ಪೇಸ್ ಪಾರ್ಕ್ ಅನ್ನು ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿಯಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂಬ ಕೂಗು ಜೋರಾಗಿ ಕೇಳಿ ಬಂದಿದೆ. ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಏರೋಸ್ಪೇಸ್ ಪಾರ್ಕ್​ನ್ನು ಉತ್ತರ ಕರ್ನಾಟಕ ಭಾಗದ ಹುಬ್ಬಳ್ಳಿ-ಧಾರವಾಡದಲ್ಲಿ ಆರಂಭಿಸುವುದರಿಂದ ಕರ್ನಾಟಕದ ಉತ್ತರ ಭಾಗದ ಅಭಿವೃದ್ಧಿಗೆ ಪೂರಕವಾಗಲಿದೆ. ಇದರಿಂದ ಸಾವಿರಾರು ಜನರಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಉದ್ಯೋಗಗಳು ದೊರೆತು ವಿಶೇಷವಾಗಿ ಇಂಜಿನಿಯರಿಂಗ್ ತಾಂತ್ರಿಕ …

Read More »

ಸ್ವಚ್ಛ ನಗರಿ: ಹುಬ್ಬಳ್ಳಿ-ಧಾರವಾಡಕ್ಕೆ ದೇಶದಲ್ಲಿ 34ನೇ ಸ್ಥಾನ; ರಾಜ್ಯಕ್ಕೆ ದ್ವಿತೀಯ

ಹುಬ್ಬಳ್ಳಿ: ಸ್ವಚ್ಛ ಭಾರತ್ ಮಿಷನ್‌ನಡಿ ಕೇಂದ್ರೀಯ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನಡೆಸಿದ ಸ್ವಚ್ಛ ಸರ್ವೇಕ್ಷಣ-2025ರಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಗಣನೀಯ ಸಾಧನೆ ಮಾಡಿದ್ದು, ರಾಜ್ಯದ ಎರಡನೇ ಸ್ವಚ್ಚ ನಗರ ಎಂಬ ಕೀರ್ತಿಗೆ ಪಾತ್ರವಾಗಿದೆ. ಹುಬ್ಬಳ್ಳಿ-ಧಾರವಾಡ ಒಂದು ಲಕ್ಷಕ್ಕಿಂತ ಹೆಚ್ಚು ಜನಸಂಖ್ಯೆಯ ನಗರಗಳ ಪೈಕಿ ಕರ್ನಾಟಕದಲ್ಲಿ ಎರಡನೇ ಸ್ಥಾನ ಉಳಿಸಿಕೊಂಡಿದೆ. ರಾಷ್ಟ್ರಮಟ್ಟದಲ್ಲಿ ಕಳೆದ ವರ್ಷ 87ನೇ ಸ್ಥಾನದಲ್ಲಿದ್ದ ಅವಳಿನಗರ 2025ರಲ್ಲಿ 34ನೇ ಸ್ಥಾನಕ್ಕೆ ಏರಿದೆ. ಸ್ವಚ್ಛ ಸರ್ವೇಕ್ಷಣ ಸಮೀಕ್ಷೆ ತ್ಯಾಜ್ಯ …

Read More »

ಹುಬ್ಬಳ್ಳಿ-ರಾಮೇಶ್ವರಂ ವಿಶೇಷ ರೈಲು ರಾಮನಾಥಪುರಂವರೆಗೆ ಸಂಚಾರ

ಹುಬ್ಬಳ್ಳಿ, ಜುಲೈ 15: ದಕ್ಷಿಣ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳನ್ನು ಗಮನದಲ್ಲಿಟ್ಟುಕೊಂಡು, 07355/07356 ಸಂಖ್ಯೆಯ ಎಸ್ಎಸ್ಎಸ್ ಹುಬ್ಬಳ್ಳಿ – ರಾಮೇಶ್ವರಂ – ಎಸ್ಎಸ್ಎಸ್ ಹುಬ್ಬಳ್ಳಿ (Hubballi-Rameswaram Train) ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲಿನ ಸಂಚಾರದ ಅವಧಿಯನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ (South Western Railway). ಈ ವಿಶೇಷ ರೈಲು ತನ್ನ ಹಿಂದಿನ ನಿಗದಿತ ನಿಲ್ದಾಣವಾದ ರಾಮೇಶ್ವರಂ ಬದಲಿಗೆ ರಾಮನಾಥಪುರಂನಲ್ಲಿ ತನ್ನ ಪ್ರಯಾಣವನ್ನು ಕೊನೆಗೊಳಿಸಲಿದೆ ಮತ್ತು ಅಲ್ಲಿಂದಲೇ ವಾಪಸ್​ …

Read More »

ಹಣಕಾಸಿನ ವಿಚಾರವಾಗಿ ಕಂಠಿಗಲ್ಲಿಯಲ್ಲಿ ಇತ್ತೀಚೆಗೆ ನಡೆದ ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾನೆ.

ಧಾರವಾಡ: ಹಣಕಾಸಿನ ವಿಚಾರವಾಗಿ ಕಂಠಿಗಲ್ಲಿಯಲ್ಲಿ ಇತ್ತೀಚೆಗೆ ನಡೆದ ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾನೆ. ರಾಘವೇಂದ್ರ (ರಾಜು) ಗಾಯಕವಾಡ ಮೃತರು. ಕಳೆದ ಗುರುವಾರ ಧಾರವಾಡದ ಕಂಠಿಗಲ್ಲಿಯಲ್ಲಿ‌ ಚಾಕು ಇರಿತ ನಡೆದಿತ್ತು. ಹಣಕಾಸಿನ ವಿಚಾರವಾಗಿ ಯುವಕ ರಾಜು ಗಾಯಕವಾಡನಿಗೆ ಮಲ್ಲಿಕ್ ಎಂಬಾತ ಚಾಕುವಿನಿಂದ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ರಾಜುನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿವೆ. …

Read More »

ಧಾರವಾಡ ಕೋರ್ಟ್ ವೃತದ ಬಳಿ ತಪ್ಪಿದ ಅನಾಹುತ.‌… ನಿಂತಿದ್ದ ಕಾರಿನ ಮೇಲೆ ಬಿದ್ದ ಮರದ ಕೊಂಬೆ

ಧಾರವಾಡ ಕೋರ್ಟ್ ವೃತದ ಬಳಿ ತಪ್ಪಿದ ಅನಾಹುತ.‌… ನಿಂತಿದ್ದ ಕಾರಿನ ಮೇಲೆ ಬಿದ್ದ ಮರದ ಕೊಂಬೆ ನಿಂತಿದ್ದ ಕಾರಿನ ಮೇಲೆ ಮರದ ಕೊಂಬೆಯೊಂದು ಬಿದ್ದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ಸಂಭವಿಸಿದ್ದು, ಅನಾಹುತವೊಂದು ತಪ್ಪಿದಂತಾಗಿದೆ. ಹೌದು ಕೋರ್ಟ್ ವೃತ್ತದ ಬಳಿಯ ಮರದ ಕೆಳಗೆ ವಾಹನದ ಮಾಲೀಕ ತನ್ನ ಕಾರು ನಿಲ್ಲಿಸಿ ಹೋಗಿದ್ದ. ಈ ವೇಳೆ ಮರದ ಬೃಹತ್ ಕೊಂಬೆ ಮುರಿದ ಕಾರಿನ ಮೇಲೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ …

Read More »

ಅನಿಶ್ಚಿತ ಆರ್ಥಿಕ ಸ್ಥಿತಿಯಿಂದಾಗಿ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಉದ್ಯೋಗ ಭರ್ತಿ ಸಾಧ್ಯವಾಗುತ್ತಿಲ್ಲ: ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ : ಕರ್ನಾಟಕದಂತಹ ಕಾಂಗ್ರೆಸ್ ಆಡಳಿತದ ರಾಜ್ಯಗಳು ಎದುರಿಸುತ್ತಿರುವ ಅನಿಶ್ಚಿತ ಆರ್ಥಿಕ ಸ್ಥಿತಿಯಿಂದಾಗಿ ಖಾಲಿ ಇರುವ ಉದ್ಯೋಗಗಳನ್ನು ಭರ್ತಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ. ನಿರುದ್ಯೋಗ ಸಮಸ್ಯೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರದ ಬಿಜೆಪಿ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ನಗರದಲ್ಲಿಂದು ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. “ರಾಹುಲ್ ಗಾಂಧಿ ಅವರು ತಮ್ಮ ಸಲಹೆಗಾರರು ಹೇಳುವ ಆಧಾರದ ಮೇಲೆ ಪ್ರತಿಕ್ರಿಯೆ ನೀಡುತ್ತಾರೆ. ವಾಸ್ತವವಾಗಿ, …

Read More »

ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜೈಲಿನಲ್ಲಿ ಮೊಬೈಲ್ ಸಿಗ್ತಿವೆ, ಆಥಿತ್ಯ ಸಿಗ್ತಿದೆ ಭಯೋತ್ಪಾದಕರಿಗೆ ಕರ್ನಾಟಕದ ಜೈಲುಗಳು ಸ್ವರ್ಗವಾಗಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು ಕೇಂದ್ರ ತನಿಖಾ ಸಂಸ್ಥೆ ಪತ್ತೆ ಮಾಡಿದ ಮೇಲೆ ಇದೀಗ ತನಿಖೆ ಮಾಡ್ತೇವೆ ಅಂತ ಸರ್ಕಾರ ಹೇಳಿದೆ. ಭಯೋತ್ಪಾದಕರಿಗೆ ಕೂಡಾ ಅನಿಸಿದೆರಾಜ್ಯದಲ್ಲಿ ರೋರು ನಮಗೆ ಸಹಕಾರ ಕೊಡ್ತಾರೆ ಅಂತ. ಹೀಗಾಗಿ ಭಯೋತ್ಪಾದಕರಿಗೆ ಕರ್ನಾಟಕ …

Read More »

ಹುಬ್ಬಳ್ಳಿ-ಧಾರವಾಡ ಅವಳಿ‌ನಗರದ ಸ್ವಚ್ಛತೆ, ಘನತ್ಯಾಜ್ಯ ಸಮರ್ಪಕ ನಿರ್ವಹಣೆಗೆ 63 ಸಮುದಾಯ ನಿರ್ವಾಹಕರ ನೇಮಕ

ಹುಬ್ಬಳ್ಳಿ-ಧಾರವಾಡ ಅವಳಿ‌ನಗರದ ಸ್ವಚ್ಛತೆ, ಘನತ್ಯಾಜ್ಯ ಸಮರ್ಪಕ ನಿರ್ವಹಣೆಗೆ 63 ಸಮುದಾಯ ನಿರ್ವಾಹಕರ ನೇಮಕ   ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಸ್ವಚ್ಛತೆ ಹಾಗೂ ಕಸದ ನಿರ್ವಹಣೆ ದೊಡ್ಡ ಸವಾಲಾಗಿದೆ. ಹೀಗಾಗಿ ಹು-ಧಾ ಮಹಾನಗರ ಪಾಲಿಕೆ ನಗರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹಾಗೂ ಘನತ್ಯಾಜ್ಯ ನಿರ್ವಹಣೆಗೆ 63 ಸಮುದಾಯ ನಿರ್ವಾಹಕರನ್ನು (ಕಮ್ಯುನಿಟಿ ಮೊಬೈಲೈಸರ್) ನೇಮಕ ಮಾಡಿಕೊಂಡಿದೆ. ಈ ಸಮುದಾಯ ನಿರ್ವಾಹಕರು ಜುಲೈ 15 ರಿಂದ ಕಾರ್ಯಾರಂಭ ಮಾಡಲಿದ್ದಾರೆ. ಸ್ವಚ್ಛ …

Read More »