Breaking News
Home / ಹುಬ್ಬಳ್ಳಿ (page 22)

ಹುಬ್ಬಳ್ಳಿ

 ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು

ಹುಬ್ಬಳ್ಳಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ವಿವಾಹಿತ ಮಹಿಳೆ ಜೊತೆ ಯುವಕ ಹೊಂದಿದ್ದ ವಿವಾಹೇತರ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ‌ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ ಮಲಗಿದ್ದ ನಿಂಗಪ್ಪ ನವಲೂರ (33) ಎಂಬ ಯುವಕನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆಗೈಯ್ಯಲಾಗಿತ್ತು. ಈ ಪ್ರಕರಣ ಜಿಲ್ಲೆಯಲ್ಲಿ ಆತಂಕಕ್ಕೆ …

Read More »

ತಾಯಿ ಕೆಲಸಕ್ಕೆ ಹೋದಾಗ ಆತ್ಮಹತ್ಯೆ ಶರಣಾದ ಸಹೋದರಿಯರು

ಹುಬ್ಬಳ್ಳಿ : ನೇಣು ಬಿಗಿದುಕೊಂಡು ಇಬ್ಬರು ಸಹೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಇಂದು ನಡೆದಿದೆ. ಕಾವೇರಿ ಹಡಪದ (17) ಮತ್ತು ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ಗುರುತಿಸಲಾಗಿದೆ. ಮನೆಯಲ್ಲಿ ತಾಯಿ ಇಲ್ಲದ ವೇಳೆ ಇಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ಇವರು ವಾಸವಾಗಿದ್ದರು. ತಾಯಿ‌ ಕೆಲಸಕ್ಕೆಂದು ಹೊರಗಡೆ ಹೋದಾಗ ಸೀರೆಯಿಂದ ನೇಣು ಬಿಗಿದುಕೊಂಡು ಅಕ್ಕ ಮತ್ತು …

Read More »

ಗ್ಯಾರಂಟಿಗಳಲ್ಲಿ ಗೊಂದಲಗಳಿವೆ, ಕಾಂಗ್ರೆಸ್​ನವರು​ ಜನರಿಗೆ ಮೋಸ ಮಾಡಿದ್ದಾರೆ: ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ: ಒಡಿಶಾದ ರೈಲು ದುರಂತ ಎಲ್ಲರಿಗೂ ನೋವು, ದುಃಖವನ್ನು ತಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ರೈಲು ಅಪಘಾತ ನಡೆಯದಂತೆ ನೋಡಿಕೊಳ್ಳಲಾಗಿತ್ತು. ಆದರೆ ಈಗ ಬಹುದೊಡ್ಡ ದುರಂತ ಸಂಭವಿಸಿ, 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ್​ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪರಿಹಾರ ಕಾರ್ಯಗಳು ಭರದಿಂದ ನಡೆಯುತ್ತಿವೆ ಎಂದು ತಿಳಿಸಿದರು. ಘಟನೆಯ …

Read More »

ಜುಲೈನಲ್ಲಿ ಬೆಂಗಳೂರು-ಧಾರವಾಡ ವಂದೇ ಭಾರತ್ ರೈಲಿಗೆ ಚಾಲನೆ: ರೈಲ್ವೆ ಸಚಿವರ ಭೇಟಿಯಾದ ಜೋಶಿ

ಹುಬ್ಬಳ್ಳಿ: ಬಹುನಿರೀಕ್ಷೆಯ ಧಾರವಾಡ – ಬೆಂಗಳೂರು ನಡುವಣ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಇನ್ನು ಕೆಲವೇ ದಿನಗಳಲ್ಲಿ ವಿದ್ಯುಕ್ತವಾಗಿ ಆರಂಭವಾಗಲಿದೆ. ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಿದ್ದಾರೆ. “ರೈಲು ಸಂಚಾರ ಆರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರಾಜ್ಯದ ಎರಡನೇ ವಂದೇ ಭಾರತ್ ರೈಲಿಗೆ ಚಾಲನೆ ನೀಡುವ ಭರವಸೆಯನ್ನು ರೈಲ್ವೆ …

Read More »

ಜಗದೀಶ ಶೆಟ್ಟರ್ ಜೊತೆ ಕಾಂಗ್ರೆಸ್ ಪಕ್ಷ ಇರಲಿದೆ

ಹುಬ್ಬಳ್ಳಿ: ‘ಕಷ್ಟ ಕಾಲದಲ್ಲಿ ಜಗದೀಶ ಶೆಟ್ಟರ್ ಕಾಂಗ್ರೆಸ್ ಜೊತೆಯಿದ್ದು, ರಾಜ್ಯದಲ್ಲಿ ಸರ್ಕಾರ ಬರಲು ಕಾರಣರಾಗಿದ್ದಾರೆ. ಅವರ ಜೊತೆ ಕಾಂಗ್ರೆಸ್ ಪಕ್ಷ ಇರಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.   ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ಪ್ರಕಲ್ಪ ನಿವಾಸದಲ್ಲಿ ಬುಧವಾರ ಶೆಟ್ಟರ್ ಜೊತೆ ಚರ್ಚಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ‘ಶೆಟ್ಟರ್, ಸವದಿ, ಪುಟ್ಟಣ್ಣ, ಶಿವಲಿಂಗೇಗೌಡ, ಗುಬ್ಬಿ ಶ್ರೀನಿವಾಸ, ಬಾಬುರಾವ್ ಚಿಂಚನಸೂರು ಅವರು ಪಕ್ಷ ಸೇರ್ಪಡೆಯಾಗಿದ್ದರಿಂದ ನಮಗೆ ದೊಡ್ಡ ಶಕ್ತಿ ಬಂದಿದೆ. ಅವರು ಸಂಘಟನೆಯಲ್ಲಿ ತೊಡಗಿಕೊಂಡು …

Read More »

ಆರ್‌ಟಿಇ: 235 ಮಕ್ಕಳಿಗಷ್ಟೇ ಪ್ರವೇಶ

ಹುಬ್ಬಳ್ಳಿ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಧಾರವಾಡ ಜಿಲ್ಲೆಯಲ್ಲಿ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿ 732 ವಿದ್ಯಾರ್ಥಿಗಳ ಪ್ರವೇಶಕ್ಕೆ ಅವಕಾಶವಿದ್ದರೂ, 235 ಮಕ್ಕಳು ಮಾತ್ರ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆದಿದ್ದಾರೆ.   1,456 ವಿದ್ಯಾರ್ಥಿಗಳು, ತಾವು ವಾಸಿಸುತ್ತಿರುವ ಜಾಗದಿಂದ ಒಂದು ಕಿ.ಮೀ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಪ್ರವೇಶ ಪಡೆಯಲು ಆರ್‌ಟಿಇ ಅಡಿ ಅರ್ಜಿ ಸಲ್ಲಿಸಿದ್ದರು. ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆಯಲ್ಲಿ 406 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಪ್ರವೇಶ ದಿನಾಂಕ …

Read More »

ಕಾಂಗ್ರೆಸ್‌ ಗ್ಯಾರಂಟಿ | ಶೀಘ್ರದಲ್ಲೇ ಒಳ್ಳೆಯ ಸುದ್ದಿ: ಸಂತೋಷ್ ಲಾಡ್

ಹುಬ್ಬಳ್ಳಿ: ‘ಜೂನ್ 1ರಂದು ಕಾಂಗ್ರೆಸ್‌ ಸ‌ರ್ಕಾರದ ಮೊದಲ ಸಚಿವ ಸಂಪುಟ ಸಭೆ ನಡೆಯಲಿದ್ದು, ‘ಗ್ಯಾರಂಟಿ’ ಯೋಜನೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಶೀಘ್ರದಲ್ಲೇ ರಾಜ್ಯದ ಜನರಿಗೆ ಒಳ್ಳೆಯ ಸುದ್ದಿ ಸಿಗಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.   ಸಚಿವರಾದ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಮಂಗಳವಾರ ಭೇಟಿ ನೀಡಿದ ಅವರು, ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ‘ಕಳೆದ ಬಾರಿ ಕಾರ್ಮಿಕ ಸಚಿವ ಸ್ಥಾನ ನೀಡಿದ್ದಾಗ ನನಗೆ ಕಡಿಮೆ …

Read More »

ಕೆರೆಯಲ್ಲಿ ಶವ ಪತ್ತೆ ಹಿನ್ನೆಲೆ: ನೀರಿಗಾಗಿ ಪರದಾಡುವ ಸಂದರ್ಭದಲ್ಲೂ ಕೆರೆ ಖಾಲಿ ಮಾಡಿಸಿದ ಗ್ರಾಮಸ್ಥರು

ಹುಬ್ಬಳ್ಳಿ: ಕೆರೆಯಲ್ಲಿಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದ ಕಾರಣ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮಸ್ಥರು ಕೆರೆ ನೀರು ಕುಡಿಯಲು ಜನರು ಹಿಂದೇಟು ಹಾಕಿದ್ದರು. ಹೀಗಾಗಿ ಗ್ರಾಮಸ್ಥರ ಪಟ್ಟಿಗೆ ಮಣಿದ ಜಿಲ್ಲಾಡಳಿತ ಕೆರೆಯ ನೀರನ್ನು ಪಂಪಸೆಟ್​ಗಳ ಮುಖಾಂತರ ಕೆರೆ ನೀರನ್ನು ಹೊರ ಹಾಕಲಾಗುತ್ತಿದೆ. ಆದರೆ, ಈಗ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಎರಡು ಕೊಡ ನೀರಿಗಾಗಿ ಇಡೀ ದಿನ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆರೆಯಲ್ಲಿ ಪತ್ತೆಯಾದ ಮೃತದೇಹ ಮೂರ್‍ನಾಲ್ಕು ದಿನಗಳ ಕಾಲ ಕೆರೆಯಲಿದ್ದು, …

Read More »

ಧಾರವಾಡದಲ್ಲಿ ರಾತ್ರೋರಾತ್ರಿ ಡಬಲ್​ ಮರ್ಡರ್​: ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದ ಘಟನೆ ನಗರದ ಕಮಲಾಪುರ ಹೊರವಲಯದಲ್ಲಿ ಕಳೆದ ರಾತ್ರಿ ನಡೆದಿದೆ. ಮಹಮ್ಮದ್ ಕುಡಚಿ ಕೊಲೆಯಾದ ರಿಯಲ್ ಎಸ್ಟೇಟ್ ಉದ್ಯಮಿ. ಇವರ ಕುಡಚಿ ಮನೆ ಎದುರು ಘಟನೆ ನಡೆದಿದೆ. ರಾತ್ರಿ 10 ರಿಂದ 11 ಗಂಟೆಯ ಸುಮಾರಿಗೆ ಮನೆ ಎದುರು ಕುಳಿತಿದ್ದಾಗ ದುಷ್ಕರ್ಮಿಗಳ ಗುಂಪೊಂದು ಸ್ಥಳಕ್ಕೆ ಧಾವಿಸಿ ಬಂದು ಏಕಾಏಕಿ ದಾಳಿ ಮಾಡಿ ಪರಾರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. …

Read More »

ಪಾಲಿಕೆ ಸ್ಮಾರ್ಟ್ ಸಿಟಿ ನಡುವೆ ಹಗ್ಗಜಗ್ಗಾಟ: ಕಾಮಗಾರಿ ಮುಗಿದರೂ ಇನ್ನೂ ಹಸ್ತಾಂತರವಾಗದೇ ಉಳಿದ ಪ್ರಾಜೆಕ್ಟ್​ಗಳು

ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡ ಅವಳಿನಗರದ ಮಹತ್ವದ ಯೋಜನೆ. ಈ ಯೋಜನೆ ಪ್ರಾರಂಭವಾದಾಗಿನಿಂದಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಯೋಜನೆ ಕಾಮಗಾರಿ ವಿಳಂಬ ಒಂದು ಕಡೆಯಾದರೆ ಮತ್ತೊಂದು ಕಡೆಯಲ್ಲಿ ಪೂರ್ಣಗೊಂಡಿದ್ದರೂ ಪಾಲಿಕೆಗೆ ಹಸ್ತಾಂತರ ಮಾಡಿಲ್ಲ. ಇದು ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. 2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ಮಾರ್ಟ್‌ಸಿಟಿ ಯೋಜನೆಗಳಲ್ಲಿ ಪೂರ್ಣಗೊಂಡ ಕಾಮಗಾರಿಗಳ ಹಸ್ತಾಂತರ ವಿಚಾರ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ಸಿಟಿ ಮಧ್ಯೆ ಮುಸುಕಿನ …

Read More »