Breaking News

ಹುಬ್ಬಳ್ಳಿ

ಕೃಷಿ ಕ್ಷೇತ್ರದಲ್ಲಿ ಸಂಶೋಧನೆ, ಅಭಿವೃದ್ಧಿಗೆ ಒತ್ತು ನೀಡಬೇಕು: ಪ್ರಲ್ಹಾದ ಜೋಶಿ

ಧಾರವಾಡ: ಕೃಷಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡಬೇಕು. ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಕೃಷಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿರುವ ಕೃಷಿ ಮೇಳದಲ್ಲಿ ಬೀಜ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೃಷಿ ಕ್ಷೇತ್ರದಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಕೃಷಿ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಡಲಾಗಿದೆ ಎಂದರು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ₹3.05 ಲಕ್ಷ …

Read More »

ಸಿಡಿಲು ಬಡಿದು ರೈತ ಸಾವು

ಧಾರವಾಡ: ತಾಲ್ಲೂಕಿನ ಹನುಮನಾಳ ಗ್ರಾಮದಲ್ಲಿ ಭಾನುವಾರ ಸಿಡಿಲು ಬಡಿದು ರೈತ ಭೀಮನಗೌಡ ಮಲ್ಲನಗೌಡ ಪಾಟೀಲ (65) ಮೃತಪಟ್ಟಿದ್ಧಾರೆ. ಅವರು ಮಧ್ಯಾಹ್ನ ಹೊಲದಿಂದ ವಾಪಸ್ಸಾಗುವಾಗ ಸಿಡಿಲು ಬಡಿದಿದ್ದು ಸ್ಥಳದಲ್ಲೇ ಸಾವಿಗೀಡಾಗಿದ್ಧಾರೆ. ಧಾರವಾಡ ಜಿಲ್ಲೆಯ ವಿವಿಧೆಡೆ ಭಾನುವಾರ ಸಾಧಾರಣ ಮಳೆಯಾಗಿದೆ. ‌ಕುಂದಗೋಳ, ಧಾರವಾಡ, ಉಪ್ಪಿನಬೆಟಗೇರಿ ಹುಬ್ಬಳ್ಳಿ ಭಾಗದಲ್ಲಿಯೂ ಗುಡುಗಿನ ಆರ್ಭಟ ಸಹಿತ ಮಳೆಯಾಗಿದೆ. ಕಾರವಾರ ವರದಿ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗ ಸೇರಿ ಕೆಲವೆಡೆ ಆಗಾಗ ಬಿರುಸಿನ ಮಳೆಯಾಗಿದೆ. ಕರಾವಳಿ ಭಾಗದಲ್ಲಿ …

Read More »

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ‘ಸ್ಥಾಯಿ ಸಮಿತಿ’ಗಳಿಗೆ ಚುನಾವಣೆಗೆ ಮಹೂರ್ತ ಫಿಕ್ಸ್

ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23 ನೇ ಅವಧಿಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆಯನ್ನು ಆಯೋಜಿಸಲಾಗಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವಿವಿಧ ನಾಲ್ಕು ಸ್ಥಾಯಿ ಸಮಿತಿಗೆ ಸ್ಪರ್ಧಿಸುವವರು ಅಕ್ಟೋಬರ್ 3, 2024 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು.   ಪಾಲಿಕೆಯ ಚುನಾವಣೆಯನ್ನು ಅಕ್ಟೋಬರ್ 3, 2024 ರಂದು ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿ ಮಹಾನಗರ …

Read More »

ತಿರುಪತಿ ಲಾಡು ಪ್ರಸಾದದ ಬಗ್ಗೆ ಸಮಗ್ರ ತನಿಖೆಯಾಗಲಿ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ತಿರುಪತಿ ಪ್ರಸಾದ ಲಾಡುವಿನ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದೆ. ಆಂಧ್ರಪ್ರದೇಶದ ಹಿಂದಿನ‌ ಸರ್ಕಾರ ಲಾಡು ತಯಾರಿಕೆಗೆ ರಾಜ್ಯದ ನಂದಿನಿ ತುಪ್ಪ‌ ತರಿಸಿಕೊಳ್ಳಲಾಗುತ್ತಿತ್ತು. ಅದನ್ನು ನಿಲ್ಲಿಸಿ, ಬೇರೆ ಕಡೆಯಿಂದ ತುಪ್ಪ ತರಿಸಿಕೊಳ್ಳಲು ಆರಂಭಿಸಿದಾಗಿನಿಂದ ಈ ರೀತಿ ಘಟನೆಗಳು ನಡೆದಿವೆ ಎಂದು ಕೇಂದ್ರ ಸಚಿವ ಪಲ್ಹಾದ ಜೋಶಿ ಹೇಳಿದರು.   ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಸಂಬಂಧಿಸಿದ ಪ್ರಯೋಗಾಲಯದ ವರದಿಯನ್ನು ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬಿಡುಗಡೆ ಮಾಡಿದ್ದಾರೆ. …

Read More »

ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ ಜಾರಿ : ಸರ್ಕಾರಿ `ಆಸ್ತಿ’ ಒತ್ತುವರಿ ಮಾಡಿಕೊಂಡ್ರೆ ದಂಡ ಜೊತೆಗೆ ಜೈಲು ಶಿಕ್ಷೆ ಫಿಕ್ಸ್!

ಧಾರವಾಡ : ಸರಕಾರಿ ಆಸ್ತಿಗಳ ಒತ್ತುವರಿ, ಅತಿಕ್ರಮಣ ತೆರವುಗೊಳಿಸಲು ಮತ್ತು ರಕ್ಷಣೆಗೆ ಸೂಕ್ತ ಆದೇಶ ನೀಡಲು ರಾಜ್ಯ ಸರಕಾರ 2011 ರಲ್ಲಿ ಸ್ಥಾಪಿಸಿರುವ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಇಲ್ಲಿವರೆಗೆ 3,923 ಎಕರೆ ಸರಕಾರಿ ಭೂಮಿಯನ್ನು ಒತ್ತುವರಿ ಆಗಿರುವುದನ್ನು ತೆರವುಗೊಳಿಸಿ, ಮರಳಿ ಸರಕಾರದ ವಶಕ್ಕೆ ಬರುವಂತೆ ಆದೇಶಿಸಲಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾಗಿರುವ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರು ಹೇಳಿದರು.   ಅವರು …

Read More »

ಕೆಎಸ್‌ಸಿಎ: ಧಾರವಾಡ ವಲಯದ ಸಭೆ ನಡೆಸಲು ವೀರಣ್ಣ ಸವಡಿ ಆಗ್ರಹ

ಹುಬ್ಬಳ್ಳಿ: ‘ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಧಾರವಾಡ ವಲಯದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಶೀಘ್ರ ಸಭೆ ಕರೆಯಬೇಕು’ ಎಂದು ವಲಯದ ಚೇರ್ಮನ್ ವೀರಣ್ಣ ಸವಡಿ ಕೋರಿದ್ಧಾರೆ. ಈ ಕುರಿತು ಕೆಎಸ್‌ಸಿಎ ಕಾರ್ಯದರ್ಶಿ ಅವರಿಗೆ ಇ-ಮೇಲ್ ಮಾಡಿರುವ ಅವರು, ‘ಆಟಗಾರರ ಪೋಷಕರು, ಕೋಚ್‌ಗಳು, ವಿವಿಧ ಕ್ಲಬ್‌ಗಳ ಸದಸ್ಯರು ನನ್ನನ್ನು ಭೇಟಿ ಮಾಡಿ ಸಮಸ್ಯೆಗಳನ್ನು ಗಮನಕ್ಕೆ ತಂದಿದ್ದಾರೆ. ಎಲ್ಲ ಬೆಳವಣಿಗೆಗಳನ್ನು ಕಾರ್ಯದರ್ಶಿಗೆ ಮಾಹಿತಿ ನೀಡಲಾಗಿದೆ’ ಎಂದರು. ’19 ವರ್ಷದೊಳಗಿನವರ ತಂಡದ ಆಯ್ಕೆ ಕುರಿತು …

Read More »

HSRP’ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ.!

ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 …

Read More »

ಧಾರವಾಡ ಜಿಲ್ಲಾಸ್ಪತ್ರೆ: ನೋಂದಣಿಗೆ ಗಂಟೆಗಟ್ಟಲೆ ಕಾಯುವ ಸ್ಥಿತಿ

ಧಾರವಾಡ: ನಗರದ ಜಿಲ್ಲಾಸ್ಪತ್ರೆಯಲ್ಲಿ ಹೊರರೋಗಿಗಳು ನೋಂದಣಿ ಮಾಡಿಸಲು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದೆ. ಕೆಲವೊಮ್ಮೆ ಕೌಂಟರ್‌ ಕೇಂದ್ರದ ‌ಬಾಗಿಲಿನ ಹೊರಗೂ ರೋಗಿಗಳು ಸಾಲುಗಟ್ಟಿ ನಿಂತಿರುತ್ತಾರೆ. ಧಾರವಾಡ ಜಿಲ್ಲೆಯವರು ಮಾತ್ರವಲ್ಲ ಬೆಳಗಾವಿ ಜಿಲ್ಲೆಯ ಕಿತ್ತೂರು, ಬೈಲಹೊಂಗಲ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ದಾಂಡೇಲಿ ಭಾಗದವರು ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಪ್ರತಿನಿತ್ಯ ಸುಮಾರು 1300 ಹೊರರೋಗಿಗಳು ಆಸ್ಪತ್ರೆಗೆ ಬರುತ್ತಾರೆ. ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದೆ. ರೋಗಿ ಜತೆಗೆ ಬಂದವರು ಚೀಟಿ …

Read More »

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಕ್ಕೆ ಕೇಂದ್ರ ಚಿಂತನೆ

ಧಾರವಾಡ: ಪ್ರಯಾಣಿಕರಿಗೆ ಮತ್ತಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆಯನ್ನು ವಿಲೀನಗೊಳಿಸಲು ಚಿಂತನೆ ನಡೆದಿದೆ ಎಂದು ಕೇಂದ್ರ ರೈಲ್ವೆ ಖಾತೆ ಸಹಾಯಕ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಪುಣೆ -ಹುಬ್ಬಳ್ಳಿ ನಡುವಿನ ವಂದೇ ಭಾರತ್ ರೈಲು ಸ್ವಾಗತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.   ಕೊಂಕಣ ರೈಲ್ವೆ ಜಾಲ ಕೇರಳದಿಂದ ಮಹಾರಾಷ್ಟ್ರದವರೆಗೆ ವಿಸ್ತರಿಸಿದ್ದು, ಪ್ರಯಾಣಿಕರಿಗೆ ಮತ್ತಷ್ಟು ಉತ್ತಮವಾದ ಸೇವೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ರೈಲ್ವೆಯೊಂದಿಗೆ …

Read More »

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಜಿ ವಿಧಾನ, ಲಿಂಕ್ ಇಲ್ಲಿದೆ

ಧಾರವಾಡ ಸೆಪ್ಟೆಂಬರ್ 13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಧಾರವಾಡ (ಗ್ರಾಮೀಣ), ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳುwww.karnemakaone.kar.nic.in/abcd/ವೆಬ್‍ಸೈಟ್ ಮೂಲಕ ಅಕ್ಟೋಬರ್ 10, 2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447850 ಗೆ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದು …

Read More »