ಹುಬ್ಬಳ್ಳಿ; ಬಿಜೆಪಿಯವರು ಮಾಡಿದ ಹಗರಣ ಮೊದಲು ಒಪ್ಪಿಕೊಳ್ಳಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಹಾಗೂ ವಾಲ್ಮೀಕಿ ನಿಗಮದಲ್ಲಿ ಹಗರಣದಲ್ಲಿ ಸಿಎಂ ರಾಜೀನಾಮೆಗೆ ವಿಚಾರವಾಗಿ ವಿರೋಧ ಪಕ್ಷಗಳು ಒತ್ತಾಯ ನಡೆಸಿವೆ. ಇದಕ್ಕೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟನೆ ಕೊಟ್ಟಿದ್ದಾರೆ. ವಿಪಕ್ಷಗಳಿಗೆ ಸಿಎಂ ಹೇಗೆ ಸ್ಪಷ್ಟನೇ ನೀಡಬೇಕು. ಬಿಜೆಪಿ ಕಾಲದಲ್ಲಿ ಏನು ಆಗಿದೆ ಮೊದಲು ಅವರನ್ನು ಹೇಳಲಿ ಎಂದು ಗುಡುಗಿದರು. ಬಿಜೆಪಿ …
Read More »ಮಹದಾಯಿ ಯೋಜನೆ ಜಾರಿಗೆ ಮನವಿ
ಹುಬ್ಬಳ್ಳಿ: ‘ಕೇಂದ್ರ ಸರ್ಕಾರವು ಮಹದಾಯಿ ಯೋಜನೆಯನ್ನು ಶೀಘ್ರ ಜಾರಿಗೊಳಿಸಬೇಕು ಹಾಗೂ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಬೇಕು’ ಎಂದು ರೈತ ಹೋರಾಟಗಾರ ವೀರೇಶ ಸೊಬರದಮಠ ಒತ್ತಾಯಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಹದಾಯಿ ಮತ್ತು ಕಳಸಾ ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಪ್ರಧಾನಮಂತ್ರಿ, ರಾಷ್ಟ್ರಪತಿ, ವಿರೋಧ ಪಕ್ಷದ ನಾಯಕರ ಕಚೇರಿಗೆ, ರಾಜ್ಯದ 28 ಸಂಸದರಿಗೆ ಹಾಗೂ ದೆಹಲಿಯಲ್ಲಿ ಈಚೆಗೆ ಮನವಿ ಸಲ್ಲಿಸಲಾಗಿದೆ. ಈ ಯೋಜನೆ ಜಾರಿಗೆ ಕೇಂದ್ರ …
Read More »ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು
ಹುಬ್ಬಳ್ಳಿ: ತೀವ್ರ ಜ್ವರದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕ ಹಿರೇನರ್ತಿ ಗ್ರಾಮದ ಐದು ವರ್ಷದ ಬಾಲಕಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಮೃತಪಟ್ಟಿದ್ದಾಳೆ. ಬಾಲಕಿಯು ಡೆಂಗ್ಯೂ ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಪೂರ್ಣಾ ಎಂಬ ಬಾಲಕಿಯನ್ನು ಅವಳ ಪಾಲಕರು ಮೊದಲು ಕುಂದಗೋಳದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಶಂಕಿತ …
Read More »17 ಪಿಎಸ್‌ಐಗಳ ವರ್ಗಾವಣೆ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 17 ಪೊಲೀಸ್ ಸಬ್ ಇನ್ಸಪೆಕ್ಟರ್‌ಗಳನ್ನು (ಪಿಎಸ್‌ಐ) ನಗರದ ವಿವಿಧ ಠಾಣೆಗಳಿಗೆ ಆಂತರಿಕ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ. ಇತ್ತೀಚೆಗೆ ಒಂದೇ ಠಾಣೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ಕರ್ತವ್ಯ ನಿರ್ವಹಿಸಿದ್ದ ಎಎಸ್‌ಐ, ಹೆಡ್ ಕಾನ್‌ಸ್ಟೆಬಲ್, ಕಾನ್‌ಸ್ಟೆಬಲ್‌ಗಳನ್ನು ಕೌನ್ಸ್‌ಲಿಂಗ್ ಮೂಲಕ ವಿವಿಧ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿತ್ತು.
Read More »ಐಶ್ವರ್ಯಗೆ ಚಿನ್ನ, ಸಿದ್ಧಾರ್ಥಗೆ ಬೆಳ್ಳಿ
ಹುಬ್ಬಳ್ಳಿ: ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್‌ನಲ್ಲಿ ನಡೆದ 12ನೇ ಶೂಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಹುಬ್ಬಳ್ಳಿ ಶೂಟಿಂಗ್ ಅಕಾಡೆಮಿಯ ಐಶ್ವರ್ಯ ಬಾಲೆಹೊಸೂರು ಚಾಂಪಿಯನ್ ಆಗಿ ಹೊರಹೊಮ್ಮಿದರು. ಪಿಸ್ತೂಲ್ ಐಎಸ್‌ಎಸ್‌ಎಫ್‌ನ ಮಹಿಳೆಯರ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಅವರು, ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಪುರುಷರ ವಿಭಾಗದಲ್ಲಿ (ಪಿಸ್ತೂಲ್) ಸಿದ್ಧಾರ್ಥ ದಿವಟೆ ಬೆಳ್ಳಿ ಪದಕ ಗೆದ್ದರು. ಪಿಸ್ತೂಲ್ ಮಾಸ್ಟರ್ ವಿಭಾಗದಲ್ಲಿ ಜಯಶ್ರೀ ಪಾಟೀಲ ಬೆಳ್ಳಿ, ಇದೇ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಪ್ರಶಾಂತ್ ಪಾವಸ್ಕರ್ …
Read More »ಆಯುಕ್ತರ ಕಚೇರಿಗೆ ಪೌರಕಾರ್ಮಿಕರ ಮುತ್ತಿಗೆ
ಹುಬ್ಬಳ್ಳಿ: ಸೇವೆ ಕಾಯಂಗೊಳಿಸುವುದು, ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪೌರಕಾರ್ಮಿಕರು, ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪೌರಕಾರ್ಮಿಕರ ಸಂಘದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಾರಾಯಣ ಅವರ ನೇತೃತ್ವದಲ್ಲಿ ಆಯುಕ್ತರ ಕಚೇರಿ ಎದುರು ಕುಳಿತ ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ನಾರಾಯಣ ಮಾನತಾಡಿ, ‘ಮಹಾನಗರ ಪಾಲಿಕೆ ಆಯುಕ್ತ, ಮೇಯರ್ ಅವರು ಬೇಡಿಕೆಗಳ ಈಡೇರಿಕೆಗೆ …
Read More »ಹುಬ್ಬಳ್ಳಿ: ರೈತರಿಗೆ ನೆರವಾದ ‘ಕೃಷಿ ಸಿಂಚಾಯಿ’
ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ ಯೋಜನೆಗೆ ರೈತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 2023-24ರ ಸಾಲಿನಲ್ಲಿ 11,143 ಜನ ರೈತರು ಅರ್ಜಿ ಸಲ್ಲಿಸಿದ್ದು, ಇವರಲ್ಲಿ 8,009 ರೈತರಿಗೆ ಯೋಜನೆಯ ಲಾಭ ದಕ್ಕಿದೆ. ಕಳೆದ ನಾಲ್ಕು ವರ್ಷಗಳಲ್ಲಿ ಇದು ಅತ್ಯಧಿಕವಾಗಿದೆ. ಉತ್ತಮ ಇಳುವರಿ ಪಡೆಯಲು ಹಾಗೂ ಬೆಳೆಗೆ ಆಗುವ ನೀರಿನ ತೊಂದರೆ ನೀಗಿಸಲು 2015ರಲ್ಲಿ ‘ಪ್ರಧಾನಮಂತ್ರಿ ಕೃಷಿ ಸಿಂಚಾಯಿ’ಯೋಜನೆ ಜಾರಿಗೆ ತರಲಾಗಿದೆ. ಯೋಜನೆಯ ಲಾಭ ಪಡೆಯುತ್ತಿರುವ ರೈತರ ಸಂಖ್ಯೆ ವರ್ಷದಿಂದ …
Read More »ಬೆಂಗಳೂರು- ಕಾರವಾರ: 26, 28ರಂದು ವಿಶೇಷ ರೈಲು
ಹುಬ್ಬಳ್ಳಿ: ಪ್ರಯಾಣಿಕರ ಬೇಡಿಕೆ ಮೇರೆಗೆ ಬೆಂಗಳೂರು ಮತ್ತು ಕಾರವಾರ ನಡುವೆ ಜುಲೈ 26 ಮತ್ತು 28ರಂದು ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣದಿಂದ ಎರಡೂ ದಿನ ಮಧ್ಯರಾತ್ರಿ 12.30ಕ್ಕೆ ಹೊರಡುವ ವಿಶೇಷ ರೈಲು (06567) ಸಂಜೆ 4ಕ್ಕೆ ಕಾರವಾರ ನಿಲ್ದಾಣ ತಲುಪಲಿದೆ. ಪುನಃ ಇದೇ ರೈಲು ಅವತ್ತೇ ರಾತ್ರಿ 11.30ಕ್ಕೆ ಕಾರವಾರ ನಿಲ್ದಾಣದಿಂದ ಹೊರಟು, ಮರುದಿನ ಸಂಜೆ 3.30ಕ್ಕೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ …
Read More »ಹೆಸ್ಕಾಂ ನೂತನ ಎಂ.ಡಿಯಾಗಿ ವೈಶಾಲಿ
ಹುಬ್ಬಳ್ಳಿ : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ( ಹೆಸ್ಕಾಂ) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ವೈಶಾಲಿ ಎಂ.ಎಲ್ (ಐಎಎಸ್) ಗುರುವಾರ ಅಧಿಕಾರ ವಹಿಸಿಕೊಂಡರು. ಈ ಹಿಂದಿನ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮೊಹಮ್ಮದ್ ರೋಷನ್ ( ಐಎಎಸ್) ಅವರು ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಹೊಂದಿದ್ದರು.ಈ ಹಿನ್ನೆಲೆ ತೆರವಾಗಿದ್ದ ಎಂ.ಡಿ ಹುದ್ದೆಗೆ ವೈಶಾಲಿ ಎಂ.ಎಲ್ ಅವರನ್ನು ನೇಮಿಸಿ ಸರಕಾರ ಆದೇಶ ಹೊರಡಿಸಿದೆ. ಇವರು ಗದಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
Read More »ಕನ್ನಡಮ್ಮ ಮಡಿಲಿಗೆ ಪಾಪು ಪ್ರಶಸ್ತಿ
ಧಾರವಾಡ : ಪಾಟೀಲ್ ಪುಟ್ಟಪ್ಪನವರ ಪತ್ರಿಕೋದ್ಯಮದಲ್ಲಿ ಕನ್ನಡದ ಯೋಧರು. ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಕನ್ನಡಮ್ಮ ದಿನಪತ್ರಿಕೆಗೆ ಕೊಡುತ್ತಿರುವುದು ಅಭಿಮಾನದ ಸಂಗತಿ ಎಂದು ಉನ್ನತ ಶಿಕ್ಷಣ ಅಕಾಡೆಮಿ ವಿಶ್ರಾಂತ ನಿರ್ದೇಶಕ ಡಾ. ಎಂ.ಎಸ್.ಶಿವಪ್ರಸಾದ ಹೇಳಿದರು. ಭಾನುವಾರ ಕರ್ನಾಟಕ ವಿಧ್ಯಾವರ್ಧಕ ಸಂಘದ 135ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕನ್ನಡದ ಪ್ರಪಂಚ ನಾಡೋಜ ಡಾ. ಪಾಟೀಲ್ ಪುಟ್ಟಪ್ಪನವರ ಸವಿ ನೆನಪಿನಲ್ಲಿ ಕೊಡಮಾಡುವ ಡಾ. ಪಾಟೀಲ್ ಪುಟ್ಟಪ್ಪನವರ ಪ್ರಶಸ್ತಿಯನ್ನು ಕನ್ನಡಮ್ಮ ದಿನಪತ್ರಿಕೆಯ ಸಂಪಾದಕ ರಾಜಕುಮಾರ ಟೋಪಣ್ಣವರ …
Read More »