Breaking News

ಹುಬ್ಬಳ್ಳಿ

ಹುಬ್ಬಳ್ಳಿಯ ಮೂರುಸಾವಿರ ಮಠದ ಸಮೀಪದ ರಸ್ತೆ

ಹುಬ್ಬಳ್ಳಿ: ‘ಇದು ಸ್ಮಾರ್ಟ್‌ಸಿಟಿ ಅಂತೆ. ಇಲ್ಲಿನ ರಸ್ತೆಗಳಲ್ಲಿ ಓಡಾಡಿದ್ರೆ ಗೊತ್ತಾಗುತ್ತೆ, ಎಷ್ಟು ಸ್ಮಾರ್ಟ್‌ ಅಂತಾ…’ ಸ್ಟೇಷನ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವಿಜಯಕುಮಾರ್‌ ಎಂಬುವರು ಆಕ್ರೋಶ ವ್ಯಕ್ತಪಡಿಸಿದ ಪರಿ ಇದು. ಇಲ್ಲಿನ ರಸ್ತೆಗಳ ಬಗೆಗಿರುವ ಅತೀವ ಬೇಸರ ಅವರ ಪ್ರತಿ ಮಾತಿನಲ್ಲೂ ಕಂಡುಬರುತ್ತಿತ್ತು. ‘ಹೊಸ ರಸ್ತೆ ಮಾಡ್ತೀವಿ ಅಂತಾರೆ. ಇರೋ ರಸ್ತೆ ಹಾಳು ಮಾಡ್ತಾರೆ. ಅದಕ್ಕೆ ವರ್ಷಗಟ್ಟಲೆ ಸಮಯ ತೆಗೆದುಕೊಳ್ತಾರೆ. ನಡುವೆ ಮತ್ಯಾವುದೋ ಕಾಮಗಾರಿಗಾಗಿ ರಸ್ತೆ ಅಗೀತಾರೆ. ಅದನ್ನು ಹಾಗೇ ಬಿಟ್ಟು ಹೋಗ್ತಾರೆ. …

Read More »

ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಹುಬ್ಬಳ್ಳಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇದೇ ಚುರುಕುತನದಿಂದ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ. ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ಅಮಾನವೀಯ ವರ್ತನೆಯಾಗಿದೆ. ಸೆಲೆಬ್ರಿಟಿ, ಅಧಿಕಾರದಲ್ಲಿರುವವರು ಯಾರೇ ಆದರೂ ಈ ರೀತಿ ನಡೆದುಕೊಳ್ಳಲು ಅಧಿಕಾರವಿಲ್ಲ. ಕಾನೂನು ಕೈಗೆತ್ತಿಕೊಳ್ಳಲು ಯಾರಿಗೂ ಅವಕಾಶವಿಲ್ಲ. ಕಾನೂನಿನ ಮುಂದೆ ಎಲ್ಲರೂ ಸಮಾನರು. ಯಾವುದೇ …

Read More »

ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಲು ಸೂಚನೆ’

ಧಾರವಾಡ, ಜೂನ್.10: ರೈತರ ಬೇಡಿಕೆಗೆ ಅನುಗುಣವಾಗಿ ಬೀಜ, ರಸಗೊಬ್ಬರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೃಷಿ ಹಾಗೂ ಇತರ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದ ಅವರು, ಮುಂಗಾರು ಪೂರ್ವ ಮಳೆ ಚನ್ನಾಗಿ ಆಗಿದ್ದರಿಂದ ಜಿಲ್ಲೆಯ ರೈತರು ಬಿತ್ತನೆ ಆರಂಭಿಸಿದ್ದಾರೆ. ಈಗ ಸುಮಾರು ಶೇ. 36 ರಷ್ಟು …

Read More »

ಮದುವೆಯಾಗುವುದಾಗಿ ನಂಬಿಸಿ ₹ 1.69 ಲಕ್ಷ ವಂಚನೆ

ಧಾರವಾಡ: ಸಂಗೀತಾ ಎಂಬುವರು ‘ಜೀವನ್‌ ಸಾಥಿ’ ಮ್ಯಾಟ್ರಿಮೋನಿ ಆಯಪ್‌ ಮೂಲಕ ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಆನ್‌ಲೈನ್‌ನಲ್ಲಿ ₹1.69 ಲಕ್ಷ ವರ್ಗಾಯಿಸಿಕೊಂಡು ವಂಚಿಸಿರುವ ಕುರಿತು ‘ಸೆನ್‌’ (ಸೈಬರ್‌, ಆರ್ಥಿಕ ಹಾಗೂ ಮಾದಕ ದ್ರವ್ಯ ನಿಯಂತ್ರಣ) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ಕುಂದಗೋಳದ ಕುಶಾಲ್‌ ಅವರು ದೂರು ನೀಡಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರಿನ ಸಂಗೀತಾ ಮತ್ತು ಶಿವರಾಜಕುಮಾರ ವಿರುದ್ಧ ದೂರು ನೀಡಿದ್ಧಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ (2008), ವಂಚನೆ (ಐಪಿಸಿ 419 ಹಾಗೂ …

Read More »

ಹುಬ್ಬಳ್ಳಿ: ಸೊಳ್ಳೆ ನಿಯಂತ್ರಣಕ್ಕಾಗಿ ಫಾಗಿಂಗ್‌

ಹುಬ್ಬಳ್ಳಿ: ಮಳೆಗಾಲ ಪ್ರಾರಂಭವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಹಾಗೂ ಸೊಳ್ಳೆ ಹೆಚ್ಚಾಗುವ ಸಾಧ್ಯತೆಯಿದೆ. ಮುಂಜಾಗ್ರತಾ ಕ್ರಮವಾಗಿ ಸಾಂಕ್ರಾಮಿಕ ರೋಗ ತಡೆಗಟ್ಟವ ನಿಟ್ಟಿನಲ್ಲಿ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾರ್ಡ್ ಗಳಲ್ಲಿ ಫೋಗಿಂಗ ಹಾಗೂ ಕ್ರಿಮಿನಾಶಕ ಔಷಧ ಸಿಂಪಡಣೆ ಕಾರ್ಯ ನಡೆಯಿತು. ಪಾಲಿಕೆ ಆರೋಗ್ಯಾಧಿಕಾರಿ ಡಾ.ಶ್ರೀಧರ ದಂಡಪ್ಪನವರ ಮುಂದಾಳತ್ವದಲ್ಲಿ ಆರೋಗ್ಯ ನಿರೀಕ್ಷಕರ, ಪೌರಕಾರ್ಮಿಕರ ಸಹಾಯದಿಂದ ಕ್ರಿಮಿನಾಶಕ ಔಷಧ ಸಿಂಪಡಣೆ ಮಾಡಲಾಗುತ್ತಿದೆ ಎಂದು ಪಾಲಿಕೆಯ …

Read More »

ಜೂ.12 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

ಧಾರವಾಡ : ಕರ್ನಾಟಕ ಲೋಕಾಯುಕ್ತ, ಧಾರವಾಡ ಕಚೇರಿಯ ಪೊಲೀಸ್ ಅಧಿಕಾರಿಗಳು ಜೂನ್ 12, 2024 ರಂದು ಹುಬ್ಬಳ್ಳಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಜೂನ್ 12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಬ್ಬಳ್ಳಿಯ ತಾಲೂಕು ಪಂಚಾಯತ ಸಭಾಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಾಗುವುದು. ಸಾರ್ವಜನಿಕರು ತಮ್ಮ ದೂರ, ಅಹವಾಲುಗಳನ್ನು ಸಲ್ಲಿಸಬೇಕೆಂದು ಅವರು …

Read More »

ಹುಬ್ಬಳ್ಳಿಯಲ್ಲಿ ರೈಲಿಗೆ ತಲೆಕೊಟ್ಟು ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು..!

ಹುಬ್ಬಳ್ಳಿ : ರೈಲಿಗೆ ತಲೆಕೊಟ್ಟು ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ನಡೆದಿದೆ.   ಮೃತರನ್ನು ನಾಗರಾಜ ಹಂಚಿನಮನಿ (48) ಎಂದು ಗುರುತಿಸಲಾಗಿದೆ. ನಾಗರಾಜ ಹಂಚಿನಮನಿ ಅವರು ಹುಬ್ಬಳ್ಳಿಯ ಲಿಂಗರಾಜ ನಗರದ ಟ್ರಾಫಿಕ್ ಪೊಲೀಸ್ ಆಗಿ ಸೇವೆ ಸಲ್ಲಿಸುತ್ತಿದ್ದರು.   ಉಣಕಲ್ ಹತ್ತಿರ ಅವರು ರೈಲು ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಘಟನೆ ನಡೆದ ಸ್ಥಳಕ್ಕೆ …

Read More »

ಸರ್ಕಾರಕ್ಕೆ ಚಾಟಿ ಬೀಸಿದ ಪ್ರಲ್ಹಾದ್​ ಜೋಶಿ

ಹುಬ್ಬಳ್ಳಿ, ಮೇ 25: ದಾವಣಗೆರೆ ಜಿಲ್ಲೆಯ ಚನ್ನಗಿರಿ (Channagiri) ಠಾಣೆ ಪೊಲೀಸರ ಕಸ್ಟಡಿಯಲ್ಲಿದ್ದ ಆರೋಪಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ಮೇಲೆ ಕಲ್ಲು ತೂರಿದ್ದ 10 ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉಳಿದವರಿಗಾಗಿ ಶೋಧ ಮುಂದುವರೆಸಿದ್ದಾರೆ. ಈ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi), ಪೊಲೀಸ್ ಠಾಣೆಗೆ ಬೆಂಕಿ ಹಚ್ಚಲು ಹೋದವರ ಮೇಲೆ ಕ್ರಮಕೈಗೊಂಡಿಲ್ಲ ಅದನ್ನು ಬಿಟ್ಟು ಸರ್ಕಲ್ ಇನ್​ಸ್ಪಕ್ಟರ್​ ಮತ್ತು ಡಿವೈಎಸ್​ಪಿಯನ್ನು ಅಮಾನತು ಮಾಡಲಾಗಿದೆ. ಅಂಜಲಿ, ನೇಹಾ …

Read More »

ಚಾಲಕ ಸಿಬ್ಬಂದಿಗಳಿಗೆ ಸಂಸ್ಥೆಯ ಖಡಕ್ ಎಚ್ಚರಿಕೆ

ಹುಬ್ಬಳ್ಳಿ, ಮೇ 24: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಚಾಲಕ ಚಾಲಕ ಕೊಡೆಯನ್ನು ಹಿಡಿದುಕೊಂಡು ವಾಹನ ಚಾಲನೆ ಮಾಡುವ ವಿಡಿಯೋ ಶುಕ್ರವಾರ ವೈರಲ್ ಆಗಿತ್ತು. ಸಿಬ್ಬಂದಿಗಳನ್ನು ಅಮಾನತು ಮಾಡಿ, ಸಂಸ್ಥೆ ಸ್ಪಷ್ಟೀಕರಣವನ್ನು ನೀಡಿತ್ತು. ಈಗ ಪ್ರಕಟಣೆಯೊಂದರಲ್ಲಿ ಪ್ರಿಯಾಂಗ ಎಂ., ವ್ಯವಸ್ಥಾಪಕ ನಿರ್ದೇಶಕರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಂಸ್ಥೆಯ ಎಲ್ಲಾ ಚಾಲನಾ ಸಿಬ್ಬಂದಿಗಳ ಗಮನಕ್ಕೆ ಎಂದು ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

Read More »

ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉತ್ತರ ಪ್ರದೇಶ ಮಾದರಿಯಲ್ಲಿ ಗೂಂಡಾ ರಾಜ್ಯವಾಗುತ್ತಿದ್ದು, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು. ನಗರದ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಹತ್ಯೆಯಾದ ಅಂಜಲಿ ಅಂಬಿಗೇರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಉತ್ತರ ಪ್ರದೇಶ ಮೊದಲು ಗೂಂಡಾ ರಾಜ್ಯವಾಗಿತ್ತು. ಅಲ್ಲಿ ಯೋಗಿ ಆದಿತ್ಯನಾಥ ಸಿಎಂ ಆದ …

Read More »