Breaking News

ಹುಬ್ಬಳ್ಳಿ

ಕಿಮ್ಸ್‌ ಪಕ್ಕದ ಚರಂಡಿಯಲ್ಲಿ ಶವ ಪತ್ತೆ

ಹುಬ್ಬಳ್ಳಿ: ಇಲ್ಲಿನ ಕಿಮ್ಸ್‌ ಆಸ್ಪತ್ರೆಯ ಹಾಸ್ಟೆಲ್‌ ಆವರಣ ಗೋಡೆಗೆ ಹೊಂದಿಕೊಂಡ ಚರಂಡಿಯಲ್ಲಿ ಅಪರಿಚಿತ ಶವವೊಂದು ಕೊಳೆತ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿದೆ. ಚರಂಡಿ ಸ್ವಚ್ಛತೆ ಕೈಗೊಂಡಿದ್ದ ಸಂದರ್ಭದಲ್ಲಿ ಶವದ ಅಸ್ಥಿಪಂಜರ ಮತ್ತು ತಲೆಬುರುಡೆ ಸಿಕ್ಕಿದ್ದು, ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಹಲವು ತಿಂಗಳುಗಳ ಹಿಂದೆಯೇ ದೇಹ ಚರಂಡಿಗೆ ಬಿದ್ದಿರಬಹುದು ಎನ್ನುವ ಅನುಮಾನವಿದ್ದು, ಇದು ಕೊಲೆಯೋ ಅಥವಾ ಸಹಜ ಸಾವಾಗಿದೆಯೋ …

Read More »

ಮಹದಾಯಿ ಯೋಜನೆಗಾಗಿ ಮತ್ತೆ ಹೋರಾಟ: ಸೊಬರದಮಠ

ಹುಬ್ಬಳ್ಳಿ: ಮಹದಾಯಿ ಯೋಜನೆ ಜಾರಿ ಮಾಡುವ ವಿಷಯವನ್ನು ರಾಜಕೀಯ ವ್ಯಕ್ತಿಗಳು ತಮ್ಮ ಅನುಕೂಲಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಯಾವುದೇ ಸರ್ಕಾರಗಳು ರೈತರ ಅಳಲು ಆಲಿಸುತ್ತಿಲ್ಲ. ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಎಲ್ಲ ರೀತಿಯಿಂದಲೂ ಮತ್ತೆ ತೀವ್ರ ಸ್ವರೂಪದ ಹೋರಾಟ ಆರಂಭಿಸಲಾಗುವುದು ಎಂದು ರೈತ ಸೇನಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಹೇಳಿದರು.   ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಈ ಬಗ್ಗೆ ಚರ್ಚಿಸುವಾಗ ಹುಬ್ಬಳ್ಳಿ-ಧಾರವಾಡ ಕ್ಷೇತ್ರವನ್ನು ಪ್ರತಿನಿಧಿಸುವ ಕೇಂದ್ರ …

Read More »

ಅತಿಯಾದ ಬಿಸಿಲಿಗೆ ಹೈರಾಣಾದ ಜನರು

ಹುಬ್ಬಳ್ಳಿ: ಪ್ರಸಕ್ತ ವರ್ಷ ಬೇಸಿಗೆಗೂ ಮುನ್ನ ಫೆಬ್ರುವರಿಯಲ್ಲೇ ಬಿಸಿಲು ಹೆಚ್ಚಾಗಿದ್ದು, ಅತಿ ತಾಪಮಾನವು ಜನರನ್ನು ಹೈರಾಣಾಗಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 36.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹಾವೇರಿಯಲ್ಲಿ ದಾಖಲಾಗಿದೆ. ಕೋಲಾರದಲ್ಲಿ ಅತಿ ಕಡಿಮೆ 30.7 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಫೆಬ್ರುವರಿ 9ರಂದು 34.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. …

Read More »

ಸಮಸ್ಯೆಗಳ ಆಗರವಾದ ಹೊಸೂರ ಪ್ರಾದೇಶಿಕ ಬಸ್‌ ನಿಲ್ದಾಣ

ಹುಬ್ಬಳ್ಳಿ: ‘ಹೊಸ ಕೋರ್ಟ್‌ ಕಡೆಯಿಂದ ಹೊಸೂರ ಬಸ್‌ ನಿಲ್ದಾಣದೊಳಗೆ ಬಂದು ಗ್ರಾಮೀಣ ಬಸ್‌ಗಳ ಕಡೆ ಹೋಗಲು ವೃದ್ಧರಿಗೆ ಮತ್ತು ಅಂಗವಿಕಲರಿಗೆ ತುಂಬಾ ಕಷ್ಟವಾಗುತ್ತಿದೆ. ಮೇಲಿನ ಅಂತಸ್ತಿಗೆ ಹೋಗಲು ನಿಲ್ದಾಣದಲ್ಲಿ ಲಿಫ್ಟ್‌ ಮಾಡಿದ್ದು, ಅದು ಕೆಟ್ಟು ನಿಂತು ವರ್ಷವಾಗಿದೆ. ಈವರೆಗೆ ದುರಸ್ತಿಯಾಗಿಲ್ಲ. ನಮ್ಮ ಸಂಕಷ್ಟ ಯಾರೂ ಕೇಳುತ್ತಿಲ್ಲ’. ಇಲ್ಲಿನ ಹೊಸೂರ ಬಸ್ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಅದರಲ್ಲೂ ವೃದ್ಧರು, ಅಂಗವಿಕಲರು, ಅನಾರೋಗ್ಯಪೀಡಿತರು, ಮಹಿಳೆಯರು ತೋಡಿಕೊಳ್ಳುವ ಸಂಕಷ್ಟವಿದು. ‘ಹೆಸರಿಗೆ ಮಾತ್ರ ಲಿಫ್ಟ್ ಇದೆಯೇ ಹೊರತು …

Read More »

ಶಕ್ತಿ ಯೋಜನೆ ಕೆಲವೇ ತಿಂಗಳು ಅಷ್ಟೇ:ಅಮೃತ ದೇಸಾಯಿ,

ಶಕ್ತಿ ಯೋಜನೆ – ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಾರಿಯಾದ ಮೊದಲ ಗ್ಯಾರಂಟಿ ಯೋಜನೆ. ಆದರೆ ಈ ಯೋಜನೆ ಯಶಸ್ವಿಯಾಗಿದೆ ಅಂತಾ ಸರಕಾರವೇನೋ ಹೇಳುತ್ತೆ. ಆದರೆ ಅದನ್ನು ಮುಂದಿನ ಬಹಳ ತಿಂಗಳುಗಳವರೆಗೆ ತೆಗೆದುಕೊಂಡು ಹೋಗೋದೇ ಸವಾಲಾಗಿದೆ. ಏಕೆಂದರೆ ಕೆಎಸ್ಸಾರ್ಟಿಸಿ ಹಲವಾರು ವರ್ಷಗಳಿಂದ ಹತ್ತಾರು ಸಮಸ್ಯೆಗಳಿಂದ ಕಂಗೆಟ್ಟುಹೋಗಿದೆ.ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಶುರುವಾದ ಶಕ್ತಿ ಯೋಜನೆಯಿಂದ ಮಹಿಳೆಯರ ಓಡಾಟದ ಸಂಖ್ಯೆ ಹೆಚ್ಚಾಗಿದೆ. ಆದರೆ ಈ ಯೋಜನೆಯಿಂದಾಗಿ ಸುರಕ್ಷತೆ, ಸಮಯೋಚಿತ …

Read More »

ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಪ್ರಲ್ಹಾದ್‌ ಜೋಶಿ

ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಅವರು ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಶ್ರೀಮದ್ ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳನ್ನು ಭಾನುವಾರ ಭೇಟಿಯಾಗಿ, ಆಶೀರ್ವಾದ ಪಡೆದರು. ಹಾವೇರಿ ಜಿಲ್ಲೆ ಬಂಕಾಪುರದ ಆರಳೆಲೆ ಹಿರೇಮಠದಲ್ಲಿ ಜರುಗಿದ ಲಿಂಗೈಕ್ಯ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಸುವರ್ಣ ಸ್ಮರಣೋತ್ಸವದಲ್ಲಿ ಚರಿತಾಮೃತ ಕೃತಿ ಬಿಡುಗಡೆ ಮಾಡಿ, ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದರು.   ದೇಶದಲ್ಲಿ ಸಾಂಸ್ಕೃತಿಕ ಪುನರುತ್ಥಾನ ಈ ವೇಳೆ ರಂಭಾಪುರಿ ಶ್ರೀಗಳು ಮಾತನಾಡಿ, …

Read More »

ಖರ್ಗೆ ಬಿಜೆಪಿಗೆ ಬರುತ್ತಾರೆ : ಜೋಶಿ ಅಚ್ಚರಿಯ ಹೇಳಿಕೆ!!

ಹುಬ್ಬಳ್ಳಿ : ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಬಿಜೆಪಿಗೆ (BJP) ಬರುತ್ತಾರೆ ಎನ್ನುವ ಬಗ್ಗೆ ಅನುಮಾನ ಕಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸದನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರು 2024ರ ಲೋಕಸಭೆಯ ಚುನಾವಣೆಯ ವೇಳೆಯೂ ಬಿಜೆಪಿಯವರೇ (BJP) ಎಂದು ಹೇಳಿದ್ದಾರೆ. ಇದನ್ನು ನೋಡಿದರೇ ಖರ್ಗೆ ಅವರೇ ಬಿಜೆಪಿಗೆ ಬರುತ್ತಾರೆ ಎನ್ನುವ ಅನುಮಾನ ಬರುತ್ತಿದೆ ಎಂಬ ಅನುಮಾನ …

Read More »

ಫಕೀರ ಸಿದ್ಧರಾಮ ಶ್ರೀಗೆ ನಾಣ್ಯಗಳ ತುಲಾಭಾರ

ಹುಬ್ಬಳ್ಳಿ: ಗದಗ ಜಿಲ್ಲೆಯ ಶಿರಹಟ್ಟಿಯ ಭಾವೈಕ್ಯ ಸಂಸ್ಥಾನ ಮಹಾಪೀಠದ ಫಕೀರ ಸಿದ್ಧರಾಮ ಸ್ವಾಮೀಜಿಯವರ ಅಮೃತ ಮಹೋತ್ಸವದ ಪ್ರಯುಕ್ತ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಗುರುವಾರ ಆನೆಯಂಬಾರಿ ಸಹಿತ ಸ್ವಾಮೀಜಿಗೆ 5,555 ಕೆಜಿ ನಾಣ್ಯಗಳಿಂದ ಭಕ್ತರು ತುಲಾಭಾರ ನೆರವೇರಿಸಿದರು.   ವಿಶೇಷವಾಗಿ ನಿರ್ಮಿತ ತಕ್ಕಡಿಯಲ್ಲಿ ಒಂದು ಬದಿ ಆನೆಯಂಬಾರಿಯಲ್ಲಿದ್ದ ಸ್ವಾಮೀಜಿ, ಇನ್ನೊಂದು ಬದಿ ನಾಣ್ಯಗಳನ್ನು ಇಡುತ್ತಿದ್ದಂತೆ ಅಪಾರ ಸಂಖ್ಯೆ ಭಕ್ತರು ‘ಫಕೀರೇಶ್ವರ ಮಹಾರಾಜಕೀ ಜೈ’ ಎಂಬ ಘೋಷಣೆ ಹಾಕಿದರು. ಎರಡು ಕ್ವಿಂಟಲ್‌ ತೇಗದ ಕಟ್ಟಿಗೆ …

Read More »

ಜೋಶಿ ನಮ್ಮ ಮೇಲೆ ಕೇಸ್ ಹಾಕಿದ್ರೆ ಅವರ ಚರಿತ್ರೆ ಬಿಚ್ಚಿಡಲು ಒಳ್ಳೆಯ ಅವಕಾಶ ಸಿಗತ್ತೆ : ವಿ.ಎಸ್ ಉಗ್ರಪ್ಪ

ಹುಬ್ಬಳ್ಳಿಯ (Hubli) ರೈಲ್ವೆ ಕಾಲೋನಿಯಲ್ಲಿರುವ 13 ಎಕರೆ ರೈಲ್ವೆ ಇಲಾಖೆಯ ಸ್ವತ್ತನ್ನು ಕೇವಲ 83 ಕೋಟಿ ರೂ.ಗೆ 99 ವರ್ಷ ಪರಭಾರೆ ಮಾಡಲು ಹುನ್ನಾರ ನಡೆಸಲಾಗಿತ್ತು. ಐದು ಬಾರಿ ಟೆಂಡರ್‌ ಕರೆದು ರಿಜೆಕ್ಟ್‌ ಮಾಡಿದ ಹಾಗೆ ಮಾಡಿ, ಯಾರೂ ಬಂದಿಲ್ಲ ಎಂದು ಪರಭಾರೆ ಕೊಡೋಣ ಎಂಬ ಹುನ್ನಾರ ನಡೆಸಲಾಗಿತ್ತು. ಕೇಂದ್ರ ಮಂತ್ರಿಯಾಗಿರುವ ಪ್ರಹ್ಲಾದ್‌ ಜೋಶಿಯವರು (Prahald joshi) ಮತ್ತು ಅವರ ಸಹಪಾಠಿಗಳು ಈ ಸ್ವತ್ತನ್ನು ಕಬಳಿಸಲು ಹುನ್ನಾರ ನಡೆಸಿದ್ದರು ಎಂದು …

Read More »

ಕರುನಾಡ ಭಕ್ತರಿಗೆ ರಾಮಲಲ್ಲಾ ದರ್ಶನ; ರಾಜ್ಯದಿಂದ ಎರಡು ರೈಲು

ಹುಬ್ಬಳ್ಳಿ: ಕರುನಾಡ 3,500 ಭಕ್ತರಿಗೆ ಫೆ. 19ರಂದು ಅಯೋಧ್ಯೆ ರಾಮಲಲ್ಲಾನ ದರ್ಶನ ಭಾಗ್ಯ ಕಲ್ಪಿಸಲಾಗಿದ್ದು, ರಾಜ್ಯದಿಂದ ಎರಡು ವಿಶೇಷ ರೈಲುಗಳು ಅಯೋಧ್ಯೆಗೆ ತೆರಳಲಿವೆ. ಉತ್ತರ ಭಾರತದಲ್ಲಿ ವಿಪರೀತ ಚಳಿ ಕಾರಣ ಅಲ್ಲಿನ ರಾಜ್ಯಗಳ ಭಕ್ತರಿಗೆ ಮೊದಲಿಗೆ ಶ್ರೀರಾಮಲಲ್ಲಾನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಫೆಬ್ರವರಿ ಎರಡನೇ ವಾರದಿಂದ ಚಳಿ ಕಡಿಮೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ರಾಜ್ಯಗಳ ಭಕ್ತರಿಗೆ ದರ್ಶನಕ್ಕೆ ಸೂಚಿಸಲಾಗಿದೆ. ವಿಶ್ವ ಹಿಂದೂ ಪರಿಷತ್‌ ಮತ್ತು ಸಂಘ ಪರಿವಾರ ಪ್ರಯಾಣದ ಸಂಯೋಜನ …

Read More »