ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿ ಹಾಗೂ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಸಮಿತಿ ಸದಸ್ಯರಿಗೆ ಧಾರವಾಡದಲ್ಲಿ ಮಾಜಿ ಮೇಯರ್ ಹಾಗೂ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಸನ್ಮಾನಿಸಿ ಗೌರವಿಸಿದರು. ಕರ್ನಾಟಕದ ಕಲಬುರ್ಗಿ ಜಿಲ್ಲೆಯ ಮಾನಯ್ಯ ಬಡಿಗೇರ ಅವರು ಇಂದು ಧಾರವಾಡಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನ ಮಾಜಿ ಮಹಾಪೌರರಾದ ಈರೇಶ ಅಂಚಟಗೇರಿ ರವರು ಭೇಟಿ ನೀಡಿ ಧಾರವಾಡ ಪೇಢಾ ನೀಡಿ ಆತ್ಮೀವಾಗಿ ಸನ್ಮಾನಿಸಿ, ಅಭಿನಂದಿಸಿ ಶುಭ ಕೋರಿದರು ಕೋಟ್ಯಾಂತರ ಹಿಂದುಗಳ …
Read More »ಪ್ರಮೋದ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ : ಗಡಿಪಾರಿಗೆ ಆಗ್ರಹಿಸಿ ಪೊಲೀಸ್ ಕಮೀಷನರ್ ಗೆ ದೂರು
ಹುಬ್ಬಳ್ಳಿ ರಾಣಿ ಚೆನ್ನಮ್ಮ ಈದ್ಗಾ ಮೈದಾನದ ಗಣೇಶ ವಿಸರ್ಜನೆಗೆ ಪ್ರಮೋದ್ ಮುತಾಲಿಕ್ ಮೈದಾನಕ್ಕೆ ಭೇಟಿ ನೀಡಿ, ಗಣೇಶ ದರ್ಶನ ಪಡೆದುಕೊಂಡಿದ್ದರು. ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆಂಬ ಆರೋಪ ಮಾಡಲಾಗಿದ್ದು, ಗಣೇಶೋತ್ಸವ ವಿರೋಧಿಸುವವರು ದೇಶದ್ರೋಹಿಗಳು. ಅಂಜುಮನ್ ಸಂಸ್ಥೆಯವರ ದುರದ್ದೇಶ ಏನೆಂದು ಈಗ ಎಲ್ಲರಿಗೂ ಗೊತ್ತಾಗಿದೆ. ಇವರು ದೇಶ ವಿಭಜನೆ ಮಾಡಿದ ದ್ರೋಹಿಗಳು. ಮಸೀದಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವ ತಾಕತ್ತು ಹಿಂದೂ ಸಮಾಜಕ್ಕಿದೆ. ನಿಮ್ಮ …
Read More »ಕೈ, ಕಾಲು ಕಟ್ಟಿ ಮನೆ ದರೋಡೆ; ₹1 ಕೋಟಿ ಮೌಲ್ಯದ ಚಿನ್ನ, ನಗದು ದೋಚಿ ದುಷ್ಕರ್ಮಿಗಳು ಪರಾರಿ
ಹುಬ್ಬಳ್ಳಿ: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ದರೋಡೆಕೋರರು ಹುಬ್ಬಳ್ಳಿಯಲ್ಲಿ ದುಷ್ಕೃತ್ಯ ಎಸಗಿದ್ದಾರೆ. ಅಂದಾಜು ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಇಲ್ಲಿನ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ನ ಮನೆಯೊಂದರಲ್ಲಿ ತಡರಾತ್ರಿ ಘಟನೆ ನಡೆದಿದೆ. ವಿದ್ಯಾಮಂದಿರ ಬುಕ್ ಡಿಪೋ ಮಾಲೀಕ ಉಲ್ಲಾಸ ದೊಡ್ಡಮನಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆ ಕಿಟಕಿಯ ಕಬ್ಬಿಣದ ಗ್ರಿಲ್ ತುಂಡರಿಸಿ ಮನೆಯೊಳಗೆ ನುಗ್ಗಿದ ದರೋಡೆಕೋರರು, ಮನೆಯಲ್ಲಿದ್ದವರ ಕೈ, ಕಾಲು ಕಟ್ಟಿ ಹಾಕಿ ನಗ, …
Read More »ಬಿಜೆಪಿ ಬಗ್ಗೆ ಅಸಮಾಧಾನ ಇಲ್ಲ. ಸದ್ಯ ನಾನು ಬಿಜೆಪಿ ಪಕ್ಷ ಬಿಡುವ ವಿಚಾರದಲ್ಲಿ ಇಲ್ಲ: ಪ್ರದೀಪ್ ಶೆಟ್ಟರ್
ಹುಬ್ಬಳ್ಳಿ: ಬಿಜೆಪಿ ಬಗ್ಗೆ ಅಸಮಾಧಾನ ಇಲ್ಲ. ಸದ್ಯ ನಾನು ಬಿಜೆಪಿ ಪಕ್ಷ ಬಿಡುವ ವಿಚಾರದಲ್ಲಿ ಇಲ್ಲ. ಆದರೆ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಮಾತನಾಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ದರ್ಶನ ಪಡೆದು ಬಳಿಕ ಮಾತನಾಡಿದ ಅವರು, ಕಳೆದ ವರ್ಷದಂತೆ ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಯಾಗಿದೆ. ವಿಜೃಂಭಣೆಯಿಂದ ಗಣೇಶ ಮೆರವಣಿಗೆ ಮಾಡಿದ್ದೇವೆ. ಈದ್ಗಾ ಗಣೇಶೋತ್ಸವ ಹೋರಾಟದಲ್ಲಿ ಭಾಗಿಯಾಗದಿರುವುದಕ್ಕೆ …
Read More »ಭವ್ಯ ಮೆರವಣಿಗೆ ಮೂಲಕ ಈದ್ಗಾ ಮೈದಾನಕ್ಕೆ ಗಣಪತಿ ಮೂರ್ತಿ ಪ್ರತಿಷ್ಠಾಪನೆ
ಹುಬ್ಬಳ್ಳಿ: ಅದ್ದೂರಿ ಮೆರವಣಿಗೆಯ ಮೂಲಕ ಸಾಗಿ ಬಂದು ಇಂದು ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ನಗರದ ಮೂರುಸಾವಿರ ಮಠದ ಆವರಣದಿಂದ ಆರಂಭವಾದ ಮೆರವಣಿಗೆ ಮಹಾವೀರಗಲ್ಲಿ, ತುಳಜಾಭವಾನಿ ವೃತ್ತ, ದಾಜೀಬಾನ್ ಪೇಟೆ, ಅಂಚಟಗೇರಿ ಓಣಿ, ರಾಯಣ್ಣ ವೃತ್ತ ಮೂಲಕ ಈದ್ಗಾ ಮೈದಾನಕ್ಕೆ ಆಗಮಿಸಿತು. ಮೆರವಣಿಗೆಯುದ್ದಕ್ಕೂ ಪಂಚವಾದ್ಯ, ಡೋಲು, ನಾಶಿಕ್ ಜಾಂಝ್ ಮೇಳ ಕಂಡುಬಂತು. ಶಾಸಕ ಅರವಿಂದ ಬೆಲ್ಲದ ನೃತ್ಯ ಮಾಡುವ ಮೂಲಕ ಗಮನ ಸೆಳೆದರು. ಭಾರತ ಮಾತೆಯ ಆಳೆತ್ತರದ ಭಾವಚಿತ್ರ, …
Read More »ಗಣೇಶ ಮೂರ್ತಿ ನಾಲ್ಕು ಅಡಿ ಎತ್ತರ ಮೀರಬಾರದು ಎಂಬುದು ಹಾಸ್ಯಾಸ್ಪದ: ಕೇಂದ್ರ ಸಚಿವ ಜೋಶಿ
ಹುಬ್ಬಳ್ಳಿ: ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಜಿಲ್ಲಾಡಳಿತ ಹಲವಾರು ಷರತ್ತುಗಳನ್ನು ವಿಧಿಸಿದೆ. ಇದು ಸರಿಯಲ್ಲ, ನಮ್ಮ ಧಾರ್ಮಿಕ ಹಬ್ಬದ ಆಚರಣೆಗೆ ಷರತ್ತು ವಿಧಿಸಲು ಇವರು ಯಾರು?, ಜನರ ಧಾರ್ಮಿಕ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿರುವ ರಾಜ್ಯ ಸರ್ಕಾರದ ವರ್ತನೆ ಖಂಡನೀಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾನ್ಯವಾಗಿ ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವ ಗಣಪತಿ ಮೂರ್ತಿಗಳು ನಾಲ್ಕು ಅಡಿ ಗಳಿಗಿಂತ ಎತ್ತರವಿರುತ್ತವೆ. ಇದು ನಮ್ಮ ಭಕ್ತಿಯ ಸಂಕೇತ. ಆದರೆ ಇವರು …
Read More »ಹುಬ್ಬಳ್ಳಿಯಲ್ಲಿ 12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಹರುಳುಗಳ ಗಣೇಶನ ಮೂರ್ತಿಯನ್ನು ತಯಾರಿಸಿ, ಬೆಂಗಳೂರಿಗೆ ರವಾನಿಸಿದ್ದಾರೆ.
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೆರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ರವಾನಿಸಲಾಗಿದೆ. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ಈ ಗಣೇಶ ಮೂರ್ತಿಯನ್ನು ನಿರ್ಮಾಣ ಮಾಡಿದ್ದಾರೆ. ಬೆಂಗಳೂರಿನ ರಾಜಾಜಿನಗರ 2ನೇ ಹಂತ ಮಿಲ್ಕ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ ಯುವಕರ ಸಂಘದಿಂದ ಸೆ.18 ರಂದು …
Read More »ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ 18 ಷರತ್ತು ಹಾಕುವ ಮೂಲಕ ಅನುಮತಿ ನೀಡಿದ್ದಾರೆ.
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕೊನೆಗೂ ಮಹಾನಗರ ಪಾಲಿಕೆ ಅನುಮತಿ ನೀಡಿದೆ. ಅನುಮತಿ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಎರಡು ದಿನ ಕಾಲ ನಿರಂತರ ಹೋರಾಟ ನಡೆಸಿತ್ತು. ಕೊನೆಗೂ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಷರತ್ತುಬದ್ಧ ಅನುಮತಿ ನೀಡಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಹಲವು ಷರತ್ತುಗಳನ್ನು ಹಾಕಿ ಅನುಮತಿ ನೀಡಲಾಗಿದೆ. ಆ ಪ್ರಮಖ ಷರತ್ತುಗಳು ಇಂತಿವೆ: ಅನುಮತಿ ಕುರಿತು ಅರವಿಂದ ಬೆಲ್ಲದ ಹಾಗೂ ಮಹೇಶ ಟೆಂಗಿನಕಾಯಿ ಪ್ರತಿಕ್ರಿಯೆ …
Read More »ಅಧಿಕಾರಿಗಳು ಫೀಲ್ಡ್‌ಗೆ ಬಂದು ಸರ್ವೆ ಮಾಡಿಲ್ಲ ಎಂದು ರೈತರು ಆರೋಪ,ನಮ್ಮ ತಾಲೂಕುಗಳನ್ನೂ ‘ಬರಪೀಡಿತ’ ಎಂದು ಘೋಷಿಸಿ
ಧಾರವಾಡ: ರಾಜ್ಯದಲ್ಲಿ ಬರದ ಛಾಯೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳನ್ನು ಘೋಷಿಸಿದ್ದು, ಇದರಿಂದ ಹೊರಗುಳಿದ ಜಿಲ್ಲೆಯ ಕೆಲ ತಾಲೂಕುಗಳ ರೈತರು ಆಕ್ರೋಶಗೊಂಡಿದ್ದಾರೆ. ಸರ್ಕಾರ ತೀವ್ರ ಮತ್ತು ಸಾಧಾರಣ ಬರ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಜಿಲ್ಲೆಯ ಮೂರು ತಾಲೂಕುಗಳು ಹೊರಗುಳಿದಿವೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿನಿಧಿಸುವ ಕಲಘಟಗಿ, ಅಳ್ನಾವರವನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗಿಡಲಾಗಿದೆ. ಇನ್ನು ನವಲಗುಂದ ವಿಧಾನಸಭಾ ವ್ಯಾಪ್ತಿಯ ಅಣ್ಣಿಗೇರಿ ತಾಲೂಕು ಕೂಡ …
Read More »ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಪಟ್ಟು: ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ವಿಳಂಬ ಮಾಡುತ್ತಿರುವದನ್ನು ಖಂಡಿಸಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಿಯೋಗ ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿದರು. ಈದ್ಗಾ ಮೈದಾನಲ್ಲಿ ಅನುಮತಿ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಅರವಿಂದ ಬೆಲ್ಲದ ನೇತೃತ್ವದ ನಿಯೋಗ ಕೂಡಲೇ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇಲ್ಲದಿದ್ದರೆ ಇಲ್ಲಿಂದ ಎದ್ದು ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈದ್ಗಾ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ಮುಂಚೆಯೇ ಅನುಮತಿ ನೀಡಬೇಕು. ಪಾಲಿಕೆ …
Read More »