Breaking News

ಹುಬ್ಬಳ್ಳಿ

ಒಂದು ದೇಶ ಒಂದು ಚುನಾವಣೆ ಅದು ಸಾಧ್ಯವಿಲ್ಲ

ಹುಬ್ಬಳ್ಳಿ: ಒಂದು ದೇಶ ಒಂದು ಚುನಾವಣೆ ನಡೆದರೇ ಒಳ್ಳೆಯದು. ಆದರೆ, ಭಾರತ ವಿಭಿನ್ನ ಸಂಸ್ಕೃತಿಯ ದೇಶ. ಹೀಗಾಗಿ ಇದು ಇಂಪ್ರ್ಯಾಕ್ಟಿಕಲ್ ಆಗಿದೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮ್ಮೆಯೇ ಚುನಾವಣೆ ಆಗಬೇಕೆಂದರೇ ಸದ್ಯದ ರಾಜ್ಯ ಸರ್ಕಾರವನ್ನು ವಿಸರ್ಜಿಸಿಸಬೇಕಾ. ಹಾಗಾಗಿ ರಾಷ್ಟ್ರದಲ್ಲಿ ಒಂದು ದೇಶ ಒಂದು ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದರು. ಇಂಡಿಯಾ ಭಾರತ ನಾಮಕರಣ ವಿಚಾರವಾಗಿ ಮಾತನಾಡಿ, ಭಾರತ …

Read More »

ದೇವೇಗೌಡರು ಹಳ್ಳಿಯಲ್ಲಿ ಹುಟ್ಟಿ ಪ್ರಧಾನಿ ಆದರು: ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ : ಹೆಚ್ ವಿಶ್ವನಾಥ

ಹುಬ್ಬಳ್ಳಿ : ರಾಜಕಾರಣದಲ್ಲಿ ಯಾರು ಕನಸು ಕಂಡಿರೋದಿಲ್ಲ. ಅದರಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ ಅವರು ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋಗಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ.   ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಯಾಕೆ ರಾಷ್ಟ್ರದ ರಾಜಕಾರಣಕ್ಕೆ ಹೋಗಬಾರದು. ಈ ಹಿಂದೆ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ಆಗುವ ಯಾವುದೇ ಕನಸು ಕಂಡಿರಲಿಲ್ಲ. ಅದರಂತೆ ಸಿದ್ದರಾಮಯ್ಯ ಅವರು …

Read More »

ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್​ ಹೇಳಿಕೆ: ಹೈಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ ಎಂದ ಮುತಾಲಿಕ್

ಧಾರವಾಡ : ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್​ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್​ ಮುತಾಲಿಕ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬೆಂಗಳೂರು, ಧಾರವಾಡ, ಕಲಬುರಗಿ ಹೈಕೋರ್ಟ್‌ನಲ್ಲಿ ಕೇಸ್ ದಾಖಲು ಮಾಡುತ್ತೇವೆ. ಉದಯನಿಧಿ ಸಂವಿಧಾನಿಕ ಜವಾಬ್ದಾರಿಯ ಸ್ಥಾನದಲ್ಲಿದ್ದಾರೆ. ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಈ …

Read More »

75 ಕಿ.ಮೀ ಹಿಮ್ಮುಖವಾಗಿ ಟ್ರ್ಯಾಕ್ಟರ್​ ಓಡಿಸಿ ಯಲ್ಲಮ್ಮ ದೇವಿಗೆ ಹರಕೆ ತೀರಿಸಿದ ಯುವಕ

ಹುಬ್ಬಳ್ಳಿ: ಟ್ರ್ಯಾಕ್ಟರ್​ವೊಂದನ್ನು ರಿವರ್ಸ್​ ಡ್ರೈವ್​ ಮಾಡಿಕೊಂಡು ಯುವಕನೋರ್ವ ತಮ್ಮ ಮನೆದೇವರು ಯಲ್ಲಮ್ಮದೇವಿಗೆ ಹರಕೆ ತೀರಿಸಿದ್ದಾನೆ. ತಾಲೂಕಿನ ಮಂಟೂರ ಗ್ರಾಮದ 22 ವರ್ಷದ ಯುವಕ ಬಾಬುಗೌಡ ಚಂದ್ರುಗೌಡ ಪರ್ವತಗೌಡ್ರ ಎಂಬಾತನೇ ಈ ಸಾಧನೆ ಮಾಡಿದಾತ. ವೃತ್ತಿಯಿಂದ ಕೃಷಿಕನಾಗಿರುವ ಬಾಬುಗೌಡ ಅವರು ಐದಾರು ವರ್ಷದಿಂದ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾನೆ. ಆದರೆ, ರಿವರ್ಸ್ ಗೇರ್​ನಲ್ಲಿ ವಾಹನ ಚಲಾಯಿಸುವುದು, ಅಲ್ಲದೆ ಬಹುದೂರದವರೆಗೆ ತೆಗೆದುಕೊಂಡು ಹೋಗುವುದನ್ನು ಮಾಡಿರಲಿಲ್ಲ. ಬಾಬುಗೌಡ ಟ್ರ್ಯಾಕ್ಟರ್‌ಅನ್ನು ಹಿಮ್ಮುಖವಾಗಿ ಚಲಾಯಿಸಿಕೊಂಡು ಹೋಗಿ ದೇವಿ ದರ್ಶನ ಪಡೆಯುತ್ತೇನೆ ಎಂದು …

Read More »

ಶಾಸಕ ರಾಯರೆಡ್ಡಿ ಫಾರ್ಮ್​ ಹೌಸ್​ಗೆ ಸಚಿವರ ಭೇಟಿ, ಚರ್ಚೆ.. ಪತ್ರ ಕುರಿತು ಬಸವರಾಜ್ ಸ್ಪಷ್ಟನೆ

ಧಾರವಾಡ: ಶಾಸಕ ರಾಯರೆಡ್ಡಿಯನ್ನು ಕಾಂಗ್ರೆಸ್​ ಸಚಿವರಾದ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಎಂ ಸಿ ಸುಧಾಕರ್ ಭೇಟಿ ಆಗಿ ಚರ್ಚೆ ನಡೆಸಿದ್ದು, ಕುತೂಹಲ ಮೂಡಿಸಿದೆ. ಸಚಿವರ ಭೇಟಿ ಬಳಿಕ ಶಾಸಕ ಬಸವರಾಜ್ ರಾಯರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ‘ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಈ ಸಮಯದಲ್ಲಿ ವಿದ್ಯುತ್ ಸರಿಯಾಗಿ ಸಿಗುತ್ತಿಲ್ಲ. ಟ್ರಾನ್ಸಫರ್‌ಗಳು ಬರ್ನ್ ಆಗುತ್ತಿವೆ. ಅದಕ್ಕೆ ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಸಿಎಂ ಅವರೇ ಹಣಕಾಸು ಖಾತೆ ಹೊಂದಿದ್ದಾರೆ. ಹೀಗಾಗಿ ನಾನು ಸಿಎಂ ಅವರಿಗೆ …

Read More »

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ : ಪ್ರದೀಪ್ ಶೆಟ್ಟರ್

ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ.ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆ ರಾಜ್ಯದಲ್ಲಿ ಲಿಂಗಾಯತರಿಗೆ ನಾಯಕತ್ವ ಕೊಡಬೇಕು. ರಾಜ್ಯದಲ್ಲಿ ಲಿಂಗಾಯತ ನಾಯಕರನ್ನು ತುಳದಿದ್ದೆ ಚುನಾವಣೆಯಲ್ಲಿ ಸೋಲಿಗೆ ಕಾರಣವಾಗಿದೆ . ಇದೀಗ ಅನೇಕ ಲಿಂಗಾಯತ ನಾಯಕರು ಒಂದು ಕಾಲು ಪಕ್ಷದಿಂದ ಹೊರಗಡೆ ಇಟ್ಟಿದ್ದಾರೆ. ಮಾಜಿ ಸಚಿವರಾದ ಮುನೇನಕೊಪ್ಪ,ಮಾಧುಸ್ವಾಮಿ,ರೇಣುಕಾಚಾರ್ಯ,ಮಾಜಿ ಶಾಸಕ ಚಿಕ್ಕನಗೌಡರ ಒಂದು ಕಾಲ ಹೊರಗಡೆ ಇಟ್ಟಿದ್ದಾರೆ. ನಾನು ವಿಧಾನಪರಿಷತ್ …

Read More »

19 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಬಂದ ಯೋಧನಿಗೆ ಅದ್ಧೂರಿ ಸ್ವಾಗತ

ಧಾರವಾಡ: ಸುಧೀರ್ಘ 19 ವರ್ಷಗಳ ಕಾಲ ತಾಯಿ ಭಾರತಿಯ ಸೇವೆ ಸಲ್ಲಿಸಿದ ಧನ್ಯತಾ ಭಾವ.. ಸಮವಸ್ತ್ರದಲ್ಲಿ ತನ್ನ ತಂದೆಯನ್ನು ಕಂಡು ಓಡೋಡಿ ಹೋಗುತ್ತಿರುವ ಮಕ್ಕಳು.. ತನ್ನ ಸಹೋದರನನ್ನು ಕಂಡು ಆನಂದ ಭಾಷ್ಪ ಸುರಿಸಿದ ಅಣ್ಣಂದಿರು.. ಭಾರತ ಮಾತಾ ಕೀ ಜೈ ಎನ್ನುವ ಘೋಷಣೆಗಳು ಇದೆಲ್ಲ ಕಂಡು ಬಂದದ್ದು ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ. 19 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ತಾಯಿ ಭಾರತಿಯ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಮರಳಿ …

Read More »

ಕೇಂದ್ರ ಸರ್ಕಾರ ಸಿಲಿಂಡರ್ ಬೆಲೆ ಇಳಿಸಿದ್ದು ಚುನಾವಣೆ ಗಿಮಿಕ್ ಅಲ್ವಾ ? ಜಗದೀಶ್ ಶೆಟ್ಟರ್ ಪ್ರಶ್ನೆ

ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಸಿಲಿಂಡರ್ ಬೆಲೆ ಇಳಿಸಿದ್ದು ಚುನಾವಣೆ ಗಿಮಿಕ್ ಅಲ್ವಾ..? ಕಾಂಗ್ರೆಸ್ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿಯೇ ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ತನ್ನ ಬಜೆಟ್​ನಲ್ಲೂ ಗ್ಯಾರಂಟಿಗಳ ಬಗ್ಗೆ ಘೋಷಣೆ ಮಾಡಿದ್ದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಹೇಳಿದರು.​ ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಗೃಹಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಸುಮಾರು 1.20 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಗಿಮಿಕ್​ ಅನ್ನೋದು …

Read More »

ಬಿ.ಎಲ್​.ಸಂತೋಷ್​ ಅವರು ಮೊದಲು ಬಿಜೆಪಿಯಲ್ಲಿರುವ ಶಾಸಕರು, ಮಾಜಿ ಶಾಸಕರನ್ನು‌ ಉಳಿಸಿಕೊಳ್ಳಲಿ‌

ಹುಬ್ಬಳ್ಳಿ: ಬಿ.ಎಲ್​.ಸಂತೋಷ್​ ಅವರು ಮೊದಲು ಬಿಜೆಪಿಯಲ್ಲಿರುವ ಶಾಸಕರು, ಮಾಜಿ ಶಾಸಕರನ್ನು‌ ಉಳಿಸಿಕೊಳ್ಳಲಿ‌. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ ಎಂದು ವಿಧಾನ ಪರಿಷತ್​ ಸದಸ್ಯ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟಾಂಗ್ ನೀಡಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್​ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್.ಸಂತೋಷ್​ ಹೇಳಿಕೆಗೆ ತಿರುಗೇಟು ನೀಡುತ್ತಾ, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ. ಬಿಜೆಪಿ ಬರೀ ಆಪರೇಷನ್ ಮಾಡಿ ಸರ್ಕಾರ ರಚನೆ …

Read More »

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಪಾಲಿಕೆ ಅನುಮತಿ ನೀಡಿದೆ.

ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾದ ಇಲ್ಲಿನ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಕೊನೆಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಒಪ್ಪಿಗೆ ನೀಡಿದೆ. ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿಸುವ ಕುರಿತು ನಿನ್ನೆ ನಡೆದ ಸಭೆಯಲ್ಲಿ ವಿಷಯ ಮಂಡಿಸಲಾಯಿತು. ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದ್ದು, ಬಳಿಕ ಉತ್ಸವಕ್ಕೆ ಪಾಲಿಕೆ ಮೇಯರ್ ವೀಣಾ ಬರದ್ವಾಡ್ ಅನುಮತಿ ಕಲ್ಪಿಸಿದರು. ಬಳಿಕ ಪ್ರತಿಕ್ರಿಯೆ ನೀಡಿದ ಮೇಯರ್ ವೀಣಾ ಬರದ್ವಾಡ್, ಕಳೆದ ವರ್ಷದಂತೆ ಈ ವರ್ಷವೂ ಗಣೇಶ ಪ್ರತಿಷ್ಠಾಪನೆಗೆ ಪರವಾನಗಿ …

Read More »