ಹುಬ್ಬಳ್ಳಿ: ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ. ಅದರ ಬಗ್ಗೆ ನನಗೆ ಸಂಪೂರ್ಣವಾದ ಮಾಹಿತಿ ಇಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮೈತ್ರಿ ಅನಿವಾರ್ಯ ಎಂದು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ಮೈತ್ರಿ ವಿಚಾರವಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. …
Read More »ಧಾರವಾಡದ ಕೃಷಿ ವಿವಿ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನಕ್ಕೆ ಸಾವಿರಾರು ಜನರು ಆಗಮಿಸಿ ಬಗೆಬಗೆಯ ಹೂವುಗಳನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ
ಧಾರವಾಡ: ಉತ್ತರ ಕರ್ನಾಟಕ ಭಾಗದ ರೈತರ ಜಾತ್ರೆ ಎಂದು ಕರೆಸಿಕೊಳ್ಳುವ ಕೃಷಿಮೇಳದ ಎರಡನೇ ದಿನವಾದ ಇಂದು ಫಲಪುಷ್ಪ ಪ್ರದರ್ಶನ ಸೇರಿದಂತೆ ವಿವಿಧ ಪ್ರದರ್ಶನವನ್ನು ಸಾರ್ವಜನಿಕರ ಗಮನ ಸೆಳೆಯಿತು. ವಿವಿಧ ಬಗೆಯ ಹೂವುಗಳನ್ನು ಒಂದೇ ಕಡೆ ಕಣ್ತುಂಬಿಕೊಂಡ ಜನರು ಸಂತಸಪಟ್ಟರು. ಧಾರವಾಡ ಕೃಷಿ ವಿಶ್ವವಿದ್ಯಾಲಯ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿದ ಫಲಪುಷ್ಪ ಪ್ರದರ್ಶನದಲ್ಲಿ ಸಾವಿರಾರು ಜನರು ಆಗಮಿಸಿ ತಮ್ಮಗಿಷ್ಟವಾದ ಹೂವುಗಳ ಕಲಾಕೃತಿಗಳ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡರು. ನಾಲ್ಕು ದಿನಗಳ ಕಾಲ ಕೃಷಿ …
Read More »JDSನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವ: ಸಿದ್ದರಾಮಯ್ಯ
ಹುಬ್ಬಳ್ಳಿ: ಜೆಡಿಎಸ್ನವರು ಜಾತ್ಯತೀತ ಅಂತ ಹೆಸರಿಟ್ಟುಕೊಂಡು ಕೋಮುವಾದಿಗಳ ಜೊತೆ ಮೈತ್ರಿಗೆ ಮುಂದಾಗಿರುವುದು ದುರ್ದೈವದ ಸಂಗತಿ. ಮಾಜಿ ಪ್ರಧಾನಿ ದೇವೇಗೌಡ ಅವರು ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ ಎಂದಿದ್ದರು. ಆದರೆ ಇದೀಗ ಬಿಜೆಪಿಯವರ ಜೊತೆ ಸೇರಿ ಮೈತ್ರಿ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಕ್ಕಾಗಿ ಯಾರ ಜೊತೆಯಾದರೂ ಜೆಡಿಎಸ್ನವರು ಸೇರಿಕೊಳ್ಳುತ್ತಾರೆ ಎಂಬುದು ಸಾಬೀತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ನಾನು ಜೆಡಿಎಸ್ನ ಬಿಜೆಪಿಯ …
Read More »ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ.. ಹುಬ್ಬಳ್ಳಿಯಲ್ಲಿ ಆರೋಪಿ ಬಂಧನ
ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು ಜಾಯ್ನಿಂಗ್ ಲೆಟರ್ ತೋರಿಸಿ ನಂಬಿಕೆ ಬರುವಂತೆ ಮಾಡಿದ್ದನು. ರೈಲ್ವೆ ಇಲಾಖೆಯಲ್ಲಿ ನೌಕರಿ …
Read More »ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ವಾಚ್ ವಿಚಾರವಾಗಿ ಸ್ನೇಹಿತರ ನಡುವೆ ಜಗಳ.. ಕೊಲೆಯಲ್ಲಿ ಅಂತ್ಯ
ಹುಬ್ಬಳ್ಳಿ: ಸ್ಮಾರ್ಟ್ ವಾಚ್ ವಿಚಾರವಾಗಿ ಸ್ನೇಹಿತರಿಬ್ಬರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ನಗರದ ಬೆಂಗೇರಿಯ ವೆಂಕಟೇಶ ಕಾಲೋನಿಯಲ್ಲಿ ತಡರಾತ್ರಿ ಈ ಘಟನೆ ನಡೆದಿದೆ. ಸಿದ್ರಾಮನಗರ ನಿವಾಸಿ ಅಸ್ಲಾಂ ಮಕಾಂದಾರ್ (31) ಕೊಲೆಯಾದ ವ್ಯಕ್ತಿ. ಗಾಯತ್ರಿ ನಗರದ ಮಂಜುನಾಥ ನಾಗರಾಜ ಜೀನಹಳ್ಳಿ ಕೊಲೆ ಆರೋಪಿ. ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ: ಮೃತ ಅಸ್ಲಾಂ ಮಕಾಂದಾರ್ ಹಾಗೂ ಅರೋಪಿ ಮಂಜುನಾಥ ಇಬ್ಬರು ಸ್ನೇಹಿತರಾಗಿದ್ದರು. ಕಳೆದ ಕೆಲ ದಿನಗಳ ಹಿಂದೆ ಮಂಜುನಾಥ್ …
Read More »ಒಂದು ದೇಶ ಒಂದು ಚುನಾವಣೆ ಅದು ಸಾಧ್ಯವಿಲ್ಲ
ಹುಬ್ಬಳ್ಳಿ: ಒಂದು ದೇಶ ಒಂದು ಚುನಾವಣೆ ನಡೆದರೇ ಒಳ್ಳೆಯದು. ಆದರೆ, ಭಾರತ ವಿಭಿನ್ನ ಸಂಸ್ಕೃತಿಯ ದೇಶ. ಹೀಗಾಗಿ ಇದು ಇಂಪ್ರ್ಯಾಕ್ಟಿಕಲ್ ಆಗಿದೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮ್ಮೆಯೇ ಚುನಾವಣೆ ಆಗಬೇಕೆಂದರೇ ಸದ್ಯದ ರಾಜ್ಯ ಸರ್ಕಾರವನ್ನು ವಿಸರ್ಜಿಸಿಸಬೇಕಾ. ಹಾಗಾಗಿ ರಾಷ್ಟ್ರದಲ್ಲಿ ಒಂದು ದೇಶ ಒಂದು ಚುನಾವಣೆ ನಡೆಸಲು ಸಾಧ್ಯವಿಲ್ಲ ಎಂದರು. ಇಂಡಿಯಾ ಭಾರತ ನಾಮಕರಣ ವಿಚಾರವಾಗಿ ಮಾತನಾಡಿ, ಭಾರತ …
Read More »ದೇವೇಗೌಡರು ಹಳ್ಳಿಯಲ್ಲಿ ಹುಟ್ಟಿ ಪ್ರಧಾನಿ ಆದರು: ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ : ಹೆಚ್ ವಿಶ್ವನಾಥ
ಹುಬ್ಬಳ್ಳಿ : ರಾಜಕಾರಣದಲ್ಲಿ ಯಾರು ಕನಸು ಕಂಡಿರೋದಿಲ್ಲ. ಅದರಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋದರೆ ತಪ್ಪಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ ಅವರು ಸಿದ್ದರಾಮಯ್ಯ ರಾಷ್ಟ್ರದ ರಾಜಕಾರಣಕ್ಕೆ ಹೋಗಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಯಾಕೆ ರಾಷ್ಟ್ರದ ರಾಜಕಾರಣಕ್ಕೆ ಹೋಗಬಾರದು. ಈ ಹಿಂದೆ ಹೆಚ್ ಡಿ ದೇವೇಗೌಡ ಅವರು ಪ್ರಧಾನಮಂತ್ರಿ ಆಗುವ ಯಾವುದೇ ಕನಸು ಕಂಡಿರಲಿಲ್ಲ. ಅದರಂತೆ ಸಿದ್ದರಾಮಯ್ಯ ಅವರು …
Read More »ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಹೇಳಿಕೆ: ಹೈಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ ಎಂದ ಮುತಾಲಿಕ್
ಧಾರವಾಡ : ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ನಲ್ಲಿ ದಾವೆ ಹೂಡುತ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬೆಂಗಳೂರು, ಧಾರವಾಡ, ಕಲಬುರಗಿ ಹೈಕೋರ್ಟ್‌ನಲ್ಲಿ ಕೇಸ್ ದಾಖಲು ಮಾಡುತ್ತೇವೆ. ಉದಯನಿಧಿ ಸಂವಿಧಾನಿಕ ಜವಾಬ್ದಾರಿಯ ಸ್ಥಾನದಲ್ಲಿದ್ದಾರೆ. ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ. ಈ …
Read More »75 ಕಿ.ಮೀ ಹಿಮ್ಮುಖವಾಗಿ ಟ್ರ್ಯಾಕ್ಟರ್ ಓಡಿಸಿ ಯಲ್ಲಮ್ಮ ದೇವಿಗೆ ಹರಕೆ ತೀರಿಸಿದ ಯುವಕ
ಹುಬ್ಬಳ್ಳಿ: ಟ್ರ್ಯಾಕ್ಟರ್ವೊಂದನ್ನು ರಿವರ್ಸ್ ಡ್ರೈವ್ ಮಾಡಿಕೊಂಡು ಯುವಕನೋರ್ವ ತಮ್ಮ ಮನೆದೇವರು ಯಲ್ಲಮ್ಮದೇವಿಗೆ ಹರಕೆ ತೀರಿಸಿದ್ದಾನೆ. ತಾಲೂಕಿನ ಮಂಟೂರ ಗ್ರಾಮದ 22 ವರ್ಷದ ಯುವಕ ಬಾಬುಗೌಡ ಚಂದ್ರುಗೌಡ ಪರ್ವತಗೌಡ್ರ ಎಂಬಾತನೇ ಈ ಸಾಧನೆ ಮಾಡಿದಾತ. ವೃತ್ತಿಯಿಂದ ಕೃಷಿಕನಾಗಿರುವ ಬಾಬುಗೌಡ ಅವರು ಐದಾರು ವರ್ಷದಿಂದ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾನೆ. ಆದರೆ, ರಿವರ್ಸ್ ಗೇರ್ನಲ್ಲಿ ವಾಹನ ಚಲಾಯಿಸುವುದು, ಅಲ್ಲದೆ ಬಹುದೂರದವರೆಗೆ ತೆಗೆದುಕೊಂಡು ಹೋಗುವುದನ್ನು ಮಾಡಿರಲಿಲ್ಲ. ಬಾಬುಗೌಡ ಟ್ರ್ಯಾಕ್ಟರ್‌ಅನ್ನು ಹಿಮ್ಮುಖವಾಗಿ ಚಲಾಯಿಸಿಕೊಂಡು ಹೋಗಿ ದೇವಿ ದರ್ಶನ ಪಡೆಯುತ್ತೇನೆ ಎಂದು …
Read More »ಶಾಸಕ ರಾಯರೆಡ್ಡಿ ಫಾರ್ಮ್ ಹೌಸ್ಗೆ ಸಚಿವರ ಭೇಟಿ, ಚರ್ಚೆ.. ಪತ್ರ ಕುರಿತು ಬಸವರಾಜ್ ಸ್ಪಷ್ಟನೆ
ಧಾರವಾಡ: ಶಾಸಕ ರಾಯರೆಡ್ಡಿಯನ್ನು ಕಾಂಗ್ರೆಸ್ ಸಚಿವರಾದ ಸಚಿವ ಶರಣಪ್ರಕಾಶ್ ಪಾಟೀಲ್ ಹಾಗೂ ಎಂ ಸಿ ಸುಧಾಕರ್ ಭೇಟಿ ಆಗಿ ಚರ್ಚೆ ನಡೆಸಿದ್ದು, ಕುತೂಹಲ ಮೂಡಿಸಿದೆ. ಸಚಿವರ ಭೇಟಿ ಬಳಿಕ ಶಾಸಕ ಬಸವರಾಜ್ ರಾಯರೆಡ್ಡಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ‘ಕೊಪ್ಪಳ ಜಿಲ್ಲೆಯಲ್ಲಿ ಬರಗಾಲ ಆವರಿಸಿದೆ. ಈ ಸಮಯದಲ್ಲಿ ವಿದ್ಯುತ್ ಸರಿಯಾಗಿ ಸಿಗುತ್ತಿಲ್ಲ. ಟ್ರಾನ್ಸಫರ್‌ಗಳು ಬರ್ನ್ ಆಗುತ್ತಿವೆ. ಅದಕ್ಕೆ ಸರಿಯಾಗಿ ಸ್ಪಂದನೆ ಸಿಗುತ್ತಿಲ್ಲ. ಸಿಎಂ ಅವರೇ ಹಣಕಾಸು ಖಾತೆ ಹೊಂದಿದ್ದಾರೆ. ಹೀಗಾಗಿ ನಾನು ಸಿಎಂ ಅವರಿಗೆ …
Read More »
Laxmi News 24×7