Breaking News

ಹುಬ್ಬಳ್ಳಿ

ಜೈನ ಮುನಿ ಹತ್ಯೆ ಕೇಸ್‌: ಪೊಲೀಸ್ ಇಲಾಖೆ ಸಮರ್ಥ, ಸಿಬಿಐ ತನಿಖೆ ಅಗತ್ಯವಿಲ್ಲ

ಹುಬ್ಬಳ್ಳಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯೆ ತನಿಖೆಯ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ಪೊಲೀಸರು ಏನು ಕಾನೂನು ಕ್ರಮ ಕೈಗೊಳ್ಳಬೇಕೋ ಅದನ್ನು ಅವರು ಮಾಡುತ್ತಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಘಟನೆ ನಡೆದಾಗ ಯಾರೂ ಕೂಡ ತಾರತಮ್ಯ ಮಾಡಲು ಹೋಗುವುದಿಲ್ಲ. ಪೊಲೀಸರು ಆರೋಪಿಗಳನ್ನು ಬಂಧಿಸುವ ಕೆಲಸವನ್ನು …

Read More »

ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ

ಹುಬ್ಬಳ್ಳಿ: “ಜೈನ ಮುನಿ ಹತ್ಯೆಯನ್ನು ಎಲ್ಲ ರಾಜಕೀಯ ಪಕ್ಷದವರು ಖಂಡಿಸಿದ್ದಾರೆ. ಇದಕ್ಕೆ ಧನ್ಯವಾದ. ಇಂತಹ ಕೃತ್ಯ ಆಗಲೇಬಾರದು. ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ​ ಭೇಟಿ ಬಳಿಕ ನಾನು ಉಪವಾಸ ಸತ್ಯಾಗ್ರಹ ಹಿಂಪಡೆಯುತ್ತೇನೆ” ಎಂದು ಗುಣಧರನಂದಿ ಮುನಿ ಮಹಾರಾಜರು ಹೇಳಿದರು. ಇದೇ ವೇಳೆ ಹಂತಕರಿಗೆ ಕಠಿಣ ಶಿಕ್ಷೆ ಬೇಡ, ಅವರ ಮನ ಪರಿವರ್ತನೆಯಾಗಲಿ ಎಂದರು. ವರೂರಿಗೆ ಇಂದು ಗೃಹ ಸಚಿವ ಜಿ.ಪರಮೇಶ್ವರ್‌ ಭೇಟಿ ನೀಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈನ …

Read More »

ಪತಿಯೇ ಪತ್ನಿಯ ತಲೆಗೆ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ

ಪತಿಯೇ ಪತ್ನಿಯ ತಲೆಗೆ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಆನಂದನಗರದ ಬ್ಯಾಹಟ್ಟಿ ಪ್ಲಾಟ್ ನಲ್ಲಿಂದು ಬೆಳಿಗ್ಗೆ ನಡೆದಿದ್ದು, ಜನತೆ ಬೆಚ್ಚಿ ಬಿದ್ದಿದೆ. ಮೊನ್ನೆಯಷ್ಟೇ ಪತಿರಾಯ ಪತ್ನಿಯನ್ನು ಕತ್ತು ಹಿಚುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಮತ್ತೊಮ್ಮೆ ನೆತ್ತರು ಹರಿದಿದ್ದು, ಭೀಕರ ಘಟನೆಗೆ ವಾಣಿಜ್ಯ ನಗರೀ ಹುಬ್ಬಳ್ಳಿ ಸಾಕ್ಷಿಯಾಗಿದೆ‌. ಭೀಮಪ್ಪ ಮುತ್ತಲಗಿ ಎಂಬಾತನೇ ತನ್ನ ಪತ್ನಿ ಮಂಜುಳಾಗೆ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬರ್ಬರವಾಗಿ …

Read More »

ಇತಿಹಾಸದಲ್ಲೇ ಕ್ರೂರ ಘಟನೆಹತ್ಯೆ ಪ್ರಕರಣ ಸಿಬಿಐಗೆ ಒಪ್ಪಿಸಲ ಒತ್ತಾಯ. :ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಿನ್ನೆಲೆಯಲ್ಲಿ‌ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವರೂರ ಕ್ಷೇತ್ರದ ಗುಣಧರ ನಂದಿ ಶ್ರೀಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇತಿಹಾಸದಲ್ಲೇ ಕ್ರೂರ ಘಟನೆ: ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀ ಕಾಮಕುಮಾರ ನಂದಿ ಮಹಾರಾಜ ಹತ್ಯೆ ಖಂಡನೀಯ. ಅವರಿಗೆ ವಿದ್ಯುತ್ ಶಾಕ್ ಕೊಟ್ಟು, ಕೈಕಾಲು ಕತ್ತರಿಸಿ ಬೋರ್​ವೆಲ್​ನಲ್ಲಿ ಹಾಕಿದ್ದಾರೆ. ಇದು ಇತಿಹಾಸದಲ್ಲೇ ಕ್ರೂರ ಘಟನೆ. ಜೈನ ಸನ್ಯಾಸಿಗಳು ಕಾಲ್ನಡಿಗೆ ಯಾತ್ರೆ, ಸರ್ವಸಂಗ ಪರಿತ್ಯಾಗ …

Read More »

ಹುಬ್ಬಳ್ಳಿ: ಕಳೆ ನಾಶಕ ಸಿಂಪಡಿಸಲು ಹೋಗಿ ಪ್ರಾಣ ಕಳೆದುಕೊಂಡ ಅರಣ್ಯಾಧಿಕಾರಿ

ಹುಬ್ಬಳ್ಳಿ : ಕಳೆ ನಾಶಕ ಸಿಂಪಡಿಸಲು ಹೋಗಿ ಅರಣ್ಯಾಧಿಕಾರಿಯೊಬ್ಬರು ಚಿಕಿತ್ಸೆ ಫಲಿಸದೆ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕುಮಟಾ ತಾಲೂಕಿನ ಬಾಡ ಗ್ರಾಮದ ಯೋಗೇಶ್​ ನಾಯಕ್ ಮೃತ ಅರಣ್ಯಾಧಿಕಾರಿ. ಹಳಿಯಾಳ ವಿಭಾಗದ ಕುಳಗಿ ಶಾಖೆಯ ವಿರ್ನೋಲಿ ವಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಯಕ್, ಕಳೆದ ಒಂದು ವಾರದಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಇಹಲೋಕ ತ್ಯಜಿಸಿದ್ದಾರೆ. ಯೋಗೇಶ್​ ನಾಯಕ್ ಅವರು ದಾಂಡೇಲಿಯ ಹಲವೆಡೆ ಕಳೆದ 13 ವರ್ಷಗಳಿಂದ …

Read More »

ಪ್ಲಾನಿಂಗ್ ಇಲ್ಲದ ಬಜೆಟ್‌ ಮಂಡನೆ: ಪ್ರಹ್ಲಾದ್ ಜೋಶಿ

ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್​ದಲ್ಲಿ ಆಸ್ತಿ, ಮದ್ಯ ತೆರಿಗೆ ಹೆಚ್ಚಳ ಮಾಡಿದ್ದಾರೆ. ಶೇ 10ರಷ್ಟು ತೆರಿಗೆ ಹೆಚ್ಚಿಸಿದ್ದಾರೆ. ಮತ್ತೆ ಯಾವ ಯಾವ ತೆರಿಗೆ ಹೆಚ್ಚಳ ಮಾಡ್ತಾರೆ ನೋಡೋಣ ಎಂದು ರಾಜ್ಯದ ಸರ್ಕಾರದ ಬಜೆಟ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಒಟ್ಟಾರೆ ಯಾವುದೇ ಪ್ಲಾನಿಂಗ್ ಇಲ್ಲದ ಬಜೆಟ್‌ ಮಂಡನೆ ಆಗುತ್ತಿದೆ. ಬಜೆಟ್ ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣುತ್ತಿದೆ. …

Read More »

ಉಚಿತ ಬಸ್​ ಪ್ರಯಾಣಕ್ಕಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ತನ್ನ ವೇಷ ಬದಲಿಸಿಕೊಂಡಿದ್ದಾನೆ. ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿಕೊಂಡ ಪುರುಷ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಘಟನೆ ನಡೆಯಿತು. ಗ್ರಾಮದ ಸಾರ್ವಜನಿಕ ಬಸ್ …

Read More »

B.S.Y. ಸಂಬಂಧಿ, ಬಿಜೆಪಿಯ ಮಾಜಿ ಶಾಸಕ ಚಿಕ್ಕನಗೌಡರ್ ಕಾಂಗ್ರೆಸ್​ಗೆ ಸೇರ್ಪಡೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಯಡಿಯೂರಪ್ಪ ಸಂಬಂಧಿ, ಬಿಜೆಪಿಯ ಮಾಜಿ ಶಾಸಕ ಚಿಕ್ಕನಗೌಡರ್ ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳುವ ವಿಚಾರ ಸಾಕಷ್ಟು ದಟ್ಟವಾಗಿದ್ದು, ರಾಜ್ಯ ಹಾಗೂ ಜಿಲ್ಲೆಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಶೀಘ್ರದಲ್ಲಿ ಯಡಿಯೂರಪ್ಪ ಸಂಬಂಧಿ ಎಸ್ ಐ ಚಿಕ್ಕನಗೌಡರ್​ ಕಾಂಗ್ರೆಸ್ ಸೇರ್ಪಡೆಗೊಳ್ಳುವುದನ್ನು ಖಾತ್ರಿ ಪಡಿಸಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದು ಪರಾಜಿತರಾಗಿದ್ದರು. ಬಿಜೆಪಿ‌ ಟಿಕೆಟ್ ಸಿಗದೇ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಎಸ್ ಐ ಚಿಕ್ಕನಗೌಡರ ಈಗ …

Read More »

ಸ್ಮಾರ್ಟ್ ಸಿಟಿ ಕಾಮಗಾರಿಯ ನಿರ್ಲಕ್ಷ್ಯ ವಿದ್ಯುತ್ ತಗುಲಿ ಹಸು ಕರು ಸಾವು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ವಿದ್ಯುತ್ ಫೀಡರ್ ಪಿಲ್ಲರ್ ತಗಲಿ ಹಸು-ಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಅಕ್ಕಿಹೊಂಡದ ಬಳಿ ನಡೆದಿದೆ. ಸ್ಮಾರ್ಟ್ ಸಿಟಿ ಯೋಜನೆಗಳಿಂದಾಗಿ ಒಂದಲ್ಲಾ ಒಂದು ಯಡವಟ್ಟುಗಳು ಆಗುತ್ತಿವೆ ಎಂದು ಅಲ್ಲಿನ ಸಾರ್ವಜನಿಕರು ಆರೋಪಿಸಿದ್ದಾರೆ. ಅದರಂತೆ ಅಕ್ಕಿಹೊಂಡದಲ್ಲಿ ಕೂಡಾ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುತ್ತಿರುವವರ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಇಲ್ಲಿ ಸ್ಮಾರ್ಟ್ …

Read More »

20 ಲಕ್ಷ ದಾಟಿದ ಗೃಹ ಜ್ಯೋತಿ ನೋಂದಣಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಾರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಗೃಹ ಜ್ಯೋತಿ ಯೋಜನೆಯಲ್ಲಿಯೂ ಕೂಡ ಜನರಿಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಸಾಕಷ್ಟು ಸರ್ವರ್ ಸಮಸ್ಯೆಗಳ ನಡುವೆಯೂ ಹೆಸ್ಕಾಂ ಇಲಾಖೆಯಲ್ಲಿ 20 ಲಕ್ಷ ಗ್ರಾಹಕರು ನೋಂದಣಿ ಮಾಡಿಸಿದ್ದಾರೆ.   ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿಯೇ 20 ಲಕ್ಷ ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿದ್ದಾರೆ. ಈಗಾಗಲೇ ಕರ್ನಾಟಕ ಒನ್, ಹುಬ್ಬಳ್ಳಿ ಧಾರವಾಡ ಒನ್ ಮೂಲಕ ಹಾಗೂ …

Read More »