ಹುಬ್ಬಳ್ಳಿ: ಅವರಿಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ರು. ಅವರಿಬ್ಬರ ಮದುವೆಗೆ ಜಾತಿಯೂ ಅಡ್ಡ ಬಂದಿರಲಿಲ್ಲ. ಅವರಿಬ್ಬರಿಗೆ ಮುದ್ದಾದ ಗಂಡು ಮಗು ಕೂಡಾ ಇದೆ. ಆದ್ರೆ ಪ್ರೀತಿಸಿ ಕೈ ಹಿಡಿದವಳನ್ನೇ ಗಂಡನೆ ಕತ್ತು ಹಿಸುಕಿ ಕೊಲೆ ಮಾಡಿ ಬಾಗಿಲು ಹಾಕಿಕೊಂಡು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ನೇಕಾರನಗರದಲ್ಲಿ ನಡೆದಿದೆ. ನೇಕಾರ ನಗರದ ಜನ ಇವತ್ತು ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದಿದ್ದಾರೆ. ಅದಕ್ಕೆ ಕಾರಣ ಪ್ರೀತಿಸಿ ಮದುವೆಯಾದ ಗಂಡನೇ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಸುಧಾ …
Read More »ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು
ಹುಬ್ಬಳ್ಳಿ : ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಒಂದು ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಅದರಂತೆ ಬರುವ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ ಎಂದು ಹೇಳಿದರು. ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ. ಒಂದೆರಡು …
Read More »ಕೈಕೊಟ್ಟ ಮಳೆ.. ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಬದುಕು
ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ. ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿ ಸಾಲದ ಶೂಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಸ್ಥಿತಿಗೆ ಬಂದಿದ್ದಾನೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರದ ಭಯ ಸೃಷ್ಟಿಯಾಗಿದೆ. ಸ್ಥಿತಿ …
Read More »ವರ್ಗಾವಣೆಗೊಂಡ ನೆಚ್ಚಿನ ಶಿಕ್ಷಕಿಗೆ ವಿದ್ಯಾರ್ಥಿಗಳ ಕಣ್ಣೀರಿನ ವಿದಾಯ
ಹುಬ್ಬಳ್ಳಿ : ನೆಚ್ಚಿನ ಶಿಕ್ಷಕಿಯೋರ್ವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಣ್ಣೀರಿನ ವಿದಾಯ ಹೇಳಿ ಟೀಚರ್ಗೆ ಬೀಳ್ಕೊಡುಗೆ ನೀಡಿದ ಮನಕಲಕುವ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ನಡೆದಿದೆ. “ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ” ಎಂಬಂತೆ ಗುರು-ಶಿಷ್ಯರ ಸಂಬಂಧವೇ ಹಾಗೆ. ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ರತ್ನಾ …
Read More »ಬೇಡ್ತಿ ನಾಲಾ ಯೋಜನಾ ಪ್ರದೇಶಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ
ಧಾರವಾಡ, ಜೂನ್ 27: ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಬೇಡ್ತಿ ನಾಲಾ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಘಟಗಿ ತಾಲೂಕಿನ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಬೇಡ್ತಿ ನಾಲಾ ಯೋಜನೆಯಲ್ಲಿ ನೀರಿನ ಸದ್ಬಳಕೆಯಾಗಲು ಅಗತ್ಯ ಕ್ರಮಗಳನ್ನು ಕಾಲಮಿತಿಯಡಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಯ ಕಾರ್ಯಪ್ರಗತಿಯ ಬಗ್ಗೆ …
Read More »ಹುಲ್ಲು ತಿನ್ನಲು ಹೋಗಿ ಸೆಪ್ಟಿಕ್ ಟ್ಯಾಂಕನಲ್ಲಿ ಬಿದ್ದ ಎಮ್ಮೆ
ಹುಲ್ಲು ತಿನ್ನಲು ಹೋಗಿದ್ದ ಎಮ್ಮೆಯೊಂದು ಗೃಹ ಬಳಕೆ ಸೆಪ್ಟಿಕ್ ಟ್ಯಾಂಕನಲ್ಲಿ ಬಿದ್ದು ಕೆಲಕಾಲ ಒದ್ದಾಡಿದ ಘಟನೆ ಧಾರವಾಡದ ಯರಿಕೊಪ್ಪ ಗ್ರಾಮದಲ್ಲಿಂದು ನಡೆದಿದ್ದು, ಕೊನೆಗೆ ಅಗ್ನಿ ಶಾಮಕದಳದ ಸಿಬ್ಬಂದಿ ಎಮ್ಮೆಯನ್ನು ರಕ್ಷಣೆ ಮಾಡಿದ್ದಾರೆ. ಧಾರವಾಡ ತಾಲ್ಲೂಕಿನ ಯರಿಕೊಪ್ಪ ಗ್ರಾಮದ ಈ ದುರ್ಘಟನೆ ನಡೆದಿದೆ. ಗ್ರಾಮದ ನಿವಾಸಿ ಶಿವಪುತ್ರಪ್ಪಾ ಅಂಗಡಿಯವರು ಪ್ರತಿದಿನದಂತೆ ಇವತ್ತು ಕೂಡಾ ಹುಲ್ಲು ತಿನ್ನಲು ಎಮ್ಮೆಯನ್ನು ಮನೆಯಿಂದ ಬಿಚ್ಚಿ ಹೊರಗಡೆ ಹೊಡೆದಿದ್ದಾರೆ. ಈ ಸಮಯದಲ್ಲಿ ಹುಲ್ಲು ತಿನ್ನುತ್ತಲೇ ಹೋದ ಎಮ್ಮೆ …
Read More »ಶಾಲೆಯಿಂದ ಹೊರಬಂದಿದ್ದ ಮಗುವಿನ ಮೇಲೆ ಮಂಗದಾಳಿ
ಶಾಲೆಯಿಂದ ಹೊರಬಂದಿದ್ದ ಮಗುವಿನ ಮೇಲೆ ಮಂಗವೊಂದು ದಾಳಿ ಮಾಡಿ ವಿದ್ಯಾರ್ಥಿನಿಗೆ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಧಾರವಾಡದ ಗರಗ ಗ್ರಾಮದಲ್ಲಿ ಇಂದು ನಡೆದಿದ್ದು, ಮಂಗ ದಾಳಿಯ ಭಯಾನಕ ದೃಶ್ಯ ಸ್ಥಳೀಯ ಸಿಸಿಟಿಯಲ್ಲಿ ಸೆರೆಯಾಗಿದೆ. ಧಾರವಾಡ ತಾಲ್ಲೂಕಿನ ಗರಗ ಗ್ರಾಮದ ನಿವಾಸಿ ಇಕರಾ ಗಡಕಾರಿ (8) ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಉರ್ದು ಶಾಲೆಯಲ್ಲಿ 2ನೇ ತರಗತಿ ಒದುತ್ತಿದ್ದು, ಶಾಲೆ ಆಟದ ಸಮಯದಲ್ಲಿ ವಿದ್ಯಾರ್ಥಿನಿ ಶಾಲೆಯಿಂದ ಆಚ್ಚೆ ಬಂದು …
Read More »ರೈಲ್ವೇ ಇಲಾಖೆ ಆಲಸ್ಯವೋ ಅಥವಾ ನಿರ್ಲಕ್ಷ್ಯವೋ ಗೊತ್ತಿಲ್ಲ ಕೂದಲೆಳೆಯ ಅಂತರದಲ್ಲಿ ತಪ್ಪಿದ ಅಪಘಾತ
ಹುಬ್ಬಳ್ಳಿ: ರೈಲ್ವೇ ಇಲಾಖೆ ಆಲಸ್ಯವೋ ಅಥವಾ ನಿರ್ಲಕ್ಷ್ಯವೋ ಗೊತ್ತಿಲ್ಲ ಸಂಭವಿಸಬಹುದಾಗಿದ್ದ ದೊಡ್ಡ ಅಪಘಾತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಅತ್ಯಂತ ಜನದಟ್ಟಣೆಯ ಪ್ರದೇಶ ಹಾಗೂ ಹುಬ್ಬಳ್ಳಿ-ಗದಗ ಎನ್‌ಎಚ್-63 ರಸ್ತೆ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಹುಬ್ಬಳ್ಳಿಯ ರೈಲ್ವೇ ನಿಲ್ದಾಣದ ( Hubballi Railway Station) ಬಳಿ ಬೃಹತ್ ಗಾತ್ರದ ಕಬ್ಬಿಣದ ಕಂಬ (Iron Pillar) ನೆಲಕ್ಕೆ ಅಪ್ಪಳಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಮಧ್ಯಾಹ್ನ 12:30ರ ವೇಳೆಗೆ ಕಂಬ ಉರುಳಿ ಬೀಳುತ್ತಿರುವ ದೃಶ್ಯ …
Read More »ವಾಯವ್ಯ ಸಾರಿಗೆಯಲ್ಲಿ2 ಕೋಟಿ ಗಡಿ ತಲುಪಿದ ಮಹಿಳಾ ‘ಶಕ್ತಿ’ ಸಂಚಾರ:
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಡಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ ಎರಡು ಕೋಟಿಯ ಗಡಿ ತಲುಪಿದೆ. ಪ್ರಯಾಣದ ಟಿಕೆಟ್ ಮೌಲ್ಯ 50 ಕೋಟಿ ರೂಪಾಯಿ ದಾಟಿದೆ. ಯೋಜನೆ ಜಾರಿಯಾಗಿ 16 ದಿನ ಕಳೆದಿದ್ದು ಮಹಿಳಾ ಪ್ರಯಾಣಿಕರು ಭರ್ಜರಿ ಸಂಚಾರ ನಡೆಸುತ್ತಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜೂನ್ 26 ರಂದು 14,85,663 …
Read More »ಬಿಜೆಪಿ ಅವಧಿಯಲ್ಲಿನ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ: ಸಚಿವ ಸಂತೋಷ ಲಾಡ್
ಹುಬ್ಬಳ್ಳಿ: ರಾಜ್ಯದ ಜನಕ್ಕೆ ಅಕ್ಕಿ ಕೊಡುತ್ತೇವೆ ಅಂತಾ ಹೇಳಿದ್ದು ನಮ್ಮ ಪ್ರಣಾಳಿಕೆಯಲ್ಲಿ. ಹಾಗಾಗಿ ನಾವು ಬಿಜೆಪಿಯವರನ್ನು ಕೇಳಿ ಪ್ರಣಾಳಿಕೆಯಲ್ಲಿ ಸೇರಿಸಬೇಕಾದ ಅವಶ್ಯಕತೆ ಇರಲಿಲ್ಲ. ಮುಂಬರುವ ದಿನಗಳಲ್ಲಿ ಪ್ರಾಮಾಣಿಕವಾಗಿ ಜನರಿಗೆ 10ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ, ಈ ವಿಷಯ ತಿಳಿಸಿದರು. ಫುಡ್ ಕಾರ್ಪೋರೇಶನ್ ಅವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ಬರೆದುಕೊಟ್ಟಿದ್ದರು. ಈಗ ಹಿಂಪಡೆದಿದ್ದಾರೆ. …
Read More »