Breaking News

ಹುಬ್ಬಳ್ಳಿ

ಪ್ಲಾನಿಂಗ್ ಇಲ್ಲದ ಬಜೆಟ್‌ ಮಂಡನೆ: ಪ್ರಹ್ಲಾದ್ ಜೋಶಿ

ಧಾರವಾಡ: ಸಿಎಂ ಸಿದ್ದರಾಮಯ್ಯ ಪ್ರಸಕ್ತ ಸಾಲಿನ ಬಜೆಟ್​ದಲ್ಲಿ ಆಸ್ತಿ, ಮದ್ಯ ತೆರಿಗೆ ಹೆಚ್ಚಳ ಮಾಡಿದ್ದಾರೆ. ಶೇ 10ರಷ್ಟು ತೆರಿಗೆ ಹೆಚ್ಚಿಸಿದ್ದಾರೆ. ಮತ್ತೆ ಯಾವ ಯಾವ ತೆರಿಗೆ ಹೆಚ್ಚಳ ಮಾಡ್ತಾರೆ ನೋಡೋಣ ಎಂದು ರಾಜ್ಯದ ಸರ್ಕಾರದ ಬಜೆಟ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಮಾಧ್ಯಮವರೊಂದಿಗೆ ಮಾತನಾಡಿದ ಅವರು, ಒಟ್ಟಾರೆ ಯಾವುದೇ ಪ್ಲಾನಿಂಗ್ ಇಲ್ಲದ ಬಜೆಟ್‌ ಮಂಡನೆ ಆಗುತ್ತಿದೆ. ಬಜೆಟ್ ನಿಂದ ರಾಜ್ಯ ಸಾಲದ ಕೂಪಕ್ಕೆ ಹೋಗುವ ಲಕ್ಷಣಗಳು ಎದ್ದು ಕಾಣುತ್ತಿದೆ. …

Read More »

ಉಚಿತ ಬಸ್​ ಪ್ರಯಾಣಕ್ಕಾಗಿ ವ್ಯಕ್ತಿಯೋರ್ವ ಬುರ್ಖಾ ಧರಿಸಿ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಹುಬ್ಬಳ್ಳಿ: ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಆದರೆ, ಇಲ್ಲೊಬ್ಬ ವ್ಯಕ್ತಿ ಮಹಿಳೆಯರಿಗೆ ಉಚಿತ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ತನ್ನ ವೇಷ ಬದಲಿಸಿಕೊಂಡಿದ್ದಾನೆ. ಮುಸ್ಲಿಂ ಮಹಿಳೆಯರಂತೆ ಬುರ್ಖಾ ಧರಿಸಿಕೊಂಡ ಪುರುಷ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಘಟನೆ ನಡೆಯಿತು. ಗ್ರಾಮದ ಸಾರ್ವಜನಿಕ ಬಸ್ …

Read More »

B.S.Y. ಸಂಬಂಧಿ, ಬಿಜೆಪಿಯ ಮಾಜಿ ಶಾಸಕ ಚಿಕ್ಕನಗೌಡರ್ ಕಾಂಗ್ರೆಸ್​ಗೆ ಸೇರ್ಪಡೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿಯಡಿಯೂರಪ್ಪ ಸಂಬಂಧಿ, ಬಿಜೆಪಿಯ ಮಾಜಿ ಶಾಸಕ ಚಿಕ್ಕನಗೌಡರ್ ಕಾಂಗ್ರೆಸ್​ಗೆ ಸೇರ್ಪಡೆಗೊಳ್ಳುವ ವಿಚಾರ ಸಾಕಷ್ಟು ದಟ್ಟವಾಗಿದ್ದು, ರಾಜ್ಯ ಹಾಗೂ ಜಿಲ್ಲೆಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಶೀಘ್ರದಲ್ಲಿ ಯಡಿಯೂರಪ್ಪ ಸಂಬಂಧಿ ಎಸ್ ಐ ಚಿಕ್ಕನಗೌಡರ್​ ಕಾಂಗ್ರೆಸ್ ಸೇರ್ಪಡೆಗೊಳ್ಳುವುದನ್ನು ಖಾತ್ರಿ ಪಡಿಸಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದು ಪರಾಜಿತರಾಗಿದ್ದರು. ಬಿಜೆಪಿ‌ ಟಿಕೆಟ್ ಸಿಗದೇ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಎಸ್ ಐ ಚಿಕ್ಕನಗೌಡರ ಈಗ …

Read More »

ಸ್ಮಾರ್ಟ್ ಸಿಟಿ ಕಾಮಗಾರಿಯ ನಿರ್ಲಕ್ಷ್ಯ ವಿದ್ಯುತ್ ತಗುಲಿ ಹಸು ಕರು ಸಾವು

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿಯಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ವಿದ್ಯುತ್ ಫೀಡರ್ ಪಿಲ್ಲರ್ ತಗಲಿ ಹಸು-ಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಅಕ್ಕಿಹೊಂಡದ ಬಳಿ ನಡೆದಿದೆ. ಸ್ಮಾರ್ಟ್ ಸಿಟಿ ಯೋಜನೆಗಳಿಂದಾಗಿ ಒಂದಲ್ಲಾ ಒಂದು ಯಡವಟ್ಟುಗಳು ಆಗುತ್ತಿವೆ ಎಂದು ಅಲ್ಲಿನ ಸಾರ್ವಜನಿಕರು ಆರೋಪಿಸಿದ್ದಾರೆ. ಅದರಂತೆ ಅಕ್ಕಿಹೊಂಡದಲ್ಲಿ ಕೂಡಾ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಸುತ್ತಿರುವವರ ನಿರ್ಲಕ್ಷ್ಯದಿಂದಾಗಿ ಈ ಅವಘಡ ಸಂಭವಿಸಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳಿಂದ ಇಲ್ಲಿ ಸ್ಮಾರ್ಟ್ …

Read More »

20 ಲಕ್ಷ ದಾಟಿದ ಗೃಹ ಜ್ಯೋತಿ ನೋಂದಣಿ

ಹುಬ್ಬಳ್ಳಿ: ಕರ್ನಾಟಕ ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗೆ ಬಾರಿ ಸ್ಪಂದನೆ ವ್ಯಕ್ತವಾಗುತ್ತಿದೆ. ಗೃಹ ಜ್ಯೋತಿ ಯೋಜನೆಯಲ್ಲಿಯೂ ಕೂಡ ಜನರಿಗೆ ಉತ್ತಮ ಸ್ಪಂದನೆ ದೊರೆಯುತ್ತಿದ್ದು, ಸಾಕಷ್ಟು ಸರ್ವರ್ ಸಮಸ್ಯೆಗಳ ನಡುವೆಯೂ ಹೆಸ್ಕಾಂ ಇಲಾಖೆಯಲ್ಲಿ 20 ಲಕ್ಷ ಗ್ರಾಹಕರು ನೋಂದಣಿ ಮಾಡಿಸಿದ್ದಾರೆ.   ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿಯೇ 20 ಲಕ್ಷ ಗ್ರಾಹಕರು ಗೃಹ ಜ್ಯೋತಿ ಯೋಜನೆಗೆ ನೋಂದಣಿ ಮಾಡಿಸಿದ್ದಾರೆ. ಈಗಾಗಲೇ ಕರ್ನಾಟಕ ಒನ್, ಹುಬ್ಬಳ್ಳಿ ಧಾರವಾಡ ಒನ್ ಮೂಲಕ ಹಾಗೂ …

Read More »

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಪತಿ ಕತ್ತುಹಿಸುಕಿ ಕೊಲೆ

ಹುಬ್ಬಳ್ಳಿ: ಅವರಿಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ರು. ಅವರಿಬ್ಬರ ಮದುವೆಗೆ ಜಾತಿಯೂ ಅಡ್ಡ ಬಂದಿರಲಿಲ್ಲ. ಅವರಿಬ್ಬರಿಗೆ ಮುದ್ದಾದ ಗಂಡು ಮಗು ಕೂಡಾ ಇದೆ. ಆದ್ರೆ ಪ್ರೀತಿಸಿ ಕೈ ಹಿಡಿದವಳನ್ನೇ ಗಂಡನೆ ಕತ್ತು ಹಿಸುಕಿ ಕೊಲೆ ಮಾಡಿ ಬಾಗಿಲು ಹಾಕಿಕೊಂಡು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ನೇಕಾರನಗರದಲ್ಲಿ ನಡೆದಿದೆ. ನೇಕಾರ ನಗರದ ಜನ ಇವತ್ತು ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದಿದ್ದಾರೆ. ಅದಕ್ಕೆ ಕಾರಣ ಪ್ರೀತಿಸಿ ಮದುವೆಯಾದ ಗಂಡನೇ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ‌ ಮಾಡಿದ್ದಾನೆ. ಸುಧಾ …

Read More »

ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು

ಹುಬ್ಬಳ್ಳಿ : ರಾಜ್ಯದಲ್ಲಿ ಸಾಕಷ್ಟು ಮಳೆ ಬರುತ್ತದೆ. ಜೊತೆಗೆ ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ರಾಜ್ಯದಲ್ಲಿ ಒಂದು ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಹೇಳಿದ್ದೆ. ಅದು ನಿಜವಾಗಿದೆ. ಅದರಂತೆ ಬರುವ ದಿನಗಳಲ್ಲಿ ಜಾಗತಿಕ ಮಟ್ಟದಲ್ಲಿ ದುರಂತ ಆಗುವುದಿದೆ ಎಂದು ಹೇಳಿದರು. ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ. ಒಂದೆರಡು …

Read More »

ಕೈಕೊಟ್ಟ ಮಳೆ.. ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಬದುಕು

ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ. ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಧಾರವಾಡ ಜಿಲ್ಲೆಯಲ್ಲಿ ಸಾಲದ ಶೂಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಸ್ಥಿತಿಗೆ ಬಂದಿದ್ದಾನೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರದ ಭಯ ಸೃಷ್ಟಿಯಾಗಿದೆ. ಸ್ಥಿತಿ …

Read More »

ವರ್ಗಾವಣೆಗೊಂಡ ನೆಚ್ಚಿನ ಶಿಕ್ಷಕಿಗೆ ವಿದ್ಯಾರ್ಥಿಗಳ ಕಣ್ಣೀರಿನ ವಿದಾಯ

ಹುಬ್ಬಳ್ಳಿ : ನೆಚ್ಚಿನ ಶಿಕ್ಷಕಿಯೋರ್ವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಣ್ಣೀರಿನ ವಿದಾಯ ಹೇಳಿ ಟೀಚರ್​ಗೆ ಬೀಳ್ಕೊಡುಗೆ ನೀಡಿದ ಮನಕಲಕುವ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಗ್ರಾಮದಲ್ಲಿ ನಡೆದಿದೆ.   “ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವ ಮಹೇಶ್ವರ ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ” ಎಂಬಂತೆ ಗುರು-ಶಿಷ್ಯರ ಸಂಬಂಧವೇ ಹಾಗೆ. ಹೆಬಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ರತ್ನಾ …

Read More »

ಬೇಡ್ತಿ ನಾಲಾ ಯೋಜನಾ ಪ್ರದೇಶಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ

ಧಾರವಾಡ, ಜೂನ್ 27: ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ರೈತರೊಂದಿಗೆ ಬೇಡ್ತಿ ನಾಲಾ ನೀರಾವರಿ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಲಘಟಗಿ ತಾಲೂಕಿನ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಬೇಡ್ತಿ ನಾಲಾ ಯೋಜನೆಯಲ್ಲಿ ನೀರಿನ ಸದ್ಬಳಕೆಯಾಗಲು ಅಗತ್ಯ ಕ್ರಮಗಳನ್ನು ಕಾಲಮಿತಿಯಡಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆಯ ಕಾರ್ಯಪ್ರಗತಿಯ ಬಗ್ಗೆ …

Read More »